ಶಿವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೮ ನೇ ಸಾಲು:
{{Hinduism}}
==ಶಿವನ ವ್ಯಾಖ್ಯೆ==
ಮಂಗಳಕರನೋ ಅವನೇ '''ಶಿವ'''. ʽಹಿಂದೂʼ ಧರ್ಮದಲ್ಲಿ ಯಾವ ಯಾವಾಗ [[ನಿರಾಕಾರ ಉಪಾಸನೆ]] ಬರುತ್ತದೋ ಆಗ ಆ [[ಪರಬ್ರಹ್ಮ]]ವನ್ನು ಶಿವ ಎಂದೇ ಸಂಬೋಧಿಸುತ್ತಾರೆ. [[ಲಿಂಗಾಯತ]] ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು [[ಹಿಂದೂ ಧರ್ಮ]]ದ ಪ್ರಕಾರ [[ತ್ರಿಮೂರ್ತಿ]]ಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ.
 
ಶಿವನಿಗೆ ''ಲಯಕಾರಕ'' ಎಂದೂ ಸಹ ಕರೆಯುತ್ತಾರೆ. ಅಂದರೆ ''ಸೃಷ್ಟಿ'' ಮಾಡುವುದು ಬ್ರಹ್ಮನ ಕೆಲಸವಾದರೆ, ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ''ಸ್ಥಿತಿ'' ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ''ಲಯ'' (ಕೊನೆ) ಕಾಣಿಸುವವನು ಶಿವ. ಆದ್ದರಿಂದ ಶಿವನಿಗೆ ''ಲಯಕಾರ'' ಎಂದೂ ಸಹ ಕರೆಯುತ್ತಾರೆ. ಸಂಹಾರಕ ಅಥವಾ ಲಯಕಾರಕ ದೇವತೆ : ಶಿವ ಅಥವಾ ರುದ್ರ
 
ಋಗ್ವೇದದಲ್ಲಿ ಶಿವ ಎನ್ನುವ ದೇವತೆ ಇಲ್ಲ. ರುದ್ರ ಎನ್ನುವ ಹೆಸರಿನ ದೇವತೆ ಇದ್ದಾನೆ. ಈ ರುದ್ರನಿಗೆ ಶಿವ, ಈಶ್ವರ, ಶಂಭು, ಶಂಕರ, ಪಶುಪತಿ, ಮುಕ್ಕಣ್ಣ, ಶಶಿಧರ, ಚಂದ್ರಶೇಖರ, ನೀಲಕಂಠ, ನಂಜುಂಡ, ಮಹದೇಶ್ವರ, ಮಹೇಶ್ವರ, ನಾಗರಾಜ, ನಾಗೇಶ, ಕೈಲಾಸ ಪತಿ ಎನ್ನುವ ವಿಶೇಷಣವನ್ನು ಬಳಸಲಾಗಿದೆ.
 
==ಶಬ್ದ ವ್ಯಾಖ್ಯೆ==
ಶಿವ ಶಬ್ದಕ್ಕೆ ಸಂಸ್ಕೃತದಲ್ಲಿ 'ಮಂಗಳ'' ಎನ್ನುವ ಅರ್ಥವನ್ನು ಹೇಳುವರಾದರೂ, ಈ ಶಬ್ದಕ್ಕೆ ಸಂಸ್ಕೃತದಲ್ಲಿ ಸರಿಯಾದ ವ್ಯುತ್ಪತ್ತಿಯು ಇನ್ನೂ ನಿಶ್ಚಯವಾಗಿಲ್ಲ. ಶಿವ ಶಬ್ದವು ಮೂಲದಲ್ಲಿ ಸಂಸ್ಕೃತ ಭಾಷೆಯ ಶಬ್ದವೇ ಅಲ್ಲ. ಆದುದರಿಂದಲೇ ಈ ಶಬ್ದಕ್ಕೆ ನಿರುಕ್ತ ದೊರೆಯು ವುದಿಲ್ಲ ಎಂದು ದ್ರಾವಿಡ ಭಾಷಾತಜ್ಞರು ಹೇಳುತ್ತಾರೆ. ಶಿವ ಎಂದರೆ ಮಾಯಾ, ನಿರಹಂಕಾರ, ಬಂಧರಹಿತ ಎನ್ನಲಾಗಿದೆ.
"https://kn.wikipedia.org/wiki/ಶಿವ" ಇಂದ ಪಡೆಯಲ್ಪಟ್ಟಿದೆ