ಹಿಮಾಲಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೩೧ ನೇ ಸಾಲು:
ಹಿಮಾಲಯ ಭೂಮಿಯ ಅತ್ಯಂತ ನವೀನ ಪರ್ವತಶ್ರೇಣಿಗಳಲ್ಲಿ ಒಂದು. ಸುಮಾರು ೨೫ ಕೋಟಿ ವರ್ಷಗಳ ಹಿಂದೆ "ಪ್ಯಾಂಜಿಯ" ಭೂಭಾಗ ಒಡೆದು ಇಂಡೋ-ಆಸ್ಟ್ರೇಲಿಯನ್ ಭೂಭಾಗ ಯೂರೇಷ್ಯನ್ ಭೂಭಾಗದತ್ತ ತೇಲಲಾರಂಭಿಸಿತು. ಸುಮಾರು ೪-೭ ಕೋಟಿ ವರ್ಷಗಳ ಹಿಂದೆ ಈ ಎರಡು ಭೂಭಾಗಗಳು ಒಂದಕ್ಕೊಂದು ಗುದ್ದಿದಾಗ ಹಿಮಾಲಯ ಪರ್ವತಗಳು ಸೃಷ್ಟಿಯಾದವು. ಸುಮಾರು ೨-೩ ಕೋಟಿ ವರ್ಷಗಳ ಹಿಂದೆ ಇಂದಿನ ಭಾರತದ ಪ್ರದೇಶದಲ್ಲಿದ್ದ ಟೆತಿಸ್ ಸಾಗರ ಸಂಪೂರ್ಣವಾಗಿ ಮುಚ್ಚಿ ಹೋಯಿತು. ಇಂಡೋ-ಆಸ್ಟ್ರೇಲಿಯನ್ ಭೂಭಾಗ ಇಂದಿಗೂ ನಿಧಾನವಾಗಿ ಟಿಬೆಟ್ ಭೂಭಾಗದ ಅಡಿಯಲ್ಲಿ ಚಲಿಸುತ್ತಿದೆ (ಸುಮಾರು ವರ್ಷಕ್ಕೆ ೨ ಸೆಮೀ), ಮತ್ತು ಮುಂದಿನ ಕೋಟಿ ವರ್ಷಗಳಲ್ಲಿ ಸುಮಾರು ೧೮೦ ಕಿಮೀ ನಷ್ಟು ಚಲಿಸಿರುತ್ತದೆ! ಈ ಚಲನೆಯಿಂದ ಹಿಮಾಲಯ ಶ್ರೇಣಿ ವರ್ಷಕ್ಕೆ ಅರ್ಧ ಸೆಮೀ ನಷ್ಟು ಬೆಳೆಯುತ್ತಿದೆ. ಇದೇ ಚಲನೆಯಿಂದ ಈ ಪ್ರದೇಶ ಸಾಕಷ್ಟು ಭೂಕಂಪಗಳನ್ನು ಸಹ ಕಂಡಿದೆ.
 
== ಭೂಗೋಳ ==
[[ಚಿತ್ರ:Himalayas.jpg|thumb|250px|left|ಟಿಬೆಟ್ ಪ್ರಸ್ಥಭೂಮಿಯ ದಕ್ಶಿಣಕ್ಕೆ ಹಿಮಾಲಯ ಪರ್ವತಗಳ ದೃಶ್ಯ]]
ಹಿಮಾಲಯ ಶ್ರೇಣಿ ಪಶ್ಚಿಮದಲ್ಲಿ "ನಂಗಾ ಪರ್ಬತ್" ಇಂದ ಪೂರ್ವದಲ್ಲಿ "ನಾಮ್ಚೆ ಬರ್ವಾ" ದ ವರೆಗೆ ಸುಮಾರು ೨೪೦೦ ಕಿಮೀ ಉದ್ದವಿದೆ. ಅಗಲ ೨೫೦-೩೦೦ ಕಿಮೀ. ಹಿಮಾಲಯಹಿಮಾಲಯn ಶ್ರೇಣಿಯಲ್ಲಿ ಸಮಾನಾಂತರವಾಗಿ ಸಾಗುವ ಮೂರು ವಿಭಿನ್ನ ಶ್ರೇಣಿಗಳನ್ನು ಕಾಣಬಹುದು:
* "ಉಪ-ಹಿಮಾಲಯ": ಇದನ್ನು ಭಾರತದಲ್ಲಿ "ಶಿವಾಲಿಕ್ ಹಿಲ್ಸ್ "ಎಂದು ಕರೆಯಲಾಗುತ್ತದೆ. ಈ ಶ್ರೇಣಿ ಅತ್ಯಂತ ಇತ್ತೀಚೆಗೆ ಸೃಷ್ಟಿಯಾದದ್ದು ಮತ್ತು ಸರಾಸರಿ ೧೨೦೦ ಮೀ ಎತ್ತರ ಹೊಂದಿದೆ. ಮುಖ್ಯವಾಗಿ, ಇನ್ನೂ ಬೆಳೆಯುತ್ತಿರುವ ಹಿಮಾಲಯ ಪರ್ವತಗಳಿಂದ ಜಾರುವ ಭೂಭಾಗದಿಂದ ಈ ಶ್ರೇಣಿ ಸೃಷ್ಟಿಯಾಗಿದೆ.
