Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧ ನೇ ಸಾಲು:
ಭೂಮಿಯ ಪವಿತ್ರತೆ:
 
ರಾಮಾಯಣದಲ್ಲಿ ಭೂಮಿ:-
 
ಸೀತಾ ಪರಿತ್ಯಾಗ:-
 
ಶ್ರೀರಾಮನ ಆಳ್ವಿಕೆಯಲ್ಲಿ ಅಯೋಧ್ಯೆಯಲ್ಲಿ ಸುಖ, ಸಮೃದ್ಧಿಗಳು ನೆಲಸಿದ್ದವು. ಪ್ರಜೆಗಳು ಆನಂದದಿಂದಿದ್ದರು. ಆದರೆ ಈ ನೆಮ್ಮದಿ ಶಾಶ್ವತವಾಗಿ ಉಳಿಯಲಿಲ್ಲ. ರಾವಣನ ಸೆರೆಯಲ್ಲಿ ಬಹಳ ಕಾಲವಿದ್ದ ಸೀತೆಯ ಪಾವಿತ್ರ್ಯದ ಬಗೆಗೆ ಜನರು ಅನುಮಾನದಿಂದ ಮಾತಾಡ ತೊಡಗಿದರು. ಈ ವಿಷಯ ಗೂಢಚಾರರಿಂದ ರಾಮನಿಗೂ ತಿಳಿದು ಬಂದಿತು. ರಾಜ್ಯದಲ್ಲಿ ಉಂಟಾದ ಬರಗಾಲಕ್ಕೂ ಸೀತೆಯಿಂದಾಗಿರುವ ತಪ್ಪೇ ಕಾರಣವೆಂದು ಜನ ಗುಸುಗುಸು ಮಾತಾಡ ತೊಡಗಿದರು. ತನ್ನ ಪ್ರಜೆಗಳನ್ನು ಸಂತೋಷ ಪಡಿಸಲು ರಾಮ ಸೀತೆಯನ್ನು ತ್ಯಜಿಸಲು ನಿರ್ಧರಿಸಿದನು. ಸೀತೆಯು ವನವಾಸ ಕಾಲದಲ್ಲಿ ರಾಮನೊಡನೆ ಸಂತೋಷದಿಂದ ಕಾಲಕಳೆದ ಅರಣ್ಯಕ್ಕೆ ಮತ್ತೊಮ್ಮೆ ಹೋಗಬೇಕಾಯಿತು. ತುಂಬು ಗರ್ಭಿಣಿಯಾದ ಸೀತೆಯನ್ನು, ವಿಹಾರದ ನೆಪ ಹೇಳಿ ರಾಮ ಲಕ್ಷ್ಮಣನೊಂದಿಗೆ ಅವಳನ್ನು ಕಾಡಿಗೆ ಕಳುಹಿಸಿ ಅವಳನ್ನು ಅಲ್ಲೆ ಬಿಟ್ಟು ಬರುವಂತೆ ತಿಳಿಸಿ ಪ್ರಜಾಪ್ರೇಮವನ್ನು ಮೆರೆಯುತ್ತಾನೆ. ಜನಾಪವಾದದಿಂದ ರಾಮ ತನ್ನನ್ನು ತ್ಯಜಿಸಿರುವನೆಂಬ ಸುದ್ದಿಯಿಂದ ಸೀತೆ ದು:ಖತಪ್ತ ಳಾಗಿ ಕಲ್ಲು ಕರಗುವಂತೆ ರೋದಿಸುತ್ತಾಳೆ. ನಂತರ ರಾಮನಿಂದ ಪರಿತ್ಯಕ್ತೆಯಾದ ಸೀತೆಗೆ ವಾಲ್ಮೀಕಿ ಮುನಿಯು ತನ್ನ ಆಶ್ರಮದಲ್ಲಿ ಆಶ್ರಯ ನೀಡಿದನು. ಸೀತೆ ವಾಲ್ಮೀಕಿ ಮುನಿಯ ಆಶ್ರಮದಲ್ಲಿ ಲವ ಮತ್ತು ಕುಶ ಎಂಬ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡುತ್ತಾಳೆ. ಸೀತೆಯು ವಾಲ್ಮೀಕಿ ಮುನಿಯ ಸಹಾಯದಿಂದ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡುತ್ತಾಳೆ. ವಾಲ್ಮೀಕಿ ಲವ-ಕುಶರಿಗೆ ಗುರುವಾಗಿ ಸಕಲ ವಿದ್ಯೆಗಳನ್ನು ಹೇಳಿಕೊಡುತ್ತಾನೆ. ಲವ-ಕುಶರು ಬೆಳೆದು ಯುವಕ ರಾಗಿದ್ದರು. ಅದೇ ಸಮಯದಲ್ಲಿ ರಾಮನನ್ನು ಒಂದು ಚಿಂತೆ ಕಾಡುತ್ತಿತ್ತು. ಬ್ರಾಹ್ಮಣನ ಮಗನಾಗಿದ್ದ ರಾವಣನನ್ನು ಕೊಂದಿರುವುದರಿಂದ ತನಗೆ ಬಂದಿರಬಹುದಾದ ಬ್ರಹ್ಮ ಹತ್ಯೆ ಎಂಬ ಪಾಪವನ್ನು ಕಳೆದುಕೊಳ್ಳಲು ನಿಶ್ಚಯಿಸಿದನು. ಅದಕ್ಕಾಗಿ ಅಶ್ವಮೇಧ ಯಾಗ ಮಾಡಬೇಕೆಂದು ನಿರ್ಧರಿಸಿದನು. ಈ ಯಾಗಕ್ಕೆ ತನ್ನ ದೇಶದ ಎಲ್ಲಾ ಪ್ರಜೆಗಳಿಗೂ, ಋಷಿ ಮುನಿಗಳಿಗೂ ಆಹ್ವಾನವಿರುತ್ತದೆ. ವಾಲ್ಮೀಕಿ ಮುನಿಗಳು ಲವ-ಕುಶರೊಡನೆ ಈ ಯಾಗಕ್ಕೆ ಹೋಗಿರುತ್ತಾರೆ. ಯಾಗದ ದಿನ ಲವ-ಕುಶರಿಬ್ಬರು ರಾಮನ ಎದುರು ವಾಲ್ಮೀಕಿ ಋಷಿಗಳಿಂದ ಕಲಿತ ರಾಮಾಯಣವನ್ನು ಹಾಡುತ್ತಾರೆ. ರಾಮನಿಗೆ ಆ ಗಾಯನದ ಮೂಲಕ ತನ್ನದೇ ಕಥೆಯನ್ನು ಕೇಳಿ ಸೋಜಿಗವಾಗುತ್ತದೆ. ವಾಲ್ಮೀಕಿಯಿಂದ ರಾಮನಿಗೆ ಲವ,ಕುಶರು ತನ್ನ ಮಕ್ಕಳೆಂದು ತಿಳಿಯುತ್ತದೆ. ಸೀತೆಯು ವಾಲ್ಮೀಕಿ ಮುನಿಗಳ ಆಶ್ರಮದಲ್ಲಿರುವ ವಿಷಯ ತಿಳಿದು, ಅವಳನ್ನು ತಾನಿರುವಲ್ಲಿಗೆ ಬರುವಂತೆ ಹೇಳಿ ಕಳಿಸುತ್ತಾನೆ. ವಾಲ್ಮೀಕಿ ಮುನಿಯು ಸೀತೆಯನ್ನು ಆಶ್ರಮ ದಿಂದ ಕರೆದು ಕೊಂಡು ಬರುತ್ತಾನೆ. ಆಗ ರಾಮ ಸೀತೆಯು ಮತ್ತೊಂದು ಪರೀಕ್ಷೆಯ ಮೂಲಕ ತನ್ನ ಮೇಲಿರುವ ಕಳಂಕದಿಂದ ಗಬೇಕೆಂದು ಹೇಳುತ್ತಾನೆ. ರಾಮನ ಮಾತುಗಳನ್ನು ಕೇಳಿ ಸೀತೆಯನ್ನು ದು:ಖ ಆವರಿಸುತ್ತದೆ. ಆಗ ಸೀತೆಯು ತನ್ನ ತಾಯಿಯಾದ ಭೂದೇವಿಯಲ್ಲಿ ಹೀಗೆ ಕೇಳಿಕೊಳ್ಳುತ್ತಾಳೆ - ತಾನು ಪತಿವ್ರತೆಯೇ ಆಗಿದ್ದಲ್ಲಿ, ಭೂಮಿ ಬಾಯಿ ಬಿರಿಯಲಿ, ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗು ಎಂದು ಕೇಳಿಕೊಳ್ಳುತ್ತಾಳೆ. ಎಲ್ಲರೂ ನೋಡುತ್ತಿರುವಂತೆಯೇ ಭೂಮಿ ದೊಡ್ಡ ಸದ್ದಿನೊಂದಿಗೆ ಬಾಯಿ ಬಿಡುತ್ತದೆ. ಅಲ್ಲಿ ಸೀತೆಗಾಗಿ ಸಿಂಹಾಸನವೊಂದು ಪ್ರತ್ಯಕ್ಷವಾಗುತ್ತದೆ. ಸೀತೆಯ ತಾಯಿಯಾದ ಭೂದೇವಿಯು ತನ್ನ ಮಗಳನ್ನು ಅಪ್ಪಿಕೊಂಡು ಭೂಮಿ ಒಳಗೆ ಕರೆದುಕೊಂಡು ಹೋಗುತ್ತಿದ್ದಂತೆ ಭೂಮಿ ಮುಚ್ಚಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡು ರಾಮ ಸೀತೆಯನ್ನು ಅನುಮಾನಿಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಾನೆ. ಆಗ ಮುನಿಗಳು ರಾವಣನ ಸಂಹಾರದ ನಿಮಿತ್ತಕ್ಕಾಗಿ ಸೀತೆಯ ಅವತಾರವಾಗಿತ್ತು. ತನ್ನ ಕಾರ್ಯ ಮುಗಿದಿದ್ದರಿಂದ ಅವಳು ಹೋಗಿದ್ದಾಳೆ. ನೀನು ದುಃಖಿಸಬೇಡ ಎಂದು ರಾಮನನ್ನು ಸಮಾಧಾನಿಸುತ್ತಾರೆ.
 
ಹೀಗೇ ಭೂಮಿಯಮೇಲಿನ ಜನರು ರಾಮಾಯಣ ಕಾಲದಿಂದಲೂ ಸೀತಾಮಾತೆ ಯನ್ನು ಭೂಮಿ ತಾಯಿಯ ಮಗಳಾಗಿ ಪವಿತ್ರಳೆಂಬ
ಭಾವನೆಯಿಂದ ನಂಬಿಕೆಯಿರಿಸಿಕೊಂಡಿರುತ್ತಾರೆ.
 
ಆಧ್ಯಾತ್ಮಿಕವಾಗಿ ಭೂಮಿಯ ಪವಿತ್ರತೆ:-
 
"ವಂದಿಪೆನು ಈ ಭೂಮಿಗೆ ಭೂಮಿಯ ಸಮಸ್ತ ಜನತೆಗೆ ನಮಿಪೆನು ಭೂಮಿ ತಾಯಿಗೆ"
 
• ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
• ಸತ್ಯನಿಷ್ಠೆ, ಪವಿತ್ರತೆ ಮತ್ತು ನಿಸ್ವಾರ್ಥತೆ ಈ ಮೂರು ಯಾರಲ್ಲಿರುತ್ತದೆಯೋ ಅವರನ್ನು ಈ ಜಗತ್ತಿನ ಯಾವ ಶಕ್ತಿಯೂ ನಿಗ್ರಹಿಸಲಾರದು. ಇವುಗಳಿಂದ ಸಂಪನ್ನನಾದವನು ಇಡೀ ಜಗತ್ತಿನ ವಿರೋಧವನ್ನೇ ಎದುರಿಸಬಲ್ಲ.
