ವರಮಹಾಲಕ್ಷ್ಮಿ ವ್ರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಉಲ್ಲೇಖ ಸೇರಿಸಲಾಗಿದೆ.
೧ ನೇ ಸಾಲು:
ಶ್ರಾವಣಮಾಸದ ಪ್ರಸಿದ್ಧಹಿಂದೂಪರ್ವ(=ಹಬ್ಬ)ಗಳಲ್ಲಿ'''ವರಮಹಾಲಕ್ಷ್ಮೀವ್ರತ'''ವೂ ಒಂದು.<ref>[http://kannada.oneindia.com/festivals/shravana/importance-and-how-to-perform-varamahalakshmi-pooja-096451.html ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಹಿನ್ನೆಲೆ] </ref>
 
==ಲಕ್ಷ್ಮೀದೇವಿ==
 
[[ಚಿತ್ರ:Varalakshmi Vratham - View.jpg|thumb|ವರಲಕ್ಷ್ಮಿ ವ್ರತ ಪೂಜೆ ಒಂದು ವಿಶಿಷ್ಟ ನೋಟ]]
ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದುರ್ವಾಸಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು ಬಿಟ್ಟು ವೈಕುಂಠವನ್ನು ಸೇರಿದಳು. ಆಗ ಪರಮದು:ಖಾಕ್ರಾಂತರಾದ ದೇವತೆಗಳೆಲ್ಲರೂ ಚತುರ್ಮುಖಬ್ರಹ್ಮನನ್ನು ಮುಂದಿಟ್ಟುಕೊಂಡು(ಪುರಸ್ಕರಿಸಿ), ವೈಕುಂಠದಲ್ಲಿ ಪರಮಾತ್ಮನನ್ನು ಶರಣುಹೊಂದಿದರು. ಪರಮದಯಾಳುವಾದ ವಿಷ್ಣುವಿನ ಆಜ್ಞೆಯಂತೆ ದೇವತೆಗಳು ದಾನವರೊಡನೆ ಅಮೃತಕ್ಕಾಗಿ ಕ್ಷೀರಸಮುದ್ರವನ್ನು ಮಥಿಸಲು, ಮಹೇಂದ್ರನ ಸಂಪತ್ಸ್ವರೂಪಿಣಿಯಾದ ಮಹಾಲಕ್ಷ್ಮಿಯು ಅಲ್ಲಿ ಆವಿರ್ಭವಿಸಿ, ದೇವತೆಗಳಿಗೆ ವರವನ್ನು ಅನುಗ್ರಹಿಸಿದಳು ಹಾಗೂ ಮಹಾವಿಷ್ಣುವಿನ ಪಾಣಿಗ್ರಹಣ ಮಾಡಿದಳು(ವಿವಾಹವಾದಳು).
 
ನಿತ್ಯ ಶುದ್ಧ-ಬುದ್ಧ-ಮುಕ್ತಸ್ವರೂಪಳೂ,ನಿತ್ಯಸಿದ್ಧಳೂ ಆದ ಈ ಮಂಗಲದೇವತೆಯ ಮಹಿಮೆಯನ್ನು ವರ್ಣಿಸುವ ಶಾಸ್ತ್ರಗಳಲ್ಲೇ ಆಕೆಯನ್ನು ಕ್ಷೀರಸಮುದ್ರಸಂಭವೆ, ಸಮುದ್ರರಾಜನ ಪುತ್ರಿ, ಚಂದ್ರನ ತಂಗಿ, ಯಜ್ಞಕುಂಡದಲ್ಲಿ ಉದ್ಭವವಾದವಳು, ಕಮಲದಲ್ಲಿ ಆವಿರ್ಭವಿಸಿದವಳು-ಇತ್ಯಾದಿ ಅಭಿಪ್ರಾಯಗಳನ್ನು ಕಾಣುತ್ತೇವೆ.
 
