ಗ್ರಹಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೭ ನೇ ಸಾಲು:
ಸೂರ್ಯ, ಭೂಮಿ ವ್ಯಾಸಗಳನ್ನೂ ಅವುಗಳ ಕೇಂದ್ರಗಳ ನಡುವಿನ ಸರಾಸರಿ ಅಂತರವನ್ನೂ ತೆಗೆದುಕೊಂಡು ಲೆಕ್ಕ ಹಾಕಿದರೆ ಶಂಕ್ವಾಕಾರದ ದಟ್ಟ ನೆರಳಿನ ಉದ್ದ ಭೂವ್ಯಾಸದ ಸುಮಾರು 108 ಪಾಲು ದೊಡ್ಡದು ಎಂದು ತಿಳಿಯುವುದು. ಅಂದರೆ ದಟ್ಟ ನೆರಳಿನ ಶೃಂಗ ಉ ಭೂಕೇಂದ್ರದಿಂದ ಸರಾಸರಿ ಸುಮಾರು 858,000 ಮೈಲಿಗಳಷ್ಟು ದೂರದಲ್ಲಿರುತ್ತದೆ. ಚಂದ್ರ ಮತ್ತು ಭೂ ಕೇಂದ್ರಗಳ ನಡುವಿನ ಅಂತರ ಭೂ ವ್ಯಾಸದ ಸುಮಾರು 30 ರಷ್ಟು ಉಂಟು. ಇದು ಸರಾಸರಿ ಸುಮಾರು 239,000 ಮೈಲಿಗಳೆನ್ನಬಹುದು. ಆದ್ದರಿಂದ ಭೂಮಿಯ ಉಪಗ್ರಹವಾದ ಚಂದ್ರ ಭೂಮಿ ತನ್ನ ಹಿಂದಕ್ಕೆಡೆಯುವ ದಟ್ಟ ನೆರಳಿನ ಶಂಕುವಿನ ಮೂಲಕ ಹಾದುಹೋಗುವ ಸಂಭಾವ್ಯತೆ ಉಂಟು. ದಟ್ಟ ನೆರಳಿನ ಭಾಗದ ಒತ್ತಿಗೆ ಅರೆನೆರಳಿನ ಭಾಗಗಳು ಇವೆ. ಆದ್ದರಿಂದ ಚಂದ್ರ ದಟ್ಟ ನೆರಳಿನ ಭಾಗವನ್ನು ಪ್ರವೇಶಿಸುವ ಮುನ್ನ ಮತ್ತು ಅದನ್ನು ಹಾದು ಹೋದ ತರುವಾಯ ಅರೆನೆರಳಿನ ಭಾಗದ ಮೂಲಕ ಹೋಗಲೇಬೇಕು.
 
ಚಂದ್ರ ತನ್ನ ಕಕ್ಷೆಯಲ್ಲಿ ಭೂಮಿಯ ಸುತ್ತ ಸಂಚರಿಸುವಾಗ ಭೂಮಿಯ ನೆರಳಿನೊಳಕ್ಕೆ ಬಂದರೆ ಆಗ ಚಂದ್ರಗ್ರಹಣವಾಗುತ್ತದೆ. ಈ ಗ್ರಹಣವಾಗಬೇಕಾದರೆ ಸೂರ್ಯ ಭೂಮಿ ಮತ್ತು ಚಂದ್ರ ಇವು ಮೂರೂ ಸುಮಾರಾಗಿ ಒಂದೇ ಸರಳ ರೇಖೆಯಲ್ಲಿರಬೇಕು. ಚಂದ್ರ ತನ್ನ ಪಥದ ಒಂದು ಪಾತಬಿಂದುವಿನಲ್ಲೋ (ರಾಹು ಇಲ್ಲವೆ ಕೇತು) ಇಲ್ಲವೇ ಅದರ ಹತ್ತಿರವೋ ಇದ್ದು ಸೂರ್ಯನೊಂದಿಗೆ ವಿಯುತಿಯಲ್ಲಿದ್ದರೆ (ಅಪೊಸಿಷನ್) ಅಂದರೆ ಹುಣ್ಣಿಮೆಯಾಗಿದ್ದರೆ ಆಗ ಚಂದ್ರ ಗ್ರಹಣವಾಗುತ್ತದೆ. ಚಂದ್ರಪಥ ನೇರವಾಗಿ ದಟ್ಟ ನೆರಳಿನ ಮಧ್ಯೆ ಹಾದು ಹೋಗಬಹುದು ಇಲ್ಲವೇ ಸ್ವಲ್ಪ ಮೇಲೆ ಅಥವಾ ಕೆಳಗೆ ಹೋಗಬಹುದು. ಇವು ಪಾತರೇಖೆಯ ವಿನ್ಯಾಸವನ್ನು ಅವಲಂಬಿಸಿರುತ್ತವೆ. ಅರೆನೆರಳಿನ ಮೂಲಕ ಚಂದ್ರ ಹಾದು ಹೋಗುವಾಗ ಚಂದ್ರ ಬಿಂಬಿಸುವ ಬೆಳಕು ಸ್ವಲ್ಪ ಮಂಕಾಗಬಹುದು. ದಟ್ಟ ನೆರಳಿನ ಹತ್ತಿರ ಹೋದ ಹಾಗೆಲ್ಲ ಈ ಬೆಳಕು ಕಡಿಮೆಯಾಗುತ್ತ ಹೋಗಿ ಆ ಭಾಗವನ್ನು ಪ್ರವೇಶಿಸುತ್ತಿರುವಾಗ ಚಂದ್ರನ ಸ್ವಲ್ಪ ಭಾಗಕ್ಕೆ ಬೆಳಕು ಕಡಿದುಹೋದ ಹಾಗಾಗುತ್ತದೆ. ಇದಕ್ಕೆ ಚಂದ್ರನ ಪಾಶ್ರ್ವಗ್ರಹಣ ಎಂದು ಹೆಸರು. ದಟ್ಟ ನೆರಳಿನ ಭಾಗದಲ್ಲಿ ಪೂರ್ತ ಮುಳುಗಿದರೆ ಚಂದ್ರನ ಪೂರ್ಣಗ್ರಹಣವಾಗುತ್ತದೆ. ಚಂದ್ರ್ರಚಂದ್ರ ತನ್ನ ಪಥದಲ್ಲಿ ಮುಂದುವರಿದಂತೆ ಪೂರ್ಣ ಗ್ರಹಣವು ಪಾಶ್ರ್ವಗ್ರಹಣವಾಗಿ ಮೋಕ್ಷಗೊಂಡು ಅರೆನೆರಳಿನ ಭಾಗದಲ್ಲಿ ಮುಳುಗಿ ಹೊರಬರುತ್ತದೆ. ಪೂರ್ಣಗ್ರಹಣವಾಗುವುದಕ್ಕೆ ಮುಂಚೆ ಮತ್ತು ಆದ ಮೇಲೆ ಪಾಶ್ರ್ವಗ್ರಹಣವಾಗುತ್ತದೆ ಎಂಬುದನ್ನು ಗಮನಿಸಬೇಕು. ಭೂಮಿಯ ದಟ್ಟ ನೆರಳಿನ ಭಾಗವನ್ನು ಚಂದ್ರ ಸ್ಪರ್ಶಿಸಿ ಮುಂದಕ್ಕೆ ಸರಿದಾಗ ಮಾತ್ರ ಚಂದ್ರಗ್ರಹಣವಾಗಿದೆ ಎನ್ನುತ್ತಾರೆ. ಅರೆ ನೆರಳಿನ ಭಾಗದಲ್ಲಿದ್ದಾಗ ಆಗುವ ಗ್ರಹಣಕ್ಕೆ ಜನರು ಅಷ್ಟೇನೂ ಪ್ರಾಮುಖ್ಯ ನೀಡುವುದಿಲ್ಲ. ಅದನ್ನು ಆಸಕ್ತಿಯಿಂದ ವೀಕ್ಷಿಸುವುದೂ ಇಲ್ಲ. ಭೂಮಿಯನ್ನು ಚಂದ್ರ ಪಶ್ಚಿಮದಿಂದ ಪೂರ್ವಕ್ಕೆ ಸುತ್ತುತ್ತಿರುವುದರಿಂದ ಗ್ರಹಣವಾಗುವಾಗ ಚಂದ್ರನ ಪೂರ್ವಭಾಗದಲ್ಲಿ ಸ್ಪರ್ಶವೂ ಪಶ್ಚಿಮ ಭಾಗದಲ್ಲಿ ಮೋಕ್ಷವೂ ಆಗುತ್ತವೆ. ಭೂಮಿಯಿಂದಾದ ನೆರಳಿನ ಸೀಳ್ನೋಟವನ್ನು ಮತ್ತು ಗ್ರಹಣವಾಗುವಾಗ ಚಂದ್ರ ವಿವಿಧ ಭಾಗಗಳಲ್ಲಿರುವುದನ್ನು ಚಿತ್ರ(5)ರಲ್ಲಿ ತೋರಿಸಿದೆ. ಚಂದ್ರ ಕ್ಷಿತಿಜಕ್ಕಿಂತ ಮೇಲಿದ್ದಾಗ ಗ್ರಹಣವಾದರೆ ಅದನ್ನು ನೋಡಲು ಸಾಧ್ಯವಾಗುವ ಭೂಮಿಯ ಮೇಲಿನ ಭಾಗ ಹೆಚ್ಚು. ಇದು ಭೂಮಿಯ ಮೇಲ್ಮೈಯ ಸುಮಾರು ಅರ್ಧಕ್ಕಿಂತ ಹೆಚ್ಚು ಭಾಗಗಳಿಂದ ಕಾಣಿಸುತ್ತದೆ. ಅದೂ ಅಲ್ಲದೆ ಎಲ್ಲ ಕಡೆಗಳಿಂದಲೂ ಒಂದೇ ತರಹ ಗ್ರಹಣ ಕಾಣಿಸುತ್ತದೆ.
 
==ಗ್ರಹಣಗಳ ವಿಧ==
"https://kn.wikipedia.org/wiki/ಗ್ರಹಣ" ಇಂದ ಪಡೆಯಲ್ಪಟ್ಟಿದೆ