"ದಸರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
 
== ಆಚರಣಾ ವಿಧಿ ವಿಧಾನಗಳು ==
*ಶುಕ್ಲ ಪಕ್ಷದಲ್ಲಿ ಪ್ರಥಮಾ ತಿಥಿಯಿಂದ ದಶಮಿಯವರೆವಿಗೆ ದಿನ ನಿತ್ಯ ಪೂಜೆ ಪುನಸ್ಕಾರ, ಸಂತರ್ಪಣೆ, ಹಬ್ಬದ ವಾತಾವರಣವನ್ನು ಕಾಣಬಹುದು. ಈ ಕಾಲವು ಎಲ್ಲ ದೇವತೆಗಳ ಉಪಾಸನೆಗಳಿಗೆ ಶ್ರೇಷ್ಠವಾಗಿದ್ದರೂ ಶಕ್ತಿದೇವತೆಯನ್ನು ಪ್ರಸನ್ನಗೊಳಿಸುವ ಕಾಲವಾಗಿದೆ. ಈ ಸಮಯದಲ್ಲಿ ವಿವಾಹ, ಉಪನಯನ ಇತ್ಯಾದಿ ಶುಭಕರ್ಮಗಳಿಗೆ ತಿಥಿ, ವಾರ, ನಕ್ಷತ್ರ ಮುಂತಾದವುಗಳನ್ನು ಗಮನಿಸುವ ಅಗತ್ಯವಿಲ್ಲವೆಂದು ಭಾವಿಸಲಾಗುತ್ತದೆ. ಏಕೆಂದರೆ ಈ ಹತ್ತು ದಿನಗಳಲ್ಲಿ ಯಾವ ಕೆಲಸವನ್ನೂ ಮಾಡಿದರೂ ಯಶಸ್ಸು ದೊರಕುವುದೆಂಬ ನಂಬಿಕೆ ಇದೆ.
*ಇದಲ್ಲದೇ ವರ್ಷದಲ್ಲಿ ಆಚರಿಸಲಾಗದ ಯಾವುದೇ ವ್ರತ, ಹಬ್ಬಗಳನ್ನೂ ಈ ಸಮಯದಲ್ಲಿ ಆಚರಿಸುವರು. ಈ ದಿನಗಳಲ್ಲಿ ಶುದ್ಧ ಪ್ರಕೃತಿಮಾತೆಯನ್ನು ಮೊದಲ ಮೂರು ದಿನಗಳು [[ಲಕ್ಷ್ಮಿ|ಲಕ್ಷ್ಮಿಯೆಂದೂ]], ನಂತರದ ಮೂರು ದಿನಗಳಲ್ಲಿ [[ಸರಸ್ವತಿ]] ಎಂದೂ ಮತ್ತು ಕಡೆಯ ಮೂರು ದಿನಗಳಲ್ಲಿ ಗೌರೀ ಅಥವಾ ದುರ್ಗಿಯೆಂದೂ ಆರಾಧಿಸುವರು.
ಪ್ರಥಮಾ ತಿಥಿಯಂದು ಪ್ರಾತಃಕಾಲದಲ್ಲಿ ಅಭ್ಯಂಜನ ಸ್ನಾನ ಮಾಡಿ ಕಲಶ ಸ್ಥಾಪನೆ ಮಾಡಿ, ಷೋಡಶಾಂಗ ಪೂಜೆಯನ್ನು ದೇವಿಗೆ ಅರ್ಪಿಸುವರು.
*[[ಬಲಿ]] ಕೊಡುವುದರ ಸಂಕೇತವಾಗಿ ಉದ್ದಿನ ಅನ್ನ ಅಥವಾ ಬೂದುಗುಂಬಳಕಾಯಿಯನ್ನು ಮೊದಲನೆಯ ದಿನ ಅಥವಾ ಕೊನೆಯ ದಿನದಂದು ಅರ್ಪಿಸುವರು. ಈ ಸಮಯದಲ್ಲಿ ಚಂಡೀ ಸಪ್ತಶತಿ, ನಾರಾಯಣ ಹೃದಯ ಪಾಠ, ಲಕ್ಷ್ಮೀ ಹೃದಯ ಪಾಠ, ಲಲಿತಾ ಸಹಸ್ರನಾಮಯುಕ್ತ ಕುಂಕುಮಾರ್ಚನೆಯನ್ನೂ ಮಾಡುವ ಪದ್ಧತಿ ಇದೆ. ಎರಡು ವರ್ಷದಿಂದ ಹತ್ತು ವರ್ಷ ವಯಸ್ಸಿನ ಹೆಣ್ಣು ಮಕ್ಕಳನ್ನು ಕೌಮಾರಿಯೆಂದು ಪೂಜಿಸುವ ಸಂಪ್ರದಾಯವೂ ಇದೆ.
