ಅಲೆಕ್ಸಾಂಡರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
|place of burial=
}}
'''ಅಲೆಕ್ಸಾಂಡರ್ ದಿ ಗ್ರೇಟ್'''(ಪ್ರ.ಶ.ಪೂ. 356-323.) ಎಂದು ಪ್ರಸಿದ್ದವಾಗಿರುವ ಮಸೆಡೊನಿಯದ ಮುಮ್ಮುಡಿ ಅಲೆಕ್ಸಾಂಡರ್ ಗ್ರೀಸ್ ದೇಶದ ಒಬ್ಬ ಮಹಾನ್ ದಂಡನಾಯಕ. ಗ್ರೀಸ್ ದೇಶಕ್ಕೆ ಸೇರಿದ ಮಸೆಡೊನಿಯ ರಾಜ್ಯದ ರಾಜನಾದ ಇತ [[ಅರಿಸ್ಟಾಟಲ್]] ಎಂಬ ತತ್ವಜ್ನ್ಯಾನಿಯ ಶಿಷ್ಯ.. ಈತ ಇತಿಹಾಸದ ಒಂದು ಬಹುದೋಡ್ಡಬಹುದೊಡ್ಡ ಸಮ್ರಾಜ್ಯವನ್ನುಸಾಮ್ರಾಜ್ಯವನ್ನು ನಿರ್ಮಿಸಿದ. ಇವನ ನಿಧನದ ಹೊತ್ತಿಗೆ ಇವನು ಪರ್ಷಿಯನ್ ಸಾಮ್ರಾಜ್ಯವನ್ನು ಪರಾಭವ ಗೊಳಿಸಿ ಅದನ್ನು ಗ್ರೀಕ್ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿದ್ದನು. ಇವನ ಸಾಮ್ರಾಜ್ಯ ಗ್ರೀಸಿನಿಂದ ಹಿಮಾಲಯಾದ ತಪ್ಪಲಿನ ವರಗೆ ವಿಸ್ತರಿಸಿತ್ತು.
ಪರ್ಷಿಯ ಸಾಮ್ರಾಜ್ಯವನ್ನು ಸೋಲಿಸಿ ಭಾರತದವರೆಗೂ ದಂಡೆತ್ತಿ ಬಂದ ಮಹಾನಾಯಕ. ತಂದೆ ಫಿಲಿಪ್, ರಾಜನಾಗಿ ದೇಶವನ್ನು ಸುಭದ್ರ ತಳಹದಿಯ ಮೇಲೆ ಸತತವಾಗಿ ದುಡಿದು ಮಗನ ಪ್ರಗತಿಗೆ ಕಾರಣನಾದ. ತಂದೆಯ ಮರಣಾನಂತರ ಪ್ರ.ಶ.ಪೂ. 336ರಲ್ಲಿ ತನ್ನ 20ನೆಯ ವಯಸ್ಸಿನಲ್ಲಿ ಅಲೆಕ್ಸಾಂಡರ್ ಪಟ್ಟಕ್ಕೆ ಬಂದು ದೇಶದಲ್ಲಿ ತಲೆ ಎತ್ತುತ್ತಿದ್ದ ಅಶಾಂತಿ ಅನಾಯಕತೆಗಳನ್ನು ನಿವಾರಿಸಿದ. ತಂದೆಯಂತೆ ರಾಜ್ಯವಿಸ್ತರಣೆಗೆ ಮನಸ್ಸು ಮಾಡಿದ. ಬಾಲ್ಯದಲ್ಲೇ ತಂದೆಯ ನೇತೃತ್ವದಲ್ಲಿ ಪಡೆದ ಉತ್ತಮ ವಿದ್ಯಾಭ್ಯಾಸದ ಜೊತೆಗೆ ಇವನಲ್ಲಿದ್ದ ಪ್ರತಿಭೆಯೂ ಸೇರಿ ಯುವಕ ಅಲೆಕ್ಸಾಂಡರನ ವ್ಯಕ್ತಿತ್ವ ಪ್ರಜ್ವಲಿಸತೊಡಗಿತು. ಈತ ಎತ್ತರವಾದ ಆಳು, ಸ್ಫುರದ್ರೂಪಿ, ದೇಹದಾರ್ಢ್ಯವುಳ್ಳ, ಸಂಕಲ್ಪದಂತೆ ಗುರಿಸಾಧಿಸುವ ದೃಢಬುದ್ಧಿ ಹೊಂದಿದ್ದ ಈತನಲ್ಲಿ ತಾಯಿಯ ಬುದ್ಧಿವಿಚಾರ, ಅಹಂಕಾರ, ಉದ್ರೇಕಗಳು ಸೇರಿಕೊಂಡಿದ್ದವು.
