ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Clean up My contribs round 2 using AWB
೩೯ ನೇ ಸಾಲು:
*ಕಾಲದ ಪ್ರಭಾವದಿಂದಾಗಿ ಆದ ಹಲವಾರು ಬದಲಾವಣೆಗಳನ್ನು ನಾವು ಇಲ್ಲಿ ಕಾಣಬಹುದು. ಗವಿಯ ಮುಂದೆ ಕಿರಿದಾದ ಸಣ್ಣ ಕಣಿವೆ, ಇಲ್ಲೊಂದು ಅಷ್ಟೇ ಸಣ್ಣದಾದ ಝರಿ. ಇದು ಪ್ರಾಚೀನ ಕಾಲದಲ್ಲಿ ಮಾನವ ವಾಸ್ತವ್ಯಕ್ಕೆ ಅತ್ಯಂತ ಸೂಕ್ತವಾದ ಸ್ಥಳವಾಗಿತ್ತು. ಆಧುನಿಕ ಮಾನವನ ಸಂಪರ್ಕ ಹೊಂದಿರುವ ಈ ಗವಿ ಇದ್ದಿರಬಹುದಾದ ಪಳೆಯುಳಿಕೆಗಳನ್ನು ತನ್ನ ಗರ್ಭದಲ್ಲಿ ಸೇರಿಸಿಕೊಂಡಿದೆ. ಬೆಳುವಾಯಿ ಸಮೀಪದ ದರೆಗುಡ್ಡೆ ಮತ್ತು ಬೈಲೂರು ಸಮೀಪದ ಕಣಜಾರು ಬೆಟ್ಟ ಪ್ರದೇಶಗಳಲ್ಲಿ ಹೆಬ್ಬಂಡೆ ವಾಸ್ತವ್ಯದ (Rock Shelters) ಕುರುಹುಗಳಿವೆ.
*ಇಲ್ಲಿ ಬೃಹತ್ ಶಿಲಾಯುಗಕ್ಕೂ ಹಿಂದಿನ ಕಾಲದ ಮಾನವ ವಾಸವಾಗಿದ್ದಿರಬಹುದು. ಸಾವಿರಾರು ವರ್ಷಗಳ ಘನಘೋರ ವರ್ಷಧಾರೆಯಿಂದ ಇಲ್ಲಿನ ಕುರುಹುಗಳು ನಾಶವಾಗಿವೆ. ರೆಂಜಾಳದ ಸಮೀಪ ಇರುವ ಬೋರುಕಟ್ಟೆ ಎಂಬ ಹಳ್ಳಿಯಲ್ಲಿ ಒಂದು ಬೃಹತ್ ಶಿಲಾ ಸಮಾಧಿ ಇದೆ. ಇದನ್ನು ಅಲ್ಲಿನ ಜನ “ಪಾಂಡವರಕಲ್ಲು” ಎಂದು ಕರೆಯುತ್ತಾರೆ. ಈ ಹೆಸರು ಸಮಾಧಿಯ ಪ್ರಾಚೀನತೆಯನ್ನು ಸೂಚಿಸುತ್ತದೆ ಅಷ್ಟೇ. ಜಿಲ್ಲೆಯ ಇತರೆಡೆಗಳಲ್ಲೂ ಪಾಂಡವರಕಲ್ಲು ಎಂದು ಕರೆಸಿಕೊಳ್ಳುವ ಸ್ಥಳಗಳಿವೆ.
*ಬೋರುಕಟ್ಟೆ ಸಮಾಧಿಯು ಸಣ್ಣ ರಂಧ್ರದ(Pot-hole) ಸಮಾಧಿ. ಇದರ ಮೇಲೆ ತೆಳುವಾದ ಕಲ್ಲು ಚಪ್ಪಡಿಗಳ ಒಂದು ಚಪ್ಪರ ಇದೆ. ಮಾನವ ಆ ವೇಳೆಗೆ ಲೋಹದ ಮುಖ್ಯವಾಗಿ, ಕಬ್ಬಿಣದ ಉಪಯೋಗ ಪಡೆದಿದ್ದನೆಂಬುದಕ್ಕೆ ಇದು ಸಾಕ್ಷಿ. ಇಲ್ಲಿನ ಬೃಹತ್ ಶಿಲಾಯುಗದ ಸ್ಮಾರಕಗಳು ಸುಮಾರು ಕ್ರಿ. ಪೂ. 4ನೇಯ ಶತಮಾನ ಮತ್ತು ಅನಂತರದ ಕಾಲವೆಂದು ಅಂದಾಜಿಸಬಹುದು. ಆದರೆ ವೈಜ್ಞಾನಿಕವಾಗಿ ಉತ್ಖನನ ಕಾರ್ಯ ನಡೆಯುವವರೆಗೆ ಈ ಕಾಲವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.
 
