ನಾಲ್ವಡಿ ಕೃಷ್ಣರಾಜ ಒಡೆಯರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
ಲೇಖನಕ್ಕೆ ಮತ್ತಷ್ಟು ವಿಷಯವನ್ನು ಸೇರಿಸಲಾಗಿದೆ.
೩೭ ನೇ ಸಾಲು:
* ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ 'ಮಾದರಿ ಮೈಸೂರು' ಎಂಬ ಕೀರ್ತಿ ಪ್ರಾಪ್ತವಾಯಿತು. ನಾಲ್ವಡಿ ಕೃಷ್ಣರಾಜ ಒಡೆಯ ರು ಅರಸು ಮನೆತನದಿಂದ ಬಂದವರಾಗಿದ್ದರೂ ಸಹ, ಜನತೆ ಆಡಳಿತದಲ್ಲಿ ಪಾಲ್ಗೊಳ್ಳುವಿಕೆಯ ಪರವಾಗಿದ್ದರು.
 
===ಪ್ರಜಾ ಪ್ರತಿನಿಧಿ ಸಭೆ===
* ಜನತೆಯ ಆಶೋತ್ತರಗಳಿಗೆ ಪೂರಕವಾಗಲು "ಪ್ರಜಾಪ್ರತಿನಿಧಿ ಸಭೆ" ಹಾಗೂ "ನ್ಯಾಯ ವಿಧೇಯಕ ಸಭೆ"ಗಳಿಗೆ ಮೈಸೂರು ಸಂಸ್ಥಾನದಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿ ಕೊಟ್ಟದ್ದು ಇವರ ಪ್ರಮುಖ ಸಾಧನೆ. ಅವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ 'ಪ್ರಜಾ ಪ್ರತಿನಿಧಿ ಸಭೆ'ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು.
*ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, " ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ" ಎಂದರು. ಅದಕ್ಕಾಗಿ ೧೯೨೩ರರಲ್ಲಿ ಹೊಸ ಕಾನೂನೊಂದನ್ನು ಜಾರಿಗೆ ತಂದು, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು.
೭೨ ನೇ ಸಾಲು:
"ಜಾತಿ ಆಧಾರದ ಮೇಲೆ ಯಾರನ್ನೂ ಸಾರ್ವಜನಿಕ ಶಾಲೆಗಳಿಂದ ದೂರವಿಡುವ ಪರಿಪಾಠಗಳನ್ನು ಸರ್ಕಾರ ಎತ್ತಿ ಹಿಡಿಯದು. ಸಾರ್ವಜನಿಕ ಶಾಲೆಗಳನ್ನು ತೆರಿಗೆ ಆದಾಯದದಿಂದ ನಡೆಸುತ್ತಿರುವುದರಿಂದ ಶಿಕ್ಷಣವು ಸಹ, ಆಸ್ಪತ್ರೆ, ನ್ಯಾಯಾಲಯ, ರೈಲು ಪ್ರಯಾಣ ಇತ್ಯಾದಿ ಸಾರ್ವಜನಿಕ ಕ್ಷೇತ್ರಗಳಂತೆ ರಾಜ್ಯದ ಎಲ್ಲಾ ವರ್ಗದ ಜನರಿಗೂ ಲಭ್ಯವಾಗಬೇಕು".
 
===ಶೈಕ್ಷಣಿಕ ಕೊಡುಗೆ ಮತ್ತು ಸುಧಾರಣೆ===
* ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು, ಉಚಿತವಾಗಿ ಮತ್ತು ಕಡ್ಡಾಯವಾಗಿ ಆರಂಭಿಸಲಾಯಿತು .ನಾಲ್ವಡಿ ಕೃಷ್ಣರಾಜರ ಮಹತ್ತರ ಸಾಧನೆಯೆಂದರೆ [[ಮೈಸೂರು ವಿಶ್ವವಿದ್ಯಾನಿಲಯ]]ವನ್ನು ಸ್ಥಾಪಿಸಿದುದು. ದೇಶದಲ್ಲೇ ಮೊಟ್ಟಮೊದಲ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ೨೭೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು.
* ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗೀ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ೧೯೦೬ ರಲ್ಲಿಯೇ ಸಹಕಾರ ಸಂಘಗಳನ್ನು ಸ್ಥಾಪಿಸಲಾಯಿತು. ರೈತರಿಗಾಗಿ ಜಮೀನು ಅಡಮಾನ ಬ್ಯಾಂಕುಗಳು ಆರಂಭವಾದವು.
# ಬುಡಕಟ್ಟು, ಗಿರಿಜನ, ಅರಣ್ಯವಾಸಿಗಳಿಗೆ ಮೊಟ್ಟ ಮೊದಲು ಶಾಲೆಗಳನ್ನು ತೆರೆಯಲಾಯಿತು. ಅಸ್ಪೃಶ್ಯರಿಗಾಗಿಯೇ ಹುಸ್ಕೂರು ಹಾಗೂ ಟಿ.ನರಸೀಪುರದಲ್ಲಿ ಶಾಲೆಗಳನ್ನು ಪ್ರಾರಂಭಿಸಲಾಯಿತು. ತಂತರ ಇವರ ಆಡಳಿತಾವಧಿಯಲ್ಲಿ ಸುಮಾರು ೮೦೦ ಶಾಲೆಗಳನ್ನು ತೆರೆಯಲಾಯಿತು.
# ಮೊಟ್ಟ ಮೊದಲ ಬಾರಿಗೆ ಸ್ರೀ ಶಿಕ್ಷಣವನ್ನು ಕಡ್ಡಾಯ ಮಾಡಲಾಯಿತು.
# ೧೯೦೨ - ಬೆಂಗಳೂರಿನ ಪ್ರಥಮ ವಾಣಿಜ್ಯಶಾಲೆ ಪ್ರಾರಂಭಿಸಲಾಯಿತು.
# ೧೯೦೩ - ಮೈಸೂರಿನಲ್ಲಿ ತಾಂತ್ರಿಕ ಶಾಲಾ ಸ್ಥಾಪನೆ.
# ೧೯೦೬ - ಕುರುಡ ಹಾಗೂ ಮೂಕ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು.
# ೧೯೧೧ - ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಆರಂಭಿಸಲಾಯಿತು.
# ೧೯೧೨ - ಮೊದಲ ಬಾರಿಗೆ ವಯಸ್ಕರ ಶಿಕ್ಷಣ ಆಂದೋಲನ ಪ್ರಾರಂಭಿಸಿ, ೭೦೦೦ ಸಾಕ್ಷರತಾ ಕೇಂದ್ರಗಳನ್ನು ತೆರೆದಿದ್ದರು.
# ೧೯೧೬ - ಮೈಸೂರು ವಿಶ್ವವಿದ್ಯಾನಿಲಯದ ಸ್ಥಾಪನೆ. ಉರ್ದು ಶಾಲೆಗಳ ಸ್ಥಾಪನೆ.
# ೧೯೧೮ - ಶಾಲಾ ಪ್ರವೇಶಕ್ಕೆ ಜಾತಿ ಪದ್ದತಿಯನ್ನು ನಿರ್ಮೂಲನೆ ಮಾಡಲಾಯಿತು.
# ೧೯೧೯ - ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕವನ್ನು ರದ್ದು ಮಾಡಿದರು.
 
===ಜಾರಿ ಮಾಡಿದ ಸಾಮಾಜಿಕ ಕಾನೂನುಗಳು===