ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩೭ ನೇ ಸಾಲು:
 
*‘ಸಂಪೂರ್ಣ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕ್ರಯೋಜೆನಿಕ್ ಎಂಜಿನ್ ಇರುವ ಮಾರ್ಕ್‌ 3, ಭೂಸಮನ್ವಯ ಕಕ್ಷೆಗೆ 4 ಟನ್‌ ತೂಕದ ಉಪಗ್ರಹಗಳನ್ನು ಒಯ್ಯುವ ಸಾಮರ್ಥ್ಯ ಹೊಂದಿದೆ. ಈ ಎಂಜಿನ್‌ನ ಪರೀಕ್ಷೆ ಈಗಾಗಲೇ ಯಶಸ್ವಿಯಾಗಿ ನಡೆದಿದೆ. ಆದರೆ ಮಾರ್ಕ್‌ 3ನಲ್ಲಿ ಅಳವಡಿಸಿ, ಮತ್ತೊಮ್ಮೆ ಪರೀಕ್ಷೆ ನಡೆಸಬೇಕಿದೆ’ ಎಂದು ಇಸ್ರೊ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಹೇಳಿದ್ದಾರೆ.<ref>[http://www.prajavani.net/news/article/2017/05/29/494918.html ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ರಾಕೆಟ್‌ ಸಿದ್ಧ;ಪಿಟಿಐ;29 May, 2017]</ref>
==ಜಿಸ್ಯಾಟ್‌–17 ಉಪಗ್ರಹ ಯಶಸ್ವಿ ಉಡಾವಣೆ==
*29 ಜೂನ್, 2017;
*ಜಿಸ್ಯಾಟ್‌–17 ದೂರಸಂಪರ್ಕ ಉಪಗ್ರಹವನ್ನು ಏರಿಯಾನ್‌–5 ವಿಎ–238 ಮೂಲಕ, ಕೌರೌನ ಗಯಾನಾ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇಸ್ರೋದಿಂದ ಈಗಾಗಲೇ ಕಕ್ಷೆ ಸೇರಿರುವ 17 ದೂರಸಂಪರ್ಕ ಉಪಗ್ರಹಗಳ ಜತೆ ಇದು ಕಾರ್ಯನಿರ್ವಹಿಸಲಿದೆ.ದೇಶದ ನೂತನ ದೂರಸಂಪರ್ಕ ಉಪಗ್ರಹ ಜಿಸ್ಯಾಟ್‌–17 ಅನ್ನು ಫ್ರೆಂಚ್‌ ಗಾಯಾನದ ಕೌರೌ ಉಪಗ್ರಹ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಉಪಗ್ರಹವನ್ನು ಏರಿಯಾನ್‌–5 ವಿಎ–238 ಉಡಾವಣಾ ವಾಹಕದ ಮೂಲಕ 28/29 ಜೂನ್, 2017ಬುಧವಾರ ತಡರಾತ್ರಿ 2.31ಕ್ಕೆ ಉಡಾವಣೆ ಮಾಡಲಾಗಿದೆ.
 
*ಕಳೆದ ಒಂದು ತಿಂಗಳಿನ ಅವಧಿಯಲ್ಲಿ ಇಸ್ರೋದಿಂದ ಉಡಾವಣೆಗೊಂಡ ಮೂರನೇ ಉಪಗ್ರಹ ಇದಾಗಿದೆ. ಇದಕ್ಕೂ ಮುನ್ನ ಜಿಎಸ್‌ಎಲ್‌ವಿ ಎಂಕೆ–3 ಹಾಗೂ ಪಿಎಸ್‌ಎಲ್‌ವಿ ಸಿ–38 ಉಪಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿತ್ತು. ಜಿಸ್ಯಾಟ್‌–17 ಒಟ್ಟು 3,477 ಕೆ.ಜಿ ತೂಕವಿದೆ. ಹವಾಮಾನ ದತ್ತಾಂಶ, ಉಪಗ್ರಹ ಆಧಾರಿತ ಹುಡುಕಾಟದ ಸೇವೆಗೆ ಇದು ಬಳಕೆ ಆಗಲಿದೆ ಎಂದು ಇಸ್ರೊ ಹೇಳಿದೆ.<ref>[http://www.prajavani.net/news/article/2017/06/29/502382.html ಜಿಸ್ಯಾಟ್‌–17 ಉಪಗ್ರಹ ಯಶಸ್ವಿ ಉಡಾವಣೆಪಿಟಿಐ;29 Jun, 2017;ಪಿಟಿಐ]</ref>
 
== ನೋಡಿ ==