===ಕಾರ್ಕಳದ ಇತಿಹಾಸ===
೮೩ ನೇ ಸಾಲು:
===ಮತ-ಧರ್ಮಗಳು===
ಕಾರ್ಕಳವು ಜೈನಕಾಶಿ ಎಂದೇ ಖ್ಯಾತಿ ಪಡೆದಿದ್ದು ಇಲ್ಲಿ ಜೈನಧರ್ಮೀಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸುಮಾರು ೧೮ ಜೈನ ಬಸದಿಗಳು ಕಾರ್ಕಳದಲ್ಲಿವೆ. ಅವುಗಳಲ್ಲಿ ಚತುರ್ಮುಖ ಬಸದಿಯು ತನ್ನ ವಾಸ್ತುಶಿಲ್ಪದ ಹಿರಿಮೆಯಿಂದಾಗಿ ಪ್ರಸಿದ್ಧಿ ಪಡೆದಿದೆ. ಕಾರ್ಕಳದಲ್ಲಿರುವ ೪೨ ಅಡಿ ಎತ್ತರದ ಬಾಹುಬಲಿ ಪ್ರತಿಮೆಯು ರಾಜ್ಯದಲ್ಲಿಯೇ ಎರಡನೇ ಅತಿ ಎತ್ತರದ ಏಕಶಿಲಾ ಪ್ರತಿಮೆಯಾಗಿದೆ. ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಇಲ್ಲಿ ಮಹಾಮಸ್ತಕಾಭಿಷೇಕ ನಡೆಯುತ್ತದೆ.
ಕಾರ್ಕಳ ತಾಲೂಕಿನಲ್ಲಿ ಹಿಂದೂ-ಕ್ರೈಸ್ತ-ಮುಸಲ್ಮಾನ-ಜೈನ ಧರ್ಮಗಳು ಪಾಲಿಸಲ್ಪಡುತ್ತವೆ. ಕಾರ್ಕಳದ ಅನಂತಪದ್ಮನಾಭ ದೇವಸ್ಥಾನ, ಪಡುತಿರುಪತಿ ಎಂದೇ ಖ್ಯಾತವಾದ ವೆಂಕಟರಮಣ ದೇವಳ ಕಾರ್ಕಳ ಪೇಟೆಯ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಪ್ರಮುಖವಾದವು. ಕಾರ್ಕಳದ ಅತ್ತೂರಿನ ಚರ್ಚ್(ಇಗರ್ಜಿ) ಸುತ್ತಮುತ್ತಲಿನ ಜಿಲ್ಲೆಗಳಲ್ಲಿಯೇ ಕ್ರೈಸ್ತರಲ್ಲಿ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದೆ.
 
===ಭಾಷೆ===
೯೪ ನೇ ಸಾಲು:
*[[ಶ್ರವಣಬೆಳಗೊಳ]]
*[[ಜೈನಧರ್ಮ]]
[[ವರ್ಗ:ಕರ್ನಾಟಕ]]
 
==ಆಧಾರ==
Line ೧೦೨ ⟶ ೧೦೧:
*೧.ವಿಜಯ ಕರ್ನಾಟಕ >>21-1-2015
 
<br {{clear="all">}}
{{ಉಡುಪಿಯ ತಾಲ್ಲೂಕುಗಳು}}
 
[[ವರ್ಗ:ಕರ್ನಾಟಕ]]
[[ವರ್ಗ:ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳು]][[ವರ್ಗ:ಜೈನಧರ್ಮ]][[ವರ್ಗ:ಜೈನ ಸಾಹಿತ್ಯ]]
[[ವರ್ಗ:ಜೈನಧರ್ಮ]]
[[ವರ್ಗ:ಜೈನ ಸಾಹಿತ್ಯ]]
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