ಆಯುರ್ವೇದ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೫ ನೇ ಸಾಲು:
==ಆಧುನಿಕ ಯುಗ==
ವಿಜ್ಞಾನ ಮುನ್ನಡೆದು ಜನಜೀವನ ಮತ್ತು ನಾಗರಿಕತೆಗಳು ಬದಲಾಗುತ್ತಿರುವ ಈ ಕಾಲದಲ್ಲಿ ಆಯುರ್ವೇದ ತತ್ತ್ವಗಳನ್ನನುಸರಿಸಿ ರೋಗ ಪ್ರತಿಬಂಧಕ ಮತ್ತು ನಿವಾರಣೆಗಳನ್ನು ಮಾಡಲು ಸಾಧ್ಯವೇ ಎಂಬ ಸಂಶಯ ಉಂಟಾಗುತ್ತದೆ. ಆಧುನಿಕ ನಾಗರಿಕತೆ ಕೃತಕವಾದ ಜೀವನಕ್ಕೆ ಪ್ರಾಧಾನ್ಯವನ್ನು ಕೊಡುತ್ತಿರುವುದರಿಂದ ಮನುಷ್ಯನ ಧಾತುಬಲ ಕಡಿಮೆಯಾಗುತ್ತಿದೆ. ಇದರಿಂದ ಹೊಸ ಹೊಸ ರೋಗಗಳೂ ಅವನ್ನು ಚಿಕಿತ್ಸಿಸುವುದಕ್ಕೆ ಸಾಧನಗಳೂ ಮತ್ತು ಅವುಗಳಿಂದಾಗುವ ಅಪಾಯಗಳೂ ಹೀಗೆ ಒಂದರಿಂದ ಮತ್ತೊಂದು ಸಮಸ್ಯೆ ಹುಟ್ಟುತ್ತಿವೆ. ವಾತಾವರಣಕ್ಕೆ ಹೊಂದಿಕೊಂಡು ಜೀವಿಸಬೇಕಾದುದು ಅನಿವಾರ್ಯ. ರೋಗವಿಜ್ಞಾನಕ್ಕೆ ಆಧುನಿಕ ಯಂತ್ರೋಪಕರಣ ಮತ್ತು ಪರೀಕ್ಷಾಕ್ರಮಗಳು ಬಹುಮಟ್ಟಿಗೆ ಸಹಾಯಕವಾಗಿವೆ. ದಿನದಿನಕ್ಕೆ ಹೊಸ ಔಷಧಗಳು ಬರುತ್ತಿವೆ. ಆದರೂ ಅನೇಕ ವ್ಯಾಧಿಗಳು ಚಿಕಿತ್ಸೆಗೆ ಕಠಿಣವಾಗಿಯೇ ಇವೆ. ಅಲ್ಪವ್ಯಾಧಿಗೆ ಬಲವತ್ತರವಾದ ಔಷಧಗಳನ್ನು ಉಪಯೋಗಿಸುವುದು, ಗುರುತರ ವ್ಯಾಧಿಯನ್ನು ಅಲಕ್ಷಿಸುವುದು ಮನಸ್ಸನ್ನು ಸ್ವೇಚ್ಛೆಯಾಗಿ ಬಿಡುವುದು-ಇವೆಲ್ಲ ಅನಾಯುಷ್ಯವಾದುವು.
ನೈಸರ್ಗಿಕ ತತ್ತ್ವಗಳನ್ನು ಬಿಟ್ಟು ಕ್ಲಿಷ್ಟ ಮಾರ್ಗವನ್ನು ಹಿಡಿದಿರುವುದೇ ಈ ಸಮಸ್ಯೆಗೆ ಕಾರಣವೆಂದು ಹೇಳಬಹುದು. ಪ್ರಾಚೀನವಾದ ಆಯುರ್ವೇದ ನಿಯಮಗಳು ನೈಸರ್ಗಿಕವಾದ ಜೀವನಕ್ಕೆ ಅನುಕೂಲವಾಗಿವೆ. ಇವನ್ನು ಈಗಿನ ಪರಿಸ್ಥಿತಿಗೆ ಸರಿ ಹೊಂದುವಂತೆ ಅಳವಡಿಸಿಕೊಳ್ಳುವುದು ಅತ್ಯಗತ್ಯ. ಶಾಸ್ತ್ರಬದ್ಧ ವಿಷಯಗಳನ್ನು ಪ್ರಾಯೋಗಿಕವಾಗಿಯೂ ಫಲಪ್ರದವಾಗಿರುವ ವಿಷಯಗಳನ್ನು ಶಾಸ್ತ್ರೀಯವಾಗಿಯೂ ಅಧ್ಯಯನ ಮಾಡಬೇಕು. ಆಯುರ್ವೇದಿಯ ಸಂಶೋಧನಾ ಕೇಂದ್ರಗಳಲ್ಲಿ ತ್ರಿದೋಷ ಸಿದ್ಧಾಂತಕ್ಕನುಸಾರವಾಗಿ ಸಂಹಿತಾಯುಗ ಮತ್ತು ಆಧುನಿಕ ಯುಗಗಳಲ್ಲಿ ಉಪಯುಕ್ತವಾಗಿರುವ ಭಾಗಗಳನ್ನು ಕ್ರೋಢಿಕರಿಸಿ ಪ್ರಚಾರಕ್ಕೆ ತರುವ ಏರ್ಪಾಡುಗಳಾಗಬೇಕು. ಈಗ ವೈದ್ಯರನೇಕರಿಗೆ ತಾವೇ ಔಷಧಗಳನ್ನು ಮಾಡಿಕೊಳ್ಳುವುದು ತೊಂದರೆಯಾಗಿದೆ. ಈಚೀಚೆಗೆ ಬೆಳೆಯುತ್ತಿರುವ ಔಷಧ ಕಾರ್ಖಾನೆಗಳಿಗೆ ಸಾಕಷ್ಟು ಉತ್ತೇಜನವಿಲ್ಲ. ಅಧಿಕ ಸಂಖ್ಯೆಗಳಲ್ಲಿ ಆಯುರ್ವೇದೀಯ ಶಿಕ್ಷಣಸಂಸ್ಥೆಗಳೂ ಚಿಕಿತ್ಸಾಲಯಗಳೂ ಪ್ರಚಾರ ಕೇಂದ್ರಗಳೂ ಏರ್ಪಟ್ಟರೆ ದೇಶದ ಸ್ವಾಸ್ಥ್ಯ ಸಮಸ್ಯೆ ಬಹುಮಟ್ಟಿಗೆ ಬಗೆಹರಿಯುವುದು. ಜನಸಾಮಾನ್ಯಕ್ಕೆಜನಸಾಮಾನ್ಯರಿಗೆ ಸತ್ಸಂತಾನದ ತಿಳಿವಳಿಕೆಯನ್ನು ಕೊಡುವುದರಿಂದ ಕುಟುಂಬ ಯೋಜನೆ ಸಾರ್ಥಕವಾಗುವುದು.
[[ವರ್ಗ:ಆಯುರ್ವೇದ]]
[[ವರ್ಗ:ಪರ್ಯಾಯ ವೈದ್ಯಕೀಯ ಪದ್ದತಿಗಳು]]
"https://kn.wikipedia.org/wiki/ಆಯುರ್ವೇದ" ಇಂದ ಪಡೆಯಲ್ಪಟ್ಟಿದೆ