ಅಲೆಕ್ಸಾಂಡರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೫ ನೇ ಸಾಲು:
ಇಸಸ್ ಕದನಕ್ಕೆ ಮುಂಚೆ ಅಲೆಕ್ಸಾಂಡರ್ ಫ್ರಿಜಿಯ ದೇಶದ ಹಿಂದಿನ ರಾಜಧಾನಿಯಾದ [[ಗಾರ್ಡಿಯಂ]] ನಗರಕ್ಕೆ ಬಂದ. ಈ ಸ್ಥಳದಲ್ಲಿ ಒಂದು ಪುರಾತನವಾದ ರಥವಿತ್ತು. ಇದನ್ನು ಫ್ರಿಜಿಯನ್ನರ ಮೊದಲನೆಯ ದೊರೆಯಾದ ಗಾರ್ಡಿಯಸ್ ಕಟ್ಟಿದನೆಂಬ ಐತಿಹ್ಯವಿತ್ತು. ರಥದ ಕಂಬಕ್ಕೆ ಕಟ್ಟಿದ್ದ ತೊಗಟೆಯ ಗಂಟನ್ನು ಯಾರು ಬಿಚ್ಚುವರೋ ಅವರು ಏಷ್ಯವನ್ನು ಆಳುವರು ಎಂದು ಭವಿಷ್ಯ ಹೇಳುತ್ತಿದ್ದರು. ಅಲೆಕ್ಸಾಂಡರ್ ಕಷ್ಟವಿಲ್ಲದೆ ತನ್ನ ಕತ್ತಿಯಿಂದ ಗಾರ್ಡಿಯನ್ ಗಂಟನ್ನು ಕತ್ತರಿಸಿದ. ಅಕಸ್ಮಾತ್ತಾಗಿ ಉಂಟಾದ ಸಿಡಿಲು ಜ಼್ಯೂಸ್ ದೇವತೆಯ ಒಪ್ಪಿಗೆಯ ಸಂಕೇತ ಎಂದು ಹೇಳಿದರು. ಮುಂದಕ್ಕೆ ಅಲೆಕ್ಸಾಂಡರ್ ಟಾರಸ್ ಗುಡ್ಡದಿಂದ ಸಿಲಿಸಿಯ ಪ್ರದೇಶಕ್ಕೆ ಹೋದ. ಪರ್ಷಿಯನ್ನರು ಯುದ್ಧಮಾಡದೆ ಹಿಮ್ಮೆಟ್ಟಿದರು. ಚಾರ್ಸಸ್ ನಗರ ವಶವಾಯಿತು.
==ಈಜಿಪ್ಟಿನ ದಂಡಯಾತ್ರೆ==
ಟೈರ್ ಮುತ್ತಿಗೆಯ ಅನಂತರ ಅಲೆಕ್ಸಾಂಡರ್ ಈಜಿಪ್ಟನ್ನು ಸೇರಿದ. ಈಜಿಪ್ಟ್ ಎರಡು ಶತಮಾನಗಳಿಂದ ಪರ್ಷಿಯ ದೇಶಕ್ಕೆ ಅಡಿಯಾಳಾಗಿ ನೊಂದಿತ್ತು. ಅಲೆಕ್ಸಾಂಡರ್‍ನನ್ನು ಜನ ಹರ್ಷದಿಂದ ಗೌರವಿಸಿದರು. ಇವನನ್ನು ತಮ್ಮ ರಾಜನೆಂದು ಭಾವಿಸಿ ಹೂಮಾಲೆ ಹಾಕಿದರು. ನಾಲ್ಕು ತಿಂಗಳುಗಳ ಕಾಲ ಅಲ್ಲಿದ್ದು ಈಜಿಪ್ಟಿನವರು ತೋರಿದ ಆದರ ಸತ್ಕಾರ ಪೂಜೆಗಳಿಂದ ಅಲೆಕ್ಸಾಂಡರ್ ಸಂತುಷ್ಟನಾದ. ದೈವಾಂಶಸಂಭೂತನೆಂದು ಹೆಮ್ಮೆಪಟ್ಟ. ನೈಲ್ ನದಿಯ ಪಶ್ಚಿಮಕ್ಕೆ ಹೋಗಿ ಅಲೆಕ್ಸಾಂಡ್ರಿಯ ನಗರವನ್ನು ಸ್ಥಾಪಿಸಿದ. ಮುಂದೆ ಅದು ಅನೇಕ ಶತಮಾನಗಳವರೆಗೂ ಗ್ರೀಕರ ವಾಣಿಜ್ಯ ಮತ್ತು ನಾಗರಿಕತೆಯ ಕೇಂದ್ರವಾಯಿತು. ಮರುಭೂಮಿಯ ಹಸುರು ನೆಲದಲ್ಲಿದ್ದ ಅಮನ್ ದೇವಾಲಯವನ್ನು ಭೇಟಿಮಾಡಿದ. ಈಜಿಪ್ಟಿನವರು ಇವನ ದೈವಭಕ್ತಿಯಿಂದ ಮುಗ್ಧರಾಗಿ, ವಿಶೇಷ ಗೌರವವನ್ನು ತೋರಿಸಿದರು. [[ಈಜಿಪ್ಟ್]] ದಂಡಯಾತ್ರೆಯಾದ ಮೇಲೆ ಪ್ರ.ಶ.ಪೂ. 331ರಲ್ಲಿ ಟೈರ್ಗೆ ಬಂದ. ಮೆಸಪೊಟೇಮಿಯ ಮರುಭೂಮಿಯ ಉಷ್ಣತೆಯನ್ನು ತಪ್ಪಿಸಿಕೊಳ್ಳಲು ಥಾಪ್ಸಕಸ್ ನಗರದಲ್ಲಿ [[ಯೂಫ್ರೆಟೀಸ್]] ನದಿಯನ್ನೂ ಅಲ್ಲಿಂದ ಮುಂದೆ [[ಟೈಗ್ರಿಸ್]] ನದಿಯನ್ನೂ ದಾಟಿ, ಎಡದಡದಲ್ಲಿದ್ದ ಗಾಗಮೇಲ ಪಟ್ಟಣವನ್ನು ಸೇರಿದ.
