ಚಾಮುಂಡೇಶ್ವರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಲೇಖನಕ್ಕೆ ಮತ್ತಷ್ಟು ವಿಷಯಗಳನ್ನು ಸೇರಿಸಲಾಗಿದೆ.
೩೭ ನೇ ಸಾಲು:
==ಮೈಸೂರಿನ ಅಧಿದೇವತೆಯಾಗಿ==
*ಈಕೆಯು ಮೈಸೂರಿನ ಅಧಿದೇವತೆ, ಸಪ್ತಮಾತೃಕೆಯರಲ್ಲಿ ಏಳನೆಯವಳು. ಹಿಂದೂ ಧರ್ಮದಲ್ಲಿ, '''ಚಾಮುಂಡೇಶ್ವರಿ''' ಪ್ರಬಲವಾದ ದೇವತೆ. "ಚಾಮುಂಡಿ" ಎಂದೊಡನೆ ಈಕೆ ಶಿಷ್ಟ ಪುರಾಣದ ವಿಶಿಷ್ಟ ಶಕ್ತಿದೇವತೆ. ಆದಿಶಕ್ತಿಯಾಗಿ ಹುಟ್ಟಿ ದುಷ್ಟ ಶಿಕ್ಷಕಿ-ಶಿಷ್ಟರಕ್ಷಕಿಯಾಗಿ ಮಹಿಷೂರಿನ ಮಹಿಷನನ್ನು ಕೊಂದು, ಲೋಕ ಕಂಟಕರಾಗಿದ್ದ ಚಂಡ-ಮುಂಡರೆಂಬ ರಕ್ಕಸರನ್ನು ಸಂಹರಿಸಿ 'ಚಾಮುಂಡಿ'ಯಾಗಿದ್ದಾಳೆಂಬುದು ತಿಳಿಯುತ್ತದೆ.
* ಈಕೆ- ಷೋಡಶಿ, ಅಂಬೆ, ಈಶ್ವರಿ, ಚಂಡಿ, ಕಾಳಿ, ಭಗವತೀ, ಮಹೇಶ್ವರಿ, ಮಹಾದೇವಿ, ತ್ರಿಪುರ ಸುಂದರಿ, ದುರ್ಗೆ ಮುಂತಾದ ಹಲವು ಹೆಸರುಗಳಿಂದ ಕರೆಯಲ್ಪಡುತ್ತಾಳೆ. ಚಾಮುಂಡಿ ಮಹಿಷಮಂಡಲವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡು ಮಹಾಬಲಗಿರಿಯ ಮೇಲೆ ನೆಲೆಗೊಂಡಿ ದ್ದಾಳೆ. ಚಾಮುಂಡಿ ಬೆಟ್ಟವು ಸಮುದ್ರಮಟ್ಟಕ್ಕಿಂತ ಸುಮಾರು-೩೪೮೯ಅಡಿ ಎತ್ತರದಲ್ಲಿದೆ.
* ಮೈಸೂರಿನ [[ದೊಡ್ಡದೇವರಾಜ ಒಡೆಯರ್]] ಅವರು ಬೆಟ್ಟವನ್ನೇರಲು ಬರುವ ಭಕ್ತಾದಿಗಳಿಗೆ ಅನುಕೂಲವಾಗಲೆಂದುಅನುಕೂಲ ವಾಗಲೆಂದು ೧೧೦೧ ೧೦೦೦ಮೆಟ್ಟಲುಗಳನ್ನುಮೆಟ್ಟಿಲುಗಳನ್ನು ಕಟ್ಟಿಸಿ, ೭೦೦ನೇ ಮೆಟ್ಟಿಲ ಬಳಿ ಬೃಹತ್ [[ನಂದಿ ವಿಗ್ರಹ]]ವನ್ನು ಸ್ಥಾಪಿಸಿದ್ದಾರೆ. ಆಶ್ವಯುಜ ಶುಕ್ಲಪಕ್ಷದ ನವರಾತ್ರಿಯ ಸಮಯದಲ್ಲಿ ಭಾರತಾದಾದ್ಯಂತ ಚಾಮುಂಡಿ ಆರಾಧನೆ "ದುರ್ಗೆ"ಯ ಹೆಸರಿನಲ್ಲಿ ಬಹಳ ವೈಭವಯುತವಾಗಿ ನಡೆಯುತ್ತದೆ.
