ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು clean up using AWB
ಚುNo edit summary
೫೦ ನೇ ಸಾಲು:
* ಆದ್ದರಿಂದ ಲಿಂಗದೇವನನ್ನು ವಿಶ್ವದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟಲಿಂಗದ ಪರಿಕಲ್ಪನೆ ಕೊಟ್ಟರು. ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನನ್ನಾಗಿ ಮಾಡುವ ಸಾಧನವಾಗಬೇಕೆಂದು ಅದನ್ನು ಗಣ ಲಾಂಛನವನ್ನಾಗಿ ಮಾಡಿದರು. ಪರಮಾತ್ಮನ ದಿವ್ಯಾನುಭವ ಪಡೆದು, ನವ ಸಮಾಜ ನಿರ್ಮಾಣದ ರೂಪುರೇಷೆಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು ಪ್ರವೇಶಿಸಿದರು.
*ಸೋದರ ಮಾವನ ಮಗಳು ನೀಲಾ೦ಬಿಕೆಯನ್ನು ವಿವಾಹವಾಗಿ ಕರಣಿಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ, ಪ್ರಧಾನಿ(ದಂಡನಾಯಕ)ಯಾಗಿ ಕಾಯಕ ನಿರ್ವಹಿಸಿದರು. ಅನುಭವ ಮಂಟಪ ಸ್ಥಾಪಿಸಿ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನೆ, ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು.
* ಹುಟ್ಟಿನಿಂದ ಬ್ರಾಹ್ಮಣರಾಗಿ, ಸಂಸ್ಕಾರದಿಂದ ಶರಣರಾದ ಮಧುವರಸರ ಮಗಳನ್ನು ಹುಟ್ಟಿನಿಂದ ಸಮಗಾರರಾಗಿ ಸಂಸ್ಕಾರದಿಂದ ಶರಣರಾದ ಹರಳಯ್ಯನವರ[[ಹರಳಯ್ಯ]]ನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು. ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ದ ಪ್ರೇರೇಪಿಸಿ ಧರ್ಮಗುರು ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು.
* ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು ಸನ್ನದ್ಧರಾದಾಗ, ವೀರಮಾತೆ ಅಕ್ಕನಾಗಲಾಂಬಿಕೆ, ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ.
* ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು.
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