ಕೋಟೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೦ ನೇ ಸಾಲು:
ಸಪ್ತಕ್ಷೇತ್ರಗಳಲ್ಲಿ ವಿಶಿಷ್ಟ ಸ್ಥಾನ ಹೊಂದಿದ ಕೋಟೇಶ್ವರ (ಧ್ವಜಪುರ) ಪ್ರಸಿದ್ಧ ಪುಣ್ಯಕ್ಷೇತ್ರವಾಗಿದೆ. [[ಪರಶುರಾಮ]] ಸೃಷ್ಠಿಯ ಪುರಾಣ ಪುಣ್ಯಕ್ಷೇತ್ರಗಳಲ್ಲಿ ಮಧ್ಯಮ ಕ್ಷೇತ್ರವೆಂದು ಕರೆಯುತ್ತಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲೇ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿದೆ. ಪುರಾಣ ಕಾಲದಲ್ಲಿ ಧ್ವಜಪುರವೆಂದೂ ವರ್ತಮಾನದಲ್ಲಿ ಕೋಟೇಶ್ವರವೆಂದು ಪ್ರಸಿದ್ಧವಾಗಿದೆ. ಒಂದು ಕಾಲದಲ್ಲಿ ಕೋಟೇಶ್ವರದ ಪರಿಸರವು ಬಹಳ ಬರಗಾಲದಿಂದ ನಡುಗಿಹೋಗಿತ್ತು. ಆಗ ವಿಭಾಂಡ ಋಷಿಯ ಮುಖಂಡತ್ವದಲ್ಲಿ ಒಂದು ಕೋಟಿ ಮುನಿಗಳು ತಪಸ್ಸನ್ನು ಮಾಡಿ ಶಿವನನ್ನು ಒಲಿಸಿಕೊಳ್ಳುತ್ತಾರೆ. ಆಗ ಪರಮೇಶ್ವರ ಇಲ್ಲಿ ಕೋಟಿ ಲಿಂಗಗಳ ರೂಪದಲ್ಲಿ ನೆಲೆ ನಿಂತು ಬರಗಾಲ ದೂರ ಮಾಡಿ ಜನರನ್ನು ರಕ್ಷಿಸುತ್ತಾನೆ. ಶಿವನು ಕೋಟಿಲಿಂಗಳಲ್ಲಿ ಐಕ್ಯನಾಗಿದ್ದರಿಂದ ಇಲ್ಲಿನ ಶಿವನನ್ನು ಶ್ರೀ ಕೋಟಿಲಿಂಗೇಶ್ವರನೆಂದು ಕರೆಯುತ್ತೇವೆ. ಆದ್ದರಿಂದ ಈ ಕ್ಷೇತ್ರವನ್ನು ಕೋಟೇಶ್ವರವೆಂದು ಕರೆಯುತ್ತಾರೆ.
 
ಬಸ್ರೂರಿನ ಮಹಾರಾಜ ವಸು ಚಕ್ರವರ್ತಿಗೆ ಮಕ್ಕಳಿಲ್ಲವೆಂಬ ಕೊರಗು ಕಾಡುತ್ತಿತ್ತು. ಶ್ರೀ ಕೋಟೇಶ್ವರನಲ್ಲಿ ತನಗೆ ಮಕ್ಕಳಾದರೆ ದೇವಾಲಯ ನಿರ್ಮಿಸುತ್ತೇನನಿರ್ಮಿಸುತ್ತೇನೆ ಎಂಬ ಹರಕೆ ಹೊರುತ್ತಾನೆ. ಅವನ ಹರಕೆ ಫಲಿಸಿ ಮಕ್ಕಳಾಗುತ್ತವೆ. ತನ್ನ ಮಾತಿನಂತೆ ದೇವಸ್ಥಾನ, ಬೃಹತ್ ಕೆರೆ ನಿರ್ಮಿಸಿದನಂತೆ. ಆತನಿಗೆ ಮನಸ್ಸಿನಲ್ಲಿ ಕೋಟೇಶ್ವರನಿಗೆ ರಥೋತ್ಸವ ಮಾಡಬೇಕೆಂಬ ಮನಸ್ಸುಂಟಾಗಿ ಅದರ ಸಿದ್ಧತೆಗೆ ಆರಂಭಿಸುತ್ತಾನೆ. ಅವನ ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಬ್ರಹ್ಮರಥ ತಯಾರಾಗುವುದಿಲ್ಲ. ಆದರೆ ಸಂಕಲ್ಪದಂತೆ ರಥೋತ್ಸವ ಮಾಡಲೇಬೇಕೆಂಬ ಬಲವಾದ ಇಚ್ಛೆಯಿತ್ತು. ಆಗ ಬಿದಿರು(ಕೊಡಿ) ಕಬ್ಬಿನ ಜಲ್ಲೆಗಳಿಂದ ರಥ ತಯಾರಿಸಿ ಪ್ರಥಮವಾಗಿ ಕೊಡಿ ಕಬ್ಬಿನ ಜಲ್ಲೆಗಳಿಂದ ನಿರ್ಮಿತವಾದ ರಥವಾದ್ದರಿಂದ ಆ ರಥೋತ್ಸವಕ್ಕೆ 'ಕೊಡಿ ಹಬ್ಬ' ಹೆಸರು ಬಂತೆಂದು ತಿಳಿದು ಬರುತ್ತದೆ. ಕ್ರಮೇಣ ಬೃಹತ್ ಬ್ರಹ್ಮರಥೋತ್ಸವವಾಗಿ ಜನಾಕರ್ಷಣೆಯ ಕೊಡಿ ಹಬ್ಬವಾಗಿ ಇಂದು ಬಹಳ ವೈಭವದಿಂದ ನಡೆಯುತ್ತದೆ.
 
==ಪ್ರವಾಸಿ ತಾಣಗಳು==
===ಕೋಟಿಲಿಂಗೇಶ್ವರ ದೇವಸ್ಥಾನ===
"https://kn.wikipedia.org/wiki/ಕೋಟೇಶ್ವರ" ಇಂದ ಪಡೆಯಲ್ಪಟ್ಟಿದೆ