ಮನುಸ್ಮೃತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಮನುಸ್ಮೃತಿ''' (ಅಥವಾ "ಮನುವಿನ ನಿಯಮಗಳು"; ''ಮಾನವಧರ್ಮಶಾಸ್ತ್ರ'' ಎಂದೂ ಪರಿಚಿತ...
 
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೧ ನೇ ಸಾಲು:
'''ಮನುಸ್ಮೃತಿ''' (ಅಥವಾ "ಮನುವಿನ ನಿಯಮಗಳು"; ''ಮಾನವಧರ್ಮಶಾಸ್ತ್ರ'' ಎಂದೂ ಪರಿಚಿತವಾಗಿದೆ) [[ಹಿಂದೂ ಧರ್ಮ]]ದ [[ಧರ್ಮಶಾಸ್ತ್ರ]] ಪಠ್ಯ ಸಂಪ್ರದಾಯದ ಅತ್ಯಂತ ಪ್ರಮುಖ ಮತ್ತು ಅತ್ಯಂತ ಮುಂಚಿನ ಛಂದೋಬದ್ಧ ಕೃತಿ. ಪಠ್ಯವು [[ಮೊದಲ ಪುರುಷ ಅಥವಾ ಮಹಿಳೆ|ಮನುಕುಲದ ಮೂಲಜನಕನಾಗಿದ್ದ]] [[ಮನು]]ವು, ಅವರಿಗೆ "ಎಲ್ಲ ಸಾಮಾಜಿಕ ವರ್ಗಗಳ ನಿಯಮ" ಹೇಳೆಂದು ಬೇಡಿಕೊಳ್ಳುವ, [[ಋಷಿ]]ಗಳಿಗೆ ಕೊಟ್ಟ ಒಂದು ಪ್ರವಚನದ ರೂಪದಲ್ಲಿದೆ. ಮನುಸ್ಮೃತಿಯು ಅದನ್ನು ಅನುಸರಿಸಿದ ಎಲ್ಲ ಮುಂದಿನ ''ಧರ್ಮಶಾಸ್ತ್ರ''ಗಳಿಗೆ ಸ್ವೀಕಾರಾರ್ಹ ಮಾನದಂಡವಾಯಿತು.
 
==ಮನುಸ್ಮೃತಿಯೊಳಗೆ ಇರುವ ವಿಷಯ==
# ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ ಬ್ರಾಹ್ಮಣನ ನ್ನೂ , ಭುಜದಿಂದ ಕ್ಷತ್ರಿಯನನ್ನೂ, ತೊಡೆಯಿಂದ ವೈಶ್ಯನನ್ನೂ, ಪಾದದಿಂದ ಶೂದ್ರ ನನ್ನೂ ಸೃಷ್ಟಿಸಿದನು ( ಅಧ್ಯಾಯ -1:31)
# ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳ( ಬ್ರಾಹ್ಮಣ, ಕ್ಷತ್ರಿಯ, ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ (ಅ- 1:91)
# ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು ಹುಟ್ಟಿರುತ್ತಾನೆ ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ ಒಡೆಯ ನಾಗಿರುತ್ತಾನೆ (ಅ-1:99)
# ಈ ಭೂಮಿಯಲ್ಲಿ ಸೇರಿರುವುದೆಲ್ಲವೂ ಬ್ರಾಹ್ಮಣನಿಗೆ ಸೇರಿದ್ದಾಗಿವೆ. ಬ್ರಾಹ್ಮಣನು ಶ್ರೇಷ್ಡ ವಾದ ಜನ್ಮವನ್ನು ಪಡೆದದ್ದರಿಂದ ಇವೆಲ್ಲವನ್ನೂ ಹೊಂದಲು ಅವನೇ ಅರ್ಹನಾಗಿರುತ್ತಾನೆ (ಅ-1:100)
# ಬ್ರಾಹ್ಮಣನಿಗೆ ಶುಭ ಸೂಚಕವಾದ, ಕ್ಷತ್ರಿಯನಿಗೆ ಶಕ್ತಿ ಸೂಚಕವಾದ, ವೈಶ್ಯನಿಗೆ ಧನ ಸೂಚಕವಾದ ಹಾಗೂ ಶೂದ್ರನಿಗೆ ಅಸಹ್ಯ ಸೂಚಕವಾದ ಹೆಸರುಗಳನ್ನು ಇಡಬೇಕು. (ಅ-2:31)
# ಬ್ರಾಹ್ಮಣರಿಗೆ ಇಷ್ಟವಾಗುವ ಎಲ್ಲ ರುಚಿಕರ ಪದಾರ್ಥಗಳನ್ನು ಅವರಿಗೆ ನೀಡಬೇಕು. ಅವರ ಜೊತೆ ಪರಬ್ರಹ್ಮ ವಿಚಾರವನ್ನು ಚರ್ಚಿಸಬೇಕು. ಇದರಿಂದ ಪಿತೃಗಳಿಗೆ ಪ್ರೀತಿಯುಂಟಾ ಗುತ್ತದೆ (ಅ-3:231)
# ಹಂದಿಯು ಮೂಸುವುದರಿಂದ, ಕೋಳಿಯ ರೆಕ್ಕೆಯ ಗಾಳಿ ತಾಕುವುದರಿಂದ, ನಾಯಿ ನೋಡುವುದರಿಂದ ಹಾಗೂ ಶೂದ್ರನ ಸ್ಪರ್ಶದಿಂದ ಬ್ರಾಹ್ಮಣ ಭೋಜನವು ನಾಶವಾಗಿ ಹೋಗುತ್ತದೆ ( ಅ- 3:241)
# ಶೂದ್ರರಾಜನ ರಾಜ್ಯದಲ್ಲಿ, ಅಧರ್ಮಿಗಳಿರುವ ಪ್ರದೇಶದಲ್ಲಿ ವೇದವಿರೋಧಿಗಳಾದ ಪಾಷಂಡಿಗಳ ಪ್ರಾಂತದಲ್ಲಿ, ಅಂತ್ಯಜರ ಸನಿಹದಲ್ಲಿ ಬ್ರಾಹ್ಮಣರು ವಾಸ ಮಾಡಬಾರದು ( ಅ-4:61)
# ಶೂದ್ರನಿಗೆ ವಿದ್ಯೆ ಕಲಿಸಬಾರದು. ಯಜ್ಞದ ಹವಿಸ್ಸಿನ ಶೇಷವನ್ನು ಕೊಡಬಾರದು. ಧರ್ಮೋಪದೇಶ ಮಾಡಬಾರದು. ವ್ರತಾಚರಣೆ ಹೇಳಿಕೊಡಬಾರದು. (ಅ- 4:80)
# ಬ್ರಾಹ್ಮಣರನ್ನು ವಧಿಸಲು ದ್ವಿಜಾತಿಯವರು ದಂಡಗಳನ್ನೆತ್ತಿದರೆ, ಬರಿ ಎತ್ತಿದ ಮಾತ್ರಕ್ಕೆ ನೂರು ವರ್ಷಗಳ ತನಕ ತಾಮಿಸ್ರವೆಂಬ ನರಕದಲ್ಲಿ ಬೀಳುತ್ತಾರೆ (ಅ- 4:165)
# ಬೇಕು ಬೇಕೆಂದೇ ಯಾರಾದರೂ ಕೋಪಕೊಂಡು ಬ್ರಾಹ್ಮಣನಿಗೆ ಹೊಡೆದರೂ ಸಾಕು ಅವರು ಇಪ್ಪತ್ತೊಂದು ಜನ್ಮ ಕಳೆಯುವ ತನಕ ಹೀನಯೋನಿಗಳಲ್ಲಿ ಹುಟ್ಟುತ್ತಾನೆ. (ಅ-4:166)
# ಪುರಾಣ ಕಾಲದಲ್ಲಿ ಮಾಡಿದ ಯಜ್ಞಗಳಲ್ಲಿ ಬ್ರಾಹ್ಮಣ ಹಾಗೂ ಕ್ಷತ್ರಿಯರು