ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೮೨ ನೇ ಸಾಲು:
 
===ಕುಮಾರಸ್ವಾಮಿಯವರ ಮಂತ್ರಿಮಂಡಲ ರಚನೆ===
*ಬಿ.ಎಸ್ ಯಡಿಯೂರಪ್ಪನವರು ಬಹುಮತ ಸಾಬೀತು ಪಡಿಸಲು ವಿಫಲರಾದ ನಂತರ ರಾಜ್ಯ ಪಾಲರ ಆಹ್ವಾನದಂತೆ, ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ದಿ.23 ಮೇ, 2018 ರಂದು ಬುಧವಾರ ಸಂಜೆ 4.30ಕ್ಕೆ, ದೇವರು ಮತ್ತು ಕನ್ನಡ ನಾಡಿನ ಜನರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಮತ್ತು ಕೊರಟಗೆರೆ ಶಾಸಕ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಹಿರಿಯ ನಾಯಕಿ ಸೋನಿಯಾ ಗಾಂಧಿ, ಕೇರಳ ಸಿಎಂ ಪಿಣರಾಯಿ ವಿಜಯನ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಬಿಎಸ್‌ಪಿ ನಾಯಕಿ ಮಾಯಾವತಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶರದ್‌ ಯಾದವ್‌, ಗುಲಾಬ್‌ ನಬೀ ಅಜಾದ್‌, ಚಂದ್ರಬಾಬು ನಾಯ್ಡು, ಸೀತಾರಾಂ ಯೆಚೂರಿ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇಶದ ಹೊಸ ಒಕ್ಕೂಟದ ಆರಂಭಕ್ಕೆ ಸಾಕ್ಷಿಯಾಯಿತು.<ref>[http://www.prajavani.net/news/article/2018/05/23/574729.html ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣವಚನ; 23 May, 2018]</ref> ವಿಧಾನ ಸಭೆಯಲ್ಲಿ ಬಹುಮತ ಸಾಬೀತು ಅದ ನಂತರ ಮಂತ್ರಿಮಂಡಳದ ವಿಸ್ತರಣೆಮಾಡುವ ಸೋಚನೆ ನೀಡಿದರು. ಬಹುಮತ ಸಾಬೀತುಪಡಿಸಲು ಮೇ, 25 ರಂದು (ಶುಕ್ರವಾರ) ವಿಧಾನಸಭಾ ಅಧಿವೇಶನ ಕರೆಯಲಾಗಿದೆ. <ref>[http://www.prajavani.net/news/article/2018/05/24/574784.html ಮಹಾಮೈತ್ರಿಗೆ ನಾಂದಿ; 24 May, 2018]</ref>
 
==ಆಯ್ಕೆಯಾದ ಸದಸ್ಯರ ಪಟ್ಟಿ==