ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಶರಣರ ಹೆಸರುಗಳನ್ನು ಸೇರಿಸಲಾಗಿದೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೧೫ ನೇ ಸಾಲು:
ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ವೊದಲಬಾರಿಗೆ ಯಾವ ರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭಾವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ.
 
=='''ಗುರು ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ''==
{{citation needed}}
[[Image:BasavaOnStamp.jpg|thumb|ಗುರು ಬಸವಣ್ಣನವರ ಚಿತ್ರವನ್ನೊಳಗೊಂಡ ಅಂಚೆಚೀಟಿಗಳು]]
ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು. ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು [[ಮನಮೋಹನ ಸಿಂಗ್|ಡಾ. ಮನಮೋಹನ ಸಿಂಗ್]] ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ '''ಪ್ರಥಮ ಕನ್ನಡಿಗ''' ರಾಗಿದ್ದಾರೆ. ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.
 
=='''ವಚನಗಳು'''==
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