ಬಾಲಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೭ ನೇ ಸಾಲು:
*ಅವರ ಪೂಜೆಗೆ ದೇವರು, ಹಿರಿಯರ ಆತ್ಮ ಒಲಿದು ಆಗಮಿಸಿ, ಕುಳಿತು, ಹರಸುತ್ತಾರೆ ಎಂಬ ನಂಬಿಕೆಯಿಂದ ಅವರಿಗಾಗಿಯೇ ಪುಟ್ಟ ಜಾಗವನ್ನು ಖಾಲಿ ಇಡಲಾಗುತ್ತದೆ! ನಿಸರ್ಗದ ಅಂಶಗಳಾದ ಕಲ್ಲು, ನೀರು, ಅಗ್ನಿ, ಮಣ್ಣು, ಗಾಳಿ ಜನರಿಗೆ ಶಕ್ತಿ ಸಂಕೇತಗಳು. ಹಿರಿಯರು ಮತ್ತು ದೇವರು ಕೂಡಾ ನಿಸರ್ಗದಲ್ಲಿ ಲೀನವಾಗಿದ್ದಾರೆ. ಹಾಗಾಗಿ ಅವುಗಳ ಮೂಲಕ ಎಲ್ಲೆಲ್ಲೂ ಇದ್ದಾರೆ ಎಂದು ಹೇಳುತ್ತಾರೆ. ಆದ್ದರಿಂದಲೇ ಇಲ್ಲಿ ನೀರು, ಕಲ್ಲು, ಮಣ್ಣು ಎಲ್ಲವೂ ಪವಿತ್ರ.
 
*‘ಮೇಲುಕಾಟ್’ತೀರ್ಥಕ್ಷೇತ್ರ ಬಾಲಿಯ ಜನರು ಸಾವಿರಾರು ವರ್ಷಗಳಿಂದ ಸಂದರ್ಶಿಸುತ್ತಿರುವ ಮುಖ್ಯ ಸ್ಥಳ ‘ತೀರ್ಥ ಎಂಪುಲ್’! ಉಬುಡ್ ಗ್ರಾಮದಿಂದ ಅರ್ಧ ತಾಸಿನ ಹಾದಿಯಲ್ಲಿ ಮನುಕಯಾ ಎಂಬ ಪ್ರಾಂತ್ಯದಲ್ಲಿ ‘ತಂಪಕ್ ಸಿರಿಂಗ್’ ಎಂಬ ಪುಟ್ಟ ಪಟ್ಟಣ. ಇಲ್ಲಿದೆ ಪರಮಪವಿತ್ರ ದೇವಾಲಯ, ತೀರ್ಥ ಎಂಪುಲ್ (ಪವಿತ್ರ ಚಿಲುಮೆ)ಇದೆ. ಇಲ್ಲಿನ ಕೊಳದ ಚಿಲುಮೆಯಿಂದ ಸತತವಾಗಿ ಸಿಹಿನೀರು ಚಿಮ್ಮುತ್ತಿದ್ದು ಅದು ಅಮೃತಕ್ಕೆ ಸಮಾನ–ಪವಿತ್ರ ಎಂದು ಬಾಲಿಯ ಜನ ಪರಿಗಣಿಸುತ್ತಾರೆ. ಈ ನೀರಿನ ವಿಧಿವತ್ತಾದ ಸ್ನಾನ, ಪ್ರೋಕ್ಷಣೆ ಮತ್ತು ಸೇವನೆ ಶುದ್ಧೀಕರಣದ ಪ್ರಮುಖ ಘಟ್ಟ.
===ದೇವಾಲಯ==
*ಈ ದೇವಾಲಯ ಸಂಕೀರ್ಣವನ್ನು ಕ್ರಿ.ಶ 960ರಲ್ಲಿ ವರ್ಮದೇವ ರಾಜವಂಶದ ಆಡಳಿತ ಅವಧಿಯಲ್ಲಿ ಕಟ್ಟಲಾಯಿತು. ಇಲ್ಲಿರುವ ಪವಿತ್ರ ಚಿಲುಮೆಯ ಕುರಿತು ಉಸಾನಾ ಬಾಲಿ ಹಸ್ತಪ್ರತಿಯಲ್ಲಿ ಉಲ್ಲೇಖವಿದೆ.
