ಯುಗಾದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೨ ನೇ ಸಾಲು:
 
==ಹಬ್ಬದ ಆಚರಣೆಯ ವಿಧಾನ==
*ಈ ಹಬ್ಬವನ್ನು ಹೆಚ್ಚಾಗಿ [[ಆಂಧ್ರಪ್ರದೇಶ]], [[ಕರ್ನಾಟಕ]] ಆಂಧ್ರ ಮತ್ತು [[ಮಹಾರಾಷ್ಟ್ರ|ಮಹಾರಾಷ್ಟ್ರಗಳಲ್ಲಿ]] ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ '''ಗುಡಿಪಾಡ್ವ'''. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ - ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ 'ಗುಡಿ' ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
* ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, [[ಮಾವಿನಕಾಯಿ]], [[ಉಪ್ಪು]], [[ಕರಿಮೆಣಸು|ಮೆಣಸು]], [[ಬೇವು]] ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.
*ಮನೆಯ ಮುಂದೆ ಬಣ್ಣ ಬಣ್ಣದ [[ರಂಗೋಲಿ|ರಂಗೋಲಿಯನ್ನಿಡುವರು]]. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ [[ಸೀಗೇಕಾಯಿ|ಸೀಗೇಕಾಯಿಯಿಂದ]] ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
"https://kn.wikipedia.org/wiki/ಯುಗಾದಿ" ಇಂದ ಪಡೆಯಲ್ಪಟ್ಟಿದೆ