ಡೇರಿಯಸ್ ಬಹು ಸಂಖ್ಯಾತ ಸೇನೆಯನ್ನು ಸಿದ್ಧಪಡಿಸಿದ್ದ. ಸುಮಾರು 1 ಕೋಟಿ ಕಾಲಾಳುಗಳೂ 40,000 ರಾವುತರೂ ಪರ್ಷಿಯನ್ನರ ಸೈನ್ಯದಲ್ಲಿದ್ದರು. ಆದರೆ ಸೈನ್ಯದಲ್ಲಿ ಏನೇನೂ ಶಿಸ್ತಿರಲಿಲ್ಲ. ಅಲೆಕ್ಸಾಂಡರ್ ತನ್ನ ರಾವುತರನ್ನು ಪರ್ಷಿಯನ್ನರ ಮೇಲೆ ನುಗ್ಗಿಸಿ ಚದುರಿಸಿದ. ಡೇರಿಯಸ್ ಮತ್ತೊಮ್ಮೆ ಓಡಿಹೋದ. ಗಾಗ್ಮೇಲ ಕದನದಿಂದ (ಪ್ರ.ಶ.ಪೂ. 331) ಅಲೆಕ್ಸಾಂಡರನಿಗೆ ಅದ್ಭುತ ಜಯವಾಯಿತು. ಡೇರಿಯಸ್ ಸಂಪೂರ್ಣವಾಗಿ ಸೋತು, ಮೀಡಿಯ ರಾಜಧಾನಿಯಾದ ಎಕ್ಬತಾನ ನಗರದಲ್ಲಿ ಬಚ್ಚಿಟ್ಟುಕೊಂಡ. ಪರ್ಷಿಯನ್ನರ ಸಾಮ್ರಾಜ್ಯ ನುಚ್ಚುನೂರಾಯಿತು.
ವಿಜಯಿಯಾದ ಅಲೆಕ್ಸಾಂಡರ್ [[ಬ್ಯಾಬಿಲೋನಿಯ]] ಸಾಮ್ರಾಜ್ಯವನ್ನು ಆಕ್ರಮಿಸಿದ. ಪರ್ಷಿಯ ದೇಶದ ರಾಜಧಾನಿಯಾದ ಸೂಸ ನಗರವನ್ನು ವಶಪಡಿಸಿಕೊಂಡ. ಅಲ್ಲಿ ಹೆಚ್ಚು ಕೊಳ್ಳೆ ಸಿಕ್ಕಿತು. ಅದರಲ್ಲಿ 50000 ಟಾಲೆಂಟ್ (12,000,000 ಪೌಂಡು) ನಗದು ಸೇರಿತ್ತು. ಪರ್ಷಿಯ ದೇಶದ ಸೇನಾನಾಯಕನಾದ ಏರಿಯೊಬರ್ಜ಼ನಿಸ್ ಅಲೆಕ್ಸಾಂಡರ್ನನ್ನು ವಿರೋಧಿಸಿದ. ಅಲೆಕ್ಸಾಂಡರ್ ಅವನ ಸೈನ್ಯವನ್ನು ಚದರಿಸಿ ಪರ್ಸಿಪೋಲಿಸ್ ಎಂಬ ಸುಂದರವಾದ ನಗರವನ್ನು ಹಿಡಿದ. ಇಲ್ಲಿಯೂ ಅಪರಿಮಿತವಾದ ಕೊಳ್ಳೆ ಸಿಕ್ಕಿತು. ಇಲ್ಲಿ ಸರಕ್ಸಸ್ಸನ ಅರಮನೆಯನ್ನು ಸುಡಲಾಯಿತು. ಅಲೆಕ್ಸಾಂಡರ್ ಈ ಅನಾಗರಿಕ ಕೃತ್ಯವನ್ನು ಕುಡಿತದ ಅಮಲಿನಲ್ಲಿದ್ದಾಗ ಕೇವಲ ಸೇಡು ತೀರಿಸಿಕೊಳ್ಳುವುದಕ್ಕೋಸ್ಕರ ಮಾಡಿದನೆಂಬ ಪ್ರತೀತಿ ಇದೆ. ಸೈನ್ಯದವರು ಮಾಡಿದ ಸುಲಿಗೆ ಅಮಾನುಷ ಕೃತ್ಯಗಳಿಗೆ ಮಿತಿಯಿರಲಿಲ್ಲ.
"https://kn.wikipedia.org/wiki/ಅಲೆಕ್ಸಾಂಡರ್" ಇಂದ ಪಡೆಯಲ್ಪಟ್ಟಿದೆ