ಗ್ರಹಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪ ನೇ ಸಾಲು:
 
==ಗ್ರಹಣ, ಖಗೋಳೀಯ ==
ಒಂದು ಆಕಾಶಕಾಯ ಇನ್ನೊಂದು ಆಕಾಶ ಕಾಯದ ನೆರಳಿನಿಂದ ಆಂಶಿಕವಾಗಿ ಇಲ್ಲವೇ ಪೂರ್ಣವಾಗಿ ಅಸ್ಫುಟವಾಗುವಿಕೆ (ಎಕ್ಲಿಪ್ಸ್, ಸೆಲೆಸ್ಟಿಯಲ್). ಗ್ರಹಣಕ್ಕೆ ಒಳಗಾಗುವ ಕಾಯ ಸ್ವಯಂಪ್ರಭಾಯುತವಾಗಿದ್ದು ಅಪಾರ ಕಾಯವೊಂದರ ನೆರಳಿನಿಂದ ಅಸ್ಫುಟವಾಗುವುದು ಒಂದು ಬಗೆಯ ಗ್ರಹಣ; ಬದಲು ಅದು ಪ್ರತಿಫಲಿತ ಬೆಳಕಿನಿಂದ ಹೊಳೆಯುವುದಾಗಿದ್ದು ಅಪಾರ ಕಾಯವೊಂದು ಇದಕ್ಕೂ ಇದರ ಬೆಳಕಿನ ಆಕಾರಕ್ಕೂ ನಡುವೆ ಸರಿಯುವಾಗ ಅಸ್ಫುಟವಾಗುವುದು ಇನ್ನೊಂದು ಬಗೆಯ ಗ್ರಹಣ. ಮೊದಲನೆಯ ಪ್ರರೂಪದ ಗ್ರಹಣಕ್ಕೆ ಆಚ್ಛಾದನೆ (ಅಕ್ಕಲ್ಟೇಷನ್) ಎಂದು ಹೆಸರು. ಇದಕ್ಕೆ [[ಸೂರ್ಯಗ್ರಹಣ]] ಮತ್ತು [[ನಕ್ಷತ್ರಗ್ರಹಣ]] ನಿದರ್ಶನಗಳು. ಸೂರ್ಯಗ್ರಹಣದಲ್ಲಿ ವೀಕ್ಷಕನಿಗೂ [[ಸೂರ್ಯ]]ನಿಗೂ ನಡುವೆ [[ಚಂದ್ರ]] ಸರಿಯುತ್ತದೆ. ನಕ್ಷತ್ರಗ್ರಹಣದಲ್ಲಾದರೋ ವೀಕ್ಷಕನಿಗೂ ನಕ್ಷತ್ರಕ್ಕೂ ನಡುವೆ ಚಂದ್ರ ಇಲ್ಲವೇ ಒಂದು ಗ್ರಹ ಸರಿಯುತ್ತದೆ. ಗ್ರಹಣಕಾರಕ [[ಯಮಳ ನಕ್ಷತ್ರ]]ಗಳು (ಎಕ್ಲಿಪ್ಸಿಂಗ್ ಬೈನರಿ ಸ್ಟಾರ್ಸ್) ಕೂಡ ಈ ಬಗೆಯ ಗ್ರಹಣಕ್ಕೆ ನಿದರ್ಶನಗಳು. ಎರಡನೆಯ ಪ್ರರೂಪದ ಗ್ರಹಣಕ್ಕೆ ಚಂದ್ರ ಗ್ರಹಣ ಅದರಂತೆಯೇ ಗ್ರಹಗಳ ಉಪಗ್ರಹಗಳ ಗ್ರಹಣಗಳು ಕೂಡ ಉದಾಹರಣೆಗಳು. ರೂಢಿಯಲ್ಲಿ ಗ್ರಹಣ ಎನ್ನುವ ಪದದ ಬಳಕೆ ಭೂಮಿಯಿಂದ ಕಾಣುವಂತೆ ಸೂರ್ಯ ಮತ್ತು ಚಂದ್ರಗ್ರಹಣಗಳನ್ನು ಕುರಿತ ಲೇಖನ ಉಂಟು. ಪ್ರಸಕ್ತ ಲೇಖನದಲ್ಲಿ ಇವೆರಡು ಗ್ರಹಣಗಳ ಸವಿವರ ನಿರೂಪಣೆ ಇದೆ. ಗ್ರಹಣಕಾರಕ ಯಮಳ ನಕ್ಷತ್ರಗಳನ್ನು ಕುರಿತ ವಿವರಣೆಗೆ (ನೋಡಿ- ಗ್ರಹಣಕಾರಕ-ಯಮಳ-ನಕ್ಷತ್ರಗಳು). ಇದಲ್ಲದೆ [[ಶುಕ್ರ]] ಮತ್ತು [[ಬುಧ]], ಸೂರ್ಯನ ಮುಂದೆ ಹಾದುಹೋಗುವ ಅಪೂರ್ವ ಘಟನೆಗಳನ್ನು ಸಂಕ್ರಮ ಎಂದು ಕರೆಯಲಾಗಿದೆ.
 
==ಸೂರ್ಯ ಗ್ರಹಣಗಳು==
"https://kn.wikipedia.org/wiki/ಗ್ರಹಣ" ಇಂದ ಪಡೆಯಲ್ಪಟ್ಟಿದೆ