ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೭ ನೇ ಸಾಲು:
 
==ಕೇದಾರನಾಥ==
*ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ. ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು.
*ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರು, ಶ್ರೀಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ.
*ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನ ದಲ್ಲಿದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯಗರ್ಭಗುಡಿಯು ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ.
 
==ಬದರಿನಾಥ ಕ್ಷೇತ್ರ==
*ಬದರಿನಾಥ ಕ್ಷೇತ್ರವು ವರ್ಷದಲ್ಲಿ ಆರು ತಿಂಗಳ ಕಾಲ ಮಾತ್ರವೇ ತೆರೆದಿರುತ್ತದೆ. ಉಳಿದ ಸಮಯ ಇದು ಪೂರ್ಣವಾಗಿ ಹಿಮದಲ್ಲಿ ಮುಚ್ಚಿಹೋಗಿರುತ್ತದೆ. ಸಾಮಾನ್ಯವಾಗಿ ಜೂನ್‌ ನಿಂದ - ಸೆಪ್ಟೆಂಬರ್ ವರೆಗೆ ಬದರಿನಾಥ ಕ್ಷೇತ್ರವನ್ನು ದರ್ಶಿಸಲು ಉತ್ತಮ ಕಾಲ.
"https://kn.wikipedia.org/wiki/ಗಂಗಾ" ಇಂದ ಪಡೆಯಲ್ಪಟ್ಟಿದೆ