* "ಕೆಳಗಿನ ಹಿಮಾಲಯ": ಸರಾಸರಿ ೨೦೦೦-೫೦೦೦ ಮೀ ಎತ್ತರವಿದ್ದು ಇದು ಭಾರತದ [[ಹಿಮಾಚಲ ಪ್ರದೇಶ]], [[ನೇಪಾಳ]]ದ ದಕ್ಷಿಣ ಪ್ರದೇಶಗಳ ಮೂಲಕ ಸಾಗುತ್ತದೆ. [[ಡಾರ್ಜೀಲಿಂಗ್]], ಶಿಮ್ಲಾ, ನೈನಿತಾಲ್, ಮೊದಲಾದ ಭಾರತದ ಅನೇಕ ಪ್ರಸಿದ್ಧ ಗಿರಿಧಾಮಗಳು ಈ ಶ್ರೇಣಿಯಲ್ಲಿಯೇ ಇರುವುದು.
* "ಮೇಲಿನ ಹಿಮಾಲಯ": ಈ ಶ್ರೇಣಿ ಎಲ್ಲಕ್ಕಿಂತ ಉತ್ತರದಲ್ಲಿದ್ದು ನೇಪಾಳದ ಉತ್ತರ ಭಾಗಗಳು ಮತ್ತು ಟಿಬೆಟ್ ನ ದಕ್ಷಿಣ ಭಾಗಗಳ ಮೂಲಕ ಸಾಗುತ್ತದೆ. ೬೦೦೦ ಮೀ ಗಿಂತಲೂ ಹೆಚ್ಚಿನ ಸರಾಸರಿ ಎತ್ತರವನ್ನು ಹೊಂದಿರುವ ಈ ಶ್ರೇಣಿ ಪ್ರಪಂಚದ ಅತಿ ಎತ್ತರದ ಮೂರು ಶಿಖರಗಳನ್ನು ಒಳಗೊಂಡಿದೆ - ಎವರೆಸ್ಟ್, ಕೆ-೨, ಮತ್ತು ಕಾಂಚನಜುಂಗಾ.
[[ಚಿತ್ರ:yumthangnorth.jpg|thumb|right|ಸಿಕ್ಕಿಮ್ ನಲ್ಲಿ ಹಿಮಾಲಯದ ದೃಶ್ಯ]]
 
== ಹಿಮನದಿಗಳು ==
ಹಿಮಾಲಯ ಶ್ರೇಣಿಗಳಲ್ಲಿ ಅನೇಕ ಹಿಮನದಿಗಳನ್ನು (glacier) ಕಾಣಬಹುದು. ಧ್ರುವ ಪ್ರದೇಶಗಳನ್ನು ಬಿಟ್ಟರೆ ಪ್ರಪಂಚದ ಅತಿ ದೊಡ್ಡ ಹಿಮನದಿಯಾದ [[ಸಿಯಾಚೆನ್]] ಇಲ್ಲಿಯೇ ಇರುವುದು. ಇಲ್ಲಿರುವ ಹಿಮನದಿಗಳಲ್ಲಿ ಪ್ರಸಿದ್ಧವಾದ ಇತರ ಕೆಲವೆಂದರೆ [[ಗಂಗೋತ್ರಿ]], ಯಮುನೋತ್ರಿ, ನುಬ್ರಾ ಮತ್ತು ಖುಂಬು.
"https://kn.wikipedia.org/wiki/ಹಿಮಾಲಯ" ಇಂದ ಪಡೆಯಲ್ಪಟ್ಟಿದೆ