"ಉಷ್ಣತೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
==ಉಷ್ಣತೆ==
[[Image:171879main LimbFlareJan12 lg.jpg|300px|thumb|right|[[ಸೂರ್ಯ]]ನಿಂದ ಸಿಗುವ '''ಉಷ್ಣತೆ''' [[ಭೂಮಿಯ ಜೀವರಾಶಿ]]ಯ ಅಸ್ತಿತ್ವಕ್ಕೆ ಮತ್ತು ಬೆಳವಣಿಗೆಗೆ ಕಾರಣವಾದ ಮೂಲ [[ಶಕ್ತಿ]]. ಉಷ್ಣತೆಯ [[ವಿಙ್ಞಾನ]] ಮತ್ತು ಅದರ ಚಲನೆ/ಪರಿಣಾಮಗಳ ಅಧ್ಯಯನಕ್ಕೆ ಥರ್ಮೋಡೈನಾಮಿಕ್ಸ್ ಎನ್ನುತ್ತಾರೆ.[[ಉಷ್ಣತೆಯ ಪ್ರಸರಣ]]ವನ್ನು ಹಲವು ರೀತಿಯಿಂದ ಮಾಡಬಹುದು.]]
'''ಉಷ್ಣತೆ''' ಅಥವಾ "ಕಾವು" ಅಥವಾ "ಬಿಸಿ" ಅಥವಾ "ಉಷ್ಣ" ಒಂದು ಶಕ್ತಿರೂಪವುಶಕ್ತಿರೂಪವಾಗಿದೆ. [[ಭೌತಶಾಸ್ತ್ರ]] [[ಥೆರ್ಮೋಡೈನಾಮಿಕ್ಸ್]] ನಲ್ಲಿ ಇದನ್ನು ಶಕ್ತಿಯನ್ನು ಒಂದು ವಸ್ತು ಅಥವಾ ವ್ಯವಸ್ಥೆಯಿಂದ ಬೇರೆಡೆಗೆ ಪ್ರಸಾರಿಸುವ ಕ್ರಿಯೆಯೆಂದು ಅರ್ಥೈಸಲಾಗುತ್ತದೆ. ಒಂದು ವ್ಯವಸ್ಥೆಯಲ್ಲಿನ ಅಸಂಖ್ಯಾತ ಅಣುಗಳ ಚಲನೆಯ ಸಮಗ್ರ ಪರಿಣಾಮವಾಗಿ ಪ್ರಕಟವಾಗುವ ಶಕ್ತಿಯ ಒಂದು ರೂಪ. ಉಷ್ಣತಾವ್ಯತ್ಯಸವಿರುವ ಎರಡು ವ್ಯವಸ್ಥೆಗಳಲ್ಲಿ ಒಂದರಿಂದ ಇನ್ನೊಂದಕ್ಕೆ ವರ್ಗವಾಗುವ ಶಕ್ತಿಯೇ ಉಷ್ಣ. ಈ ವರ್ಗಾವಣೆ ಅಧಿಕ ಉಷ್ಣತೆಯ ಉಗಮದಿಂದ ಕಡಿಮೆ ಉಷ್ಣತೆಯ ಗ್ರಾಹಕದೆಡೆಗೆ ನಡೆಯುವುದು. ಉಷ್ಣಶಕ್ತಿಯ ಈ ಚಲನೆಗೆ ಉಷ್ಣವಹನವೆಂದು ಹೆಸರು. ಉಷ್ಣತೆಯಿಂದ ಶಕ್ತಿ ಪ್ರಸರಣವು ಔಷ್ಣ ಸಂಪರ್ಕದಿಂದಾಗುತ್ತದೆ. ಔಷ್ಣ ಸಂಪರ್ಕವೆಂದರೆ ವಸ್ತುವಿನ ಮೇಲೆ ಯಾವುದೇ ರೀತಿಯ ಬಲ ಪ್ರಯೋಗಿಸದೇ ಅದರಲ್ಲಿ ಶಕ್ತಿಯನ್ನು ರವಾನಿಸುವುದು ಅಥವಾ ಪ್ರಸರಿಸುವುದು.