[[File:AlexanderTheGreat Bust.jpg|thumb|Bust of a young Alexander the Great from the Hellenistic era, [[British Museum]]]]
[[File:Aristotle tutoring Alexander.jpg|thumb|''[[Aristotle]] tutoring Alexander'', by [[Jean Leon Gerome Ferris]]]]
ಗ್ರೀಕ್ ನಾಗರಿಕತೆ ಸಂಸ್ಕೃತಿಗಳನ್ನು ಈತ ಬಹುವಾಗಿ ಮೆಚ್ಚಿದ. ಹೋಮರನ [[ಇಲಿಯಡ್]] ಮಹಾಕಾವ್ಯ ಇವನ ತುದಿನಾಲಗೆಯಲ್ಲಿತ್ತು. ಪ್ರಸಿದ್ಧ ವಿದ್ವಾಂಸನಾದ ಅರಿಸ್ಟಾಟಲ್ ಇವನ ಗುರು. ತತ್ತ್ವಶಾಸ್ತ್ರ, ವೈದ್ಯ, [[ವಿಜ್ಞಾನ]]ಗಳಲ್ಲಿ ಅಪಾರ ಆಸಕ್ತಿಯುಳ್ಳವ. ಗ್ರೀಕ್ ರಾಜ್ಯಗಳನ್ನು ಸೋಲಿಸಿದನಾದರೂ ತಂದೆಯಂತೆ ಉದಾರ ನೀತಿಯನ್ನನುಸರಿಸಿ ಅವರ ಬೆಂಬಲವನ್ನು ಗಳಿಸಿಕೊಂಡ. ತಂದೆಯ ಕೊಲೆಗೆ ಕಾರಣರೆಂದು ಕಂಡುಬಂದ ಲೈಸೆಸ್ಟಿಸ್‌ನ ರಾಜರನ್ನು ತೀರಿಸಿ ತನ್ನ ವೈರಿಗಳೆನಿಸಿದ ಇತರರನ್ನೂ ನಿರ್ನಾಮ ಮಾಡಿದ. ಅನಂತರ ದಕ್ಷಿಣಕ್ಕೆ ತಿರುಗಿ ಥೆಸಲೆಯನ್ನು ಗಿಟ್ಟಿಸಿ ಗ್ರೀಕ್ ಒಕ್ಕೂಟದಲ್ಲಿ ಮುಂದಿನ ಏಷ್ಯ ದಿಗ್ವಿಜಯ ಕಾರ್ಯದ ಮಹಾದಂಡನಾಯಕನಾಗಿ ಆಯ್ಕೆಯಾದ. ಆದರೂ ಉತ್ತರ ಗ್ರೀಸಿನ ಇಲಿರಿಯ ಮತ್ತು ಥ್ರೇಸ್ ಪ್ರದೇಶಗಳಲ್ಲಿ ಅಲೆಕ್ಸಾಂಡರನಿಗೆ ವಿರುದ್ಧವಾಗಿ ದಂಗೆಗಳಾದುವು. ಆದರೆ ಅಲೆಕ್ಸಾಂಡರ್ ತತ್‌ಕ್ಷಣ ಆ ಪ್ರದೇಶಗಳಿಗೆ ಹೋಗಿ ದಂಗೆಗಳನ್ನು ಅಡಗಿಸಿದ. ಥ್ರೇಸ್ನಲ್ಲಿ ಯಾರೋ ಅಲೆಕ್ಸಾಂಡರನನ್ನು ಕೊಂದುಹಾಕಿದರೆಂಬ ಸುಳ್ಳು ಸಮಾಚಾರ ಥೀಬ್ಸ್‌ ನಗರದಲ್ಲಿ ಹರಡಿ ಥೀಬ್ಸನ್ನರು ಮ್ಯಾಸಿಡೋನಿಯದ ರಕ್ಷಣ ಸೈನ್ಯಗಳಿಗೆ ಮುತ್ತಿಗೆ ಹಾಕಿದರು. ಅಲೆಕ್ಸಾಂಡರ್ ಥೀಬ್ಸ್‌ ನಗರದ ಮೇಲೆ ದಾಳಿಮಾಡಿ ಆ ನಗರವನ್ನು ನಾಶ ಮಾಡಿದ. ಹೆಂಗಸರು, ಮಕ್ಕಳು ಎಂದು ಲಕ್ಷಿಸದೆ ಸು. 30,000 ಥೀಬ್ಸನ್ನರನ್ನು ಸೆರೆಹಿಡಿದು ಗುಲಾಮರನ್ನಾಗಿಸಿದ. ಗ್ರೀಕರ ಸೊಲ್ಲು ಅಡಗಿ ಅವರು ಅಲೆಕ್ಸಾಂಡರನನ್ನು ತಮ್ಮ ನಾಯಕನೆಂದು ಒಪ್ಪಿಕೊಳ್ಳ ಬೇಕಾಯಿತು. [[ಗ್ರೀಸ್]] ದೇಶ ಅಲೆಕ್ಸಾಂಡರನ ಹತೋಟಿಗೆ ಒಳಗಾಯಿತು.
