ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೭ ನೇ ಸಾಲು:
* ಸುಗ್ರೀವನು ತನ್ನ ವಾನರಸೈನ್ಯವನ್ನು ಅಂಗದನ ನೇತೃತ್ವದಲ್ಲಿ ದಕ್ಷಿಣಕ್ಕೆ ಕಳಿಸಿದನು. ಹನುಮಂತನು ಅಂಗದನ ಸೇನಾಪತಿಯಾಗಿ ತೆರಳಿದನು. ಅವರು ದಕ್ಷಿಣದಲ್ಲಿ ಬಹುದೂರ ಹೋದಮೇಲೆ ತಮ್ಮ ಮತ್ತು ಲಂಕಾದ್ವೀಪದ ನಡುವೆ ಮಹಾಸಾಗರವನ್ನು ಕಂಡರು. ಆ ಸಮುದ್ರವನ್ನು ದಾಟುವ ಬಗೆ ಹೇಗೆಂದು ತಿಳಿಯದಾದರು.
* ತನ್ನ ಸೈನಿಕರಿಗೆ ಅಲ್ಲಿಯೇ ಇರಹೇಳಿ ಹನುಮಂತನು ತನ್ನದೇಹವನ್ನು ಹಿಗ್ಗಿಸಿ ಮಹಾರೂಪ ತಾಳಿ ಅಪಾರ ಜಲರಾಶಿಯನ್ನು ಜಿಗಿದು ದಾಟಿ ತ್ರಿಕೂಟ ಪರ್ವತದ ಮೇಲೆ ಇಳಿದು ಲಂಕಾಪಟ್ಟಣದತ್ತನೋಡಿದನು. ನಗರಕ್ಕೆ ಭಾರೀ ಪಹರೆ ಇದ್ದದ್ದರಿಂದ ಬೆಕ್ಕಿನ ರೂಪತಾಳಿ ನಗರವನ್ನು ನುಸುಳಿ ನಗರವನ್ನು ವೀಕ್ಷಿಸಿದನು. ರಾವಣನು ತನ್ನ ಅಂತಃಪುರದಲ್ಲಿ ಸುಂದರ ಸ್ತ್ರೀಯರಿಂದ ಸುತ್ತುವರಿಯಲ್ಪಟ್ಟಿದ್ದನು. ಆದರೆ ಅಲ್ಲಿ ಸೀತೆ ಇರಲಿಲ್ಲ.
* ತನ್ನ ಅನ್ವೇಷಣೆಯನ್ನು ಮುಂದುವರಿಸಿ ಕೊನೆಗೆ ಆಶೋಕವನದಲ್ಲಿ ಮರದ ಕೆಳಗೆ ರಾಕ್ಷಸಿ ಯರಿಂದರಾಕ್ಷಸಿಯರಿಂದ ಸುತ್ತುವರೆಯಲ್ಪಟ್ಟು ದುಃಖದಿಂದ ಕಳೆಗುಂದಿದ ಸೌಂದರ್ಯವುಳ್ಳ ಸೀತೆಯನ್ನು ನೋಡಿದನು. ಸಣ್ಣ ಕಪಿಯೊಂದರ ವೇಷ ತಾಳಿ ಹನುಮಂತನು ಮರದಿಂದ ಕೆಳಗೆ ಜಿಗಿದು ಅವಳಿಗೆ ರಾಮನ ಉಂಗುರವನ್ನು ಕೊಟ್ಟು ಅವಳಿಂದ ಒಂದು ಉಂಗುರವನ್ನು ತೆಗೆದುಕೊಂಡನು.
* ಅವಳನ್ನು ತನ್ನೊಡನೆ ಕೊಂಡೊಯ್ಯಲು ಸಿದ್ಧವಾಗಲು, ರಾಮನೇ ತನ್ನನ್ನು ರಕ್ಷಿಸಲು ಬರಬೇಕೆಂದು ಹೇಳಿ ತನ್ನನ್ನು ಹುಡುಕಿದ್ದಕ್ಕೆ ಸಾಕ್ಷಿಯಾಗಿ ಒಂದು ಬೆಲೆಯುಳ್ಳ ವಜ್ರವನ್ನು ರಾಮನಿಗೆ ಕೊಡುವುದ ಕ್ಕಾಗಿಕೊಡುವುದಕ್ಕಾಗಿ ಹನುಮಂತನಿಗೆ ಕೊಟ್ಟಳು. ಅವರು ಮಾತನಾಡುತ್ತಿರುವಾಗ ಅಲ್ಲಿ ಬಂದ ರಾವಣನು ಅವಳ ಮನವೊಲಿಸಲು ವ್ಯರ್ಥ ಪ್ರಯತ್ನ ಮಾಡಿ ಅವಳು ಇನ್ನೆರಡು ತಿಂಗಳಲ್ಲಿ ತನ್ನ ವಶವಾಗದಿದ್ದರೆ, ತನ್ನ ಬೆಳಗಿನ ಉಪಾಹಾರಕ್ಕಾಗಿ ಅವಳ ಅಂಗಾಂಗಗಳನ್ನು ತುಂಡರಿಸುವುದಾಗಿ ಬೆದರಿಸಿದನು.
* ರಾವಣನ ಮಾತಿನಿಂದ ಸಿಟ್ಟಿಗೆದ್ದ ಹನುಮಂತನು ಮಾವಿನ ತೋಟವನ್ನು ಹಾಳು ಮಾಡಿದನು. ಅವನನ್ನು ರಾಕ್ಷಸರು ಬಂಧಿಸಿ ರಾವಣನ ಮುಂದೆ ಕೊಂಡೊಯ್ದರು. ಹನುಮಂತನು ತಾನು ರಾಮನ ದೂತನೆಂದು ಹೇಳಿ, ಸೀತೆಯನ್ನು ರಾಮನಿಗೆ ಒಪ್ಪಿಸು ಇಲ್ಲವೆ ರಾಮನ ಕ್ರೋಧಕ್ಕೆ ಬಲಿ ಯಾಗುಬಲಿಯಾಗು ಎಂದು ಹೇಳಿದನು. ಅವನ ಮಾತುಗಳನ್ನು ಕೇಳಿ ಸಿಟ್ಟಿಗೆದ್ದ ರಾವಣನು ಅವನನ್ನು ಕೊಲ್ಲಲು ಆಜ್ಞೆ ಮಾಡಿದನು.
* ಆಗ ರಾವಣನ ನ್ಯಾಯಪರ ತಮ್ಮನಾದ ವಿಭೀಷಣನು ಮಧ್ಯಪ್ರವೇಶಿಸಿ ರಾವಣನಿಗೆ ಶಾಸ್ತ್ರಗಳಲ್ಲಿ ಹೇಳಿದ ಪ್ರಕಾರ ದೂತನನ್ನು ಕೊಲ್ಲುವುದು ಅನುಚಿತ ಎಂದು ಹೇಳಿ ಅವನ ಅಪರಾಧಕ್ಕೆ ತಕ್ಕ ಶಿಕ್ಷೆ ವಿಧಿಸಲು ಸಲಹೆ ಮಾಡಿದನು. ಇದಕ್ಕೆ ರಾವಣನು ಒಪ್ಪಿ ತನ್ನ ರಾಕ್ಷಸ ಸೇವಕರಿಗೆ ಹನುಮಂತನ ಬಾಲಕ್ಕೆ ಬೆಂಕಿ ಹಚ್ಚಲು ಆಜ್ಞೆ ಮಾಡಿದನು.
* ಬಾಲಕ್ಕೆ ಬೆಂಕಿ ಹತ್ತಿದ ನಂತರ ಹನುಮಂತನು ತನ್ನ ಶರೀರವನ್ನು ಸಣ್ಣದಾಗಿ ಮಾಡಿಕೊಂಡು ಕಟ್ಟುಗಳಿಂದ ಪಾರಾಗಿ ಮನೆಗಳ ಮೇಲೆಲ್ಲ ಜಿಗಿಯುತ್ತ ಹೋಗಿ ಲಂಕೆಯಲ್ಲೆಲ್ಲ ಬೆಂಕಿಯನ್ನು ಹರಡಿದನು. ಅವನು ರಾಮ, ಸುಗ್ರೀವರಿದ್ದಲ್ಲಿಗೆ ಮರಳಿ ಬಂದು ಸೀತೆಯು ಬಂಧನದಲ್ಲಿರುವುದನ್ನು ತಿಳಿಸಿ ಯುದ್ಧಸಿದ್ಧತೆಗೆ ತೊಡಗಿದನು.
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