*ನವರಾತ್ರಿ ದಿನಗಳಲ್ಲಿ ಅಷ್ಟಲಕ್ಷ್ಮೀಯರ, ಅಷ್ಟದುರ್ಗೆಯರ ಆರಾಧನೆಯನ್ನು ಚಾಮುಂಡಿ ಬೆಟ್ಟದಲ್ಲಿರುವ ದೇಗುಲದಲ್ಲಿ ಮಾಡಲಾಗುತ್ತದೆ. ನವ ದಿನವು ದೇವಿಗೆ ವಿಶಿಷ್ಟವಾದ ಅಲಂಕಾರಗಳನ್ನು, ಉಡುಗೆ-ತೊಡುಗೆ, ಆಭರಣಗಳಿಂದ ಚಾಮುಂಡೇಶ್ವರಿಯನ್ನು ಸಿಂಗರಿಸಿ ಭಕ್ತವೃಂದಕ್ಕೆ ಸಂತಸವನ್ನು ನೀಡುತ್ತಾರೆ.
 
೪೫ ನೇ ಸಾಲು:
 
==ಪುರಾಣ ಹಿನ್ನೆಲೆ==
* ಪುರಾಣವೊಂದರ ಪ್ರಕಾರ-ಬ್ರಹ್ಮನ ವರಬಲದಿಂದ ಮದೋನ್ಮತ್ತನಾಗಿದ್ದ "ಮಹಿಷಾಸುರ"ನ ಸಂಹಾರ ಮಾಡಲು, ದೇವತೆಗಳೆಲ್ಲ ತಮ್ಮ ಶರೀರದ ಒಂದೊಂದು ಅಂಶವನ್ನು ತೆಗೆದು ಆದಿಶಕ್ತಿಯನ್ನು ಸೃಷ್ಟಿ ಮಾಡಿ, ಮಹಿಷನ ಮೇಲೆ ಯುದ್ದಕ್ಕೆ ಕಳುಹಿಸಿ ಅವನನ್ನು ಸಂಹಾರ ಮಾಡಲು ನೆರವಾಗುತ್ತಾರೆ.
* ಹತ್ತು ದಿನಗಳಲ್ಲಿ ಸಪ್ತಮಾತೃಕೆಯರ ನೆರವಿನಿಂದ ಮಹಿಷನನ್ನು ಶಕ್ತಿ ಮತ್ತು ಯುಕ್ತಿಯಿಂದ ಕೊಲ್ಲುತ್ತಾಳೆ. ಆದುದರಿಂದಲೇ ಹತ್ತನೇಯ ದಿನ ವಿಜಯದಶಮಿಯನ್ನು ಆಚರಿಸುವುದು ರೂಢಿಯಾಗಿದೆ.
*ಮಹಿಷನನ್ನು ಕೊಂದ ನಂತರ ಚಾಮುಂಡಿ ಯುದ್ದದಿಂದಾದ ಶರೀರದ ಆಯಾಸವನ್ನು ನೀಗಿಸಿ ಕೊಳ್ಳಲು, [[ನಂಜನಗೂಡಿ]]ನ ಕಪಿಲಾ ನದಿ ತಟಕ್ಕೆ ಬಂದು, ಮಧ್ಯರಾತ್ರಿಯಲ್ಲಿ ಸ್ನಾನ ಮಾಡಿ, ತನ್ನ ತಲೆಗೂದಲನ್ನು ಹರವಿ ಒಣಗಿಸುತ್ತಾ ಇರಬೇಕಾದರೆ, ರಾತ್ರಿ ಸಂಚಾರಕ್ಕೆ ಬಂದ ಶಿವ, ಈಕೆಯಲ್ಲಿ ಅನುರಕ್ತನಾಗುತ್ತಾನೆ. ಶಿವನಿಗೆ ವಿವಾಹವಾಗಿರುವುದರ ಅರಿವಿರದ ಚಾಮುಂಡಿ ತಾನೂ ಕೂಡ ಶಿವನಲ್ಲಿ ಅನುರಕ್ತಳಾಗುತ್ತಾಳೆ.
