ಸಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚು ಈ ಲೇಖನವನ್ನು ಉತ್ತಮಗೊಳಿಸಲು ಬಹಳಷ್ಟು ಸೂಚನೆಗಳು ಈ ಲೇಖನದಲ್ಲೇ ಇತ್ತು. ಮತ್ತು ಈ ಲೇಖನವು ವಿಕಿ ಮಾದರಿಯಲ್ಲಿರಲಿಲ್ಲ. ಹಾಗಾಗಿ ಈ ಲೇಖನವನ್ನು ಪುನರ್ ರಚಿಸಲಾಯಿತು.
೩೪ ನೇ ಸಾಲು:
|}
 
=== [[ಲೋಪ ಸಂಧಿ]] ===
____________________
:ಸಂಧಿಯಾಗುವಾಗ ಸ್ವರದ ಮುಂದೆ ಸ್ವರವು ಬಂದಾಗ, ಅರ್ಥವು ಕೆಡದಿದ್ದ ಪಕ್ಷದಲ್ಲಿ ಪೂರ್ವಪದದ ಕೊನೆಯ ಸ್ವರವು ಲೋಪವಾಗುವುದು.:
:ಉದಾ:- ಮತ್ತು(ಉ)+ಒಬ್ಬ=ಮತ್ತೊಬ್ಬ.ಇಲ್ಲಿ ಪೂರ್ವಪದದ ಕೊನೆಯ ಸ್ವರ ''''ಉ'''' ಕಾರ ಲೋಪವಾಗಿದೆ.
:ಉದಾ:- ಅಲ್ಲಿ(ಇ)+ಅಲ್ಲಿ=ಅಲ್ಲಲ್ಲಿ.ಇಲ್ಲಿ ಪೂರ್ವಪದದ ಕೊನೆಯ ಸ್ವರ ''''ಇ''''ಕಾರ ಲೋಪವಾಗಿದೆ ಅಂದರೆ ಮಾಯವಾಗಿದೆ.
;'''ಗಮನಿಸಿರಿ''':
:ಇಲ್ಲಿ "ಅರ್ಥವು ಕೆಡದಿದ್ದ ಪಕ್ಷದಲ್ಲಿ" ಎಂದು ಹೇಳುವಾಗ, ಸಂಧಿ ಮಾಡುವವರು ಅರ್ಥ ಕೆಡುವುದೇ ಇಲ್ಲವೇ ಎಂದು ಹೇಳಲು ಹಲವು ಸರತಿ ಆಗುವುದಿಲ್ಲ.
*ಬಾಳನ್ನು = ಬಾಳೆ + ಅನ್ನು ? ಇಲ್ಲವೆ ಬಾಳು + ಅನ್ನು ?
*ಒಂದು ವೇಳೆ ಬಾಳೆ + ಅನ್ನು = ಬಾಳನ್ನು ಅಂದರೆ ಇಲ್ಲಿ ಅರ್ಥ ಹೇಗೆ ಕಟ್ಟಿದೆ, ಹೇಳಲು ಸಾಧ್ಯವಿಲ್ಲ.
:ಆದುದರಿಂದ ಇಂತಹ ಹಲವು ಸನ್ನಿವೇಶಗಳಲ್ಲಿ ರೂಢಿಯಲ್ಲಿ ಇರುವ ಅರ್ಥವೇ ಸರಿಯೆಂದು ತಿಳಿವುದು.
;;:ಹಾಗೆ
*ಬಾಲೆ + ಅನ್ನು = ಬಾಲನ್ನು ತಪ್ಪು ಎಂದು ತಿಳಿವುದು.
*"ಬಾಲನ್ನು = ಬಾಲು + ಅನ್ನು" ಎಂದೇ ರೂಢಿ.
 
