ಚಂದ್ರಶೇಖರ ವೆಂಕಟರಾಮನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೮ ನೇ ಸಾಲು:
ಡಾ.ರಾಮನ್, ೬, ಮೇ, ೧೯೦೭ ರಲ್ಲಿ 'ಲೋಕಸುಂದರಿ ಅಮ್ಮಾಳ್'ಎಂಬ ಹುಡಿಗಿಯೊಂದಿಗೆ ವಿವಾಹವಾದರು.(೧೮೯೨–೧೯೮೦ [೨೧]). 'ರಾಮನ್,' 'ಲೋಕಸುಂದರಿ ಅಮ್ಮಾಳ್' ದಂಪತಿಗಳಿಗೆ [[ಚಂದ್ರಶೇಖರ್]], ಮತ್ತು [[ರಾಧಾಕೃಷ್ಣನ್]], ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ.
 
==ರಾಮನ್ ಪರಿಣಾಮ (Raman effect)==
ಎಂಬ ತತ್ತ್ವವು ವಿಜ್ಞಾನಕ್ಕೆ ಸರ್ ಸಿ. ವಿ. ರಾಮನ್ ರ ಒಂದು ದೊಡ್ಡ ಕೊಡುಗೆಯಾಗಿದೆ. “ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಧರನ್ನಾಗಿ ಮಾಡಿತ್ತು'. ಅದು ಹೇಗೆ ಸಾಧ್ಯ ? ಎಂಬ ಪ್ರಶ್ನೆ ರಾಮನ್ ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ ವಿದೇಶ ಪ್ರಯಾಣದಲ್ಲಿದ್ದಾಗ ಕಡಲಿನ ನೀಲಿ ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತ ಹಡಗಿನತುಂಬ ಅಲೆದಾಡುತ್ತಿದ್ದರು. ಆಕಾಶದ ನೀಲಿ ಬಣ್ಣ ರಾಮನ್ ರ ಕುತೂಹಲ ಕೆರಳಿಸಿ ಪ್ರಯೋಗಕ್ಕೆ ತೊಡಗಿಸಿತು. ಹಾಗೇ ಬಗೆಬಗೆಯ ಹೂಗಳ ಬಣ್ಣದಿಂದಲೂ ಅವರು ಆಶ್ಚರ್ಯ ಚಕಿತರಾಗುತ್ತಿದ್ದರು. ವಾತಾವರಣದಲ್ಲಿಯ ಧೂಳಿನ ಕಣಗಳು ಬೆಳಕನ್ನು ಭಾಗಶಃ ಚದುರಿಸುವವು. ಹೀಗೆ ಬೆಳಕು ಚದುರಿದಾಗ, ಅದರ ಎಲ್ಲ ಬಣ್ಣಗಳೂ ಚದುರುವುವು. ಹೆಚ್ಚು ಚದುರದ ಕೆಂಪು ಬೆಳಕು ದಿಗಂತದ ಸಮೀಪ ಸೂರ್ಯಕಾಣುವ ಪ್ರದೇಶದಲ್ಲಿ ಪ್ರಜ್ವಲಿಸುವುದು. ಉಳಿದದ್ದು ಆಕಾಶಕ್ಕೆ ನೀಲಿ ಬಣ್ಣವನ್ನು ನೀಡುವುದು. ಬೆಳಕು ಚದುರುವಾಗ ಶಕ್ತಿಯ ಸ್ವೀಕಾರ ಅಥವಾ ದಾನ ಬೆಳಕಿನ ತರಂಗಾಂತರವನ್ನು ನಿರ್ದಿಷ್ಟವಾಗಿ ಬದಲಾಯಿಸುವ ಸಾಧ್ಯತೆ ಲಕ್ಷ್ಯದಲ್ಲೊಂದು ಮಾತ್ರ. ಎಂದರೆ ಒಂದು ಲಕ್ಷ ಬೆಳಕಿನ ಕಣಗಳು ಚದುರಿದಾಗ ಒಂದು ಮಾತ್ರ ರಾಮನ್ ಪರಿಣಾಮಕ್ಕೆ ಒಳಗಾಗುವುದು, ಎನ್ನುವ ವಿಚಾರ ಬೆಳಕಿಗೆ ಬಂತು. ಇದನ್ನೇ “ರಾಮನ್ ಪರಿಣಾಮ ” ಎಂದು ಕರೆಯಲಾಗುತ್ತದೆ. ಇದು ಅನ್ವಯಿಕ ಉಪಯುಕ್ತತೆಯುಳ್ಳ ತತ್ವ.<ref> [https://www.youtube.com/watch?v=xyqtTqSs5L0 'ರಾಮನ್ ಪರಿಣಾಮದ ಬಗ್ಗೆ ಯೂಟ್ಯೂಬ್'] </ref>
 
==ಟಾಟ ಇನ್ಸ್ಟಿ ಟ್ಯೂಟ್ ನ ನಿರ್ದೇಶಕರಾಗಿ==
೧೯೩೪ರಲ್ಲಿ '[[ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯುಟ್ ಆಫ್ ಸೈನ್ಸ್ ನ ನಿರ್ದೇಶಕ]],' ರಾಗಿ ಅಧಿಕಾರ ವಹಿಸಿಕೊಂಡ '[[ಡಾ. ರಾಮನ್]]', ತದನಂತರ ೧೯೪೩ರಲ್ಲಿ '[[ರಾಮನ್ ಸಂಶೋಧನಾ ಕೆಂದ್ರ]]'ವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರು. ಪ್ರೊ. ರಾಮನ್ ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವಾಗಿ ಮಾಡಿಕೊಂಡು “ರಾಮನ್ ರೀಸರ್ಚ್ ಇನ್ ಸ್ಟಿಟ್ಯೂಟ್ ” ಎಂಬ ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು ಅವರ ಜೀವಿತ ಕಾಲದಲ್ಲೇ ಸ್ಥಾಪಿಸಿ ಬಹಳಷ್ಟು ಸಂಶೋಧನೆಗಳನ್ನು ಮಾಡಿದರು. ಭಾವಿ ಸಂಶೋಧಕರಿಗೆ ಬಿಟ್ಟುಹೋಗಿರುವ ಈ ಸಂಸ್ಥೆ ವಿಶೇಷವಾಗಿ ಭೌತಶಾಸ್ತ್ರದ ಅತ್ಯಂತ ಪ್ರಮುಖ ಸಂಶೋಧನ ಸಂಸ್ಥೆಯಾಗಿದೆ.