ಇಲಿಯಡ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೧ ನೇ ಸಾಲು:
ಇಲಿಯಡ್ ನ ಕಥೆ [[ಗ್ರೀಸ್]] ಮತ್ತು [[ಟ್ರಾಯ್]] ದೇಶಗಳ ನಡುವಿನ ಯುದ್ಧವೊಂದರ ಹತ್ತನೆ ಮತ್ತು ಕೊನೆಯ ವರ್ಷದ ಘಟನೆಗಳನ್ನು ಕುರಿತದ್ದು. ಮುಖ್ಯವಾಗಿ ಅಕೀಲೀಸ್ ಎಂಬ ಗ್ರೀಕ್ ವೀರನ ಸಾಹಸಗಳನ್ನು ತಿಳಿಸುತ್ತದೆ. ಅಕೀಲೀಸ್ ಮತ್ತು ಅಗಮೆಮ್ನಾನ್ ರ ನಡುವಿನಾ ಜಗಳದೊಂದಿಗೆ ಆರಂಭಗೊಂಡು, ಹೆಕ್ಟರ್ ಎಂಬ ಟ್ರಾಯ್ ದೇಶದ ವೀರನ ಮರಣ ಮತ್ತು ಅಂತ್ಯಸಂಸ್ಕಾರದೊಂದಿಗೆ ಕಾವ್ಯ ಕೊನೆಗೊಳ್ಳುತ್ತದೆ.
 
ಟ್ರಾಯ್ ನಗರದ ರಾಜ ಪ್ರಯಮನ ಮಗ ಪ್ಯಾರಿಸ್ ಗ್ರೀಸಿನ ಸ್ಪಾರ್ಟಾದ ಮೆನೆಲಾಸನ ಪತ್ನಿ ಪರಮ ಸುಂದರಿ ಹೆಲೆನಳನ್ನು ಎತ್ತಿಕೊಂಡು ಹೋದುದು ತಮ್ಮ ನಾಡಿಗೇ ಆದ ಅಪಮಾನವೆಂದು ಕೆರಳಿದ ಗ್ರೀಕ್ ರಾಜರು ತಮ್ಮ ತಮ್ಮ ಯೋಧರೊಡನೆ ನೂರಾರು ಹಡಗುಗಳಲ್ಲಿ ಈಜಿಯನ್ ಸಮುದ್ರವನ್ನು ದಾಟಿ ಏಷ್ಯ ಮೈನರಿನ ವಾಯವ್ಯಮೂಲೆಯಲ್ಲಿ ಕಡಲತೀರಕ್ಕೆ ಮೂರು ಮೈಲಿ ದೂರದಲ್ಲಿದ್ದ ಟ್ರಾಯ್ ಕೋಟೆಗೆ ಮುತ್ತಿಗೆ ಹಾಕಿದರು. ಟ್ರಾಯ್ ಜನ (ಟ್ರೋಜನರು) ಕೋಟೆಯ ಬಾಗಿಲನ್ನು ಭದ್ರಪಡಿಸಿ ಒಂಬತ್ತು ವರ್ಷ ಕಳೆದರೂ ಅಲ್ಲಾಡಲಿಲ್ಲ. ಅಷ್ಟು ಕಾಲವೂ ಗ್ರೀಕರು ಸುತ್ತಮುತ್ತಲ ಸಣ್ಣಪುಟ್ಟ ರಾಜ್ಯಗಳಿಗೆ ಮುತ್ತಿಗೆ ಹಾಕಿ ಅವನ್ನು ಗೆದ್ದು ಅಲ್ಲಿನವರನೇಕರನ್ನು ಸೆರೆಯಾಳುಗಳಾಗಿಯೂ, ದಾಸಿಯರಾಗಿಯೂ ಹಿಡಿದು ತಂದರು. ಅಂಥವರಲ್ಲಿ ಒಬ್ಬಳು ಅಕಿಲೀಸನ ದಾಸಿ ಬ್ರಿಸೇಯಿಸ್, ಬ್ರೈಸಿಸ್ ಎಂಬುವನ ಮಗಳು. ಗ್ರೀಕರ ಪ್ರಧಾನ ಸೇನಾಪತಿ ಮೆನೆಲಾಸನ ತಮ್ಮ ಆಗಮೆಮ್ನಾನ್‍ನ ದಾಸಿ ಕ್ರಿಸೇಯಿಸ್ ಕ್ರೈಸಿಸನ ಮಗಳು ಇನ್ನೊಬ್ಬಳು. ಕ್ರೈಸೀಸ್ ಅಪೊಲೊ ದೇವನ ಪೂಜಾರಿ, ಅವನು ತನ್ನ ಮಗಳಿಗುಂಟಾದ ಪಾಡನ್ನು ನೋಡಿ ಆ ದೇವತೆಗೆ ಮೊರೆಯಿಡಲು, ಗ್ರೀಕರನ್ನು ಶಿಕ್ಷಿಸುವ ಸಲುವಾಗಿ ಅಪೊಲೊ ವ್ಯಾಧಿಯೊಂದನ್ನು ಗ್ರೀಕ್ ಸೈನಿಕರಲ್ಲಿ ಹರಡಿದ. ಕಾಲ್ಟಾಸ್ ಎಂಬ ದಿವ್ಯe್ಞÁನಿಯಿಂದದಿವ್ಯಜ್ಞಾನಿಯಿಂದ ಈ ಪಿಡುಗಿಗೆ ಕಾರಣವನ್ನು ತಿಳಿದುಕೊಂಡ ಗ್ರೀಕರು ಕ್ರಿಸೇಯೀಸಳನ್ನು ಅವಳ ತಂದೆಗೆ ಹಿಂದಿರುಗಿಸಬೇಕೆಂದು ಒತ್ತಾಯ ಮಾಡಿದರು. ಹಾಗೆ ಮಾಡಲೇಬೇಕಾಗಿ ಬಂದಾಗ ಆಗಮೆಮ್ನಾನ್ ತನ್ನ ದಾಸಿ ಹೋದುದರಿಂದ ಅವಳಿಗೆ ಬದಲಾಗಿ ಅಕಿಲೀಸನ ದಾಸಿಯನ್ನು ಬಲವಂತವಾಗಿ ತಂದಿಟ್ಟುಕೊಂಡ. ಇದರಿಂದ ಅಸಮಾಧಾನಗೊಂಡ ಅಕಿಲೀಸ್ ತಾನು ಯುದ್ಧದಲ್ಲಿ ಭಾಗವಹಿಸುವುದಿಲ್ಲವೆಂದು ಹೇಳಿ ತನ್ನ ಅನುಯಾಯಿಗಳಾದ ಮಿರ್ ಮಿಡನ್ನರನ್ನು ಕರೆದುಕೊಂಡು ದೂರನಿಂತ. ಅಕಿಲೀಸನ ತಾಯಿ ಥೆಟಿಸ್ ಎಂಬ ದೇವತೆ. ಅವಳು ತನ್ನ ಮಗನಿಗಾದ ಅಪಮಾನವನ್ನು ಕಂಡು ದುಃಖಿತಳಾಗಿ ದೇವಾಧಿದೇವ ಜ್ಯೂಸನ ಬಳಿಗೆ ಹೋಗಿ ದೂರಿತ್ತಳು. ಗ್ರೀಕರು ಅಕಿಲೀಸನ ಹಿರಿಮೆಯನ್ನು ಅರಿತುಕೊಳ್ಳುವಂತೆ ಮಾಡುವುದಾಗಿ ಜ್ಯೂಸ್ ಮಾತುಕೊಟ್ಟ. ಈ ದಾಸಿಯರ ಪ್ರಸಂಗ ಇಲಿಯಡ್‍ನ ಮೊದಲ ಕಾಂಡದ ಕಥೆ.
 
ಗ್ರೀಕರಿಗೆ ಅಕಿಲೀಸನ ಔನ್ನತ್ಯದ ಅರಿವಾಗಬೇಕಾದರೆ ಯುದ್ಧ ಆರಂಭವಾಗಬೇಕು. ಆದ್ದರಿಂದ ಎರಡನೆ ಕಾಂಡದಲ್ಲಿ ಜ್ಯೂಸ್ ಆಗಮೆಮ್ನಾನಿಗೊಂದು ಕನಸನ್ನು ಕಳುಹಿಸಿ ಯುದ್ಧ ಮಾಡಬೇಕೆಂದು ಸೂಚಿಸುತ್ತಾನೆ. ಆಗಮೆಮ್ನಾನ್ ತನ್ನ ಜನರನ್ನು ಪರೀಕ್ಷಿಸಲು ತಾವೆಲ್ಲ ಸ್ವದೇಶಕ್ಕೆ ಹಿಂದಿರುಗಬೇಕೆಂದು ಹೇಳುತ್ತಾನೆ. ತಕ್ಷಣ ಅವರೆಲ್ಲ ಸಂತೋಷದಿಂದ ಹಡಗುಗಳ ಕಡೆಗೆ ಓಡುತ್ತಾರೆ. ಒಡಿಸ್ಸಿಯಸ್ ಅವರನ್ನು ಹಿಂದಕ್ಕಟ್ಟುತ್ತಾನೆ. ಈ ಸಂದರ್ಭದಲ್ಲಿ ಗ್ರೀಕ್ ಹಡಗುಗಳನ್ನೂ ಗ್ರೀಕ್ ಸೈನ್ಯದ ಪ್ರಮುಖರನ್ನೂ ಕುರಿತ ವಿವರಗಳು ಬರುತ್ತವೆ. ಮೂರನೆಯ ಕಾಂಡದಲ್ಲಿ ಹೆಲೆನಳನ್ನು ಹಾರಿಸಿಕೊಂಡು