*ಬಾಲಿಯ ಸಾಂಪ್ರದಾಯಿಕ ಶೈಲಿಯಲ್ಲಿ ಕಟ್ಟಲಾದ ಈ ದೇಗುಲದಲ್ಲಿ ಶಿವ, ವಿಷ್ಣು, ಬ್ರಹ್ಮ, ಇಂದ್ರ ಮತ್ತು ಬಟುರ್ ಪರ್ವತಕ್ಕೆ ಸಂಬಂಧಿಸಿದ ಗೋಪುರಗಳಿವೆ. ದೇವಾಲಯವನ್ನು ಮೂರು ಮುಖ್ಯ ಭಾಗಗಳಾಗಿ ವಿಂಗಡಿಸಲಾಗಿದೆ. ಹೊರಗಿನ ಜಬ ಪುರ, ಮಧ್ಯದ ಜಬ ತೆಂಗಾಹ್ ಮತ್ತು ಒಳಗಿನ ಜೆರೋಆನ್. ಮಧ್ಯದ ಭಾಗದಲ್ಲಿ ಎರಡು ಕೊಳಗಳಿದ್ದು ಮೂರು ದೊಡ್ಡ ಚಿಲುಮೆಗಳಿಂದ ತೀರ್ಥ ಸೂರ್ಯ (ಸೂರ್ಯನ ಚಿಲುಮೆ), ತೀರ್ಥ ಬುಲಾನ್ (ಚಂದ್ರನ ಚಿಲುಮೆ) ಮತ್ತು ತೀರ್ಥ ಬಿಂಟಾಂಗ್ (ನಕ್ಷತ್ರಗಳ ಚಿಲುಮೆ) ಚಿಮ್ಮುವ ನೀರನ್ನು ಮೂವತ್ತು ಕೊಳವೆಗಳ ಮೂಲಕ ಹೊರಬರುವಂತೆ ವ್ಯವಸ್ಥೆ ಮಾಡಲಾಗಿದೆ.
*ಇಲ್ಲಿನ ನೀರಿಗೆ ಮೂರು ವಿಶೇಷ ಶಕ್ತಿಗಳಿವೆ ಎಂಬ ನಂಬಿಕೆ ಜನರದ್ದು. ತೀರ್ಥ ಗೆರಿಂಗ್: ಕೆಟ್ಟ ಶಕ್ತಿಗಳನ್ನು ದೂರವಿಡಲು, ತೀರ್ಥ ಮೆರ್ಟಾ: ಸಂಪತ್ತು–ಸಮೃದ್ಧಿಗಾಗಿ ಮತ್ತು ತೀರ್ಥ ಸುಧಾಮಾಲಾ: ದೇಹ–ಆತ್ಮವನ್ನು ಶುದ್ಧಿಗೊಳಿಸಲು. '''ಈ ರೀತಿ ಶುದ್ಧೀಕರಣ ಕ್ರಿಯೆಗೆ ‘ಮೆಲುಕಾಟ್’ ಎನ್ನಲಾಗುತ್ತದೆ.''' ವಿಶೇಷ ದಿನವಾದ ಹುಣ್ಣಿಮೆಯಂದು ಶುದ್ಧಿ ಕಾರ್ಯಕ್ಕೆ ಜನರು ಕಿಕ್ಕಿರಿದು ಸೇರುತ್ತಾರೆ. ದೇವಾಲಯದ ಅರ್ಚಕರ ನೇತೃತ್ವದಲ್ಲಿ ಈ ಕಾರ್ಯ ನಡೆಯುತ್ತದೆ. ವರ್ಷಕ್ಕೊಮ್ಮೆಯಾದರೂ ಬಾಲಿಯ ಜನರು ಇಲ್ಲಿಗೆ ಬಂದು ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿ, ಸ್ನಾನ ಮಾಡಿ, ಪವಿತ್ರ ಜಲವನ್ನು ಬಾಟಲಿಗಳಲ್ಲಿ ತುಂಬಿ ಮನೆಗೆ ಒಯ್ದು ಸಂರಕ್ಷಿಸಿ ಇಡುತ್ತಾರೆ. ಮಗುವಿನ ಜನನದಿಂದ ಹಿಡಿದು ಎಲ್ಲಾ ಶುಭ ಕಾರ್ಯ ಮತ್ತು ಮರಣದ ಸಂಸ್ಕಾರ ನಡೆಯುವಾಗಲೂ ಇಲ್ಲಿಯ ನೀರು ಬಳಕೆಯಾಗುತ್ತದೆ.<ref>[http://www.prajavani.net/news/article/2017/05/21/492826.html ಪವಿತ್ರ ತೀರ್ಥ ಮತ್ತು ‘ಮೇಲುಕಾಟ್’;ಡಾ. ಕೆ.ಎಸ್.ಚೈತ್ರಾ;21 May, 2017]</ref>
 
==Gallery==
"https://kn.wikipedia.org/wiki/ಬಾಲಿ" ಇಂದ ಪಡೆಯಲ್ಪಟ್ಟಿದೆ