ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೦ ನೇ ಸಾಲು:
==ವಾನರ ಸಾಮ್ರಾಜ್ಯ==
* ತಮ್ಮ ಹುಡುಕಾಟವನ್ನು ಮುಂದುವರೆಸಿ ರಾಮ ಲಕ್ಷ್ಮಣರು ಕಿಷ್ಕಿಂದೆಯ ವಾನರ ರಾಜನಾದ ಸುಗ್ರೀವ ಹಾಗೂ ಹನುಮಂತನನ್ನು ಭೇಟಿಯಾಗುತ್ತಾರೆ. ಹನುಮಂತ ಸುಗ್ರೀವನ ಸೈನ್ಯಕ್ಕೆ ಸೇನಾಧಿಪತಿ. ಸೀತೆ ರಾವಣನ ರಥದಿಂದ ಎಸೆದ ಆಭರಣಗಳು ವಾನರರಿಗೆ ದೊರೆತಿರುತ್ತದೆ. ತನ್ನ ಅಣ್ಣ ವಾಲಿಯಿಂದ ಸಾಮ್ರಾಜ್ಯದಿಂದ ಹೊರಗಟ್ಟಲ್ಪಟ್ಟ ಸುಗ್ರೀವ ರಾಮನ ಸಹಾಯ ಪಡೆಯುತ್ತಾನೆ.
* ಪರಸ್ಪರ ಕಾಳಗದಲ್ಲಿ ರಾಮನ ಸಹಾಯ ಪಡೆದ ಸುಗ್ರೀವನಿಂದ ವಾಲಿ ಮಡಿಯುತ್ತಾನೆ. ಸಹಾಯ ಮಾಡಿದ ರಾಮನೊಂದಿಗೆ ಸುಗ್ರೀವ ತನ್ನ ಸೈನ್ಯ ವನ್ನು ಕೂಡಿ ಲಂಕೆಯೆಡೆಗೆ ಹೊರಡುತ್ತಾನೆ. ರಾಮ, ಸುಗ್ರೀವರು ಸೀತೆಯನ್ನು ಹುಡುಕಲು ತಮ್ಮ ವಾನರಸೇನೆಯನ್ನು ನಾ ನಾನಾನಾ ದಿಕ್ಕಿಗೆ ಕಳಿಸಿದರು.ಅವರು ರಾವಣನಿಂದ ಹತನಾದ ಜಟಾಯುವಿನ ಸೋದರ, ಸಂಪಾತಿಯನ್ನು ಭೇಟಿಯಾಗುವವರೆಗೆ ಅವರ ಪ್ರಯತ್ನಗಳಿಗೆ ವಿಶೇಷ ಫಲ ದೊರೆಯಲಿಲ್ಲ.
* ಸಂಪಾತಿಯು ಅಂಗವೈಕಲ್ಯದಿಂದಾಗಿ ಹಾರಲು ಅಸಮರ್ಥನಾಗಿದ್ದನು. ಅವನು ಸೂರ್ಯನ ಅತಿ ಸಮೀಪಕ್ಕೆ ಹಾರಿದ್ದರಿಂದ ಅವನ ರೆಕ್ಕೆಗಳು ಸುಟ್ಟು ಹೋಗಿದ್ದವು. ಬಲಶಾಲಿಯಾದ ಜಟಾಯುವು ಅವನನ್ನು ಸಾವಿನಿಂದ ರಕ್ಷಿಸಿದ್ದನು. ಇಬ್ಬರಲ್ಲಿ ಜಟಾಯು ದೇಹಬಲದಿಂದ ಗಟ್ಟಿಗನಾದರೂ ಸಂಪಾತಿಗೆ ಕಣ್ಣಿನ ಹೆಚ್ಚಿನ ದೃಷ್ಟಿಯಿದ್ದು ನೂರಾರು ಯೋಜನಗಳಷ್ಟು ದೂರ ನೋಡಬಲ್ಲವನಾಗಿದ್ದನು.
* ರಾವಣನು ತನ್ನ ಸೋದರನನ್ನು ಕೊಂದದ್ದನ್ನು ಕೇಳಿ ಅವನು ವಾನರರಿಗೆ ಸಹಾಯ ಮಾಡಲು ಒಪ್ಪಿದನು. ಅನತಿಕಾಲದಲ್ಲೇ ಅವನು ಸೀತೆಯನ್ನು ದಕ್ಷಿಣ ದಿಕ್ಕಿನಲ್ಲಿರುವದಾಗಿ ಪತ್ತೆ ಹಚ್ಚಿದನು. ಅವಳು ದಕ್ಷಿಣದಲ್ಲಿ ಸಮುದ್ರದಾಚೆಗಿನ ಲಂಕಾದ್ವೀಪದಲ್ಲಿನ ಅಶೋಕವನವೊಂದರಲ್ಲಿ ಸೆರೆಯಾಗಿರುವುದನ್ನು ನೋಡಿ ಹೇಳಿದನು.
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