ಅಷ್ಟಾದಶ ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪೨ ನೇ ಸಾಲು:
*ಹೆಚ್ಚುಕಡಿಮೆಗೆಡೆಗೊಡದಂತೆ ದೊರೆ ದಂಡಶಕ್ತಿಯನ್ನು ನಿರ್ಭಯದಿಂದ ಬಳಸಿದರೆ ಮಾತ್ರ ಪ್ರಜೆಗಳು ದುರ್ಮಾರ್ಗಿಗಳಾಗುವುದಿಲ್ಲ. ಧರ್ಮರೂಪದ ದಂಡಶಕ್ತಿ ಯಿರುವುದು ಬಲಿಷ್ಠರು ದುರ್ಬಲರನ್ನು ಶೋಷಿಸದಂತೆ ನೋಡಿಕೊಳ್ಳಲೆಂದು. ಇಡೀ ರಾಜ್ಯಕ್ಕೆ ರಾಜನು ನಿಯಮಿಸುವ ನೌಕರರೇ ಆಧಾರ. ಧರ್ಮಜ್ಞರ ಸಲಹೆಯಂತೆಯೇ ಆತ ಆಡಳಿತ ನಡೆಸಬೇಕು-ಎಂಬುದು ಪ್ರಸ್ತುತಪುರಾಣದ ರಾಜಧರ್ಮದ ಮುಖ್ಯಾಂಶ.
===ಗರುಡ ಪುರಾಣ===
*ಗರುಡ ಮಹಾಪುರಾಣವೊಂದು ಸಂಪೂರ್ಣ ವೈಷ್ಣವಪುರಾಣ. ಗರುಡನಿಗಿದನ್ನು ಮೊದಲು ವಿಷ್ಣು ಹೇಳಿದನೆಂದೂ ಆ ಬಳಿಕ ಗರುಡ ಇದನ್ನು ಕಶ್ಯಪಮುನಿಗೆ ಹೇಳಿದನೆಂದೂ ಆದುದುರಿಂದಆದುದರಿಂದ ಇದಕ್ಕೀ ನಾಮಧೇಯ ಬಂದಿತೆಂದೂ ಉಲ್ಲೇಖಿಸಲಾಗಿದೆ. ಸೃಷ್ಟಿಕ್ರಮ, ಯುಗಚಕ್ರ, ವಂಶಾವಳಿ ಮುಂತಾದ ಪೌರಾಣಿಕ ವಿಷಯಗಳೊಟ್ಟಿಗೇ ವಿಷ್ಣುಪೂಜೆ, ವೈಷ್ಣವ ಧರ್ಮಕರ್ಮ, ಪವಿತ್ರಸ್ಥಳ, ಪಂಚಬ್ರಹ್ಮದೇವತಾರ್ಚನೆ ಮುಂತಾದ ವಿಷಯಗಳೂ ಇದರಲ್ಲಿವೆ. ಕೆಲಮಟ್ಟಿಗಿದು ಅಗ್ನಿಪುರಾಣದಂತೆಯೇ ವಿಶ್ವಕೋಶ ಲಕ್ಷಣವುಳ್ಳದ್ದು.
*ಇದರಲ್ಲಿ ರಾಮಾಯಣ, ಮಹಾಭಾರತ, ಹರಿವಂಶಗಳ ಕತೆಗಳಲ್ಲದೆ, ಸೃಷ್ಟಿವಿವರಣೆ, ಖಗೋಲವಿಚಾರ, ಜ್ಯೋತಿಶಾಸ್ತ್ರದ ಅಂಶ, ಶಕುನಶಾಸ್ತ್ರ, ಸಾಮುದ್ರಿಕ ಶಾಸ್ತ್ರ, ರತ್ನಪರೀಕ್ಷೆ, ರಾಜನೀತಿ, ಯಾಜ್ಞವಲ್ಕ್ಯ ಸ್ಮೃತಿಗನುಗುಣವಾದ ಧರ್ಮವಿವೇಕ ಮೊದಲಾದ ನಾನಾ ಜ್ಞಾನಾಂಗಗಳು ತುಂಬಿಕೊಂಡಿದೆ. ಈ ಪುರಾಣದ ಉತ್ತರಖಂಡವನ್ನು ಎರಡನೆಯ ಭಾಗ ಅಥವಾ ಪ್ರೇತಕಲ್ಪ ಎನ್ನುತ್ತಾರೆ.
*ಪ್ರೇತಕಲ್ಪದಲ್ಲಿ ಸತ್ತಮೇಲೆ ಜೀವಾತ್ಮನಿಗೊದಗುವ ಗತಿ, ಕರ್ಮ,ಪುನರ್ಜನ್ಮ, ಮೋಕ್ಷ, ಸಂಸಾರಬೀಜವಾಗಿರುವ ಆಸೆ, ಮರಣಶಕುನ ಯಮಲೋಕಮಾರ್ಗ, ಪ್ರೇತಗಳ ಗತಿ, ನರಕಹಿಂಸೆ, ಸ್ವಪ್ನ, ಅಪಶಕುನಗಳನ್ನುಂಟು ಮಾಡುವ ಪ್ರೇತಗಳು, ಮರಣಪೂರ್ವದ ಕರ್ಮ, ಸಾಯುತ್ತಿರುವ ಮತ್ತು ಸತ್ತವರ ಬಗ್ಗೆ ಮಾಡತಕ್ಕ ಕರ್ಮ, ಉತ್ತರಕ್ರಿಯೆ, ಪಿತೃಪೂಜೆ, ಸತೀವಿಧಿ, ಗಯಾಮಾಹಾತ್ಮ್ಯ ಇತ್ಯಾದಿ ವಿವಿಧ ವಿಷಯಗಳ ವಿವರಗಳಿವೆ.
*ಈ ಪುರಾಣದ ಪ್ರಾಚೀನ ಮೂಲದ ಕಾಲ ಪ್ರ.ಶ. 3-4ನೆಯ ಶತಮಾನವಾಗಿರಬಹುದಾದರೂ ಸದ್ಯದ ರೂಪದ ಅವಧಿ ಪ್ರ.ಶ. 10ನೆಯ ಶತಮಾನಕ್ಕಿಂತ ಹಿಂದಿನದಲ್ಲವೆಂದು ತರ್ಕಿಸಲಾಗಿದೆ. ಬ್ರಹ್ಮನ ಬಾಯಿಗಳಿಂದ ಹೊರಬಿದ್ದ ವೇದಗಳಲ್ಲಿ ಹೇಳಿದ ಕರ್ಮಗಳನ್ನು ಮಾಡಲಾರದವ ಸ್ಮೃತಿ ಹೇಳಿದ ಕರ್ಮಗಳನ್ನಾದರೂ ಮಾಡಬೇಕು. ಅದೂ ಆಗದವ ನಡೆದುಬಂದ ಸದಾಚಾರವನ್ನು ಹಿಡಿಯಬೇಕು. ರಾಜನಿಲ್ಲದ ರಾಜ್ಯದಲ್ಲಿ ಇರಬಾರದು. ರಾಜ ವಿಷ್ಣುವಿನ ಮಾನಸಪುತ್ರ. ಆತ ಪ್ರಜೆಗಳನ್ನು ಮಕ್ಕಳಂತೆ ಪಾಲಿಸಬೇಕು.
*ಅವನ ಆಳಿಕೆ ಸತ್ಯ, ನ್ಯಾಯಬದ್ಧವಾಗಿರಬೇಕು. ಇಂಥ ಶೀಲವುಳ್ಳ ದೊರೆ ಜಗತ್ತಿಗೆ ಭೂಷಣಪ್ರಾಯ, ದುರ್ಬಲನಿಗಿರುವ ಮಹಾಬಲ-ಎಂದು ಮುಂತಾಗಿ ಗರುಡಮಹಾಪುರಾಣ ಬೋಧಿಸುತ್ತದೆ. ಗರುಡ ಪುರಾಣದ ಸಾರವನ್ನು ಮಿಕ್ಕ ಪುರಾಣಗಳ ಅಂಶದೊಂದಿಗೆ ಸಾರೋದ್ಧಾರ ಎಂಬ ಹೆಸರಿನಲ್ಲಿ ನೌನಿಧಿರಾಮನೆಂಬಾತ ಸಂಗ್ರಹಿಸಿರುವುದಿಲ್ಲಿ ಸ್ಮರಣೀಯ.
 
===ಬ್ರಹ್ಮಾಂಡ ಪುರಾಣ===
*ವಾಯು ಮಹಾಪುರಾಣದ ಹಳೆಯ ಪಾಠವೆಂದು ಅನುಮಾನಿಸಲಾಗಿದೆ. ಏಕೆಂದರೆ ಇದನ್ನು ವಾಯವೀಯ ಬ್ರಹ್ಮಾಂಡ ಎಂದು ಕರೆದಿದೆ, ಕೂರ್ಮಮಹಾಪುರಾಣ. ಮತ್ಸ್ಯಪುರಾಣದ ಪ್ರಕಾರ ಇದನ್ನು ಹೇಳಿದವನು ಬ್ರಹ್ಮ. ಈ ಹೆಸರಿನ 12,200 ಶ್ಲೋಕಗಳುಳ್ಳ ಪ್ರಾಚೀನಮಹಾಪುರಾಣ ಕಳೆದುಹೋಗಿರಬೇಕು. ಏಕೆಂದರೆ ಉಪಲಬ್ಧ ಪ್ರತಿಯಲ್ಲಿ ಕೇವಲ ಮಾಹಾತ್ಮ್ಯಗಳೂ ಸ್ತೋತ್ರಗಳೂ ಉಪಾಖ್ಯಾನಗಳೂ ಇವೆ. ಪಾರ್ಗಿಟರ್ಗೆ ದೊರೆತ ಇದರ ಹಸ್ತಪ್ರತಿಯೊಂದರಲ್ಲಿಯ ಪೂರ್ವಾರ್ಧ ವಾಯುಪುರಾಣಕ್ಕೆ ಸಂಪೂರ್ಣ ಸಮವಾಗಿದೆ.
"https://kn.wikipedia.org/wiki/ಅಷ್ಟಾದಶ_ಪುರಾಣಗಳು" ಇಂದ ಪಡೆಯಲ್ಪಟ್ಟಿದೆ