ಮುಖ್ಯ ಮೆನು ತೆರೆ

ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
*ಹೆಚ್ಚಾಗಿ, ಅಂತರ್ಜಾಲಗಳನ್ನು ಸಾಧನೋಪಕರಣ ಹಾಗು ಅಳವಡಿಕೆಗಳನ್ನು ವಿತರಿಸಲು ಬಳಸಲಾಗುತ್ತದೆ. ಉದಾಹರಣೆಗೆ: ಸಹಯೋಗ(ಗುಂಪುಗಳಲ್ಲಿ ಹಾಗು ದೂರವಾಣಿ ಮೂಲಕ ಸಮಾಲೋಚನೆ ಮಾಡುವವರಿಗೆ ಅನುಕೂಲ ಒದಗಿಸುವುದು) ಅಥವಾ ಅತ್ಯಾಧುನಿಕ ಕಾರ್ಪೋರೇಟ್ ನಿರ್ದೇಶಿಕೆಗಳು, ಮಾರಾಟಗಾರ ಹಾಗು ಗ್ರಾಹಕ ಸಂಬಂಧಿತ ನಿರ್ವಹಣಾ ಸಾಧನಗಳು, ಯೋಜನಾ ನಿರ್ವಹಣೆ ಮುಂತಾದವುಗಳನ್ನು ಉತ್ಪಾದಕತೆ ಹೆಚ್ಚಿಸಲು ಬಳಸಲಾಗುತ್ತದೆ.
*ಅಂತರ್ಜಾಲಗಳನ್ನು ಕಾರ್ಪೋರೇಟ್ ಕಾರ್ಯ-ಚಟುವಟಿಕೆಯ ಸಂಸ್ಕೃತಿ-ಬದಲಾವಣಾ ವೇದಿಕೆಗಳಾಗಿಯೂ ಸಹ ಬಳಸಲಾಗುತ್ತದೆ. ಉದಾಹರಣೆಗೆ, ಅಂತರ್ಜಾಲ ಚರ್ಚಾವೇದಿಕೆಯನ್ನು ಬಳಸಿಕೊಂಡು ದೊಡ್ಡ ಸಂಖ್ಯೆಯ ನೌಕರವರ್ಗವು ಪ್ರಮುಖ ವಿಷಯಗಳನ್ನು ಚರ್ಚಿಸಿದರೆ; ಇದು ನಿರ್ವಹಣೆ, ಉತ್ಪಾದಕತೆ, ಗುಣಮಟ್ಟ ಹಾಗು ಇತರ ಕಾರ್ಪೋರೇಟ್ ವಿವಾದ-ವಿಷಯಗಳಿಗೆ ಸಂಬಂಧಿಸಿದ ಹೊಸ ಯೋಜನೆಗಳಿಗೆ ದಾರಿ ಮಾಡಿಕೊಡಬಹುದು.
*ದೊಡ್ಡ ಅಂತರ್ಜಾಲಗಳಲ್ಲಿ, ವೆಬ್ಸೈಟ್ ಸೇವಾ ಬಳಕೆಯು ಸಾಮಾನ್ಯವಾಗಿ ಸಾರ್ವಜನಿಕ ವೆಬ್ಸೈಟ್ ಸೇವಾ ಬಳಕೆಗೆ ಸದೃಶವಾಗಿರುತ್ತದೆ. ಅಲ್ಲದೇ ಇದರ ಒಟ್ಟಾರೆ ಚಟುವಟಿಕೆಯನ್ನು ವೆಬ್ ಮೆಟ್ರಿಕ್ ಸಾಫ್ಟ್ ವೇರ್ (ಮಾನದಂಡ)ಮೂಲಕ ಪತ್ತೆ ಮಾಡಿ ಸೂಕ್ತವಾಗಿ ಅರ್ಥೈಸಬಹುದು. ಅಂತರ್ಜಾಲ ವೆಬ್ಸೈಟ್ ಪರಿಣಾಮಕಾರಿತ್ವವನ್ನು ಬಳಕೆದಾರ ಸಮೀಕ್ಷೆಗಳೂ ಸಹ ಉತ್ತಮಪಡಿಸುತ್ತವೆಉತ್ತಮಪಡಿಸುತ್ತರೆ.
*ದೊಡ್ಡ ಉದ್ದಿಮೆಗಳು, ತನ್ನ ಬಳಕೆದಾರರಿಗೆ ತನ್ನ ಅಂತರ್ಜಾಲದೊಳಗೆ ಫೈರ್ ವಾಲ್ ಸರ್ವರ್ ಗಳ ಮೂಲಕ ಸಾರ್ವಜನಿಕ ಅಂತರ್ಜಾಲಕ್ಕೆ ಪ್ರವೇಶ ಕಲ್ಪಿಸಿಕೊಡುತ್ತವೆ. ಇವುಗಳಿಗೆ ಸಂಪೂರ್ಣ ಭದ್ರತೆಯೊಂದಿಗೆ ಬರುವ ಹಾಗು ಹೋಗುವ ಸಂದೇಶಗಳನ್ನು ಹಿಡಿದಿಟ್ಟು ಪ್ರದರ್ಶಿಸುವ ಸಾಮರ್ಥ್ಯವಿರುತ್ತದೆ. ಅಂತರ್ಜಾಲದ ಒಂದು ಭಾಗದ ಮಾಹಿತಿಯನ್ನು ಗ್ರಾಹಕರಿಗೆ ಹಾಗು ವ್ಯಾಪಾರಕ್ಕೆ ಸಂಬಂಧಿಸದ ಇತರರಿಗೆ ಲಭ್ಯವಾಗುವಂತೆ ಮಾಡಿದರು.
*ಇದು ಒಂದು ಎಕ್ಸ್ಟ್ರಾನೆಟ್ ನ ಭಾಗವಾಗುತ್ತದೆ. ವ್ಯಾಪಾರ ಸಂಸ್ಥೆಗಳು ಖಾಸಗಿ ಸಂದೇಶಗಳನ್ನು ಸಾರ್ವಜನಿಕ ನೆಟ್ವರ್ಕ್ ಮೂಲಕ, ವಿಶೇಷವಾದ ಸಂದೇಶ ಗೋಪ್ಯತೆ/ಅಸಂಕೇತೀಕರಣವನ್ನು ಬಳಸಿಕೊಂಡು ಕಳುಹಿಸಬಹುದು. ಅಲ್ಲದೇ ಇತರ ಭದ್ರತಾ ಮುಂಜಾಗ್ರತೆಗಳು ಅಂತರ್ಜಾಲದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸಂಪರ್ಕ ಹೊಂದುತ್ತವೆ.
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/804686" ಇಂದ ಪಡೆಯಲ್ಪಟ್ಟಿದೆ