ಬಂಡಾಯ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೯ ನೇ ಸಾಲು:
ಈ ಸಾಹಿತ್ಯದಲ್ಲಿ ಕೃಷಿ ನಡೆಸುತ್ತಿರುವ ಪ್ರಮುಖರಲ್ಲಿ [[ಬರಗೂರು ರಾಮಚಂದ್ರಪ್ಪ]]ನವರು ಒಬ್ಬರು. ನವ್ಯದ ಕಡೆಗಾಲದಲ್ಲಿ ಬರವಣಿಗೆ ಆರಂಭಿಸಿ ನವ್ಯದ ಪ್ರಭಾವಕ್ಕೆ ಒಳಗಾಗದ ಸ್ವಂತಿಕೆಯನ್ನು ಮೆರೆದರು. ನವ್ಯವೆಂದೇ ಹೇಳಬಹುದಾದ ಮರಕುಟಿಗ ಎನ್ನುವ ಅವರ ಕವನ ಸಂಕಲನದಲ್ಲಿ ಸಾಮಾಜಿಕ ನಿಷ್ಠೆ ಕುರಿತಂತೆ ಕವಿತೆಗಳಿವೆ. ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿ ಸಣ್ಣ ಕಥಾಕ್ಷೇತ್ರವನ್ನು ಆರಿಸಿಕೊಂಡ ಇವರು ಸುಂಟರಗಾಳಿ; ಕಪ್ಪು ನೆಲದ ಕೆಂಪು ಕಾಲು ಕಥಾಸಂಕಲನಗಳನ್ನೂ, ಸೂತ್ರ ಹುತ್ತ; ಒಂದು ಊರಿನ ಕಥೆ; ಸೀಳು ನೆಲ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಬಡತನ, ಶೋಷಣೆ, ಮೂಢನಂಬಿಕೆ ಇವನ್ನು ಕೇಂದ್ರವಾಗಿಟ್ಟುಕೊಂಡು ಸುಂಟರಗಾಳಿಯ ಕತೆಗಳು ರಚಿತವಾಗಿವೆ. ಸಾಮಾಜಿಕ ಮತ್ತು ಸಾಂಸ್ಕøತಿಕ ವೈರುಧ್ಯಗಳು ಇವುಗಳ ಜೊತೆ ಮಾನವ ಸಂಬಂಧಗಳು ಇವುಗಳಿಂದ ಮೂಡಿ ಬರುವ ಬಂಡಾಯದ ವಿವಿಧ ಮಜಲುಗಳನ್ನು ಕಪ್ಪು ನೆಲದ ಕೆಂಪು ಕಾಲು ಕಥಾಸಂಕಲನದಲ್ಲಿ ಕಾಣಬಹುದು.
 
ಬರಗೂರರ ಕಾದಂಬರಿಗಳು ಸ್ವಾತಂತ್ರೋತ್ತರ ಹಳ್ಳಿಗಳನ್ನೂ ನಗರಗಳನ್ನೂ ಅರ್ಥವಿಸುವ ಪ್ರಯತ್ನಗಳಾಗಿವೆ. ತಮ್ಮ ಕಾದಂಬರಿಗಳಲ್ಲಿ ಸಮಾಜದ ಕೊಳಕುಗಳನ್ನು ತೋರಿಸಿ. ಶೋಷಣೆ ದಬ್ಬಾಳಿಕೆಗಳ ಮುಖಾಮುಖಿ ಸಂಘರ್ಷವನ್ನು ಕಲಾತ್ಮಕವಾಗಿ ಮುಂದಿಡುತ್ತಾರೆ. ಒಂದು ಊರಿನ ಕತೆ ಅವರೇ ಹೇಳುವಂತೆ ಜೀವನಾನುಭವ ಮತ್ತು ವಾಸ್ತವದ ಗ್ರಹಿಕೆಗಳ ಆಧಾರದ ಮೇಲೆ ನಿಂತಿದೆ. ತ್ರಿಕೋನಾಕಾರದ ಜಾತಿವ್ಯವಸ್ಥೆ ಪಂಚಾಯ್ತಿಯ ಅಧಿಕಾರಗ್ರಹಣಕ್ಕಾಗಿ ಒಳಗೊಳಗೇ ತಿಕ್ಕಾಡುವುದು. ಶ್ರೀಮಂತವರ್ಗ ಪಂಚಾಯ್ತಿಯಲ್ಲಿ ಸ್ಥಾನ ಗಿಟ್ಟಿಸಲು ಹೆಣಗಾಡುವುದು. ಅದಕ್ಕಾಗಿ ಮುಗ್ಧ ಹಾಗೂ ದರಿದ್ರ ದಲಿತರನ್ನೇ ಬಲಿಕೊಡಲು ಮುಂದಾಗುವುದು-ಸ್ವತಂತ್ರ ಭಾರತದ ಹಳ್ಳಿಗಳ ದೊಡ್ಡದುರಂತ. ಈ ದುರಂತದ, ಹೊಲಸು ರಾಜಕೀಯದ ನೈಜ ಚಿತ್ರಣ ಈ ಕಾದಂಬರಿಯಲ್ಲಿ ದಟ್ಟವಾಗಿ ಮೂಡಿಬಂದಿದೆ. ವ್ಯವಸ್ಥೆಯ ಒಳತಿಕ್ಕಾಟಗಳು ಇವರ ಕಾದಂಬರಿಗಳಲ್ಲಿ ತಮ್ಮಷ್ಟಕ್ಕೆ ತಾವೇ ವ್ಯಕ್ತವಾಗುವ ಬಗೆ ಕನ್ನಡದಲ್ಲಿ ಹೊಸದು ಎಂದು ಹೇಳಬಹುದು.
 
ಬಂಡಾಯ ಸಾಹಿತಿಗಳಲ್ಲಿ ಮುಖ್ಯರಾದ ಇನ್ನೊಬ್ಬ ಲೇಖಕರೆಂದರೆ [[ದೇವನೂರು ಮಹಾದೇವ]] ಅವರು. ದ್ಯಾವನೂರು ಎಂಬ ಕಥಾಸಂಕಲನ ಮತ್ತು ಒಡಲಾಳ ಎಂಬ ಕಿರು ಕಾದಂಬರಿಯನ್ನು ಪ್ರಕಟಿಸಿರುವ ಇವರು ಅಸಮಾನತೆ. ಶೋಷಣೆ, ಅಮಾನವೀಯತೆಗಳ ಬಗ್ಗೆ ವಿಷಾದದಿಂದ ನೋವಿನಿಂದ ತಮ್ಮ ಪ್ರತಿಭಟನೆಯ ಧ್ವನಿ ಎತ್ತಿದ್ದಾರೆ. ಇವರು ತಾತ್ತ್ವಿಕವಾಗಿ ಶೋಷಣೆಯ ವಿರೋಧಿ ಎಂಬುದು ನಿಜವಾದರೂ ಇವರ ಕತೆಗಳಲ್ಲಿ ಸಂಘರ್ಷಕ್ಕಿಂತ ಶೋಷಣೆಗೀಡಾದವರು ಅಸಹಾಯಕ ಸ್ಥಿತಿಗತಿಗಳನ್ನು ಹೇಳುವ ಕಾಳಜಿ ಹೆಚ್ಚು. ಅಮಾಸ; ಮಾರಿಕೊಂಡವರು: ಮೂಡಲಸೀಮೇಲೆ ಕೊಲೆಗಿಲೆ ಮುಂತಾದ ಕತೆಗಳು ಕಲೆಗಾರಿಕೆ, ವಸ್ತುವಿನ ದೃಷ್ಟಿಯಿಂದ ಉತ್ತಮ ಕತೆಗಳಾಗಿವೆ. ಒಡಲಾಳ ಅದರ ವಿವರಣೆಯ ಸಮಗ್ರರೂಪ ಹಾಗೂ ತಂತ್ರದಿಂದಾಗಿ ಹೆಚ್ಚು ಗಮನಾರ್ಹ ಕೃತಿಯಾಗಿದೆ. ಕ್ರೌರ್ಯ ಹಾಗೂ ಅಧಿಕಾರಿಶಾಹಿಯಿಂದ ಒಂದು ಕುಟುಂಬದ ಮೇಲಾಗುವ ಪರಿಣಾಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಈ ಕೃತಿ ಚಿತ್ರಿಸುತ್ತದೆ.
"https://kn.wikipedia.org/wiki/ಬಂಡಾಯ_ಸಾಹಿತ್ಯ" ಇಂದ ಪಡೆಯಲ್ಪಟ್ಟಿದೆ