ಕೊಪ್ಪಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೩೦ ನೇ ಸಾಲು:
ಮೌರ್ಯ ಸಾಮ್ರಾಜ್ಯದ ಪತನಾನಂತರ ದಖನ್‍ನಲ್ಲಿ ಸ್ಥಾಪಿತವಾದ ಪ್ರಥಮ ಸ್ವತಂತ್ರ ಸಾಮ್ರಾಜ್ಯವೆಂದರೆ ಸಾತವಾಹನರದು. ಇಂದಿನ ಮಹಾರಾಷ್ಟ್ರ ರಾಜ್ಯದ ಪ್ರತಿಷಾವಿನ ಅಥವಾ ಪೈಠಣ್ ಅನ್ನು ರಾಜಧಾನಿಯಾಗಿ ಹೊಂದಿದ್ದ ಈ ಸಾಮ್ರಾಜ್ಯದ ಭಾಗವಾಗಿ ಕೊಪ್ಪಳ ಉನ್ನತ ಸ್ಥಿತಿಗೆ ಬಂದಿತು. ಕ್ರಿ.ಪೂ.3ನೆಯ ಶತಮಾನದಿಂದ ಕ್ರಿ.ಶ 2ನೆಯ ಶತಮಾನದವರೆಗೂ ಆಳಿದ ಈ ವಂಶದ ಸಾಮ್ರಾಟರು ಉತ್ತರ ಭಾರತದವರೆಗೂ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿದರು. ಕೊನೆಗೆ ದಕ್ಷಿಣ ಪಥಕ್ಕೆ ಸೀಮಿತವಾದ ಇವರು ತುಂಗಭದ್ರಾ ದಕ್ಷಿಣಕ್ಕೂ ತಮ್ಮ ಆಳಿಕೆಯನ್ನು ಚಾಚಿದ್ದರು. ಸಾತವಾಹನರ ಕಾಲದಿಂದ ಕೊಪ್ಪಳ ಪ್ರಸಿದ್ಧಿ ಪಡೆದಿತ್ತು. ಇಲ್ಲಿನ ಸುತ್ತಮುತ್ತಲ ಬೆಟ್ಟಗುಡ್ಡಗಳಿಗೆ ಕೊಪಣ್ರಾದಿ ಮತ್ತು ಕುಪಣಾಚಲ ಎಂಬ ಹೆಸರುಗಳಿವೆ. ಕೊಪ್ಪಳಕ್ಕೆ ಕೊಪಣ ಅಥವಾ ಕೋಪಣ ನಗರವೆಂಬ ಹೆಸರಿದ್ದಿತು. ಈ ಜಿಲ್ಲೆಯ ಕವಲೂರು, ಆಳವಂಡಿ, ಮಾದಿನೂರು, ಕುಕ್ಕನೂರು, ಪುರ, ಆನೆಗೊಂದಿ, ಇಟಗಿ ಮತ್ತು ಮುಧುವೊಳಲು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿವೆ.
