"ಉಷ್ಣತೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಅದು ಆ ಕಾಯದಿಂದ ಅಥವಾ ಆ ಕಾಯಕ್ಕೆ ಉಷ್ಣಶಕ್ತಿ ಹರಿಯುವ ದಿಕ್ಕನ್ನು ನಿರ್ಧರಿಸುತ್ತದೆ .ಹಾಗಾಗಿ , ಇತರ ಕಾಯಗಳೊಂದಿಗೆ ಹೋಲಿಸಿದಾಗ ಮಾತ್ರ ತಾಪ ಎಂಬುದಕ್ಕೆ ಅರ್ಥವಿದೆ .ನೀರು ಹರಿಯವ ದಿಕ್ಕನ್ನು ಅದರ ಒತ್ತಡ ನಿರ್ಧರಿಸುವಂತೆ -ಯಾವಾಗಲೂ ಅಧಿಕ ಒತ್ತಡದಿಂದ ಕಡಿಮೆ ಒತ್ತಡದೆಡೆಗೆ .
ನಾವು ಯಾವುದೇ ಕಾಯವನ್ನು ಸ್ಪರ್ಷಿಸಿದಾಗ ಅದು ಬಿಸಿ ಎನಿಸಿದರೆ ಆ ಕಾಯದಿಂದ ನಮ್ಮ ದೇಹಕ್ಕೆ ಉಷ್ಣಶಕ್ತಿ ಹರಿದಿದೆ . ಆಗ ಆ ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಅಧಿಕವಾಗಿದೆ ಎಂದು ಹೇಳುತ್ತೇವೆ . ಕಾಯದ ತಾಪ ನಮ್ಮ ದೇಹದ ತಾಪಕ್ಕಿಂತ ಕಡಿಮೆ ಇದ್ದಾಗ ಉಷ್ಣಶಕ್ತಿ ನಮ್ಮ ದೇಹದಿಂದ ಅದಕ್ಕೆ ಹರಿಯುತ್ತದೆ .ಈ ರೀತಿಯ ಶಕ್ತಿ ಹರಿಯುವಿಕೇಯೇ ಉಷ್ಣ. ಅದು ಯಾವಾಗಲೂ ಬಿಸಿ ಕಾಯದಿಂದ ತಣ್ಣಗಿನ ಕಾಯಕ್ಕೆ ಹರಿಯುತ್ತದೆ . ಅದು ಹೀಗೇ ಏಕೆ ? ತಣ್ಣಗಿರುವ ಕಾಯದಿಂದ ಬಿಸಿ ಕಾಯದೆಡೆಗೆ ಯಾಕೆ ಹರಿಯಬಾರದು ? ಉದಾಹರಣೆಗೆ , ಸಂಪತ್ತನ್ನು ತೆಗೆದುಕೊಳ್ಳಿ. ಅದು ಯಾವಾಗಲೂ ಶ್ರೀಮಂತರಿಂದ ಬಡವರ ಕಡೆಗೆ ಮಾತ್ರ ಹರಿಯುತ್ತದೆಯೆ ?
 
===ಉಷ್ಣದ ಮೂಲಗಳು===
ಮನುಷ್ಯ ಕಂಡು ಹಿಡಿದ ಉಷ್ಣದ ಪ್ರಥಮ ಮೂಲ ಬೆಂಕಿ, ಚಳಿ ಹಾಗೂ ಕಾಡುಪ್ರಾಣಿಗಳಿಂದ ರಕ್ಷಣೆ: ಆಹಾರವನ್ನು ಬೇಯಿಸುವುದು; ಲೋಹೋಪಕರಣಗಳ ಹಾಗೂ ಆಯುಧಗಳ ತಯಾರಿಕೆ ಇತ್ಯಾದಿ ಕೆಲಸಗಳಲ್ಲಿ ಅವನಿಗೆ ಬೆಂಕಿಯ ಉಪಯೋಗವಿತ್ತು. ಉಷ್ಣಶಕ್ತಿಯ ಉತ್ಪಾದನೆ ಹಾಗೂ ಉದ್ದೇಶಪೂರಿತ ಬಳಕೆ ಇವುಗಳ ಪರಿಣಾಮವಾಗಿ ನಾಗರಿಕತೆ ಬೆಳೆಯುತ್ತ ಬಂದಿದೆ. ಮನುಷ್ಯನಿಗೆ ಉಷ್ಣದ ನೈಸರ್ಗಿಕ ಮೂಲ ಸೂರ್ಯ, ಖನಿಜವಸ್ತುಗಳಾದ ಕಲ್ಲಿದ್ದಲು, ಪೆಟ್ರೋಲುಗಳೂ ಕಟ್ಟಿಗೆ ಸೊಪ್ಪುಸದೆಗಳೂ ಉಷ್ಣಮೂಲಗಳೇ ಆದರೂ ಅಂತಿಮವಾಗಿ ಅವು ಸೂರ್ಯೋಷ್ಣದ ಸಂಗ್ರಾಹಕಗಳೇ ಆಗಿವೆ. ಯಾಂತ್ರಿಕಶಕ್ತಿ ಉಷ್ಣಶಕ್ತಿಯಾಗಿ ಮಾರ್ಪಡುವುದನ್ನು ಸುಲಭವಾಗಿ ಗಮನಿಸಿಬಹುದು. ವಸ್ತುಗಳನ್ನು ಪರಸ್ಪರ ಉಜ್ಜಿದಾಗ (ಉದಾಹರಣೆಗೆ ಎರಡು ಮರದ ತುಂಡುಗಳನ್ನು ಉಜ್ಜಿದಾಗ ಇಲ್ಲವೇ ನಮ್ಮ ಅಂಗೈಗಳನ್ನು ಉಜ್ಜಿಕೊಂಡಾಗ), ಸುತ್ತಿಗೆಯಿಂದ ಅಡಿಗಲ್ಲಿನ ಮೇಲೆ ಹೊಡೆದಾಗ ಉಷ್ಣ ಉತ್ಪಾದನೆ ಆಗುವುದೆಂಬುದು ತಿಳಿದಿದೆ. ಇನ್ನು ಜಡವಸ್ತುಗಳ ಪರಮಾಣುಗಳನ್ನು ವಿದಳನಗೊಳಿಸಿದಾಗ ಇಲ್ಲವೆ ಹಗುರವಾದ ವಸ್ತುಗಳನ್ನು ಸಂಲಯನಗೊಳಿಸಿದಾಗ ಸಹ ಉಷ್ಣ ಉತ್ಪತ್ತಿಯಾಗುವುದು.
 
==ಉಷ್ಣ ಮತ್ತು ಕೆಲಸ==
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/853421" ಇಂದ ಪಡೆಯಲ್ಪಟ್ಟಿದೆ