ತುಳಸಿ ಪೂಜೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
 
೫ ನೇ ಸಾಲು:
* ನಂತರ ಇವಳು ರುಕ್ಮಿಣಿಯಾಗಿ ಜನ್ಮ ಪಡೆದು ಕಾರ್ತಿಕ ಶುದ್ಧ ದ್ವಾದಶಿಯಂದು ಕೃಷ್ಣನನ್ನು ಮದುವೆಯಾದಳೆಂದು ಪ್ರತೀತಿಯಿದೆ. ಇನ್ನೊಂದು ಪುರಾಣದ ಪ್ರಕಾರ ದೇವತೆಗಳೂ, ದಾನವರೂ ಕ್ಷೀರಸಾಗರವನ್ನು ಕಡೆದಾಗ ಕೊನೆಯಲ್ಲಿ ಅಮೃತಕಲಶ ಬಂತು. ಅದನ್ನು ಕೈಗೆ ತೆಗೆದುಕೊಂಡ ವಿಷ್ಣುವಿನ ಕಣ್ಣುಗಳಿಂದ ಬಂದ ಆನಂದಬಾಷ್ಪಗಳು ಆ ಕಲಶದಲ್ಲಿ ಬಿದ್ದು ಅದರಿಂದ ಒಂದು ಸಣ್ಣ ಗಿಡ ಹುಟ್ಟಿತು. ಅದಕ್ಕೆ ತುಲನೆ(ಹೋಲಿಕೆ) ಇಲ್ಲವಾದ್ದರಿಂದ,'''ತುಳಸಿ''' ಎಂದು ಹೆಸರಿಟ್ಟು, ಲಕ್ಷ್ಮಿಯೊಂದಿಗೆ ತುಳಸಿಯನ್ನೂ ವಿಷ್ಣುವು ಮದುವೆಯಾದನು.
 
== ಭಗವಂತೋತ್ಥಾನ ==
==ಸಂಪ್ರದಾಯ==
[[ಆಷಾಢಮಾಸ]] ಶುಕ್ಲ ಪಕ್ಷದ ಏಕಾದಶಿಯಲ್ಲಿ ಕ್ಷೀರಸಾಗರದಲ್ಲಿ ಶೇಷಶಾಯಿಯಾದ ಭಗವಂತನನ್ನು ಈ ದಿನ ರಾತ್ರಿಯಲ್ಲಿ ಏಳಿಸುವುದರಿಂದ ಈ ದ್ವಾದಶಿಗೆ ಭಗವಂತೋತ್ಥಾನ ರೂಪವಾದ ಉತ್ಥಾನದ್ವಾದಶೀ ಎಂದು ಹೆಸರು ಬಂದಿದೆ. ಆಷಾಢ ಶುಕ್ಲಪಕ್ಷದಲ್ಲಿ ಪ್ರಾರಂಭಿಸಿದ ಚಾತುರ್ಮಾಸ್ಯ ವ್ರತವನ್ನು ಈ ದಿವಸ ಮುಕ್ತಾಯಗೊಳಿಸಬೇಕು.
ಪ್ರತಿ ಹಿಂದೂ ಮನೆಯಲ್ಲೂ ಒಂದು[[ ತುಳಸಿ]] ಗಿಡವಿರುವುದು ವಾಡಿಕೆ. [[ತುಳಸಿ]] ಗಿಡವು ಐಶ್ವರ್ಯವನ್ನೂ, ಸಂತಸವನ್ನೂ ತರುತ್ತದಲ್ಲದೆ, ಸಂಭವಿಸಬಹುದಾದ ಅಕಾಲಿಕ ಮರಣವನ್ನು ತಡೆಯುತ್ತದೆಂದು ನಂಬಿಕೆಯಿದೆ. ತುಳಸಿ ಆಯುರ್ವೇದದಲ್ಲಿ ಪ್ರಮುಖ ಔಷಧ ಸಸ್ಯವೂ ಹೌದು.
 
