ಮಧ್ವಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
--------------------------------------
 
*ವೇದಾಂತ ದರ್ಶನದಲ್ಲಿ , ಮಧ್ವಚಾರ್ಯರು ದ್ವೈತ ಸಿದ್ಧಾಂತದ ಉಗ್ರ ಪ್ರತಿಪಾದಕರು. ಅವರು ಹದಿಮೂರು ಹದಿನಾಲ್ಕನೇ [೧೨೩೮-೧೩೧೭] ಶತಮಾನದಲ್ಲಿದ್ದವರುಶತಮಾನದಲ್ಲಿ ಇದ್ದವರು. ಅವರು ಭಕ್ತಿ ಮಾರ್ಗದ ಪ್ರವರ್ತಕರಲ್ಲಿ ಪ್ರಮುಖರು. ಅವರು ವಾಯುವಿನ ಅವತಾರದಲ್ಲಿ ಮೂರನೆಯವರಾದ ಮಾರುತಿ ಭೀಮರ ನಂತರ ಬಂದ ಮೂರನೇ ಅವತಾರ ವೆಂದು ಹೇಳುತ್ತಾರೆ(ಮಹಾಭಾರತ ತಾತ್ಪರ್ಯನಿರ್ಣಯದಲ್ಲಿ ಅವರೇ ಹೇಳಿಕೊಂಡಿದ್ದಾರೆ).
ಮಧ್ವರು ಉಡುಪಿಯ ಹತ್ತಿರ ಪಾಜಕದಲ್ಲಿ ವಿಜಯ ದಶಮಿಯಂದು ಕ್ರಿಶ.೧೨೩೮ ರಲ್ಲಿ ಒಂದು ಚಿಕ್ಕ ಕುಟೀರದಲ್ಲಿ ಜನಿಸಿದರು. ಅವರ ತಂದೆ ನದಿಲ್ಲಾಯ ನಾರಾಯಣ ಭಟ್ಟ.(ಇಂಗ್ಲಿಷ್ ವಿಕಿಪೀಡಿಯಾ), ತಾಯಿ ವೇದಾವತಿ. ಅವರು ಆ ಮಗುವಿಗೆ ವಾಸುದೇವನೆಂದು ನಾಮಕರಣ ಮಾಡಿದರು. ನಂತರ ಮಧ್ವರು ಪೂರ್ಣಪ್ರಜ್ಞ, ಪೂರ್ಣ ಬೋಧ, ಆನಂದ ತೀರ್ಥ, ಮಧ್ವಾಚಾರ್ಯಎಂಬ ಹೆಸರುಗಳಿಂದ ಪ್ರಸಿದ್ಧರಾದರು. ಅವರ ಜನನಕ್ಕೆ ಮುಂಚೆ ಅವರ ತಾಯಿ ತಂದೆ ಪೇಟೆಗೆ ಹೋಗಿದ್ದಾಗ ಒಬ್ಬ ಭಿಕ್ಷುಕ ಧ್ವಜ ಸ್ಥಂಬ ವನ್ನು ಏರಿ, 'ಈ ಊರಿನಲ್ಲಿ ವಾಯು ದೇವನು ಅವತರಿಸುವನು' ಎಂದು ಕೂಗಿ ಹೇಳಿದನೆಂದು ಪ್ರತೀತಿ.
 
"https://kn.wikipedia.org/wiki/ಮಧ್ವಾಚಾರ್ಯ" ಇಂದ ಪಡೆಯಲ್ಪಟ್ಟಿದೆ