ಅತ್ಯಂತ ಸಣ್ಣ ಪ್ರಮಾಣದ ಉಷ್ಣತೆ δQ ಯನ್ನು ತನ್ನ ಕನಿಷ್ಟ [[ತಾಪಮಾನ]] T (ಅಬ್ಸೊಲ್ಯೂಟ್ ಟೆಂಪೆರೇಚರ್), ಮತ್ತು [[ಔಷ್ಣೀಯ ಸ್ತಿತಿಸ್ಥಾಪಕತ್ವ]] (ಥರ್ಮಲ್ ಇಕ್ವಿಲಿಬ್ರಿಯಮ್) ದಲ್ಲಿರುವ ವಸ್ತುವಿಗೆ ರವಾನಿಸಿದರೆ, ಅ ಉಷ್ಣತೆಯ ಪ್ರಮಾಣವು TdS ಎಂದು ಪರಿಗಣಿಸಲ್ಪಡುತ್ತದೆ . ಇಲ್ಲಿ S ವಸ್ತುವಿನ "[[ಎಂಟ್ರೋಪಿ]]".
===ಉಷ್ಣ ಕಿರಣ ===
ಅದು ಆ ಕಾಯದಿಂದ ಅಥವಾ ಆ ಕಾಯಕ್ಕೆ ಉಷ್ಣಶಕ್ತಿ ಹರಿಯುವ ದಿಕ್ಕನ್ನು ನಿರ್ಧರಿಸುತ್ತದೆ .ಹಾಗಾಗಿ , ಇತರ ಕಾಯಗಳೊಂದಿಗೆ ಹೋಲಿಸಿದಾಗ ಮಾತ್ರ ತಾಪ ಎಂಬುದಕ್ಕೆ ಅರ್ಥವಿದೆ .ನೀರು ಹರಿಯವ ದಿಕ್ಕನ್ನು ಅದರ ಒತ್ತಡ ನಿರ್ಧರಿಸುವಂತೆ -ಯಾವಾಗಲೂ ಅಧಿಕ ಒತ್ತಡದಿಂದ ಕಡಿಮೆ ಒತ್ತಡದೆಡೆಗೆ .
ನಾವು ಯಾವುದೇ ಕಾಯವನ್ನು ಸ್ಪರ್ಷಿಸಿದಾಗ ಅದು ಬಿಸಿ ಎನಿಸಿದರೆ ಆ ಕಾಯದಿಂದ ನಮ್ಮ ದೇಹಕ್ಕೆ ಉಷ್ಣಶಕ್ತಿ ಹರಿದಿದೆ . ಆಗ ಆ ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಅಧಿಕವಾಗಿದೆ ಎಂದು ಹೇಳುತ್ತೇವೆ . ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಕಡಿಮೆ ಇದ್ದಾಗ ಉಷ್ಣಶಕ್ತಿ ನಮ್ಮ ದೇಹದಿಂದ ಅದಕ್ಕೆ ಹರಿಯುತ್ತದೆ .ಈ ರೀತಿಯ ಶಕ್ತಿ ಹರಿಯುವಿಕೇಯೇ ಉಷ್ಣ. ಅದು ಯಾವಾಗಲೂ ಬಿಸಿ ಕಾಯದಿಂದ ತಣ್ಣಗಿನ ಕಾಯಕ್ಕೆ ಹರಿಯುತ್ತದೆ . ಅದು ಹೀಗೇ ಏಕೆ ? ತಣ್ಣಗಿರುವ ಕಾಯದಿಂದ ಬಿಸಿ ಕಾಯದೆಡೆಗೆ ಯಾಕೆ ಹರಿಯಬಾರದು ? ಉದಾಹರಣೆಗೆ , ಸಂಪತ್ತನ್ನು ತೆಗೆದುಕೊಳ್ಳಿ. ಅದು ಯಾವಾಗಲೂ ಶ್ರೀಮಂತರಿಂದ ಬಡವರ ಕಡೆಗೆ ಮಾತ್ರ ಹರಿಯುತ್ತದೆಯೆ ?
 
==ಉಷ್ಣ ಮತ್ತು ಕೆಲಸ==
===ಉಷ್ಣಗತಿವಿಜ್ಞಾನದ (Thermodynamics) ಮೊದಲನೇ ನಿಯಮ===
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/853419" ಇಂದ ಪಡೆಯಲ್ಪಟ್ಟಿದೆ