ಭದ್ರಾ ನದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೨ ನೇ ಸಾಲು:
*ನಾಲೆ ನಿರ್ಮಾಣಕ್ಕಾಗಿ ನಾಶವಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ರಾಜ್ಯ ಸರ್ಕಾರ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿಯ ಕಾವಲ್‌ನಲ್ಲಿ 350 ಹೆಕ್ಟೇರ್‌ ಕಂದಾಯ ಭೂಮಿ ನೀಡಿದೆ. ಆ ಜಾಗದಲ್ಲಿ ಹೊಸದಾಗಿ ಅರಣ್ಯ ಬೆಳೆಸಲು ₹31.5 ಕೋಟಿ ಬಿಡುಗಡೆ ಮಾಡಿದೆ.
 
===206.91 ಬೆಳೆಸಲು ₹31.5 ಕೋಟಿ ಬಿಡುಗಡೆ ಮಾಡಿದೆ.
===206.91 ಹೆಕ್ಟೇರ್‌ ಅರಣ್ಯ ಬಳಕೆ===
*ಮೊದಲ ಹಂತದಲ್ಲಿ ತುಂಗಾ ಜಲಾಶಯದಿಂದ ಭದ್ರಾ ಜಲಾಶಯದವರೆಗೆ 96.91 ಹೆಕ್ಟೇರ್‌, ಎರಡನೇ ಹಂತದಲ್ಲಿ ಭದ್ರಾ ಜಲಾಶಯದಿಂದ ತರೀಕೆರೆ ತಾಲ್ಲೂಕು ಅಜ್ಜಂಪುರದವರೆಗೆ (53 ಕಿ.ಮೀ.) 110 ಹೆಕ್ಟೇರ್‌ ಅರಣ್ಯ ಬಳಸಿಕೊಳ್ಳಲು ಅನುಮತಿ ಕೋರಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಜ್ಯ ಜಲ ಸಂಪನ್ಮೂಲ ಇಲಾಖೆ ಪತ್ರ ಬರೆದಿತ್ತು. ಮೊದಲ ಹಂತದ ವ್ಯಾಪ್ತಿಯ ಮರಗಳ ತೆರವಿಗೆ ಈಗ ಅನುಮತಿ ದೊಕಿದ್ದು, ತೆರವು ಕಾರ್ಯಾಚರಣೆ ಆರಂಭವಾಗಿದೆ. ಆದರೆ, ಎರಡನೇ ಹಂತದ ವ್ಯಾಪ್ತಿಯಲ್ಲಿ ಭದ್ರಾ ಅಭಯಾರಣ್ಯದ ವನ್ಯಜೀವಿ ತಾಣ ಇರುವ ಕಾರಣ ಮರಗಳ ತೆರವಿಗೆ ಅನುಮತಿ ಸಿಕ್ಕಿಲ್ಲ.
 
===ರೂ.12,340 ಕೋಟಿ ವೆಚ್ಚದ ಯೋಜನೆ===
*ಕೆ.ಸಿ. ರೆಡ್ಡಿ ಸಮಿತಿ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಯೋಜನೆ ಆರಂಭಕ್ಕೆ 2007–08ನೇ ಸಾಲಿನಲ್ಲಿ ಹಸಿರು ನಿಶಾನೆ ತೋರಿತ್ತು. ವಿಳಂಬದ ಪರಿಣಾಮ ಯೋಜನಾ ವೆಚ್ಚ ರೂ.12,340 ಕೋಟಿಗೆ ತಲುಪಿದೆ. ಈ ಯೋಜನೆ ಮೂಲಕ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆ ವ್ಯಾಪ್ತಿಯ 2.25 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸಲಾಗುತ್ತಿದೆ. ಪ್ರತಿ ವರ್ಷ ಜೂನ್‌ 15ರಿಂದ ಅಕ್ಟೋಬರ್‌ 15ರವರೆಗೆ ನಾಲ್ಕು ಸ್ಥಳಗಳಲ್ಲಿ ನೀರು ಪಂಪ್‌ ಮಾಡುವ ಮೂಲಕ ಬರಪೀಡಿತ ಪ್ರದೇಶಗಳಿಗೆ ನೀರು ಹರಿಸಲಾಗುತ್ತದೆ. ‘ಯೋಜನೆ ಅನುಷ್ಠಾನ ವೇಗ ಪಡೆದುಕೊಂಡಿದೆ. ನಾಲೆಗಳು, ಪಂಪ್‌ಹೌಸ್‌ಗಳ ನಿರ್ಮಾಣ ಕಾಮಗಾರಿ ಭರದಿಂದ ಸಾಗಿವೆ. ಮುಂದೆ ಬರುವ ಮಳೆಗಾಲದಲ್ಲೇ ಪ್ರಾಯೋಗಿಕವಾಗಿ ನೀರು ಹರಿಸಲು ಸಿದ್ಧತೆ ಮಾಡಿ ಕೊಳ್ಳುತ್ತಿದ್ದೇವೆ’ ಎನ್ನುತ್ತಾರೆ ಭದ್ರಾ ಮೇಲ್ದಂಡೆ ಅಧೀಕ್ಷಕ ಎಂಜಿನಿಯರ್ ಕೆ.ತಿಪ್ಪೇಸ್ವಾಮಿ.
"https://kn.wikipedia.org/wiki/ಭದ್ರಾ_ನದಿ" ಇಂದ ಪಡೆಯಲ್ಪಟ್ಟಿದೆ