ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೧ ನೇ ಸಾಲು:
ನೀರಾವರಿ ಈ ಕ್ಷೇತ್ರದ ಬಹು ದೊಡ್ಡ ಬಲವಾದರೆ, ನೀರಾವರಿ ಹಾಗೂ ವಿದ್ಯುತ್‌ ಯೋಜನೆಗಳಿಗೆ ಭೂಮಿ ಕಳೆದುಕೊಂಡು ಸಂತ್ರಸ್ತರ ಸಮಸ್ಯೆಯೇ ಇಲ್ಲಿನ ಬಲಹೀನತೆ. ಕೃಷ್ಣಾ ನದಿಗೆ ನಿರ್ಮಿಸಿರುವ ಲಾಲಬಹದ್ದೂರ ಶಾಸ್ತ್ರಿ ಜಲಾಶಯ ಇರುವುದು ಇದೇ ಕ್ಷೇತ್ರದ ಆಲಮಟ್ಟಿಯಲ್ಲಿ. ಸಂತ್ರಸ್ತರ ಪುನರ್ವಸತಿ ಕೇಂದ್ರಗಳು ಅಭಿವೃದ್ಧಿಗೆ ಕಾಯುತ್ತಿವೆ. ಈಚೆಗಷ್ಟೇ ತಲೆ ಎತ್ತಿರುವ ದೇಶಕ್ಕೆ ಬೆಳಕು ನೀಡುವ ಮಹತ್ವಾಕಾಂಕ್ಷೆಯ ಎನ್‌ಟಿಪಿಸಿ [[ಕೂಡಗಿ]] ಯೋಜನೆ ಕೂಡ ಈ ಕ್ಷೇತ್ರದಲ್ಲೇ ಇದೆ. ಪರಿಸರಕ್ಕೆ ಹಾನಿ ಎಂಬ ಕಾರಣಕ್ಕೆ ಈ ಯೋಜನೆ ವಿರೋಧಿಸಿ ರೈತರು ಗುಂಡೇಟು ತಿಂದಿದ್ದು, ನೂರಾರು ರೈತರು ಜೈಲು ಪಾಲಾಗಿ ಕೋರ್ಟ್‌ ಅಲೆಯುತ್ತಿದ್ದರು. ಈಚೆಗಷ್ಟೇ ಈ ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವ ಮೂಲಕ ಸರ್ಕಾರ ರೈತರಿಗೆ ಸಂಕಷ್ಟದಿಂದ ಮುಕ್ತಿ ನೀಡಿದೆ.
 
ಇಂಥ ನೆಲಕ್ಕೆ ಒಂದೂವರೆ ದಶಕದ ಹಿಂದೆ ಕಾಲಿಟ್ಟವರು ತಿಕೋಟಾ ಕ್ಷೇತ್ರದಲ್ಲಿ ಜನತಾದಳ ಹಾಗೂ ಬಿಜೆಪಿಯಿಂದ ಎರಡು ಬಾರಿ ಶಾಸಕರಾಗಿದ್ದ ಶಿವಾನಂದ ಪಾಟೀಲ. ಈ ಕ್ಷೇತ್ರದಿಂದಲೂ ಮೂರು ಬಾರಿ ಶಾಸಕರಾಗಿರುವ ಶಿವಾನಂದ ಪಾಟೀಲ ಅವರು ಐದು ಬಾರಿ ಶಾಸಕರಾದರೂಶಾಸಕರಾಗಿ ಸಚಿವರಾಗುವ ಕನಸು ಈಡೇರಿಲ್ಲಸಚಿವರಾಗಿದ್ದಾರೆ.ಇದೇ ಕ್ಷೇತ್ರದಿಂದ ಸೋಮನಗೌಡ(ಅಪ್ಪು) ಪಾಟೀಲ ಅವರ ತಂದೆ ಬಿ.ಎಸ್‌.ಪಾಟೀಲ(ಮನಗೂಳಿ) ಅವರನ್ನು 6 ಬಾರಿ ಆಯ್ಕೆ ಮಾಡಿದ್ದ ಕ್ಷೇತ್ರದ ಮತದಾರರು, ಅವರು ಸಚಿವರಾಗಲು ನೆರವಾಗಿದ್ದರು.
 
ಮಾಜಿ ಸಿಎಂ ಬಂಗಾರಪ್ಪ ಅವರ ಕೆಸಿಪಿ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಸಂಗಪ್ಪ ಕಲ್ಲಪ್ಪ ಬೆಳ್ಳುಬ್ಬಿ ಬಿಜೆಪಿ ಸೇರುವ ಮೂಲಕ ಬಸವನಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್‌ ಭದ್ರಕೋಟೆ ಛಿದ್ರಗೊಳಿಸಿ ಎರಡು ಬಾರಿ ಗೆದ್ದವರು. ತಮ್ಮ ಮೂಲಕ ಬಿಜೆಪಿ ಖಾತೆ ತೆರೆದ ಎಸ್‌.ಕೆ. ಬೆಳ್ಳುಬ್ಬಿ ಅಪ್ಪಟ ಹಳ್ಳಿ ಸೊಗಡಿನ ರಾಜಕೀಯ ನಾಯಕ. ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಪಂಚಾಯಿತಿ ಮಟ್ಟದಿಂದಲೇ ವಿಧಾನಸಭೆ ತನಕ ರಾಜಕಾರಣದಲ್ಲಿ ಯಶಸ್ಸು ಕಂಡವರು. 1978ರಲ್ಲಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾದ ಬೆಳ್ಳುಬ್ಬಿ, 1983ರಲ್ಲಿ ಕೊಲ್ಹಾರ ಗ್ರಾಪಂ ಅಧ್ಯಕ್ಷರಾಗಿದ್ದರು. 1987ರಲ್ಲಿ ಮಂಡಲ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿ ಮಂಡಲ ಪ್ರಧಾನ ಹುದ್ದೆಯನ್ನೂ ಗಿಟ್ಟಿಸಿಕೊಂಡರು. 1994ರಲ್ಲಿ ಕೆಸಿಪಿ ಪಕ್ಷದಿಂದ ಬಸವನಬಾಗೇವಾಡಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸುವ ಮೊದಲ ಪ್ರಯತ್ನ ಫಲಿಸಲಿಲ್ಲ. ಮತ್ತೆ 1999ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಬೆಳ್ಳುಬ್ಬಿ ಶಾಸಕರಾಗಿ ಆಯ್ಕೆಯಾದರು. 2008ರಲ್ಲಿ 2ನೇ ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಕೆಲ ತಿಂಗಳು ಮಂತ್ರಿಸ್ಥಾನವನ್ನೂ ಅಲಂಕರಿಸಿದ್ದರು. 2004 ಹಾಗೂ 2013ರ ಚುನಾವಣೆಯಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.