"ಬಂಡಾಯ ಸಾಹಿತ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
(ಹೊಸ ಪುಟ: {{Under Construction}} ಬಂಡಾಯ ಸಾಹಿತ್ಯ - ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ. ನವೋದಯ, ಪ್ರ...)
 
{{Under Construction}}
 
ಬಂಡಾಯ ಸಾಹಿತ್ಯ -
ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ. ನವೋದಯ, ಪ್ರಗತಿಶೀಲ, ನವ್ಯಗಳ ಅನಂತರದ ಸಾಹಿತ್ಯ ಚಳವಳಿ. ಇದನ್ನು ನವೋತ್ತರ ಸಾಹಿತ್ಯವೆಂದೂ ಕರೆಯಲಾಗಿದೆ. ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಕನ್ನಡ ಸಾರಸ್ವತ ಪ್ರಪಂಚದಲ್ಲಿ ಕೇಳಿಬರುತ್ತಿರುವ, ಎಲ್ಲ ಪ್ರಗತಿಪರ ಹಾಗೂ ದಲಿತ ಬರಹಗಾರರಿಂದ ಸೃಷ್ಟಿಯಾಗುತ್ತಿರುವ ಸಾಹಿತ್ಯ. ಈ ದಶಕದಲ್ಲಿ ಅನೇಕ ಸಾಮಾಜಿಕ, ರಾಜಕೀಯ ಘಟನೆಗಳು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆಗಳನ್ನು ತಂದವು. ಬದುಕಿನಲ್ಲಿ ಉಂಟಾದ ಕೋಲಾಹಲದಿಂದಾಗಿ ಸಾಹಿತ್ಯದಲ್ಲೂ ಬದಲಾವಣೆ ಅನಿವಾರ್ಯವೆನಿಸಿ ಬಂಡಾಯದ ದನಿ ಮೊಳಗಿತು ಶತಶತಮಾನದಿಂದ ಸಾಮಾಜಿಕವಾಗಿ ಆರ್ಥಿಕವಾಗಿ ಶೋಷಣೆಗೆ ಅಪಮಾನಕ್ಕೆ ಕ್ರೌರ್ಯಕ್ಕೆ ಬಲಿಯಾದ ಪ್ರಜ್ಞಾವಂತ ಲೇಖಕ ಬರೆದ ಪ್ರತಿಭಟನಾ ಸಾಹಿತ್ಯವೇ ನಿಜವಾದ ದಲಿತ ಸಾಹಿತ್ಯವೆನಿಸಿತು. ದಲಿತ ಸಾಹಿತ್ಯವನ್ನು ಒಳಗೊಂಡುದೇ ಬಂಡಾಯ ಸಾಹಿತ್ಯ. ಸಾಹಿತ್ಯ ಸೃಷ್ಟಿ ಖುಷಿಗಾಗಿ ಅಲ್ಲ; ಸಾಂಸ್ಕøತಿಕ ಬದಲಾವಣೆಗಳಿಗಾಗಿ ಸಂಸ್ಕøತಿಯಲ್ಲಿ ಪ್ರತಿಷ್ಠಾಪಿತ ಮೌಲ್ಯಗಳು ಜಡವಾದಾಗ, ಪ್ರತಿಗಾಮಿಯಾದಾಗ ಅವುಗಳ ವಿರುದ್ಧ ಹೋರಾಡುವುದು ಬಂಡಾಯ. ಅದು ಸಾಹಿತ್ಯದಲ್ಲಿ ಅಭಿವ್ಯಕ್ತಗೊಂಡಾಗ ಬಂಡಾಯ ಸಾಹಿತ್ಯ. ಈ ದಿಸೆಯಲ್ಲಿ ಸಂಘಟನೆಗೊಂಡ ಬಂಡಾಯ ಸಾಹಿತಿಗಳ ಸಮ್ಮೇಳನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿರೋಧಿಸುತ್ತ, 1979 ಮಾರ್ಚ್ 10-11ರಂದು ಬೆಂಗಳೂರಿನಲ್ಲಿ ಸಮಾವೇಶಗೊಡು ಈ ಚಳವಳಿಗೆ ಒಂದು ಸ್ಪಷ್ಟರೂಪ ಕೊಡಲು ಯತ್ನ ನಡೆಸಿತು. ಪ್ರಜಾಪ್ರಭುತ್ವದ ರಕ್ಷಣೆಗೆ ಹಾಗೂ ವಿಸ್ತರಣೆಗೆ; ಶೋಷಣೆಯನ್ನು ಸಮರ್ಥಿಸುವ ಯಜಮಾನ ಸಂಸ್ಕøತಿಯ ವಿರುದ್ಧ ಹೋರಾಟಕ್ಕೆ; ಶೋಷಿತ ಜನತೆಯ ಪರವಾದ ಹೋರಾಟದ ಸಾಹಿತ್ಯ ಸೃಷ್ಟಿಗಾಗಿ ಖಡ್ಗವಾಗಲಿ ಕಾವ್ಯ ಎಂಬ ಘೋಷಣೆಗಳನ್ನು ಮೊಳಗಿಸಿತು. ಎಲ್ಲಿ ರಮ್ಯ-ನವ್ಯ ಪಂಥಗಳು ಸೋತಿವೆಯೋ ಅಲ್ಲಿ ಬಂಡಾಯ ಸಾಹಿತ್ಯ ತನ್ನ ಹೊಣೆಗಾರಿಕೆಯನ್ನು ಗುರುತಿಸಲು ಹೊರಟಿದೆ. ಬಂಡಾಯ ಸಾಹಿತ್ಯವೆಂದರೆ ಕೇವಲ ಸೌಂದರ್ಯೋಪಾಸನೆಯಲ್ಲ ಅಥವಾ ಬೌದ್ಧಿಕ ತುಡಿತವೂ ಅಲ್ಲ, ಅದೊಂದು ಸಾಮಾಜಿಕ ಹೊಣೆಗಾರಿಕೆ. ಇಂದು ಸಮಾಜವನ್ನು ಕಿತ್ತು ತಿನ್ನುತ್ತಿರುವ ಅಧೋಗತಿಗೆ ತಳ್ಳಿರುವ ಯಜಮಾನ ಸಂಸ್ಕøತಿಯ ಮುಖ್ಯ ಅಂಶಗಳಾದ ಜಾತಿ ವರ್ಗಗಳ ವಿರುದ್ಧ; ಶೋಷಣೆಯ ವಿರುದ್ಧ ಶ್ರಮ ಜೀವಿಗಳನ್ನು ಬಂಡಾಯಕ್ಕೆ ಅನುಗೊಳಿಸುವುದೇ ಬಂಡಾಯ ಸಾಹಿತ್ಯದ ಗುರಿಯಾಗಿದೆ.
೬,೩೨೨

edits

"https://kn.wikipedia.org/wiki/ವಿಶೇಷ:MobileDiff/779627" ಇಂದ ಪಡೆಯಲ್ಪಟ್ಟಿದೆ