===[[ಆಗಮ ಸಂಧಿ]]===
-----------------
:ಸಂಧಿಯಾಗುವಾಗ ಸ್ವರದ ಮುಂದೆ ಸ್ವರವು ಬಂದಾಗ, ಸಾಮಾನ್ಯವಾಗಿ ಹೊಸದಾಗಿ ಒಂದು ವ್ಯಂಜನವು ಉತ್ತರಪದದ ಆದಿಯಲ್ಲಿರುವ ಸ್ವರಕ್ಕೆ ಬಂದು ಸೇರುತ್ತದೆ. ಇದರಲ್ಲಿ ಎರಡು ವಿಧ. 'ಯಕಾರಾಗಮ ಸಂಧಿ' ಹಾಗೂ 'ವಕಾರಾಗಮ ಸಂಧಿ'.
:ಉದಾ:- ಮನೆ(ಎ)+ಅನ್ನು=ಮನೆಯನ್ನು.ಇಲ್ಲಿ ಉತ್ತರಪದದ ಆದಿಯಲ್ಲಿ ''''ಯ್ ಕಾರ'''' 'ಆಗಮ'ವಾಗಿದೆ.
:ಉದಾ:- ಮಗು(ಉ)+ಇಗೆ=ಮಗುವಿಗೆ.ಇಲ್ಲಿ ಉತ್ತರಪದದ ಆದಿಯಲ್ಲಿ ''''ವ್ ಕಾರ'''' 'ಆಗಮ'ವಾಗಿದೆ.
:ಕನ್ನಡದ ಹಲವಾರು ವ್ಯಾಕರಣದ ಹೊತ್ತಗೆಗಳು ಮೇಲಿನಂತೆ ಹೇಳಿದರೂ, ಹೀಗೆ ಹೇಳುವದು ಹಲವು ವಿವಾದಗಳಿಗೆ ಮತ್ತು ತಪ್ಪುತಿಳಿವಿಗೆ ಅನುವು ಮಾಡುವುದು.
:ಈ ಸಂಧಿಯ ವಿವರಣೆಯಲ್ಲಿ ಇರುವಂತೆ "ಸಾಮಾನ್ಯವಾಗಿ ಹೊಸದಾಗಿ ಒಂದು ವ್ಯಂಜನವು ಉತ್ತರಪದದ ಆದಿಯಲ್ಲಿರುವ ಸ್ವರಕ್ಕೆ ಬಂದು ಸೇರುತ್ತದೆ" ಎಂದಾಗ ಆ ಸಾಮಾನ್ಯವಲ್ಲದ( ಅಸಮಾನ್ಯ ) ಸನ್ನಿವೇಶಗಳು ಯಾವುವು ಎಂದು ಯಾವ ಹೊತ್ತಗೆಗಳು ಹೇಳುವುದಿಲ್ಲ.
ಮನೆ + ಅನ್ನು = ಮನೆಗಳನ್ನು ಏಕೆ ಆಗಬಾರದು? "ಗಳ್" ಯಾಕೆ ಆಗಮವಾಗಬಾರದು?
ಹಾಗೆ...
* ಮಗು + ಅನ್ನು = ಮಗುವನ್ನು
* ನೀರು + ಅನ್ನು = ನೀರುವನ್ನು
* ಮನೆ + ಅನ್ನು = ಮನೆಯನ್
* ಹೀಗೆ ಇನ್ನು ಹಲವು ವಿಚಾರಗಳಿಗೆ ಕಾರಣವನ್ನು ಕೊಡಲು ಆಗದು.
:ಅದಕ್ಕೆ ಕೆಲವರು ಕನ್ನಡದಲ್ಲಿ "ಆಗಮಸಂಧಿ" ಎನ್ನವ ಸಂಧಿಯಿಲ್ಲ. ಕನ್ನಡದಲ್ಲಿ "ಲೋಪ ಸಂಧಿ" ಯೊಂದೆ ಸ್ವರ ಸಂಧಿ ಎನ್ನುವರು. ಜತೆಗೆ ಅವರು "ಆಗಮಸಂಧಿ"ಗೆ ಉದಾಹರಣೆಯಾಗಿ ಹೇಳಿರುವ ಪದಗಳನ್ನು ಬಿಡಿಸಲು ಬೇರೆ ಬಗೆಯನ್ನು ಕೂಡ ಸೂಚಿಸಿರುವರು.
'''ಮನಯು + ಅನ್ನು = ಮನೆಯನ್ನು; ಉ ಕಾರ ಲೋಪ. "ಮನೆಯು => ಒಂದು ಮನೆ"'''
ಮನೆಗಳು + ಅನ್ನು = ಮನೆಗಳನ್ನು :ಉ ಕಾರ ಲೋಪ; "ಮನೆಗಳು => ಹಲವು ಮನೆಗಳು"
ಮಗುವು + ಅನ್ನು = ಮಗುವನ್ನು; ಉ ಕಾರ ಲೋಪ 😂
'''
 