ಸ್ವಾಮಿ ವಿವೇಕಾನಂದರ ದಿವ್ಯ ವಾಣಿ
ವಿಶ್ವಮಾನವ, ವಿಶ್ವವಿಜೇತ, ವೀರಸಂನ್ಯಾಸಿ ‘ಸ್ವಾಮಿ ವಿವೇಕಾನಂದ’ರು ಜನವರಿ 12, 1863ರಲ್ಲಿ, ಇದೇ ನಾವು ಹುಟ್ಟಿರುವ ಈ ಪುಣ್ಯಭೂಮಿ - ಭರತಭೂಮಿಯಲ್ಲಿ ಜನಿಸಿದರು. ನಮ್ಮ ಭರತ ಭೂಮಿಯಲ್ಲಿ ಅಂತದ್ದೇನಿದೆ ಎಂಬುದನ್ನು ಸ್ವಾಮಿ ವಿವೇಕಾನಂದರ ಮಾತುಗಳಲ್ಲೇ ಅರಿಯುವುದು ಶ್ರೇಷ್ಠವಾದುದು. ಅವರು ನುಡಿಯುತ್ತಾರೆ “ಜಗತ್ತಿನಲ್ಲಿ ಯಾವುದಾದರೂ ಒಂದು ದೇಶವು ಪುಣ್ಯಭೂಮಿಯೆಂದು ಕರೆಯಿಸಿಕೊಳ್ಳಲು ಅರ್ಹವಾಗಿದ್ದರೆ, ಜೀವಿಗಳು ತಮ್ಮ ಬಾಳಿನ ಕೊನೆಯ ಕರ್ಮವನ್ನು ಸವೆಸಲು ಬರಬೇಕಾದ ಸ್ಥಳವೊಂದಿದ್ದರೆ, ಭಗವಂತನೆಡೆಗೆ ಸಂಚರಿಸುತ್ತಿರುವ ಪ್ರತಿಯೊಬ್ಬ ಜೀವಿಯೂ ತನ್ನ ಕೊನೆಯ ಯಾತ್ರೆಯನ್ನು ಪೂರೈಸುವುದಕ್ಕೆ ಒಂದು ಕರ್ಮಭೂಮಿಗೆ ಬರಬೇಕಾಗಿದ್ದರೆ, ಯಾವುದಾದರೂ ದೇಶದಲ್ಲಿ ಮಾನವ ಕೋಟಿಯ ಮಾಧುರ್ಯ, ಔದಾರ್ಯ, ಪಾವಿತ್ರ್ಯ, ಶಾಂತಿ – ಇವುಗಳಲ್ಲಿ ಎಲ್ಲಕ್ಕಿಂತ ಹೆಚ್ಚಾಗಿ ಧ್ಯಾನದಲ್ಲಿ ಮತ್ತು ಅಂತರ್ಮುಖ ಜೀವನದಲ್ಲಿ ತನ್ನ ಪರಾಕಾಷ್ಠೆಯನ್ನು ಮುಟ್ಟಿದ್ದರೆ ಅದು ಭರತಖಂಡವೇ ಆಗಿದೆ.” ಇಂಥಹ ಅದಮ್ಯ ನಂಬಿಕೆಯನ್ನು ತಮ್ಮಲ್ಲಿ ತುಂಬಿಕೊಂಡಿದ್ದ ಸ್ವಾಮೀಜಿಯವರು ತಮ್ಮ ಬದುಕಿನ ಮೂಲಕ ಅದನ್ನು ವಿಶ್ವಕ್ಕೆಲ್ಲಾ ಸಾಬೀತು ಮಾಡಿಕೊಟ್ಟರು.
ಸ್ವಾಮಿ ವಿವೇಕಾನಂದರ ಬಗ್ಗೆ ಈ ದೇಶದ ಮಹಿಮಾನ್ವಿತರ ಮಾತುಗಳು ಹೀಗಿವೆ.
“ನೀವು ಭಾರತವನ್ನು ಅರಿಯಬೇಕೆಂದಿದ್ದರೆ ಸ್ವಾಮಿ ವಿವೇಕಾನಂದರನ್ನು ಅಧ್ಯಯನ ಮಾಡಿ. ಅವರಲ್ಲಿ ಎಲ್ಲವೂ ರಚನಾತ್ಮಕವಾದುದು. ನೇತ್ಯಾತ್ಮಕವಾದುದು ಯಾವುದೂ ಇಲ್ಲ” – ರವೀಂದ್ರನಾಥ ಠಾಕೂರ್
“ನಾನು ಸ್ವಾಮೀಜಿಯವರ ಕೃತಿಗಳನ್ನು ಅಮೂಲಾಗ್ರವಾಗಿ ಓದಿದ್ದೇನೆ. ಅವುಗಳ ಅಧ್ಯಯನದ ನಂತರ ಭಾರತದ ಬಗೆಗಿದ್ದ ನನ್ನ ಪ್ರೀತಿ ಸಾವಿರ ಪಾಲು ಹೆಚ್ಚಿತು” – ಮಹಾತ್ಮ ಗಾಂಧಿ
“ಸ್ವಾಮೀಜಿಯವರ ನುಡಿಗಳಿಂದ ನಮ್ಮ ದೇಶದ ಜನ ಹಿಂದೆಂದೂ ಕಾಣದ ಆತ್ಮ ಗೌರವವನ್ನೂ, ಆತ್ಮವಿಶ್ವಾಸವನ್ನೂ ಹಾಗೂ ಆತ್ಮಬಲವನ್ನೂ ಪಡೆದಿದ್ದಾರೆ” – ಸುಭಾಷ್ ಚಂದ್ರಬೋಸ್
“ಸ್ವಾಮಿ ವಿವೇಕಾನಂದರು ಸ್ವಾಭಾವಿಕವಾಗಿ ಅದ್ಭುತ ಪ್ರತಿಭಾಸಂಪನ್ನರು. ಅವರ ಬುದ್ಧಿ ವಿದ್ಯುದ್ವೇಗದಿಂದ ಸಂಚಾರ ಮಾಡತಕ್ಕದ್ದು; ಅದು ಒಮ್ಮೆ ಲೀಲೆಯಿಂದ ಸಮುದ್ರ ತಳಕ್ಕೆ ಧುಮುಕುವುದು; ಇನ್ನೊಮ್ಮೆ ಪಕ್ಷಿಯಂತೆ ಗಿರಿಶಿಖರಕ್ಕೆ ಹಾರುವುದು; ಮತ್ತೊಮ್ಮೆ ಹುಲ್ಲುಗಾವಲಿನ ಮೇಲೆ ಮಂದಮಾರುತದಂತೆ ಸುಳಿದಾಡುವುದು. ಒಂದು ತೀಕ್ಷ್ಣತೆ, ಒಂದು ಲಘುತೆ, ಒಂದು ಆವೇಶ, ಒಂದು ವಿಲಾಸ – ಇವು ಆ ಬುದ್ಧಿಯ ಗುಣಗಳು. ಅವರು ಸಂಸ್ಕೃತದಲ್ಲಿ ವ್ಯಾಕರಣ ತರ್ಕಶಾಸ್ತ್ರಗಳನ್ನು ಸಾಂಗವಾಗಿ ಅಭ್ಯಾಸ ಮಾಡಿದ್ದರು. ಹಾಗೆಯೇ ಇಂಗ್ಲಿಷಿನಲ್ಲಿ ಕಾವ್ಯ ಇತಿಹಾಸಗಳನ್ನೂ ವಿಜ್ಞಾನಶಾಸ್ತ್ರ ತತ್ವಮೀಮಾಂಸೆಗಳನ್ನೂ ವಿಸ್ತಾರವಾಗಿ ಪರಾಮರ್ಶಿಸಿ ಸ್ವಾಧೀನಪಡಿಸಿಕೊಂಡಿದ್ದರು. ಈ ಉಭಯ ವಿದ್ಯಾಪ್ರಾವೀಣ್ಯಕ್ಕೆ ಅನುರೂಪವಾದ ವಾಗ್ಧೋರಣೆ, ತದನುಗುಣವಾದ ಉತ್ತಾಲಧ್ವನಿ, ಉನ್ನತವಾದ ವರ್ಚಸ್ವಿಯಾದ ಗಂಭೀರಾಕಾರ, ಸಕಲ ಜನಮನೋಗ್ರಾಹಿಯಾದ ಹಾಸ್ಯ ವಿನೋದ ರಸಿಕತೆ, ಹೃದಯ ವಿದ್ರಾವಕವಾದ ಗಾನಮಾಧುರ್ಯ ಇವೆಲ್ಲವೂ ಅವರಲ್ಲಿ ಸಮ್ಮಿಳಿತವಾಗಿದ್ದವು. ಈ ನಾನಾ ಗುಣಶಕ್ತಿಗಳಿಗೆ ಕಿರೀಟಪ್ರಾಯವಾಗಿದ್ದುದು ಶ್ರೀರಾಮಕೃಷ್ಣ ಪರಮಹಂಸ ಗುರುಗಳ ಅನುಗ್ರಹ.” - ಡಿ.ವಿ.ಜಿ.
“ಸ್ವಾಮೀಜಿಯವರ ತಪಃಪೂರ್ಣವಾದ ಶಕ್ತಿವಾಣಿ ಒಂದು ಅಮೃತದ ಮಡು! ಇದರಲ್ಲಿ ಮಿಂದರೆ ಪುನೀತರಾಗುತ್ತೇವೆ. ಇದು ಜ್ಯೋತಿಯ ಖನಿ. ಹೊಕ್ಕರೆ ಪ್ರಬುದ್ಧರಾಗುತ್ತೇವೆ” – ಕುವೆಂಪು.
ಸ್ವಾಮಿ ವಿವೇಕಾನಂದರ ಬಗ್ಗೆ ನಾವು ಹೇಳುವುದಕ್ಕಿಂತ ಅವರನ್ನು ಕೇಳುವುದೇ ಸರಿಯಾದದ್ದು. ಬನ್ನಿ ರಾಷ್ಟ್ರಕವಿ ಕುವೆಂಪು ಅವರು ಹೇಳುವ ಹಾಗೆ, ಅವರು ನಮಗೆ ನೀಡಿರುವ ಜ್ಞಾನ ಜ್ಯೋತಿಯ ಖನಿಯಲ್ಲಿ ಒಂದಷ್ಟು ಹೊಕ್ಕು ಪ್ರಬುದ್ಧತೆಯನ್ನು ಬೇಡೋಣ. ಈ ಭಕ್ತಿಭಾವಗಳೊಂದಿಗೆ ಸ್ವಾಮಿ ವಿವೇಕಾನಂದರ ಹಲವು ಮನೋಜ್ಞ ಮಾತುಗಳನ್ನು ತಮ್ಮೊಡನೆ ನೆನಪಿಸಿಕೊಳ್ಳ ಬಯಸುತ್ತೇನೆ.
• ಯಾವುದಕ್ಕೂ ಅಂಜದಿರು; ಅದ್ಭುತ ಕಾರ್ಯವನ್ನು ಮಾಡಲು ಶಕ್ತನಾಗುವೆ. ಭೀತಿಯೇ ಪ್ರಪಂಚದ ಎಲ್ಲ ದುಃಖಗಳಿಗೂ ಮಹತ್ಕಾರಣ. ನಮ್ಮ ದುರವಸ್ಥೆಗಳಿಗೆಲ್ಲಾ ಭೀತಿಯೇ ಕಾರಣ. ನಿರ್ಭೀತಿ ಕ್ಷಣಮಾತ್ರದಲ್ಲಿ ಸ್ವರ್ಗವನ್ನೇ ಕೊಡಬಲ್ಲದು. ಎದ್ದು ನಿಲ್ಲು, ಜಾಗೃತನಾಗು ಮತ್ತು ಗುರಿ ತಲುಪುವವರೆಗೂ ನಿಲ್ಲದಿರು.
• ನಿಮ್ಮೊಬ್ಬರ ಮೇಲೇ ಸಮಸ್ತ ಕೆಲಸವೂ ಬಿದ್ದಿದೆಯೇನೋ ಎಂಬಂತೆ ನೀವು ಪ್ರತಿಯೊಬ್ಬರೂ ಕೆಲಸ ಮಾಡಿ. ಐವತ್ತಕ್ಕೂ ಹೆಚ್ಚು ಶತಮಾನಗಳು ನಿಮ್ಮನ್ನು ನೋಡುತ್ತ ನಿಂತಿವೆ. ಭಾರತದ ಭವಿಷ್ಯ ನಿಮ್ಮನ್ನು ಅವಲಂಬಿಸಿದೆ. ಕೆಲಸಮಾಡಿಕೊಂಡು ಹೋಗಿ.
• ಧರ್ಮದ ರಹಸ್ಯವಿರುವುದು ಸಿದ್ಧಾಂತಗಳಲ್ಲಲ್ಲ. ಅದರ ಅನುಷ್ಠಾನದಲ್ಲಿ. ಒಳ್ಳೆಯವರಾಗಿರುವುದು, ಒಳ್ಳೆಯದನ್ನು ಮಾಡುವುದು – ಇದೇ ಧರ್ಮದ ಸರ್ವಸ್ವ.
