ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೬ ನೇ ಸಾಲು:
==ರಾಮನ ವನವಾಸ==
* ರಾಜ ದಶರಥನು ತನ್ನ ಹಿರಿಯ ಮಗ ಹಾಗೂ ಪದ್ಧತಿಯಂತೆ ಉತ್ತರಾಧಿಕಾರಿಯಾದ ರಾಮನನ್ನು ಯುವರಾಜನನ್ನಾಗಿ ಮಾಡಲು ನಿರ್ಧರಿಸಿದನು. ಅವನ ಪ್ರಜೆಗಳು ಈ ಘೋಷಣೆಯನ್ನು ಸಂತಸದಿಂದ ಸ್ವಾಗತಿಸಿದರು. ಇಡೀ ನಗರವು ಈ ಸಂಬಂಧದ ಉತ್ಸವವನ್ನೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳಲ್ಲಿ ತೊಡಗಿತು. ದಶರಥನು ಈ ಆಚರಣೆಗಳ ಸಂಬಂಧ ಚರ್ಚಿಸಲು ತನ್ನ ಪತ್ನಿ ಕೈಕೇಯಿ ಇದ್ದಲ್ಲಿಗೆ ಹೋದನು.
* ಆದರೆ ದಾಸಿ ಮಂಥರೆಯಿಂದ ದುರ್ಬೋಧನೆಗೊಳಗಾಗಿ 'ಯುವರಾಜನಾಗುತ್ತಿರುವುದು ಪ್ರವಾಸದಲ್ಲಿರುವ ತನ್ನ ಮಗ ಭರತನಲ್ಲ, ಆದಅದು ಕೌಸಲ್ಯೆಯ ಮಗ ರಾಮ' ಎಂದು ಅಸೂಯೆಪಟ್ಟು ದುಃಖಿಸಿದಳು. ದಶರಥನು ಬಂದಾಗ ಅವಳು ಅಂತಃಪುರದಲ್ಲಿ ಕಣ್ಣೀರುಗರೆಯುತ್ತಿದ್ದಳು. ಚಿಂತಿತನಾದ ದಶರಥನ ಪ್ರಶ್ನೆಗಳಿಗೆ ಉತ್ತರವಾಗಿ ಕೈಕೇಯಿ, ಅನೇಕ ವರ್ಷಗಳ ಹಿಂದೆ ದಶರಥ ತನಗಿತ್ತಿದ್ದ ಎರಡು ವರಗಳನ್ನು ನೆನಪಿಸಿದಳು. ಈ ವರಗಳನ್ನು ಪೂರೈಸಿದರೆ ಪ್ರಸನ್ನಳಾಗುವುದಾಗಿ ಹೇಳಿದಳು.
* ಇದಕ್ಕೆ ಪೂರಕವಾಗಿ ಅವಳು, ಮೊದಲನೆಯದಾಗಿ, ತನ್ನ ಮಗ ಭರತನನ್ನು ಯುವರಾಜನಾಗಿ ನೇಮಿಸಬೇಕೆಂದೂ, ಎರಡನೆಯದಾಗಿ, ರಾಮನನ್ನು ಹದಿನಾಲ್ಕು ವರ್ಷಕಾಲ ಘೋರವಾದ ದಂಡಕಾರಣ್ಯಕ್ಕೆ ವನವಾಸಕ್ಕೆ ಕಳಿಸ ಬೇಕೆಂದೂಕಳಿಸಬೇಕೆಂದೂ ಕೇಳಿದಳು. ದುಃಖಿತನಾದ ದಶರಥ, ಆದಾಗ್ಯೂ ತನ್ನ ವಚನವನ್ನು ಪರಿಪಾಲಿಸಿಕೊಳ್ಳಲು ನಿರ್ಧರಿಸಿದನು.
* ಆದರ್ಶ ಪುತ್ರನಾದ ರಾಮ, ಸಿಂಹಾಸನದ ಮೇಲೆ ತನಗಿದ್ದ ಹಕ್ಕನ್ನು ಬಿಟ್ಟುಕೊಟ್ಟು ವನವಾಸಕ್ಕೆ ಹೊರಡಲು ಸಿದ್ಧನಾದನು. ಅವನ ನಿಷ್ಠಾವಂತ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣ, ರಾಮನ ಜೊತೆ ಹೊರಡಲು ನಿರ್ಧರಿಸಿದರು. ದಶರಥ ದುಃಖದಲ್ಲಿದ್ದಂತೆ ರಾಮ, ಅಯೋಧ್ಯೆಯ ಪರಿತಪ್ತ ಜನರಿಂದ ಹಿಂಬಾಲಿಸಲ್ಪಟ್ಟು ವನವಾಸಕ್ಕೆ ತೆರಳಿದನು. ಸ್ವಲ್ಪ ಕಾಲಾನಂತರ ದಶರಥ ದುಃಖದಿಂದ ಮರಣವನ್ನಪ್ಪಿದನು.
 
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