ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮೧ ನೇ ಸಾಲು:
 
== ಸೀತಾ ಪರಿತ್ಯಾಗ==
* ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರುಮಾತಾಡತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು.
* ತನ್ನ ಪ್ರಜೆಗಳನ್ನು ಸಂತೋಷಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ.
* ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ.
* ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಎಂಟು ವರ್ಷದವರಾಗಿದ್ದರು (Ẋಇಪ್ಪತ್ತು ವರ್ಷದ ಯುವಕರಾಗಿದ್ದರುẊ.) ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು.
* ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳನ್ನೂಪ್ರಜೆಗಳಿಗೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ.
* ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಮೇಲಿರುವ ಕಳಂಕದಿಂದ ದೂರಾಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ.ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ.
* ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯನ್ನುಭೂದೇವಿಯು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ.
* ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.
 
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