• ಮಾನವನಲ್ಲಿ ಈಗಾಗಲೇ ಅಡಗಿರುವ ದೈವತ್ವವನ್ನು ಪ್ರಕಾಶಪಡಿಸುವುದೇ ಧರ್ಮ.
• ಪ್ರಾಣಿಸಹಜ ವ್ಯಕ್ತಿಯನ್ನು ಮನುಷ್ಯನನ್ನಾಗಿಸಿ, ಮನುಷ್ಯನನ್ನು ದೇವರನ್ನಾಗಿಸುವ ಭಾವನೆಯೇ ಧರ್ಮ.
• ಯಾರಿಗೆ ತನ್ನಲ್ಲಿ ತನಗೇ ನಂಬಿಕೆಯಿಲ್ಲವೋ ಅವನು ನಾಸ್ತಿಕ. ಹಳೆಯ ಧರ್ಮಗಳು ಹೇಳಿದವು, ದೇವರನ್ನು ನಂಬದವನು ನಾಸ್ತಿಕ ಎಂದು. ಹೊಸ ಧರ್ಮವು ಹೇಳುತ್ತದೆ, ಯಾರಿಗೆ ತನ್ನಲ್ಲಿ ನಂಬಿಕೆಯಿಲ್ಲವೋ ಅವನು ನಾಸ್ತಿಕ ಎಂದು.
• ಈ ಜಗತ್ತಿನ ಇತಿಹಾಸ ಆತ್ಮಶ್ರದ್ಧೆಯನ್ನು ಹೊಂದಿದ್ದ ಕೆಲವೇ ವ್ಯಕ್ತಿಗಳ ಇತಿಹಾಸ. ಆ ಶ್ರದ್ಧೆ ಅಂತರಂಗದ ದಿವ್ಯತೆಯನ್ನು ಬಡಿದೆಬ್ಬಿಸುತ್ತದೆ. ಆಗ ನೀವೇನನ್ನು ಬೇಕಾದರೂ ಸಾಧಿಸಬಲ್ಲಿರಿ.
• ನೀವು ಯಶಸ್ಸನ್ನು ಪಡೆಯಲು ದೃಢ ಪ್ರಯತ್ನಬೇಕು, ಅಪಾರ ಇಚ್ಚಾಶಕ್ತಿ ಬೇಕು. ‘ನಾನು ಸಮುದ್ರವನ್ನೇ ಪಾನಮಾಡುತ್ತೇನೆ’, ಎಂದು ಪ್ರಯತ್ನಶೀಲನು ಹೇಳುತ್ತಾನೆ. ‘ನನ್ನ ಸಂಕಲ್ಪದ ಮುಂದೆ ಪರ್ವತಗಳೇ ಪುಡಿಪುಡಿಯಾಗುತ್ತವೆ’ ಎನ್ನುತ್ತಾನವನು. ಇಂತಹ ಶಕ್ತಿಯನ್ನೂ ಛಾತಿಯನ್ನೂ ಪಡೆಯಿರಿ; ಕಷ್ಟಪಟ್ಟು ದುಡಿಯಿರಿ, ನೀವು ಗುರಿ ಸೇರುವುದು ನಿಶ್ಚಯ.
• ಪ್ರತಿಯಾಗಿ ಏನನ್ನೂ ಬಯಸಬೇಡಿ. ನೀವು ಹೆಚ್ಚು ಕೊಟ್ಟಷ್ಟೂ ನಿಮಗೇ ಹೆಚ್ಚು ಬರುತ್ತದೆ.
• ವಿಕಾಸವೇ ಜೀವನ; ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ; ಸ್ವಾರ್ಥವೆಲ್ಲಾ ಸಂಕೋಚ; ಆದುದರಿಂದ ಪ್ರೇಮವೇ ಬದುಕಿನ ಧರ್ಮ.
• ಬುದ್ಧಿ ಶ್ರೇಷ್ಠವಾದುದು ನಿಜ. ಆದರ ಕಾರ್ಯವ್ಯಾಪ್ತಿ ಸೀಮಿತವಾದುದು. ಸ್ಫೂರ್ತಿ ಉಂಟಾಗುವುದು ಹೃದಯದ ಮೂಲಕ; ಹೃದಯವೇ ಸ್ಫೂರ್ತಿಯ ಮೂಲ.
• ವತ್ಸ, ಪ್ರೀತಿಗೆ ಸೋಲೆಂಬುದಿಲ್ಲ; ಇಂದೋ ನಾಳೆಯೋ ಅಥವಾ ಯುಗಾಂತರವೋ ಸತ್ಯ ಗೆದ್ದೇ ತೀರುವುದು. ಪ್ರೀತಿ ಖಂಡಿತ ಜಯ ಗಳಿಸುತ್ತದೆ. ನಮ್ಮ ಮಾನವಬಂಧುಗಳನ್ನು ನೀವು ಪ್ರೀತಿಸುತ್ತೀರೇನು?
• ಜೀವನಾವಧಿ ಅಲ್ಲ, ಪ್ರಾಪಂಚಿಕ ವಿಷಯಗಳೆಲ್ಲ ಕ್ಷಣಿಕ. ಆದರೆ ಯಾರು ಇತರರಿಗಾಗಿ ಬಾಳುತ್ತಾರೋ ಅವರೇ ನಿಜವಾಗಿ ಬಾಳುತ್ತಾರೆ. ಉಳಿದವರು ಜೀವನ್ ಮೃತರು.
• ಎದ್ದೇಳಿ ಕಾರ್ಯೋನ್ಮುಖರಾಗಿ, ಈ ಜೀವನವಾದರೂ ಎಷ್ಟು ಕಾಲ? ನೀವು ಈ ಜಗತ್ತಿಗೆ ಬಂದ ಮೇಲೆ ಏನಾದರೂ ಗುರುತನ್ನು ಬಿಟ್ಟು ಹೋಗಿ, ಅದಿಲ್ಲದಿದ್ದರೆ ನಿಮಗೂ ಮರಕಲ್ಲುಗಳಿಗೂ ಏನು ವೆತ್ಯಾಸ? ಅವೂ ಅಸ್ತಿತ್ವಕ್ಕೆ ಬರುತ್ತವೆ, ನಶಿಸಿ ನಿರ್ನಾಮವಾಗುತ್ತವೆ.
