ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೪೮ ನೇ ಸಾಲು:
 
==ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ==
* ೧೯೧೮ರಲ್ಲಿ ಸರ್ಕಾರದ ಮುಖ್ಯ ನ್ಯಾಯಾಧೀಶರಾಗಿದ್ದ ಸರ್.ಲೆಸ್ಲಿ ಮಿಲ್ಲರ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಿ, ಎಲ್ಲಾ ಸಮುದಾಯದ ಜನರಿಗೆ ಸರ್ಕಾರಿ ಉದ್ಯೋಗದಲ್ಲಿ ಪ್ರತಿನಿಧ್ಯ ದೊರಕುವಂತೆ ಅಧ್ಯಯನ ಮಾಡಿ, ವರದಿ ನೀಡಲು ಆದೇಶ ಮಾಡಿದರು. ನಂತರ ಆಯೋಗದ ಶಿಫಾರಸ್ಸುಗಳಂತೆ ಬ್ರಾಹ್ಮಣರು, ಆಂಗ್ಲೋ ಇಂಡಿಯನ್ನರನ್ನು ಹೊರತು ಪಡಿಸಿ ಉಳಿದ ಎಲ್ಲಾ ಜಾತಿಗಳನ್ನು ಹಿಂದೂಗಳೆಂದು ಪರಿಗಣಿಸಿ, ೧೯೨೧ರಲ್ಲಿ ಪ್ರಥಮ ಭಾರಿಗೆ ಎಲ್ಲಾ ಹಿಂದುಳಿದ ಸಮುದಾಯಗಳಿಗೆ ಶೇ.೭೫ರಷ್ಟು ಮೀಸಲಾತಿ ನೀಡಲು ಆದೇಶ ಹೊರಡಿಸಿದರು. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು "ಮೀಸಲಾತಿಯ ಜನಕ" ಎನ್ನುತ್ತಾರೆ.
* ಮಿಲ್ಲರ್ ಆಯೋಗ ರಚನೆ ಸಾಮಾಜಿಕ ಇತಿಹಾಸದಲ್ಲೇ ಒಂದು ಮೈಲಿಗಲ್ಲಾಯಿತು. ಮಿಲ್ಲರ್ ಆಯೋಗ ಜಾರಿಗೆ ಬರಲಾಗಿ ಮೊಟ್ಟ ಮೊದಲ ಬಾರಿಗೆ ಮೈಸೂರು ಸಂಸ್ಥಾನಕ್ಕೆ ಕಾಂತರಾಜೇ ಅರಸ್ ದಿವಾನರಾಗಲು ಸಾಧ್ಯವಾಯಿತು. ಈ ಕಾಲದಲ್ಲೇ ಒಕ್ಕಲಿಗರ ಸಂಘ, ರೆಡ್ಡಿ ಜನಸಂಘ, ವೀರಶೈವರ ಜಾತಿ ಆಧಾರಿತ ಶಾಲಾ- ಕಾಲೇಜುಗಳು ಆರಂಭವಾದುವು.
* ನಾಲ್ವಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ, ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟುದು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು.
೬೭ ನೇ ಸಾಲು:
 
===ನೀರಾವರಿ===
೧೯೦೭* ರಲ್ಲಿ೧೯೦೭ರಲ್ಲಿ 'ವಾಣೀವಿಲಾಸ ಸಾಗರ' (ಮಾರಿ ಕಣಿವೆ) ಕಟ್ಟಲ್ಪಟ್ಟಿತು. ೧೯೧೧ ರಲ್ಲಿ ಆರಂಭವಾದ '[[ಕೃಷ್ಣರಾಜ ಸಾಗರ]]' ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. ೧೯೦೦ರಲ್ಲಿಯೇ [[ಶಿವನ ಸಮುದ್ರ]]ದ ಬಳಿ [[ಕಾವೇರಿ ನದಿ ]]ಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು.
* ಇದು [[ಭಾರತ]]ದ ಮೊದಲ ಜಲ ವಿದ್ಯುತ್ ಕೇಂದ್ರ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ ೧೯೦೫ ಆಗಸ್ಟ್ ೩ ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು.
===ಗೆಜೆಟ್ ಪ್ರಕಟಣೆ===
"ಜಾತಿ ಆಧಾರದ ಮೇಲೆ ಯಾರನ್ನೂ ಸಾರ್ವಜನಿಕ ಶಾಲೆಗಳಿಂದ ದೂರವಿಡುವ ಪರಿಪಾಠಗಳನ್ನು ಸರ್ಕಾರ ಎತ್ತಿ ಹಿಡಿಯದು. ಸಾರ್ವಜನಿಕ ಶಾಲೆಗಳನ್ನು ತೆರಿಗೆ ಆದಾಯದದಿಂದ ನಡೆಸುತ್ತಿರುವುದರಿಂದ ಶಿಕ್ಷಣವು ಸಹ, ಆಸ್ಪತ್ರೆ, ನ್ಯಾಯಾಲಯ, ರೈಲು ಪ್ರಯಾಣ ಇತ್ಯಾದಿ ಸಾರ್ವಜನಿಕ ಕ್ಷೇತ್ರಗಳಂತೆ ರಾಜ್ಯದ ಎಲ್ಲಾ ವರ್ಗದ ಜನರಿಗೂ ಲಭ್ಯವಾಗಬೇಕು".
 
==ಶೈಕ್ಷಣಿಕ ಕೊಡುಗೆ ಮತ್ತು ಸುಧಾರಣೆ==
===ವಿದ್ಯಾಭ್ಯಾಸ===
* ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು .ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ [[ಮೈಸೂರು ವಿಶ್ವವಿದ್ಯಾನಿಲಯ]]ವನ್ನು ಸ್ಥಾಪಿಸಿದುದು. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
* ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
# ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು. ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ತಂತರ ಇವರ ಆಡಳಿತಾವಧಿಯಲ್ಲಿ ಸುಮಾರು ೮೦೦ ಶಾಲೆಗಳನ್ನು ತೆರೆಯಲಾಯಿತು.
 
===ಜಾರಿ ಮಾಡಿದ ಸಾಮಾಜಿಕ ಕಾನೂನುಗಳು===