* ತದ ನಂತರ ಈ ಸುದ್ದಿ ಶಿವನ ಧರ್ಮಪತ್ನೀಯಾದ ಪಾರ್ವತಿಗೆ ಗೊತ್ತಾಗಿ ಅವಳು ಚಾಮುಂಡಿಯೊಂದಿಗೆ ಜಗಳವಾಡುತ್ತಾಳೆ. ಚಾಮುಂಡಿ-ಗೌರಿಯರ ಜಗಳ ಜನಪದ ಸಾಹಿತ್ಯದಲ್ಲಿ ನಿಚ್ಚಳವಾಗಿ ದಾಖಲಾಗಿದೆ. ಪಾರ್ವತಿಯ ಮಾತಿನಿಂದ ಮುಖಭಂಗಗೊಂಡ ಚಾಮುಂಡಿ ಮೈಸೂರಿಗೆ ಬರುವ ಹಾದಿಯಲ್ಲಿ ಆಕಸ್ಮಿಕವಾಗಿ ಸುತ್ತೂರಿನೆಡೆಗೆ ಸಾಗುತ್ತಿದ್ದ ಮಹದೇಶ್ವರನ ಬಳಿ ಹೋಗಿ ಪ್ರೇಮಭಿಕ್ಷೆ ಬೇಡುತ್ತಾಳೆ.
* ಇದರಿಂದ ಕಂಗಾಲಾದ[[ ಮಹದೇಶ್ವರ]] ಏನೊಂದು ಮಾತನಾಡದೆ ಚಾಮುಂಡಿಯಿಂದ ತಪ್ಪಿಸಿಕೊಳ್ಳಲು ಬಿರಬಿರನೆಬಿರ ಬಿರನೆ ನಡೆದು ಹೋಗುತ್ತಾನೆ. ಪಟ್ಟು ಬಿಡದ ಚಾಮುಂಡಿಯು ಆತನನ್ನು ಹಿಂಬಾಲಿಸಿದಾಗ, ಮಹದೇಶ್ವರ ಆಕೆಯಿಂದ ತಪ್ಪಿಸಿಕೊಳ್ಳಲು ಎಪ್ಪತ್ತೇಳು ಮಲೆಯಲ್ಲಿ ನೆಲೆಸಿದನಂತೆ. ನಂತರ ಚಾಮುಂಡಿ ಬೆಟ್ಟದ ಮೇಲೆ ನೆಲೆಸಿದಳಂತೆ. ಇವಳನ್ನು ಸಿಂಹವಾಹಿನಿಯೆಂದು ಪುರಾಣಗಳಲ್ಲಿ ಬಣ್ಣಿಸಲಾಗಿದೆ.
 
==ಶಿಷ್ಟಪುರಾಣಗಳಲ್ಲಿ ಚಾಮುಂಡಿ==
* ಶಿಷ್ಟಪುರಾಣಗಳಾದ-"ಸ್ಕಂದ ಪುರಾಣ, ವರಾಹ ಪುರಾಣ, ಶ್ರೀದೇವಿ ಭಾಗವತ, ಕಾಳಿಕಾ ಪುರಾಣ, ವಿಷ್ಣು ಧರ್ಮೋತ್ತರ ಪುರಾಣ, ಸನತ್ಕುಮಾರ ಶಿಲ್ಪರತ್ನ ಪುರಾಣ ,ಮಾರ್ಕಂಡೇಯ ಪುರಾಣ"-ಮುಂತಾದ ಗ್ರಂಥಗಳು ಅಲ್ಪ-ಸ್ವಲ್ಪ ಪಾಠಾಂತರಗಳೊಂದಿಗೆ ಚಾಮುಂಡಿಯ ಪುರಾಣ ವನ್ನುವಿಶದಪಡಿಸಿವೆ.