• ಪರಹಿತಕ್ಕಾಗಿ ನಿಮ್ಮ ಜೀವನವನ್ನು ಮುಡಿಪಾಗಿಡಿ. ನೀವು ತ್ಯಾಗಜೀವನವನ್ನು ಆರಿಸಿಕೊಳ್ಳುವುದಾದರೆ ಸೌಂದರ್ಯ, ಹಣ, ಅಧಿಕಾರಗಳ ಕಡೆ ತಿರುಗಿಯೂ ನೋಡಬೇಡಿ.
• ಎಲ್ಲವನ್ನೂ ದೂರ ಎಸೆಯಿರಿ. ನಿಮ್ಮ ಮುಕ್ತಿಯ ಬಯಕೆಯನ್ನು ಕೂಡ. ಇತರರಿಗೆ ಸಹಾಯಮಾಡಿ.
• ನಮಗೆ ತ್ಯಾಗ ಮಾಡುವ ಧೈರ್ಯ ಬೇಕಾದರೆ ನಾವು ಉದ್ವೇಗವಶರಾಗಕೂಡದು. ಉದ್ವೇಗ ಕೇವಲ ಪ್ರಾಣಿಗಳಿಗೆ ಸೇರಿದ್ದು. ಪ್ರಾಣಿಗಳು ಸಂಪೂರ್ಣವಾಗಿ ಉದ್ವೇಗದ ಅಧೀನದಲ್ಲಿರುವುವು.
• ಆದರ್ಶದಿಂದ ಕೂಡಿದ ವ್ಯಕ್ತಿ ಒಂದು ಸಾವಿರ ತಪ್ಪುಗಳನ್ನು ಮಾಡಿದರೆ, ಆದರ್ಶವಿಲ್ಲದ ವ್ಯಕ್ತಿಯು ಐವತ್ತು ಸಾವಿರ ತಪ್ಪುಗಳನ್ನು ಮಾಡುತ್ತಾನೆ. ಆದ್ದರಿಂದ ಆದರ್ಶವನ್ನು ಇಟ್ಟುಕೊಳ್ಳುವುದು ಒಳ್ಳೆಯದು.
• ಜೀವನವೆಂಬುದು ಕಠಿಣ ಸತ್ಯ. ಧೈರ್ಯವಾಗಿ ಅದನ್ನು ಎದುರಿಸಿ. ನಿಮ್ಮ ಮಾರ್ಗದಲ್ಲಿ ಮುಂದುವರೆಯಿರಿ. ಅದು ಅಭೇದ್ಯವಾಗಿರಬಹುದು. ಆದರೆ ಆತ್ಮ ಅದಕ್ಕಿಂತ ಬಲಯುತವಾದುದು.
• ಈ ಪ್ರಪಂಚ ಒಂದು ದೊಡ್ಡ ಗರಡಿ ಮನೆ. ನಾವಿಲ್ಲಿ ಬಲಿಷ್ಠರಾಗುವುದಕ್ಕೆ ಬಂದಿದ್ದೇವೆ.
• ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
• ಹೇಡಿಗಳು ಮಾತ್ರ, ಬಲಹೀನರು ಮಾತ್ರ ಪಾಪವನ್ನು ಮಾಡುವುದು ಮತ್ತು ಸುಳ್ಳನ್ನು ಹೇಳುವುದು ಎಂಬುದನ್ನು ನೆನಪಿನಲ್ಲಿಡಿ. ಧೀರರು ಯಾವಾಗಲೂ ನೀತಿವಂತರಾಗಿರುತ್ತಾರೆ. ಧೀರರಾಗಿ, ನೀತಿವಂತರಾಗಿ , ಸಹಾನುಭೂತಿಯುಳ್ಳವರಾಗಿ.
• ಸತ್ಯನಿಷ್ಠೆ, ಪವಿತ್ರತೆ ಮತ್ತು ನಿಸ್ವಾರ್ಥತೆ ಈ ಮೂರು ಯಾರಲ್ಲಿರುತ್ತದೆಯೋ ಅವರನ್ನು ಈ ಜಗತ್ತಿನ ಯಾವ ಶಕ್ತಿಯೂ ನಿಗ್ರಹಿಸಲಾರದು. ಇವುಗಳಿಂದ ಸಂಪನ್ನನಾದವನು ಇಡೀ ಜಗತ್ತಿನ ವಿರೋಧವನ್ನೇ ಎದುರಿಸಬಲ್ಲ.
• ಮೊದಲು ಚಾರಿತ್ರ್ಯವನ್ನು ಬೆಳೆಸಿ. ನೀವು ಮಾಡಬೇಕಾದ ಅತ್ಯುನ್ನತ ಕರ್ತವ್ಯ ಇದು.
• ಮನಸ್ಸನ್ನು ಶಕ್ತಿಯುತವೂ, ಶಿಸ್ತುಬದ್ದವೂ ಆಗಿಸುವುದರಲ್ಲಿಯೇ ಜ್ಞಾನದ ಮೌಲ್ಯವಿರುವುದು.
• ಉನ್ನತ ಆಲೋಚನೆಗಳಿಂದ, ಅತ್ಯುನ್ನತ ಆದರ್ಶಗಳಿಂದ ನಿಮ್ಮ ಮಿದುಳನ್ನು ತುಂಬಿ; ಅವುಗಳನ್ನು ಹಗಲಿರುಳೂ ನಿಮ್ಮ ಮುಂದಿರಿಸಿಕೊಳ್ಳಿ. ಇದರಿಂದ ಮಹತ್ಕಾರ್ಯ ಉದ್ಭವಿಸುತ್ತದೆ.
• ನಿಮ್ಮ ಪಾಲಿಗೆ ಬಂದ ಕರ್ತವ್ಯವನ್ನು ಮಾಡಿ ನೀವು ಶುದ್ಧ ಚಾರಿತ್ರ್ಯವನ್ನು ರೂಢಿಸಿಕೊಳ್ಳಬೇಕು. ಕರ್ತವ್ಯವನ್ನು ಮಾಡಿದರೆ ಕರ್ತವ್ಯಭಾರದಿಂದ ಪಾರಾಗುತ್ತೇವೆ.