ಬಂದು ಯುದ್ಧಕ್ಕೆ ಕಾರಣನಾಗಿದ್ದ ಪ್ಯಾರಿಸ್ ಅವಳ ಪತಿ ಮೆನೆಲಾಸ್‍ನೊಡನೆ ದ್ವಂದ್ವಯುದ್ಧದಲ್ಲಿ ತೊಡಗಿ ಸಾಯುತ್ತಾನೆ. ಅವನು ಸಾಯುವ ವೇಳೆಗೆ ಅವನ ಪಕ್ಷಪಾತಿಯಾದ ಸೌಂದರ್ಯಾಧಿದೇವತೆ ಆಫ್ರೋಡಿಟಿ ಅವನನ್ನು ಯುದ್ಧಭೂಮಿಯಿಂದ ಕರೆದೊಯ್ಯುತ್ತಾಳೆ. ನಾಲ್ಕನೆಯ ಕಾಂಡದಲ್ಲಿ ಗ್ರೀಕರ ಪರವಾಗಿರುವ ಅಥೀನದೇವಿ ಟ್ರಾಯ್ ಪಕ್ಷದ ಪ್ಯಾಂಡರಸ್ ಎಂಬಾತನನ್ನು ಮೆನಲಾಸನಿಗೆ ಗುರಿಯಿಟ್ಟು ಬಾಣಪ್ರಯೋಗ ಮಾಡುವಂತೆ ಪ್ರೇರಿಸಿ ಎರಡು ಸೈನ್ಯಗಳಿಗೂ ಮತ್ತೆ ಯುದ್ಧ ಆರಂಭವಾಗುವಂತೆ ಮಾಡುತ್ತಾಳೆ. ಐದನೆ ಕಾಂಡದಲ್ಲಿ ಗ್ರೀಕರ ಡಿಯೋಮಿಡಿಸ್ ವೀರಾವೇಶದಿಂದ ಹೋರಾಡಿ ಪ್ಯಾಂಡರಸನ್ನೂ ಇನ್ನಿತರ ಅನೇಕ ಟ್ರೋಜನರನ್ನೂ ಕೊಲ್ಲುತ್ತಾನೆ. ಟ್ರೋಜನರಿಗೆ ಸಹಾಯ ಮಾಡುವ ಆಫ್ರೋಡಿಟಿ ಮತ್ತು ಐರಿಸ್ ದೇವತೆಗಳೂ ಅವನ ಆಯುಧಗಳ ಸವಿಗಾಣದೆ ಹೋಗುವುದಿಲ್ಲ.
೩೭ ನೇ ಸಾಲು:
ಆದರೆ (24ನೆ ಕಾಂಡ) ಹೆಕ್ಟರನ ದೇಹಕ್ಕೆ ಅವನು ಅತ್ಯಂತ ಅಗೌರವವನ್ನು ತೋರಿಸಲು ಜ್ಯೂಸ್ ಥೆಟೆಸಳನ್ನು ಕಳುಹಿಸಿ ಹೀಗೆ ಮಾಡಿದರೆ ಅವನು ದೇವತೆಗಳ ಕೋಪಕ್ಕೆ ಪಾತ್ರನಾಗಬೇಕಾಗುವುದೆಂದು ಹೇಳಿಕಳಿಸುತ್ತಾನೆ. ಹೆಕ್ಟರನ ಮುದಿ ತಂದೆ ಪ್ರಿಯಮ್ ಮಗನ ದೇಹವನ್ನು ಹಿಂದಕ್ಕೆ ತೆಗೆದುಕೊಂಡು ಹೋಗಲು ರಾತ್ರಿಯ ಕತ್ತಲಲ್ಲಿ ಅಕಿಲೀಸನ ಬಿಡಾರಕ್ಕೆ ಬರುತ್ತಾನೆ. ಅವನ್ನು ಕಂಡು ಮರುಕದಿಂದ ಕರಗುವ ಅಕಿಲೀಸ್ ಹೆಕ್ಟರನ ದೇಹವನ್ನು ಹಿಂದಕ್ಕೆ ಕೊಡಲು ಒಪ್ಪುವುದಲ್ಲದೆ ಹೆಕ್ಟರನ ಉತ್ತರಕ್ರಿಯೆಗಳೆಂದು ಕೆಲದಿನ ಯುದ್ಧ ನಿಲ್ಲಿಸುತ್ತಾನೆ. ಹೇಗೆ ಅಕಿಲೀಸನ ಹಿರಿಮೆ ಸ್ಥಾಪಿತವಾಗುತ್ತದೆ.
 
ಇದು ಇಲಿಯಡ್ ಕಾವ್ಯದ ಕಥೆ.
 
== ಕಾವ್ಯ ಮತ್ತು ವಾಸ್ತವ ==
"https://kn.wikipedia.org/wiki/ಇಲಿಯಡ್" ಇಂದ ಪಡೆಯಲ್ಪಟ್ಟಿದೆ