 
==ಅಲೆಕ್ಸಾಂಡರನ ದಂಡಯಾತ್ರೆ==
ಗ್ರೀಸಿನಲ್ಲಿ ಸುಭದ್ರ ಆಡಳಿತವನ್ನು ಸ್ಥಾಪಿಸಿ, ತನ್ನ ಜೀವನದ ಮಹತ್ತ್ವಾಕಾಂಕ್ಷೆಯನ್ನು ಸಾಧಿಸಲು ಸಂಕಲ್ಪ ಮಾಡಿದ. ಪರ್ಷಿಯ ದೇಶ ಗ್ರೀಸಿನಲ್ಲಿ ತನಗೆ ಮಾಡಿದ ದೌರ್ಜನ್ಯಕ್ಕೋಸ್ಕರ ಸೇಡು ತೀರಿಸಿಕೊಳ್ಳುವುದು; ಪ್ರಪಂಚವನ್ನೇ ಗೆದ್ದು ಎಲ್ಲೆಲ್ಲಿಯೂ ಗ್ರೀಕರ ನಾಗರಿಕತೆಯನ್ನು ಸ್ಥಾಪಿಸುವುದು-ಇವೇ ಇವನ ಮುಖ್ಯ ಉದ್ದೇಶಗಳಾಗಿದ್ದವು. ಗ್ರೀಸಿನ ಆಡಳಿತವನ್ನು ತನ್ನ ಅನುಯಾಯಿಯಾದ ಅಂಟಿಪೇಟರ್ಗೆ ವಹಿಸಿ, ಸರಿಯಾದ ವ್ಯವಸ್ಥೆ ಮಾಡಿ, ತನ್ನ ಪ್ರಬಲವಾದ ಸೈನ್ಯದೊಡನೆ ಹೆಲೆಸ್ಟಾಂಟ್ ಪ್ರದೇಶಕ್ಕೆ ಹೋದ. ಮೊದಲು ಪುರಾತನವಾದ ಟ್ರಾಯ್ ನಗರವನ್ನು ಪ್ರವೇಶಿಸಿ ಅಕಿಲಿಸ್ಸನ ಸಮಾಧಿಗೆ ತನ್ನ ಗೌರವ ಸಲ್ಲಿಸಿದ (ಪ್ರ.ಶ.ಪೂ.334). ಹೆಲೆಸ್ಟಾಂಟನ್ನು ದಾಟಿ ಏಷ್ಯಮೈನರಿಗೆ ಬಂದ. ಪರ್ಷಿಯ ದೇಶದ ರಾಜನಾದ ಡೇರಿಯಸ್ ಯುದ್ಧಕ್ಕೆ ಯಾವ ಸಿದ್ಧತೆಗಳನ್ನೂ ಮಾಡಿರಲಿಲ್ಲವಾಗಿ ಕಷ್ಟವಿಲ್ಲದೆ ಫ್ರಿಜಿಯ ಪ್ರದೇಶ ತಲುಪಿದ.
"https://kn.wikipedia.org/wiki/ಅಲೆಕ್ಸಾಂಡರ್" ಇಂದ ಪಡೆಯಲ್ಪಟ್ಟಿದೆ