ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೯ ನೇ ಸಾಲು:
* ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
* ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. "ನಮನ" ( ಪ್ರೊ.ಚಿದಾನಂದ ಮೂರ್ತಿ­ಯವರಂಥ ಹಿರಿ­ಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾ­ಯಣ ಮಠಾಧಿಪತಿಗಳೂ ವೀರಶೈವ ಧರ್ಮದ ಪ್ರತ್ಯೇಕ ಅಸ್ತಿತ್ವ­ವನ್ನೊಪ್ಪದೆ ಅದು ಹಿಂದೂ ಧರ್ಮದ ಒಂದು ಭಾಗವೆಂದು ಘಂಟಾ­ಘೋಷವಾಗಿ ಸಾರಿದ್ದಾರೆ.
===ಬಸವಣ್ನನವರ ಶಿವನ ಕಲ್ಪನೆ===
*ಬಸವಣ್ಣನವರ ವಚನಗಳಲ್ಲಿ ವಿಶೇಷವಾಗಿ ಕಂಡುಬರುವ ಮತ್ತೊಂದು ಪ್ರಧಾನ ಅಂಶ ಭಕ್ತಿಪ್ರತಿಪಾದನೆ. `ಭಕ್ತಿಭಂಡಾರಿ' ಎಂಬ ವಿಶೇಷಣಕ್ಕೆ ಇವರ ವಚನಗಳು ಸಮರ್ಥವಾಗಿ ಪೋಷಣೆ ನೀಡುತ್ತವೆ. ನಾಮಸಂಕೀರ್ತನೆಯ ಹಿರಿಮೆ, ಸರ್ವಸಮರ್ಪಣೆಯ ಭಾವ, ಸತಿಪತಿ ಭಾವ--ಹೀಗೆ ಭಕ್ತಿಯ ಆಚರಣೆಯ ವಿವಿಧ ಮುಖಗಳನ್ನು ಅವುಗಳಲ್ಲಿ ಕಾಣುತ್ತೇವೆ. ಅವುಗಳಲ್ಲಿ ಭಾವದ ತೀವ್ರತೆಯಿದೆ, ಆಳವಾದ ಅನುಭವದ ಪ್ರತಿಫಲನವಿದೆ; ಆತ್ಮೀಯವಾದ ಧಾಟಿಯಿದೆ. `ಹೊನ್ನ ಹಾವಿಗೆಯ ಮೆಟ್ಟಿದವನ, ಮಿಡಿಯ ಮುಟ್ಟಿದ ಕೆಂಜೆಡೆಯವನ, ಮೈಯಲ್ಲಿ ವಿಭೂತಿಯ ಧರಿಸಿದವನ, ಕರದಲ್ಲಿ ಕಪಾಲವ ಹಿಡಿದವನ, ಅರ್ಧನಾರೀಶ್ವರನಾದವನ ಬಾಣದ ಮನೆಯ ಬಾಗಿಲ ಕಾಯ್ದವನ, ನಂಬಿಗೆ ಕುಂಟಿಣಿಯಾದವನ, ಚೋಳಂಗೆ ಹೊನ್ನ, ಮಳೆಯ ಕರೆದವನ, ಎನ್ನ ಮನಕ್ಕೆ ಬಂದವನ, ಸದ್ಭಕ್ತರ ಹೃದಯದಲ್ಲಿಪ್ಪವನ ಮಾಡುವ ಪೂಜೆಯಲೊಪ್ಪುವನ, ಕಂಡೆನೆಂದು ಪರಮಾತ್ಮನ ಗುಣ ಸ್ವರೂಪಗಳನ್ನು ವರ್ಣಿಸುತ್ತ ಅವನನ್ನು ಒಂದೆಡೆ ಸಾಕಾರವಾಗಿ ಕಾಣುತ್ತಾರೆ.
*ಮತ್ತೊಂದೆಡೆ `ಉದಕದೊಳಗೆ ಬೈಚಿಟ್ಟ ಬಯಕೆಯ ಕಿಚ್ಚಿನಂತಿದ್ದಿತ್ತು? ಶಶಿಯೊಳಗಣ ರಸದ ರುಚಿಯಂತೆ ಇದ್ದಿತ್ತು ನೆನೆಯೊಳಗಣ ಪರಿಮಳದಂತೆ ಇದ್ದಿತ್ತು ಕೂಡಲಸಂಗಮ ದೇವರ ನಿಲವು ಕನ್ನೆಯ ಸ್ನೇಹದಂತಿದ್ದಿತ್ತು ಎಂದು ತಮ್ಮ ದರ್ಶನಾನುಭವವನ್ನು ವರ್ಣಿಸುತ್ತಾರೆ.<ref>[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ ಬಸವಣ್ಣ]</ref>
 
=='''ಸಾಮಾಜಿಕ ಸಮಾನತೆ'''==
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