 
ಸಾತವಾಹನರ ಅನಂತರ ಕರ್ನಾಟಕದ ಉತ್ತರ ಭಾಗದಲ್ಲಿ ಮತ್ತು ಕರಾವಳಿಯಲ್ಲಿ ಕದಂಬರು ಪ್ರಬಲ ರಾಜ್ಯಸ್ಥಾಪಿಸಿ ಆಳಿದರು. ಆದರೆ ದಕ್ಷಿಣದಲ್ಲಿ ತಲಕಾಡಿನ ಗಂಗರು, ಪೂರ್ವದಲ್ಲಿ ವಾಕಾಟಕರು ಕದಂಬರ ಸಮಕಾಲೀನರಾಗಿ ಆಳಿದರು. ಕದಂಬರು ಈ ಜಿಲ್ಲೆಯ ಮೇಲೆ ಎಷ್ಟು ನಿಯಂತ್ರಣ ಹೊಂದಿದ್ದರು ಎಂದು ಹೇಳಲು ಸ್ಪಷ್ಟ ಆಧಾರಗಳು ಲಭ್ಯವಿಲ್ಲ. ಆದರೆ ಚಿತ್ರದುರ್ಗದ ಬಳಿಯ ಚಂದ್ರವಳ್ಳಿಯಲ್ಲಿ ಕದಂಬರ ಶಾಸನ ದೊರೆತಿರುವುದರಿಂದ ಈ ಜಿಲ್ಲೆಯ ಮೇಲೆ ಒಂದಲ್ಲ ಒಂದು ಕಾಲದಲ್ಲಿ ಭಾಗಶಃವಾಗಿ ಅಥವಾ ಪೂರ್ಣವಾಗಿ ಅವರು ನಿಯಂತ್ರಣ ಹೊಂದಿದ್ದರು ಎಂದು ಹೇಳಬಹುದು. ಇದೇ ವೇಳೆಗೆ ಮಧ್ಯ ಭಾರತದಲ್ಲಿ ಪ್ರಬಲ ರಾಜ್ಯ ಸ್ಥಾಪಿಸಿದ ವಾಕಾಟಕರು [[ಕುಂತಳ]] ದೇಶದವರೆಗೂ ತಮ್ಮ ರಾಜ್ಯ ವಿಸ್ತರಿಸಿದ್ದರೆಂದು ತಿಳಿದುಬರುತ್ತದೆ. ಅವರು ಈ ಪ್ರದೇಶವನ್ನು ಸಾಕಷ್ಟು ಕಾಲ ಆಳಿರಬೇಕು.
 
ಕೊಪ್ಪಳ ಜಿಲ್ಲೆಗೆ ಸಮೀಪದಲ್ಲಿ ಈಗಿನ ಬಿಜಾಪುರ ಜಿಲ್ಲೆಯ ಬಾದಾಮಿಯಲ್ಲಿ 6ನೆಯ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಚಳುಕ್ಯ ಮನೆತನ ಪರ್ಯಾಯ ದ್ವೀಪದಲ್ಲಿ ಒಂದು ಪ್ರಬಲ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಸಫಲವಾಯಿತು. ಕದಂಬ ರಾಜ್ಯ ಬಹುಮಟ್ಟಿಗೆ ಚಳುಕ್ಯ ಸಾಮ್ರಾಜ್ಯದಲ್ಲಿ ವಿಲೀನವಾಗಿ ಕೆಲವು ಶಾಖೆಗಳ ಆಳಿಕೆ ಮಾತ್ರ ಮುಂದುವರಿಯಿತು. ಬಾದಾಮಿ ಚಳುಕ್ಯರ ಶಾಸನಗಳು ಕೊಪ್ಪಳ ಜಿಲ್ಲೆಯ ಕೊಪ್ಪಳ, ಹಲಗೇರಿ, ಇಟಗಿ ಮತ್ತು ಕುಕನೂರು ಮೊದಲಾದೆಡೆಗಳಲ್ಲಿ ದೊರೆತಿವೆ. ಇವರು 757ರಲ್ಲಿ ರಾಷ್ಟ್ರಕೂಟರಿಂದ ಪರಾಜಯ ಹೊಂದುವವರೆಗೂ ಸಮಗ್ರವಾಗಿ ಆಳಿದರು. ಇವರ ಕಾಲದಲ್ಲಿ ಕೊಪ್ಪಳ ಒಂದು ಪಟ್ಟಣವಾಗಿ ಬೆಳೆಯಿತು. ಚೀನಿ ಪ್ರವಾಸಿ ಯುವಾನ್‍ಚಾಂಗನು ದಾಖಲಿಸಿರುವ ಕೊಂಕಿನಪುಲೋ ಎಂಬುದು ಕೊಪ್ಪಳವೆಂದು ಗುರುತಿಸಲಾಗಿದೆ.
"https://kn.wikipedia.org/wiki/ಕೊಪ್ಪಳ" ಇಂದ ಪಡೆಯಲ್ಪಟ್ಟಿದೆ