===[[ಆದೇಶ ಸಂಧಿ]]===
---------------------------
:ಸಂಧಿಯಾಗುವಾಗ ಸ್ವರದ ಮುಂದೆ '''ಕ,ಚ,ಟ,ತ,ಪ''' ಗಳು ಬಂದಾಗ ,ಅದೇ ವರ್ಗದ ಮೂರನೇ ವ್ಯಂಜನಗಳು ಅಂದರೆ '''ಗ,ಜ ,ಡ ದ,ಬ''' ಗಳು ಆದೇಶವಾಗಿ ಬರುತ್ತವೆ.
:ಉದಾ:- ಮಳೆ+ಕಾಲ=ಮಳೆಗಾಲ., ಬೆಟ್ಟ+ತಾವರೆ=ಬೆಟ್ಟದಾವರೆ., ಅಡಿ+ಪವಳ=ಅಡಿಬವಳ.
*'''ಗಮನಿಸಿರಿ''':
:ಈ ನಿಯಮವು ಕನ್ನಡದಲ್ಲಿ ಬರುವ ಹಲವು ವ್ಯಂಜನದ ಆದೇಶಗಳನ್ನು ವಿವರಿಸುವುದಿಲ್ಲ. ಅವನ್ನು ವಿವರಿಸಲು ಯಾವ ಸಂಧಿನಿಯಮವನ್ನು ಹಲವು ವ್ಯಾಕರಣದ ಹೊತ್ತಗೆಗಳು ಹೇಳುವುದಿಲ್ಲ.
::;ಮಾದರಿ
* ಹೆರ್‍ + ದಾರಿ = ಹೆದ್ದಾರಿ
* ಬೆಲೆ + ಪೆಣ್ಣು(ಹೆಣ್ಣು) = ಬೆಲೆವೆಣ್ಣು
* ಮುಂದು + ಪರಿ( ಹರಿ ) = ಮುಂದುವರಿ
* ಮುಂದು + ಪರೆ( ಹರೆ ) = ಮುಂದುವರೆ
* ತಣ್ + ನೀರು = ತಣ್ಣೀರು
* ಕಣ್ + ನೀರು = ಕಣ್ಣೀರು
* ಭೂ + ತಾಯಿ = ಭೂದಾಯಿ ಅಲ್ಲ ಏಕೆ?
* ಒರ್‍ + ಕೊರಲು = ಒಕ್ಕೊರಲು
* ಒರ್‍ + ಕೂಟ = ಒಕ್ಕೂಟ
* ಒರ್‍ + ಕೂಡು = ಒಗ್ಗೂಡು
* ಹೆರ್‍ + ಪಾವು(ಹಾವು) = ಹೆಬ್ಬಾವು
* ಕಿಸು + ಪೊೞಲು(ಹೊಳಲು) = ಕಿಸುವೊಳಲು
* ಮೂರ್‍ + ಕಣ್ಣ = ಮುಕ್ಕಣ
* ತಣ್ + ಗಾಳಿ = ತಂಗಾಳಿ; ಇಲ್ಲಿ 'ಣ್' ಕಾರಕ್ಕೆ 'ಞ್' ಕಾರ ಆದೇಶ
'''ಗಮನಿಸಿರಿ:'''
:ಕನ್ನಡದಲ್ಲಿ ಹೆಚ್ಚು ಸರತಿ ಬರಿ ರೂಢಿಯಿಂದ ಸಂಧಿ/ಒರೆಗೂಡಿಕೆಗಳನ್ನು ಅರಿಯಲು ಆಗುವುದು. ಈ ಮೇಲಿನ ನಿಯಮಗಳಂತೆ ಎಲ್ಲ ಕನ್ನಡ ಸಂಧಿಪದಗಳನ್ನು ಬಿಡಿಸಲು ಆಗದು.
 
'''ಸಂಸ್ಕೃತ ಸಂಧಿಗಳು'''
 
ಯಾವ ಕನ್ನಡದ ಪಲುಕು(ಪದ) ಈ ಕೆಳಗಿನ ಸಂಧಿಗಳಲ್ಲಿ ಬರುವುದಿಲ್ಲ. ಬರೀ ಸಂಸ್ಕೃತದ ಪಲುಕುಗಳಿಗೆ ಸೀಮಿತವಾದ ಸಂಧಿಗಳಿವು. ಆದರೆ ಹಳೆಗನ್ನಡದಿಂದಲೂ ಕನ್ನಡದಲ್ಲಿ ಹೇರಳವಾಗಿ ಬೆರೆತಿರುವ ಸಾವಿರಾರು ಸಂಸ್ಕೃತದ ಸಂಧಿಪದಗಳನ್ನು ತಿಳಿಯಲು ಈ ಸಂಧಿಗಳ ಅರಿವು ಬೇಕು.
 
ಈ ಸಂಧಿಗಳ ವಿವರಣೆಯನ್ನು ಸಂಸ್ಕೃತದ ವ್ಯಾಕರಣದ ಹೊತ್ತಗೆಗಳಿಂದ ಪಡೆಯಬಹುದು. ಈ ಎಲ್ಲ ಸಂಧಿಗಳೂ ೧೦೦% ಸಂಸ್ಕೃತದ ವ್ಯಾಕರಣದ ಸಂಧಿನಿಯಮಗಳನ್ನೇ ಪಾಲಿಸುವುವು.
ಎರಡು ಸಂಸ್ಕೃತದ ಪದಗಳ ಸೇರಿಕೆ.
* [[ಸವರ್ಣದೀರ್ಘ ಸಂಧಿ]]
* [[ಗುಣ ಸಂಧಿ]]
* [[ವೃದ್ಧಿ ಸಂಧಿ]]
* [[ಯಣ್ ಸಂಧಿ]]
* [[ಜಶ್ತ್ವ ಸಂಧಿ]]
* [[ಶ್ಚುತ್ವ ಸಂಧಿ]]
* [[ಷ್ಟುತ್ವ ಸಂಧಿ]]
* [[ಅನುನಾಸಿಕ ಸಂಧಿ]]
* [[ವಿಸರ್ಗ ಸಂಧಿ]]
 
*[[ಕನ್ನಡ ವ್ಯಾಕರಣ]]
 
==ಉಲ್ಲೇಖ==
{{reflist}}
[[Category:ಕನ್ನಡ ವ್ಯಾಕರಣ]]
"https://kn.wikipedia.org/wiki/ಸಂಧಿ" ಇಂದ ಪಡೆಯಲ್ಪಟ್ಟಿದೆ