ಮಾಡಿದಂತಹ ಯಾಗಗಳಲ್ಲಿ, ಶಾಸ್ತ್ರಗಳಲ್ಲಿ ತಿನ್ನಬಹುದೆಂದು ಹೇಳಿದ ಮೃಗಪಕ್ಷಿಗಳನ್ನು ಬಲಿನೀಡಿ ಅವುಗಳ ಮಾಂಸದಿಂದ ಪುರೋಡಾಶನವನ್ನು (ಹವಿಸ್ಸನ್ನು) ಮಾಡಿದ್ದರು (ಅ-5 :23)
# ಬ್ರಾಹ್ಮಣರಿಗೆ ಅಪೇಕ್ಷೆಯುಂಟಾದಾಗ ಯಜ್ಞವಿಧಿಗಳಲ್ಲಿ ಮಂತ್ರಜಲದಿಂದ ಪ್ರೋಕ್ಷಿತವಾದ ಮಾಂಸವನ್ನು ಹಾಗೂ ಶಾಸ್ತ್ರವಿಧಿಗಳಲ್ಲಿ ಹೇಳಲಾದ ರೀತಿಯಿಂದ ಶ್ರಾದ್ಧದೂಟದಲ್ಲಿನ ಮಾಂಸವನ್ನು ತಿನ್ನಬಹುದು. ಹಾಗೆಯೇ ಆಹಾರ ಸಿಗದೆ ಪ್ರಾಣ ಸಂಕಟ ಉಂಟಾದಾಗ ಅನಿವಾರ್ಯವಾಗಿ ಮಾಂಸವನ್ನು ತಿನ್ನಬಹುದು (ಅ-5:27)
# ಈ ಜಗತ್ತಿನಲ್ಲಿರುವ ಸಮಸ್ತ ಸ್ಥಾವರ ಜಂಗಮ ಜೀವ ಜಂತುಗಳನ್ನು, ಚರಾಚರ ವಸ್ತುಗಳನ್ನು ತಿನ್ನಲಿಕ್ಕೆಂದೇ ಪರಮಾತ್ಮ ನು ಸೃಷ್ಟಿಸಿದ್ದಾನೆ (ಅ- 5:28)
# ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಇತ್ಯಾದಿ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ ಬ್ರಾಹ್ಮಣನು ಪಶುವನ್ನು ಕೊಂದರೆ ಅವನು ತನ್ನ ಜತೆಗೆ ಆ ಪಶುವಿಗೂ ಉತ್ತಮ ಗತಿಯನ್ನು ಉಂಟು ಮಾಡುತ್ತಾನೆ (ಅ- 5:42)
# ಪತಿಯ ನಡತೆಯು ಚೆನ್ನಾಗಿಲ್ಲವಾದರೂ, ಅವನು ಕಾಮಾತುರನಾಗಿ ಅನ್ಯ ಹೆಂಗಸಲ್ಲಿ ಮನಸ್ಸಿಟ್ಟರೂ, ದುರ್ಗುಣಿಯಾಗಿದ್ದರೂ ಸಾಧ್ವಿಯಾದ ಆ ಹೆಂಗಸು ಆ ತನ್ನ ಪತಿಯನ್ನು ದೇವರೆಂದೇ ಭಾವಿಸಿ ಅವನ ಸೇವೆ ಮಾಡಬೇಕು ( ಅ- 5:154)
# ವಿದ್ಯೆ ಕಲಿತು ಗುರುಕುಲದಿಂದ ಹೊರಬರುವ ಬ್ರಾಹ್ಮಣ ವಿದ್ವಾಂಸರನ್ನು ರಾಜನು ಸತ್ಕರಿಸಬೇಕು. ವಿದ್ಯಾವಂತ ಬ್ರಾಹ್ಮಣರಿಗೆ ನೀಡುವ ನಿಧಿಯು ಅಕ್ಷಯವಾದ ಫಲವನ್ನು ಉಂಟು ಮಾಡುತ್ತದೆ ( ಅ-7:82)
# ಯಾವ ರಾಜನ ನ್ಯಾಯಸಭೆಯಲ್ಲಿ ಶೂದ್ರನು ಧರ್ಮವಿಚಾರ ವಿಮರ್ಶೆ ಮಾಡುತ್ತಾನೋ, ಆ ರಾಜನ ದೇಶವು ಕೆಸರಿನಲ್ಲಿ ಬಿದ್ದ ಹಸುವಿನಂತಾಗಿ ಬಿಡುತ್ತದೆ. ಅಂತಹ ರಾಜನು ನೋಡು ನೋಡುತ್ತಿದ್ದಂತೆಯೇ ಕಷ್ಟ ಪಡುತ್ತಾನೆ (ಅ-8:21)
# ಯಾವ ರಾಜ್ಯವು ಹೆಚ್ಚಾಗಿ ಶೂದ್ರರಿಂದ ತುಂಬಿರುತ್ತದೋ, ನಾಸ್ತಿಕರಿಂದ ಆಕ್ರಮಿಸಲ್ಪಡು ತ್ತದೋ, ಬ್ರಾಹ್ಮಣರಹಿತವಾಗಿರುತ್ತದೋ ಆ ರಾಜ್ಯವು ದುರ್ಭಿಕ್ಷ ರೋಗಗಳಿಂದ ಜರ್ಜರಿತ ವಾಗಿ ಬೇಗನೆ ನಾಶವಾಗಿ ಬಿಡುತ್ತದೆ (ಅ-8:22)
# ಪರಸ್ಪರ ವಿರುದ್ಧ ಸಾಕ್ಷಿಗಳು ಹೇಳಲ್ಪಟ್ಟಾಗ ರಾಜನು ಬಹುಮತದ ಅಭಿಪ್ರಾಯ ಮನ್ನಿಸ ಬೇಕು. ಸಮಾನ ಇಬ್ಬರಲ್ಲಿ ಪರಸ್ಪರ ವಿರುದ್ಧ ಸಾಕ್ಷಿ ನುಡಿದರೆ ಗುಣವಂತನ ಸಾಕ್ಷಿ ಮನ್ನಿಸ ಬೇಕು. ಗುಣವಂತರಲ್ಲಿ ವಿರೋಧ ಸಾಕ್ಷಿ ಉಂಟಾದಾಗ ರಾಜನು ಬ್ರಾಹ್ಮಣ ಶ್ರೇಷ್ಟನ ಸಾಕ್ಷಿ ನಂಬಬೇಕು (ಅ-8:73)
# ಬ್ರಾಹ್ಮಣನನ್ನು ಬೈದರೆ ಕ್ಷತ್ರಿಯನಿಗೆ ನೂರು ಪಣಗಳ ದಂಡ, ವೈಶ್ಯನಿಗೆ ನೂರೈವತ್ತು ಅಥವಾ ಇನ್ನೂರು ಪಣಗಳ ದಂಡ. ಬ್ರಾಹ್ಮಣನನ್ನು ಬೈದ ಶೂದ್ರನಿಗೆ ವಧೆ ಶಿಕ್ಷೆ (ಮರಣ ದಂಡನೆ) ವಿಧಿಸಬೇಕು. (ಅ- 8:627)
# ಉಪನಯನ ಸಂಸ್ಕಾರ ಹೊಂದಲು ಅರ್ಹತೆಯಿಲ್ಲದ ಶೂದ್ರನು ದ್ವಿಜಾತಿಯವರಾದ ಬ್ರಾಹ್ಮಣ ಕ್ಷತ್ರಿಯ ವೈಶ್ಯರನ್ನು ಹೀನವಾದ ಕೆಟ್ಟ ಮಾತುಗಳಿಂದ ಬೈದರೆ ಕೆಳ ಜಾತಿಯಲ್ಲಿ ಹುಟ್ಟಿದ ಆ ಶೂದ್ರನ ನಾಲಿಗೆಯನ್ನು ಛೇಧಿಸತಕ್ಕದ್ದು. ಏಕೆಂದರೆ ಅವನು ಕೆಳಜಾತಿಯವನು ( ಅ-8:270)
# ಬ್ರಾಹ್ಮಣ, ಕ್ಷತ್ರಿಯ ವೈಶ್ಯ ಇವರ ಜಾತಿಯ ಹೆಸರುಗಳನ್ನೆತ್ತಿ ಹೀನಾಮಾನವಾಗಿ ಬೈದಂತ ಆ ಶೂದ್ರನ ಬಾಯಲ್ಲಿ ಕಾದ ಕಬ್ಬಿಣದ ಹತ್ತಂಗುಲ ಉದ್ದದ ಸರಳನ್ನಿಡಬೇಕು (ಅ- 8:271)
# ಬ್ರಾಹಣರಿಗೆ ಅಹಂಕಾರದಂದ ಧರ್ಮವನ್ನು ಬೋಧಿಸುವ ಶೂದ್ರನಿಗೆ ರಾಜನು ಬಾಯಲ್ಲಿಹಾಗೂ ಕಿವಿಯಲ್ಲಿ ಕಾದ ಎಣ್ಣೆಯನ್ನು ಹಾಕಿಸಬೇಕು (ಅ-8:272)
# ಬ್ರಾಹ್ಮಣ ಮೊದಲಾದ ಶ್ರೇಷ್ಟ ಜಾತಿಯವರನ್ನು ತನ್ನ ಕೈಕಾಲು ಮುಂತಾದ ಯಾವುದಾದರೂ ಅಂಗದಿಂದ ಅಂತ್ಯಜನು ( ಶೂದ್ರನು) ಹೊಡೆದರೆ ಅವನ ಆ ಅಂಗವನ್ನು ( ಕೈ ಕಾಲು ಇತ್ಯಾದಿಯನ್ನು ) ಕತ್ತರಿಸಬೇಕು. ಇದು ಮನುವು ಹೇಳಿದ ಶಾಸನವು (ಅ-8:279)
# ಬ್ರಾಹ್ಮಣನ ಜತೆಗೆ ಒಂದೇ ಆಸನದಲ್ಲಿ ಕುಳಿತ ಅಂತ್ಯಜನಿಗೆ ಅಥವಾ ಶೂದ್ರನಿಗೆ ಸೊಂಟದಲ್ಲಿ ಬರೆ ಎಳೆದು ಊರಿನಿಂದ ಹೊರಗೆ ಹಾಕಬೇಕು ಅಥವಾ ಅವನ ಕುಂಡೆಯನ್ನು ಕತ್ತರಿಸಬೇಕು ( ಆಗ ಅವನು ಸಾಯಬಾರದು) (ಅ- 8:281)
# ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾನಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ ಹೂಸು ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅ-8:282)
# ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು. ತನಗಿಂತ ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ ಗೃಹಬಂಧನದಲ್ಲಿರಿಸಬೇಕು (ಅ-8:365)
ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ ಕಸಿದು ಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅ-8:375)
# ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅ-8:377)
# ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ ವಿಧಿಸಬೇಕು (ಅ-8:379)
# ಒಬ್ಬ ಬ್ರಾಹ್ಮಣನು ಎಲ್ಲ ವಿಧದ ಅಪರಾಧ, ಪಾಪ ಮಾಡಿದರೂ ಅವನನ್ನು ಕೊಲ್ಲಬಾರದು. ಅವನ ಸರ್ವಸ್ವ ಅಪಹರಿಸಿ ಅವನನ್ನು ದೇಶದಿಂದ ಹೊರಕ್ಕೆ ಹಾಕಬೇಕು (ಅ-8:380)
# ಶಯ್ಯೆ, ಆಸನ, ಅಲಂಕಾರ, ಇವುಗಳ ಮೋಹ, ಕಾಮ, ಕ್ರೋಧ, ಅಪ್ರಾಮಾಣಿಕತೆ, ಪತಿದ್ರೋಹ ಮತ್ತು ದುರ್ನಡತೆ ಇವೆಲ್ಲಾ ಸಾಮಾನ್ಯವಾಗಿ ಸ್ತ್ರೀಯಲ್ಲಿರುವ ಸ್ವಾಭಾವಿಕ ಗುಣಗಳು (ಅ-9:17)
# ಸ್ತ್ರೀಯರಿಗೆ ಮಂತ್ರಪೂರ್ವಕವಾದ ಧರ್ಮ ಸಂಸ್ಕಾರಗಳಿಲ್ಲ ಎಂದು ಶಾಸ್ತ್ರ ಹೇಳುತ್ತದೆ. ಇಂದ್ರಿಯಗಳನ್ನು ನಿಗ್ರಹಿಸಲು ಮಂತ್ರಸಾಧನಗಳು ಸ್ತ್ರೀಯರಿಗೆ ಹೇಳಲ್ಪಟ್ಟಿಲ್ಲವಾದ್ದರಿಂದ ಅವರು ಸದಾ ಅಶುದ್ಧರಾಗಿಯೇ ಇರುತ್ತಾರೆ ಎಂಬುದು ಧರ್ಮದ ವಿಚಾರವಾಗಿದೆ. (ಅ: 9:19)
# ಮೂವತ್ತು ವಯಸಿನ ಪುರುಷ ಹನ್ನೆರಡು ವಯಸ್ಸಿನ ಸುಂದರ ಕನ್ಯೆಯನ್ನು ಮದುವೆಯಾಗ ಬೇಕು. ಇಲ್ಲವೇ ಇಪ್ಪತ್ತನಾಲ್ಕು ವರ್ಷದವನು ಎಂಟು ವರ್ಷದ ಕನ್ಯೆಯನ್ನು ಮದುವೆ ಮಾಡಿ ಕೊಳ್ಳಬೇಕು. ಅದಕ್ಕಿಂತ ಮೊದಲೇ ವಿವಾಹವಾದವನು ತೊಂದರೆ ಅನುಭವಿಸುತ್ತಾನೆ (ಅ: 9:94)
# ರಾಜನು ತನ್ನ ಮೇಲೆ ಎಷ್ಟೇ ಸಂಕಷ್ಟಗಳ ಬಂದೆರಗಿದರೂ ಬ್ರಾಹ್ಮಣರ ಮೇಲೆ ಕೋಪ ಗೊಳ್ಳಬಾರದು. ಏಕೆಂದರೆ ಬ್ರಾಹ್ಮಣನ ಶಾಪದಿಂದ ರಾಜನ ಸರ್ವಸ್ವವೂ ನಷ್ಟವಾಗಿ ಬಿಡುವುದು ( ಅ-9:313)
# ಬ್ರಾಹ್ಮಣರು ಕೋಪಗೊಂಡರೆ ಹೊಸ ಲೋಕಗಳನ್ನೇ ಸೃಷ್ಟಿಸಬಲ್ಲರು. ಹೊಸ ಲೋಕಪಾಲ ರನ್ನು ನೇಮಿಸಬಲ್ಲರು.ದೇವತೆಗಳ ದೈವತ್ವವನ್ನೇ ಅಳಿಸಿಬಿಡಬಲ್ಲರು. ಅಂಥ ಬ್ರಾಹ್ಮಣ ರನ್ನು ರೇಗಿಸಿ ಯಾವ ರಾಜ ತಾನೇ ಸಮೃದ್ಧಿ ಹೊಂದಬಲ್ಲನು? (ಅ-9:315)
# ಬ್ರಾಹ್ಮಣನ ಸೇವೆಯೇ ಶೂದ್ರನ ವಿಶಿಷ್ಟ ಕರ್ತವ್ಯವಾಗಿದೆ. ಅವನು ಬೇರೆ ಕೆಲಸ ಮಾಡಿದರೆ ಅವನಿಗೆ ಯಾವ ಫಲವೂ ಸಿಗುವುದಿಲ್ಲ (ಅ-10:123)
# ಹಣ ಸಂಪಾದನೆ ಮಾಡುವ ಸಾಮರ್ಥ್ಯವು ಇದ್ದರೂ ಶೂದ್ರನು ಹಣ ಸಂಪಾದಿಸಬಾರದು. ಹಣ ಸಂಪಾದನೆ ಮಾಡಿದರೆ ಶೂದ್ರನು ಬ್ರಾಹ್ಮಣರನ್ನು ಕಡೆಗಣಿಸುತ್ತಾನೆ (ಅ-10:129)
 
==ಉಲ್ಲೇಖಗಳು==
 
[[ವರ್ಗ:ಹಿಂದೂ ಪಠ್ಯಗಳು]]
"https://kn.wikipedia.org/wiki/ಮನುಸ್ಮೃತಿ" ಇಂದ ಪಡೆಯಲ್ಪಟ್ಟಿದೆ