 
== ವ್ರತಾಚರಣೆ ==
ಈ ದ್ವಾದಶಿಯಲ್ಲಿ ಕ್ಷೀರಾಬ್ಧಿಶಯನ ವ್ರತವನ್ನು ಆಚರಿಸುತ್ತಾರೆ. ತುಲಸೀ ಸಹಿತ ಧಾತ್ರೀ ಲಕ್ಷ್ಮೀನಾರಾಯಣ ಪ್ರೀತ್ಯರ್ಥವಾಗಿ ಈ ವ್ರತವನ್ನು ಮಾಡುವುದು ಇಂದಿಗೂ ರೂಢಿಯಲ್ಲಿದೆ. ಇದರ ದ್ಯೋತಕವಾಗಿ ಉತ್ಥಾನ ದ್ವಾದಶೀ ದಿವಸ ಬೆಳಗ್ಗೆ ಬೃಂದಾವನದಲ್ಲಿ ಧಾತ್ರಿಯನ್ನು (ಕಾಯಿಸಹಿತವಾದ ನೆಲ್ಲಿಗಿಡವನ್ನು) ನೆಟ್ಟು ಅಲ್ಲಿ ಭಗವಂತನನ್ನು ಕೂರಿಸಿ ನೀರಾಜನಾದಿಗಳಿಂದ ಪುಜಿಸುತ್ತಾರೆ. ರಾತ್ರಿಯಲ್ಲಿ ಬೃಂದಾವನವನ್ನು ಪುಷ್ಪಾದಿಗಳಿಂದಲಂಕರಿಸಿ ಭಗವಂತನನ್ನು ಆ ಬೃಂದಾವನ ದಲ್ಲಿಟ್ಟು ಉತ್ಸವಮಾಡುತ್ತಾರೆ. ಮನೆಗಳಲ್ಲಿ ಬೃಂದಾವನವನ್ನು ಪುಜಿಸಿ ದೀಪಗಳಿಂದ ಅಲಂಕರಿಸಿ ಪುಜಿಸುತ್ತಾರೆ. ರಾತ್ರಿ ಭಗವಂತನಿಗೆ ಕ್ಷೀರಾನ್ನನಿವೇದನ ಒಂದು ವಿಶೇಷ. ಹೊಸ ನೆಲ್ಲಿಕಾಯನ್ನು ಈ ದ್ವಾದಶಿಯಿಂದ ಉಪಯೋಗಿಸಲು ಪ್ರಾರಂಭಿಸುತ್ತಾರೆ. ಕ್ಷೀರಾಬ್ಧಿ ಯಲ್ಲಿ ಶಯನಿಸಿದ ಭಗವಂತ ಈ ದ್ವಾದಶಿಯಲ್ಲಿ ತುಲಸೀ ಆವಾಸವಾದ ಬೃಂದಾವನದಲ್ಲಿ ತುಲಸೀ ಲಕ್ಷ್ಮಿಯರೊಡನೆ ಏಳುವುದರ ಸಂಕೇತವಾಗಿ ಈ ಪೂಜೆ ಇಂದಿಗೂ ನಡೆಯುವ ರೂಢಿಯಿದೆ. ಈ ದಿವಸದಲ್ಲಿ ದೀಪೋತ್ಸವ ವಿಶೇಷ ಪುಣ್ಯಪ್ರದ. ಈ ದ್ವಾದಶಿಯಲ್ಲಿ ಧಾತ್ರೀ ತುಲಸೀ ಸಹಿತ ಲಕ್ಷ್ಮೀನಾರಾಯಣನನ್ನು ಪುಜಿಸುವುದರಿಂದ ಸರ್ವವಿಧವಾದ ಪಾತಕಗಳೂ ನಶಿಸುತ್ತವೆ-ಎಂದು ವ್ರತಮಹಾತ್ಮ್ಯೆ ತಿಳಿಸುತ್ತದೆ.{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಉತ್ಥಾನ ದ್ವಾದಶೀ}}
[[ವರ್ಗ:ಹಿಂದೂ ಧರ್ಮದ ಹಬ್ಬಗಳು]]
{{ಹಿಂದೂ ಧರ್ಮದ ಹಬ್ಬಗಳು}}
"https://kn.wikipedia.org/wiki/ತುಳಸಿ_ಪೂಜೆ" ಇಂದ ಪಡೆಯಲ್ಪಟ್ಟಿದೆ