• ಪ್ರತಿಯೊಬ್ಬ ವ್ಯಕ್ತಿಯೂ, ಪ್ರತಿಯೊಂದು ರಾಷ್ಟ್ರವೂ ಶ್ರೇಷ್ಠತೆಯನ್ನು ಪಡೆಯಲು ಮೂರು ಸಂಗತಿಗಳು ಅವಶ್ಯಕ:
1.ಒಳಿತಿನ ಶಕ್ತಿಯಲ್ಲಿ ದೃಢನಂಬಿಕೆ
2.ಮಾತ್ಸರ್ಯ ಹಾಗೂ ಅಪನಂಬಿಕೆಗಳಿಲ್ಲದಿರುವಿಕೆ
3.ಒಳ್ಳೆಯವರಾಗಲು, ಒಳಿತನ್ನು ಮಾಡಲು ಪ್ರಯತ್ನಿಸುವವರಿಗೆ ಸಹಾಯ ಮಾಡುವಿಕೆ.
• ನಮಗೆ ನಾವೇ ಕೇಡನ್ನುಂಟುಮಾಡಿಕೊಳ್ಳದಿದ್ದರೆ, ಜಗತ್ತಿನ ಯಾವ ಶಕ್ತಿಯೂ ನಮಗೆ ಕೇಡನ್ನುಂಟುಮಾಡಲಾರದು ಎಂಬುದು ನಿಶ್ಚಯ.
• ನಮ್ಮ ದುಃಖಗಳಿಗೆಲ್ಲ ನಾವೇ ಜವಾಬ್ಧಾರರು. ಮತ್ತಾರೂ ಅಲ್ಲ. ನಮ್ಮ ಅದೃಷ್ಟವನ್ನು ರೂಪಿಸಿಕೊಳ್ಳುವವರು ಸ್ವತ: ನಾವೇ ಆಗಿರುತ್ತೇವೆ.
• ನಿಮಗಾಗಿ ಏನನ್ನೂ ಬಯಸಬೇಡಿ. ಎಲ್ಲವನ್ನೂ ಇತರರಿಗಾಗಿ ಮಾಡಿ. ಭಗವಂತನಲ್ಲೇ ಇರುವುದು ಅವನಲ್ಲೇ ಬಾಳುವುದು, ಚಲಿಸುವುದು ಎಂದರೆ ಇದೇ.
• ಯಾರ ಸಹಾಯಕ್ಕೂ ಕಾದು ಕುಳಿತುಕೊಳ್ಳಬೇಡಿ. ಎಲ್ಲ ಮಾನವ ಸಹಾಯಕ್ಕಿಂತಲೂ ಭಗವಂತನು ಅನಂತಪಾಲು ಮಿಗಿಲಲ್ಲವೆ?
• ಇತರರಿಗೆ ತಿಳಿಯದೆ ಅವರನ್ನು ನಿಂದಿಸುವುದು ಮಹಾಪರಾಧ ಎಂಬುದನ್ನು ತಿಳಿಯಿರಿ. ಇದನ್ನು ನೀವು ಸಂಪೂರ್ಣ ತ್ಯಜಿಸಬೇಕು.
• ನೀವು ದ್ವೇಷ ಮತ್ತು ಅಸೂಯೆಗಳನ್ನು ಹೊರಸೂಸಿದರೆ ಅವುಗಳು ಚಕ್ರಬಡ್ಡಿ ಸಮೇತ ನಿಮಗೇ ಹಿಂತಿರುಗುತ್ತವೆ. ಯಾವುದೇ ಶಕ್ತಿಯೂ ಅದನ್ನು ತಡೆಯಲಾರದು. ಒಮ್ಮೆ ನೀವು ಅವುಗಳನ್ನು ಚಲಿಸುವಂತೆ ಮಾಡಿದರೆ ಅದರ ದುಷ್ಪರಿಣಾಮವನ್ನು ನೀವು ಅನುಭವಿಸಲೇಬೇಕು. ನೀವಿದನ್ನು ನೆನಪಿನಲ್ಲಿಟ್ಟರೆ ದುಷ್ಕಾರ್ಯಗಳಿಂದ ಪಾರಾಗಬಹುದು.
• ನಿಮ್ಮೊಳಗಿರುವುದನ್ನು ಪ್ರಯತ್ನಪೂರ್ವಕವಾಗಿ ಹೊರಹೊಮ್ಮಿಸಿ. ಆದರೆ ಅನುಕರಿಸಬೇಡಿ. ಇತರರಿಂದ ಒಳ್ಳೆಯದನ್ನೆಲ್ಲವನ್ನೂ ಸ್ವೀಕರಿಸಿ.
• ಇತರರಿಗೆ ಸ್ವಾತ್ಯಂತ್ರ್ಯವನ್ನು ಕೊಡಲು ಇಚ್ಚಿಸದವನು ಸ್ವಾತ್ಯಂತ್ರ್ಯಕ್ಕೆ ಯೋಗ್ಯನಲ್ಲವೇ ಅಲ್ಲ.
• ವೈಯಕ್ತಿಕವಾಗಿ ಯಾರೊಬ್ಬರನ್ನು ಪ್ರೀತಿಸುವುದೂ ಬಂಧನ. ಎಲ್ಲರನ್ನೂ ಸಮಾನವಾಗಿ ಪ್ರೀತಿಸಿ. ಆಗ ಎಲ್ಲ ಆಸೆಗಳೂ ಬಿದ್ದುಹೊಗುತ್ತವೆ.
• ಮಹಾಮೂರ್ಖನು ಕೂಡ ತನ್ನ ಹೃದಯಕ್ಕೆ ಒಪ್ಪಿಗೆಯಾಗುವಂತಹ ಕಾರ್ಯವನ್ನು ಸಾಧಿಸಬಲ್ಲ. ಆದರೆ ಯಾರು ಯಾವುದೇ ಕೆಲಸವನ್ನಾದರೂ ತನಗೆ ರುಚಿಸುವಂತೆ ಪರಿವರ್ತಿಸಬಲ್ಲನೋ ಅವನೇ ಬುದ್ಧಿವಂತನು.
• ಮೊದಲು ಆಳಾಗುವುದನ್ನು ಕಲಿಯಿರಿ. ಆಗ ನಾಯಕನ ಅರ್ಹತೆ ನಿಮಗೆ ಬರುತ್ತದೆ.