 
==ವ್ರತ==
"ಶುಕ್ಲೇ ಶ್ರಾವಣಿಕೇ ಮಾಸೇ ಪೂರ್ಣಿಮೋಪಾಂತ್ಯಭಾಗವೇ|
Line ೧೯ ⟶ ೧೭:
*ಅದರ ಮೇಲೆ ಚಿನ್ನ ಅಥವಾ ಬೆಳ್ಳಿಯಿಂದ ತಯಾರಿಸಿದ ಮುಖವಾಡವನ್ನಿಟ್ಟು ಅಥವಾ ತೆಂಗಿನಕಾಯಿಗೆ ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಲಾಗುತ್ತದೆ. ಈ ಪೂಜೆಯಲ್ಲಿ ವಿಶೇಷವಾದ ದಾರಗಳಿಗೆ ಪೂಜೆಯನ್ನು ಸಲ್ಲಿಸುವರು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ ೧೨ ದಾರಗಳಿಗೆ ೧೨ ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ಅರಿಶಿನ ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವರು.
*ಈ ದಾರಗಳಿಗೆ ಅರಿಶಿನ, ಕುಂಕುಮ, ಹೂವು, ಪತ್ರೆಗಳಿಂದ ಪೂಜಿಸಿ, ನೈವೇದ್ಯ ಮಾಡುವರು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವರು. ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ. ಈ ದಾರಕ್ಕಾಗಿ ವಿಶೇಷವಾದ ನೈವೇದ್ಯವಾದ [[ಸಜ್ಜಪ್ಪ|ಸಜ್ಜಪ್ಪವನ್ನು]] ಅರ್ಪಿಸುವರು. ಅಂದು ಶ್ರೀಸೂಕ್ತವನ್ನು ಪಠಿಸುವುದೂ ಒಳ್ಳೆಯದು.
* ದೇವಿಯ ಮೂರ್ತಿಗೂ [[ಅರಿಶಿನ]], [[ಕುಂಕುಮ]],[[ಪಾರಿಜಾತ|ಹೂವು]], ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವರು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ ದಾನವನ್ನು ಕೊಡುವರು. ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.<ref>[http://www.kannadaprabha.com/mahalakshmi-vratha/how-to-perform-varamahalakshmi-vratha-at-home/257678.html ವರಮಹಾಲಕ್ಷ್ಮಿ ಪೂಜಾ ವಿಧಿ ವಿಧಾನ ಹೇಗೆ?] </ref>
"ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ:<BR>
ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ"
Line ೪೬ ⟶ ೪೪:
</poem>
ಭಾವಾರ್ಥ- ಯಾವ ವರಲಕ್ಷ್ಮಿಯು ಕೆಂದಾವರೆಯಲ್ಲಿ ಕುಳಿತು ಕೋಟಿಸೂರ್ಯಸಮಪ್ರಭಳೋ, ಕೆಂಪುವಸ್ತ್ರವನ್ನುಟ್ಟು ಶ್ರೀಹರಿಯ ಹೃದಯವಲ್ಲಭೆಯೋ, ಯಾವಳು ಸಮುದ್ರಮಥನದಲ್ಲಿ ಉದ್ಭವಿಸಿ ಭಗವಾನ್ ಮಹಾವಿಷ್ಣುವಿನ ಪತ್ನಿಯಾದಳೋ, ಅಂತಹ ಮನಸ್ಸಿಗೆ ಮುದನೀಡುವ, ಪದ್ಮವನ್ನೇ ಆಲಯವನ್ನಾಗಿಸಿಕೊಂಡ, ಭಗವತೀ ಲಕ್ಷ್ಮಿಯು ನನ್ನನ್ನು ರಕ್ಷಿಸಲಿ.
==ಉಲ್ಲೇಖಗಳು==
 
{{reflist}}
 
 
 
{{ಹಿಂದೂ ಧರ್ಮದ ಹಬ್ಬಗಳು}}
[[ವರ್ಗ:ಹಬ್ಬಗಳು]]