* ಚಾಮುಂಡಿಯ ವೀರೋಚಿತಕಥೆಗಳನ್ನು, ಪ್ರಣಯ ಪ್ರಸಂಗವನ್ನು "ನೀಲಗಾರರು, ದೇವರಗುಡ್ಡರು, ಹೆಳವರು, ತಂಬೂರಿಯವರು, ಜನಪದ ಮಹಿಳೆಯರು "ವಿವರವಾಗಿ ಭಕ್ತಿಯಿಂದ ಹಾಡುತ್ತಾರೆ.
 
==ಜನಪದ ಕಥೆಯ ಪ್ರಕಾರಗಳು==
Line ೫೮ ⟶ ೬೦:
 
==ಇತಿಹಾಸದಲ್ಲಿ ಚಾಮುಂಡಿ==
* ಮೈಸೂರಿನ ಚರಿತ್ರೆಯ ಪ್ರಕಾರ ಈಕೆ ಐತಿಹಾಸಿಕ ವೀರವನಿತೆ. ಅಪಾರ ಧೈರ್ಯಶಾಲಿನಿ. ಮೈಸೂರು ಒಡೆಯರ ಕುಲದೇವತೆ, ರಕ್ಷಣಾದೇವತೆ, ಅಧಿದೇವತೆಯಾಗಿದ್ದಾಳೆ. ಈಕೆಯ ಕಾಲ ಸುಮಾರು-೧೬ನೇ ಶತಮಾನವೆಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. * ಮಹಿಷ ಮಂಡಲ/ಮಹಾಬಲ ಬೆಟ್ಟ/ ಚಾಮುಂಡಿಬೆಟ್ಟವಾಗಲು ಹಲವು ಕಾಲಾಂತರಗಳಾಗಿವೆ.ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. * ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ಯದು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ ದೇವಸ್ಥಾನ ಸೇರಿದಂತೆ ನಗರದಲ್ಲಿ ನಿರ್ಮಿಸಿದ ಸುಂದರ ದೇವಾಲಯಗಳು ಅತ್ಯಂತ ವಿಸ್ತೃತವಾಗಿವೆ.
* ನಂತರ ಬೆಟ್ಟದ ಚಾಮರಾಜ ಒಡೆಯರ್ ಎಂದು ಕರೆಯಲ್ಪಡುವ ಪ್ರಸಿದ್ಧ ರಾಜ ತಮ್ಮ ಆಳ್ವಿಕೆಯಲ್ಲಿ ಕೋಟೆಯನ್ನು, ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದ್ದರು. ನಂತರ ಮಹಿಷೂರು, ಅಂತಿಮವಾಗಿ ಮೈಸೂರಾಗಿ ಬದಲಾಯಿತು.
* ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣವನ್ನು ಮೈಸೂರಿಗೆ ಸ್ಥಳಾಂತರಿಸಲಾಯಿತು. ಹೀಗೆ ರಾಜ ಒಡೆಯರ್ ಆಳ್ವಿಕೆಯಲ್ಲಿ, ಮೈಸೂರು ತನ್ನ ವೈಭವವನ್ನು ಮರಳಿ ಪಡೆಯಿತು.
 
==ಉಲ್ಲೇಖಗಳು==
"https://kn.wikipedia.org/wiki/ಚಾಮುಂಡೇಶ್ವರಿ" ಇಂದ ಪಡೆಯಲ್ಪಟ್ಟಿದೆ