• ಒಂದು ಸಾಮಾನ್ಯ ಕೆಲಸವನ್ನೂ ಅತ್ಯುತ್ತಮವಾಗಿ ಮಾಡುವುದರಿಂದ ಶ್ರೇಷ್ಠ ಪ್ರತಿಫಲ ದೊರಕುತ್ತದೆ.
• ದೈಹಿಕವಾಗಿ ಮತ್ತು ಮಾನಸಿಕವಾಗಿ ವ್ಯಕ್ತಿಯು ಪರಿಶುದ್ಧನಾಗಿರದಿದ್ದರೆ ಅವನು ದೇವಸ್ಥಾನಕ್ಕೆ ಹೋಗುವುದು ಮತ್ತು ದೇವರನ್ನು ಪೂಜಿಸುವುದು ಯಾವ ಪ್ರಯೋಜನಕ್ಕೂ ಬಾರದು.
• ನೀವು ಆಧ್ಯಾತ್ಮೀಕರಾಗದೆ ಭಾರತದ ಪುನರುದ್ಧಾರ ಅಸಾಧ್ಯ. ಇದನ್ನು ಗಮನದಲ್ಲಿಟ್ಟುಕೊಳ್ಳಿ;
• ಅವಿದ್ಯಾವಂತರಿಗೆ ಬೆಳಕು ತನ್ನಿ, ವಿದ್ಯಾವಂತರಿಗೆ ಹೆಚ್ಚು ಬೆಳಕು ತನ್ನಿ. ಏಕೆಂದರೆ ವಿದ್ಯಾಮಧ ಇಂದು ಹೆಚ್ಚು ಭಯಂಕರವಾಗಿದೆ.
 
"ಉತ್ತಿಷ್ಠತ ಜಾಗ್ರತ ಪ್ರಾಪ್ಯ ವರಾನ್ನಿಭೋಧತ" - ಎಚ್ಚರಗೊಳ್ಳಿ, ಜಾಗೃತರಾಗಿ, ಎಲ್ಲಕ್ಕಿಂತ ಮಹತ್ವವಾದುದಕ್ಕೆ ನಿಮ್ಮನ್ನು ಅನುವುಗೊಳಿಸಿಕೊಳ್ಳಿ.
ಸ್ವಾಮಿ ವಿವೇಕಾನಂದರ ದಿವ್ಯಚರಣಗಳಿಗೆ ಸಾಷ್ಟಾಂಗ ನಮನಗಳು
 
ಭೂಕಾಲ/ದೇಹಕಾಲ (Earth time/Body-time) ಎಂದರೆ ನಾವು ಈ ಭೂಮಿಯ ಮೇಲೆ ಮಾನವ ಶರೀರವನ್ನು ಪಡೆದು ಕಳೆಯುವ ಸಮಯ. ಈ ಸಮಯದಲ್ಲಿ ನಾವು ಸ್ವಚ್ಛವಲ್ಲದ, ಸ್ಪಷ್ಟವಲ್ಲದ, ಮಸುಕಾದ ಅನುಭವಗಳನ್ನು ಪಡೆಯುತ್ತೇವೆ. ನಮ್ಮ ನೈಜಸ್ವಭಾವವನ್ನು ನಾವು ಮರೆತುಬಿಡುತ್ತೇವೆ. ಇದೆಲ್ಲವು ಕೇವಲ ಲೋಕದಾಟದಲ್ಲಿ ಪುಳಕಿತಗೊಳ್ಳುವಂಥ ಅನುಭವಕ್ಕಾಗಿಯೇ ಮಾಡುತ್ತೇವೆ.
 
ಈ ಪ್ರಪಂಚವು ಒಂದು ರಂಗಭೂಮಿಯಿದ್ದಂತೆ. ನಾವೆಲ್ಲರೂ ಕೇವಲ ಪಾತ್ರಧಾರಿಗಳು. ನಮ್ಮ ಪಾತ್ರವನ್ನು ನಟಿಸಿ ಹೊರಡುತ್ತೇವೆ. ನಾವು ಮೊಳಕೆಯೊಡೆದು ನಮ್ಮ ತನವನ್ನು ಪಸರಿಸುತ್ತೇವೆ.
 
ನಾವು ಮಾನವ ಶರೀರವನ್ನು ಧರಿಸಿ ರಂಗಭೂಮಿಯನ್ನು ಏರುವುದು ವಿಭಿನ್ನ ಪಾತ್ರಾಭಿನಯಕ್ಕಾಗಿ, ವಿಭಿನ್ನ ಅಭಿಪ್ರಾಯಗಳಿಂದ ವಿವಿಧ ಅನುಭವಗಳನ್ನು ಪಡೆದು ವಿವಿಧ ರೋಮಾಂಚಕ ವಿನೋದಭರಿತ ಆಟ ಆಡಲೆಂದು. ಇಲ್ಲಿ ಯಾವ ಪಾತ್ರವೂ ಇನ್ನೊಂದು ಪಾತ್ರಕ್ಕಿಂತ ಉತ್ಕೃಷ್ಟವಾದದ್ದಲ್ಲ. ನಾವೆಲ್ಲ ಕೇವಲ ಪಾತ್ರಧಾರಿಗಳು ಅಷ್ಟೇ!
 
ಈ ಪ್ರಪಂಚವು ಒಂದು ನಾಟಕರಂಗ. ಇದೊಂದು ಜಗನ್ನಾಟಕ. ನಾವೆಲ್ಲ ನಟನಟಿಯರು. ನಮ್ಮ ಪಾತ್ರಾಭಿನಯ ಮುಗಿದ ನಂತರ ಹೊರಡಲೇಬೇಕು. ಪುನಃ ಬರುತ್ತೇವೆ. ಹೀಗೆ ಎಷ್ಟೋ ಬಾರಿ ಬರುತ್ತಿರುತ್ತೇವೆ. ‘ಪುನರಪಿ ಜನನಂ ಪುನರಪಿ ಮರಣಂ, ಪುನರಪಿ ಜನನಂ ಪುನರಪಿ ಮರಣಂ.’
 
ವೈಜ್ನಾನಿಕವಾಗಿ ಭೂಮಿಯ ಪವಿತ್ರತೆ:-
"https://kn.wikipedia.org/wiki/ಸದಸ್ಯ:Srinivas_ujire" ಇಂದ ಪಡೆಯಲ್ಪಟ್ಟಿದೆ