ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪ ನೇ ಸಾಲು:
 
==ಪುರಾಣದಲ್ಲಿ==
* ಶಿವಪುರಾಣದಲ್ಲಿ ಹೇಳಿರುವಂತೆ ಗಣಪತಿಯನ್ನು ತುಳಸೀ ದಳದಲ್ಲಿ ಪೂಜಿಸಬಾರದು. ಏಕೆಂದರೆ ತುಳಸಿಯ ದರ್ಶನ ಮತ್ತು ಗಂಧಗಳು ಗಣೇಶ ದೇವರಿಗೆ ಸಂಬಂಧಪಟ್ಟ ಒಳಕೇಂದ್ರಗಳನ್ನು ಮುಚ್ಚುತ್ತವೆ. ಕೇತಕೀ ಪುಷ್ಪದ ಸ್ಪರ್ಶವು ಶಿವನ ದರ್ಶನಕ್ಕೆ ಸಂಬಂಧಪಟ್ಟ ಕೇಂದ್ರಗಳ ಪ್ರಭಾವ ವನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಚೌತಿಯ ಚಂದ್ರನ ದರ್ಶನವೂ ಗಣೇಶನ ಉಪಾಸನೆಗೆ ಪ್ರತಿಬಂಧಕವಾಗಿದೆ. ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು.
* ಸೂರ್ಯನು ಬುದ್ಧಿತತ್ವಕ್ಕೆ ಮತ್ತು ಚಂದ್ರನು ಮನಸ್ತತ್ವಕ್ಕೆ ದೇವತಿ. ಗಣೇಶನ ಆಳ್ವಿಕೆಗೆ ಒಳಪಟ್ಟಿರುವ ಇಪ್ಪತ್ತೊಂದು ತತ್ವಗಳಲ್ಲಿ ಕೊನೆಯದು ಮನಸ್ಸು. ಉಳಿದ ಇಪ್ಪತ್ತು ತತ್ವಗಳಾವುವೆಂದರೆ, ಪಂಚಭೂತಗಳು, ಪಂಚ ಕರ್ಮೇಂದ್ರಿಯಗಳು, ಪಂಚ ಜ್ಞಾನೇಂದ್ರಿಯಗಳು ಮತ್ತು ಪಂಚತನ್ಮಾತ್ರೆಗಳು. ಮನಸ್ಸನ್ನು ಸಂಯಮದಿಂದ ಒಳಗಿನ ಜ್ಞಾನಾಕಾಶದಲ್ಲಿ ಲಯಗೊಳಿಸಿದರೆ ಗಣೇಶನ ಮಹಿಮೆಯ ಅನುಭವ ಉಂಟಾಗುತ್ತದೆ. ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು.
* ಗಣೇಶ ಚತುರ್ಥಿಯ ರಾತ್ರಿ ಇಂತಹ ಸಂಯಮದಲ್ಲಿದ್ದು ಭಗವಂತನ ನಿಜಸ್ವರೂಪವನ್ನು ಅನುಭವಿಸುತ್ತಾ ಆನಂದವಾಗಿರಬೇಕು. ಹಾಗೆ ಮಾಡದೇ ಅದನ್ನು ಹೊರಗಿನ ಆಕಾಶದಲ್ಲಿ ಕಾಣುವ ಚಂದ್ರರೂಪದಲ್ಲಿ ನೋಡುವುದರಲ್ಲಿ ಆಸಕ್ತಿ ಹೊಂದಿದರೆ, ಗಣೇಶನ ಮಹಿಮೆಯ ಅರಿವು ಉಂಟಾಗದೇ ಅವನ ರೂಪವನ್ನು ಹಾಸ್ಯಮಾಡುವ ದುರ್ಬುದ್ಧಿಯುಂಟಾಗುತ್ತದೆ.
==ಗಣಪತಿ ಪೂಜೆ (ಕೆಲವು ಮಾಹಿತಿಗಳು)==
<poem>
ಗಣಾನಾಂ ತ್ವಾ ಗಣಪತಿಂ ಹವಾಮಹೇ, ಕವಿಂ ಕವೀನಾಂ ಉಪಮಶ್ರಮವಸ್ತಮಂ|
ಜ್ಯೇಷ್ಠ ರಾಜಂ ಬ್ರಹ್ಮಣಾಂ ಬ್ರಹ್ಮಣಸ್ಪತ ಆನ:ಶೃಣ್ವನ್ ಊತಿಭಿ: ಸೀದ ಸಾಧನಂ||
Line ೧೮ ⟶ ೧೯:
ತ್ವಂ ಸಾಕ್ಷಾದಾತ್ಮಾಸಿ ಆತ್ಮಂ
ತ್ವಂ ಬ್ರಹ್ಮಾ ವಿಷ್ಣುಸ್ತ್ವಂ ರುದ್ರಸ್ತ್ವಂ ಇಂದ್ರಸ್ತ್ವಂ ಅಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮಭೂರ್ಭುವಸ್ಸುವರೋಮ್ - 'ಗಣೇಶಾಥರ್ವಶೀರ್ಷ'ದಲ್ಲಿ ಆತನನ್ನು ಹೀಗೆ ವರ್ಣಿಸಲಾಗಿದೆ.
</poem>
 
==ಗಣೇಶನ ಹುಟ್ಟು==
[[File:Ganeshji 2010.jpg|thumb|ಮಹಾರಾಷ್ಟ್ರದ ಹರಿಪುರದ ಗಣೇಶಮೂರ್ತಿ,2010]]
* ಯಾಜ್ಞವಲ್ಕ್ಯ ಸ್ಮೃತಿಯ ಪ್ರಕಾರ ಅಂಬಿಕೆಯು ಗಣಪತಿಯ ತಾಯಿ. ಇನ್ನೊಂದು ಕಥೆಯ ಪ್ರಕಾರ ಆತನು ಪಾರ್ವತಿಯ ಮೈಯಿಂದ ಹುಟ್ಟಿದವನು. ಸ್ವರ್ಣಗೌರಿಯ ಮಾನಸ ಪುತ್ರ ಈತ. ಗೌರಿ ತನ್ನ ಮೈಕೊಳೆಯಿಂದ ಆಕೃತಿಯೊಂದನ್ನು ಸೃಷ್ಟಿಸಿ ಅದಕ್ಕೆ ಜೀವತುಂಬಿ ಸ್ನಾನ ಮಾಡಲು ಹೋಗಿರುತ್ತಾಳೆ. ತಾಯಿಯ ಅಣತಿಯಂತೆ ಗಣಪ ಮನೆಯನ್ನು ಕಾಯುತ್ತಿರುತ್ತಾನೆ. ಶಿವನು ಮನೆಗೆ ಹಿಂತಿರುಗಿದಾಗ, ಗಣಪ ಅವನನ್ನು ತಡೆದು ಮನೆಯೊಳಗೆ ಹೋಗಲು ಅಡ್ಡಿಪಡಿಸುತ್ತಾನೆ. ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು.
* ಇದರಿಂದ ಕುಪಿತಗೊಂಡ ಶಿವ ತನ್ನ ತ್ರಿಶೂಲದಿಂದ ಅವನ ಶಿರವನ್ನು ಕತ್ತರಿಸುವನು. ಸ್ನಾನ ಮುಗಿಸಿ ಬಂದ ಗೌರಿ ಮಗನ ಕಳೇಬರ ಕಂಡು ರೋದಿಸುತ್ತಾಳೆ. ಹೆಂಡತಿಯನ್ನು ಸಮಾಧಾನ ಪಡಿಸುವ ಸಲುವಾಗಿ ಶಿವ ತನ್ನ ಗಣಗಳನ್ನು ಕರೆದು ಉತ್ತರ ದಿಕ್ಕಿಗೆ ಯಾರಾದರೂ ತಲೆ ಹಾಕಿ ಮಲಗಿದ್ದರೆ, ಅಂತಹವರ ತಲೆಯನ್ನು ಕತ್ತರಿಸಿ ತರುವಂತೆ ಆಜ್ಞಾಪಿಸುತ್ತಾನೆ.
* ಅವರು ಉತ್ತರ ದಿಕ್ಕಿನಲ್ಲಿ ಮಲಗಿದ್ದ ಮರಿಯಾನೆ ತಲೆಯನ್ನು ಕತ್ತರಿಸಿ ತರುತ್ತಾರೆ. ನಂತರ ಅದನ್ನು ಗಣಪನ ಶರೀರಕ್ಕೆ ಅಂಟಿಸುವರು. ಹೀಗಾಗಿ ಗಣಪ ಗಜಮುಖನಾಗಿ, ಗಣಗಳ ಅಧಿಪತಿ ಮತ್ತು ಮೊದಲ ಅಗ್ರಪೂಜೆಗೆ ಅರ್ಹನಾಗುತ್ತಾನೆ. ವಿಘ್ನ ವಿನಾಶಕ ವಿನಾಯಕನಾಗಿರುವನು.
 
==ಗಣೇಶನ ಹಬ್ಬ==
* ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂತಿರುಗುತ್ತಾನೆ.
*ಸಾಮಾನ್ಯವಾಗಿ ಈ ಹಬ್ಬ ಭಾದ್ರಪದ ಚೌತಿಯ ದಿನದಂದು ಬರುತ್ತದೆ. ಆ ದಿನ ಯಾರೂ ಚಂದ್ರನನ್ನು ನೋಡಬಾರದು. ಗಣೇಶ ಭೂಲೋಕಕ್ಕೆ ಬಂದ ದಿನವನ್ನು ವಾರಗಟ್ಟಲೆ ಸಂಭ್ರಮದಿಂದ ಆಚರಿಸುವುದು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಅಂದು ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.
 
==ಗಣೇಶನ ಹಬ್ಬದ ವೈಶಿಷ್ಟ್ಯತೆಗಳು==
* ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸಿದರೆ, ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು. ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ.
* ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು. ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು. ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.
* ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ.ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು. ಪೂಜೆಯ ನಂತರ ಹತ್ತುದಿನಗಳ ವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.
* ಪೂಜೆಯ ನಂತರ ಹತ್ತುದಿನಗಳ ವರೆವಿಗೆ ನಿತ್ಯ ಪೂಜೆಯನ್ನು ಮಾಡಿ ೧೦ನೆಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು.ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.
* "ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್"
* ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಇ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ,ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.
 
== Gallery ==
<gallery class="center" heights="100" widths="150">
File:Ganesh spgya 2009.jpg|Ganesh idol at a public pandal in [[Hyderabad, India|Hyderabad]]
File:Clay Ganesh Murti, Ganesh Chaturthi.JPG|A Ganesha idol in a home during the festival
Lalbaug_cha_raja.jpg|Procession in [[Mumbai]]
File:Guruji Talim Mandal.JPG|Procession in [[Pune]]
Ganesh visarjan surat 2009.jpg|Procession in [[Surat]]
File:Foreshore-Ganesh.jpg|Immersion in sea, [[Chennai]]
File:Immersion-de-Ganesh.jpg|Immersion of idol in [[Bangalore]]
</gallery>
 
{{ಹಿಂದೂ ಧರ್ಮದ ಹಬ್ಬಗಳು}}
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