"ಕಟ್ಟಡ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
== ಬೆಂಕಿಯಿಂದ ರಕ್ಷಣೆ ==
ಇದರಲ್ಲಿ ಎರಡು ಹಂತಗಳಿವೆ-ವಸ್ತುಗಳ ಆಯ್ಕೆ ಮತ್ತು ಜೋಡಣೆಗಳಲ್ಲಿ ಬೆಂಕಿಯಿಂದ ತಟ್ಟಬಹುದಾದ ಅಪಾಯವನ್ನು ಕನಿಷ್ಠ ಪ್ರಮಾಣಕ್ಕೆ ಇಳಿಸುವುದು; ಬೆಂಕಿ ಬಿದ್ದಾಗ ಅದರ ವ್ಯಾಪ್ತಿ ಏರದಂತೆ, ಅಪಾಯ ಹೆಚ್ಚಾಗದಂತೆ ಎಚ್ಚರ ವಹಿಸುವುದು.
ಮರಮುಟ್ಟುಗಳಮರಮಟ್ಟುಗಳ ಬಳಕೆಯನ್ನು ಕನಿಷ್ಠ ಮಿತಿಯಲ್ಲಿಡಬೇಕು. ಇಲ್ಲಿಯೂ ಉರಿಯನ್ನು ತಡೆಯುವ ದ್ರಾವಕಗಳಿಂದ ಅವನ್ನು ಸಂಸ್ಕರಿಸುವುದು ಲೇಸು, ಸಿನಿಮಾ, ನಾಟಕಮಂದಿರಗಳು ಮುಂತಾದ ಸಾರ್ವಜನಿಕ ಕಟ್ಟಡಗಳಲ್ಲಿ ಪೀಠೋಪಕರಣಗಳು, ಪರದೆಗಳು, ಒಳಮಾಡಿಗೆ ಬಳಸುವ ಹಲಗೆಗಳು ಮುಂತಾದುವೆಲ್ಲವನ್ನೂ ಇದೇ ಬಗೆಯ ಸಂಸ್ಕರಣಕ್ಕೆ ಒಳಪಡಿಸಬೇಕು. ಅನೇಕ ದೇಶಗಳಲ್ಲಿ ಕಾಯಿದೆಯ ಮೂಲಕ ಇದನ್ನು ನಿಗದಿಮಾಡಿರುವುದುಂಟು. ಉದಾಹರಣೆಗಾಗಿ ಲಂಡನ್ ಕೌಂಟಿ ಸಭೆಯ ನಿಯಮಾವಳಿಗಳಲ್ಲಿ ಮರ, ಕ್ಯಾನ್ವಾಸ, ಹತ್ತಿಯ ಬಟ್ಟೆಗಳು ಮುಂತಾದುವನ್ನು ಕೆಲವು ದ್ರಾವಕಗಳಲ್ಲಿ ಅದ್ದಿ, ಬೆಂಕಿಬಿದ್ದಾಗ ಉರಿಯದಂತೆ ಮಾಡಬೇಕೆಂಬ ನಿಯಮವಿದೆ. ಆದರೆ ಮರಕ್ಕೆ ಬೆಂಕಿ ತಗಲಿದರೆ ಸುಡದ ಹಾಗೆ ಮಾಡುವುದು ಕಷ್ಟವಾದ್ದರಿಂದ, ಅದಕ್ಕೆ ಬದಲಾಗಿ ಬೆಂಕಿಬಿದ್ದರೆ ಉರಿಯದ ಕಲ್ನಾರಿನಂಥ ಪದಾರ್ಥಗಳನ್ನೇ ಬಳಸಬೇಕೆಂಬ ಶಾಸನ ಮಾಡಿದ್ದಾರೆ (1928). ಈಗ ನೆಲಗಳು, ಮಾಡುಗಳು ಇವನ್ನು ಬೆಂಕಿಯನ್ನು ತÀಡೆಯುವತಡೆಯುವ ಸಾಮಗ್ರಿಗಳಿಂದಲೇ ತಯಾರಿಸಬೇಕು. ಮೆತುವಾದಮೆದುವಾದ ಮರವನ್ನು ಉಪಯೋಗಿಸಕೂಡದು. ಬೆಂಕಿಯ ಒಲೆಯನ್ನು ಬಳಸಬಾರದು. ಉರಿಯ ಮೇಲೆ ಕಾಣುವ ಯಾವ ಕಾಸುವ ಏರ್ಪಾಡನ್ನೂ ನಾಟಕರಂಗದ ಮೇಲೆ ಇಡಬಾರದು. ಎಣ್ಣೆ, ಹತ್ತಿ, ಕಾಗದ, ಸೆಣಬು, ಮರದ ಹಲಗೆಗಳು ಮುಂತಾದುವುಗಳ ಕಾರ್ಖಾನೆಗಳು, ದಾಸ್ತಾನುಮಳಿಗೆಗಳು ಇತ್ಯಾದಿಗಳಲ್ಲಿ ನಿರಂತರ ಜಾಗರೂಕತೆಯೊಂದೇ ಬೆಂಕಿಯಿಂದ ರಕ್ಷಣೆ ಒದಗಿಸುವ ಮಾರ್ಗ. ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ 3 ಪಾಲು ಅಮೋನಿಯಂ ಫಾಸ್ಲಫೇಟ್, 2 ಪಾಲು ಅಮೋನಿಯಂ ನೈಟ್ರೇಟ್ ಮತ್ತು 1 ಪಾಲು ಅಮೋನಿಯಂ ಸಲ್ಫೇಟ್ ಇವುಗಳ ಮಿಶ್ರಣವನ್ನು 40 ಪಾಲು ನೀರಿನಲ್ಲಿ ಕರಗಿಸಿ ಹತ್ತಿಯ ಬಟ್ಟೆಗಳನ್ನು ಅದರಲ್ಲಿ ಅದ್ದಿ ಅವಕ್ಕೆ ಬೆಂಕಿ ತಗಲದ ಹಾಗೆ ಮಾಡುತ್ತಾರೆ. ಮುಚ್ಚಿದ ಉರುಳೆಗಳಲ್ಲಿ ಮರವನ್ನು ಇಟ್ಟು ಕೃತಕವಾಗಿ ಒತ್ತಡವನ್ನು ಪ್ರಯೋಗಿಸಿ, ಬೆಂಕಿಯನ್ನು ತಡೆಯುವ ರಾಸಾಯನಿಕಗಳು ಅದರೊಳಕ್ಕೆ ತೂರುವಂತೆ ಮಾಡುತ್ತಾರೆ. ಇಂಥ ಮರವನ್ನು ಬೆಂಕಿ ತಗಲದ ಮರವೆನ್ನುತ್ತಾರೆ. ನ್ಯೂಯಾರ್ಕ್ ನಗರದ ಕಟ್ಟಡಗಳ ಕಾನೂನಿನಲ್ಲಿ ಒಂದು ಕಟ್ಟಡ 150' ಗಿಂತ ಎತ್ತರವಾಗಿದ್ದರೆ ಹೀಗೆ ಸಂಸ್ಕರಿಸಿದ ಮರವನ್ನು ಮಾತ್ರ ಉಪಯೋಗಿಸಬೇಕೆಂಬ ನಿಯಮವಿದೆ.
 
ಪ್ರಪಂಚದಲ್ಲಿ ಸಂಭವಿಸುವ ವಾರ್ಷಿಕ ದುರ್ಮರಣಗಳು ಮತ್ತು ಸಂಪತ್ತಿನ ನಾಶ-ಇವುಗಳ ಕಾರಕಗಳಲ್ಲಿ ಮೊದಲ ಸ್ಥಾನ ಬೆಂಕಿಗೇ ಮೀಸಲು. ಆದ್ದರಿಂದ ಬೆಂಕಿಯ ಆಕಸ್ಮಿಕಗಳಿಂದ ಜನ ಹಾಗೂ ಸಂಪತ್ತಿನ ರಕ್ಷಣೆ ಎಲ್ಲ ನಾಗರಿಕ ಸರ್ಕಾರಗಳ ಮತ್ತು ಜನರ ಪ್ರಧಾನ ಹೊಣೆ. ದೊಡ್ಡ ನಗರಗಳಲ್ಲಿ ಒಂದೊಂದು ಸಾರಿ ಬೆಂಕಿ ಬಿದ್ದಾಗಲೂ ಬಂಡವಾಳ ಬಹುಪಾಲು ನಷ್ಟವಾಗುತ್ತದೆ. ಆಸ್ತಿಗಳನ್ನು ವಿಮೆ ಮಾಡುವ ಪದ್ಧತಿಯಿಂದ ಈ ನಷ್ಟ ಬಹು ಜನರಲ್ಲಿ ಹಂಚಿಹೋಗುತ್ತದೆ, ನಿಜ, ಆದರೆ ನಷ್ಟಗೊಂಡ ಸಂಪತ್ತನ್ನೂ ಮರಣಗೊಂಡ ಜನರನ್ನೂ ಹಿಂದೆ ಪಡೆಯಲಾಗುವುದಿಲ್ಲವಷ್ಟೆ. ಬೆಂಕಿಯನ್ನು ತಡೆಯಬಲ್ಲ ಸಾಮಗ್ರಿಗಳಿಂದ ಕಟ್ಟಡಗಳನ್ನು ಕಟ್ಟಿ ಒಂದು ವೇಳೆ ಬೆಂಕಿದಿದ್ದರೂಬೆಂಕಿ ಬಿದ್ದಿದ್ದರೂ ಅದು ಹರಡದ ಹಾಗೆ ಮಾಡಲು ಒಂದು ಕಟ್ಟಡವನ್ನು ಇನ್ನೊಂದರಿಂದ ಪ್ರತ್ಯೇಕಿಸಬೇಕು. ಬೆಂಕಿಬಿದ್ದರೆ ಸುಡಬಹುದಾದ ಸಾಮಾನುಗಳನ್ನು ತುಂಬಿರುವ ಅಥವಾ ಅಪಾಯವೊದಗಬಹುದಾದ ಕೈಗಾರಿಕೆಗಳಿರುವ ದೊಡ್ಡ ಕಟ್ಟಡಗಳಲ್ಲಿ ಗೊಡೆಗಳು, ಮಾಡುಗಳು, ನೆಲಗಳು ಮತ್ತು ತೊಲೆಗಳು ಬೆಂಕಿಯನ್ನು ಎದುರಿಸುವ ಹಾಗಿರಬೇಕು. ಒಂದು ವೇಳೆ ಬೆಂಕಿ ತಗಲಿದರೆ ಅದು ಹರಡಬಹುದಾದ ಮಹಡಿಯ ಮೆಟ್ಟಲುಗಳು ಮತ್ತು ಸಾಮಾನುಗಳನ್ನು ಎತ್ತುವ ಯಂತ್ರಗಳು ಅಪಾಯವನ್ನು ಹರಡುತ್ತವೆ. ಒಂದು ಕಟ್ಟಡವನ್ನು ನಾವು ಯಾವುದಕ್ಕಾಗಿ ಬಳಸುತ್ತೇವೆಯೋ ಅದರಲ್ಲಿಯೇ ಬೆಂಕಿಯನ್ನು ಉತ್ಪತ್ತಿಮಾಡಬಹುದಾದ ಕಾರಣಗಳಿರುತ್ತವೆ. ಉದಾಹರಣೆಗೆ ಯಂತ್ರಗಳ ತಿಕ್ಕಾಟ, ಬೆಂಕಿ ಹೊತ್ತಬಹುದಾದ ಧೂಮಗಳು, ದ್ರವೀಕರಿಸಿದ ಮತ್ತು ಪುಡಿಮಾಡಿದ ಇಂಧನಗಳೂ, ಸ್ಥಾಯೀ ವಿದ್ಯುಚ್ಛಕ್ತಿ (ಸ್ಟ್ಯಾಟಿಕ್ ಎಲೆಕ್ಟ್ರಿಸಿಟಿ)-ಇವು ಇರುವಲ್ಲಿ ಬೆಂಕಿ ಹೊತ್ತುವ ಸಂಭವ ಇದ್ದೇ ಇರುತ್ತದೆ.
[[ಬೆಂಕಿ]]ಯಲ್ಲಿ ಉರಿಯಬಹುದಾದ ಸಾಮಗ್ರಿಯನ್ನು ಒಂದೇ ಕಡೆ ಕೂಡಿಟ್ಟರೆ ಒಂದು ಸಾರಿ ಬೆಂಕಿ ತಗಲಿದರೆ, ಎಲ್ಲವೂ ಸೂರೆ ಹೋಗಬಹುದು. ಅದಕ್ಕಾಗಿ ಬೆಲೆಬಾಳುವ ಸಾಮಗ್ರಿಗಳನ್ನು ಒಂದು ವೇಳೆ ಬೆಂಕಿ ತಗಲಿದರೂ, ಆಗುವ ನಷ್ಟ ಬಹಳ ಹೆಚ್ಚಾಗದಂತೆ ರಾಶಿಗಳಾಗಿ ಬೇರ್ಪಡಿಸಿ ಕೂಡಿಡುವುದು ಉತ್ತಮ. ಇದೇ ಕಾರಣಕ್ಕಾಗಿ ಸಾಮಾನುದಾಸ್ತಾನು ಮಳಿಗೆಗಳಲ್ಲಿ ಬೆಂಕಿಯನ್ನು ಆರಿಸುವ ಅನುಕೂಲತೆಗಳಿದ್ದರೂ ಅವನ್ನು ಬಹಳ ದೊಡ್ಡದಾಗಿ ಮಾಡಬಾರದು. ಎಲ್ಲಕ್ಕಿಂತಲೂ ಹೆಚ್ಚಾಗಿ, ಒಂದು ಉಗ್ರಾಣಕ್ಕೆ ಬೆಂಕಿ ತಗಲಿದರೆ ಅದರಲ್ಲಿ ಇರುವ ಜನ ಬೇಗ ಹೊರಗೆ ಹೋಗುವಂತೆ ಮಾರ್ಗಗಳಿರುವುದು ಅವಶ್ಯಕ. ಒಂದೊಂದು ಕಾರ್ಖಾನೆಯಲ್ಲಿಯೂ ಕೊನೆಯ ಪಕ್ಷ ಎರಡು ಪ್ರತ್ಯೇಕ ನಿರ್ಗಮನದ್ವಾರಗಳಿಂದ ಜನರು ಹೊರಗೆ ಹೋಗುವ ವ್ಯವಸ್ಥೆ ಇರಬೇಕು. ಪ್ರತ್ಯೇಕವಾದ ಜಾಗಗಳಿಂದ ಒಳಗಿದ್ದ ಜನ ಹೊರಗೆ ಹೋಗುವ ಹಾಗಿರಬೇಕು.
 
== ನೀರಿನಿಂದ ರಕ್ಷಣೆ ==
೨,೭೫೬

edits

"https://kn.wikipedia.org/wiki/ವಿಶೇಷ:MobileDiff/854081" ಇಂದ ಪಡೆಯಲ್ಪಟ್ಟಿದೆ