*[[ಕುಮಾರಿ]], [[ತ್ರಿಮೂರ್ತಿ]], ಕಲ್ಯಾಣೀ, ರೋಹಿಣೀ, [[ಕಾಳಿ]], ಚಂಡಿಕಾ, [[ಶಾಂಭವಿ]], [[ದುರ್ಗಾ]] ಮತ್ತು [[ಭದ್ರಾ]] ಎಂದ ಹೆಸರುಗಳಿಂದ ಆವಾಹಿಸಿ ಭವಾನೀ ಸಹಸ್ರನಾಮವನ್ನು ಪಾರಾಯಣ ಮಾಡುವರು. ಪಂಚಮೀ ತಿಥಿಯಂದು ಉಪಾಂಗ ಲಲಿತಾ ದೇವಿಯನ್ನು ಪೂಜಿಸಿದರೆ, ಮೂಲಾ [[ನಕ್ಷತ್ರ]]ದಂದು ಸರಸ್ವತೀ ದೇವಿಯನ್ನು ಪೂಜಿಸಿ, ಅಷ್ಟಮಿಯಂದು ದುರ್ಗಾದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುವರು.
*ಮಹಾನವಮಿಯಂದು ಶತಚಂಡೀ ಹೋಮವನ್ನೂ ಮಾಡುವರು. ವಿಜಯದಶಮಿಯಂದು ಯುದ್ಧಕ್ಕಾಗಿ ಬಳಸುವ ಎಲ್ಲ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು ಮಹಿಷಾಸುರನೆಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ [[ಚಾಮುಂ ಡಿ]] ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
*ಮೈಸೂರಿನ ಅರಮನೆಯಲ್ಲಿ ಆಳೆತ್ತರದ ಗೊಂಬೆಗಳನ್ನೂ, ಅರಸರ ವಿವಿಧ ಬಗೆಯ ಸಂಗ್ರಹಗಳನ್ನೂ ಒಂದು ದೊಡ್ಡ ತೊಟ್ಟಿಯಲ್ಲಿ ಇರಿಸುತ್ತಿದ್ದರು. [[ದಕ್ಷಿಣ ಕರ್ನಾಟಕ]] (ಹಳೆಯ ಮೈಸೂರು ಪ್ರಾಂತ್ಯ) ಮನೆಗಳಲ್ಲಿ ಗೊಂಬೆ ಕೂರಿಸುವರು. ಹಂತ ಹಂತವಾಗಿ ಮೆಟ್ಟಿಲುಗಳನ್ನು ನಿರ್ಮಿಸಿ, ಪಟ್ಟದ ಗೊಂಬೆ ಮತ್ತು ಇತರ ಗೊಂಬೆಗಳನ್ನು ಕೂರಿಸು ವರು. ಇದಕ್ಕೆಂದೇ ಮದುವೆಗಳಲ್ಲಿ ನೂತನ ದಂಪತಿಗಳಿಗೆ ಪಟ್ಟದ ಗೊಂಬೆಗಳನ್ನು (ತೇಗ ಅಥವಾ ಚಂದನದ ಮರದಿಂದ ಮಾಡಿದ) ನೀಡುವರು.
*ಪ್ರತಿದಿನ ಸಂಜೆಯ ವೇಳೆಯಲ್ಲಿ ಪುಟ್ಟ ಮಕ್ಕಳನ್ನು ಕರೆದು ಗೊಂಬೆ ಬಾಗಿನ ಎಂದು ತಿಂಡಿಗಳನ್ನು ಕೊಡುವರು. ಇಲ್ಲಿ ವಿಶೇಷವೇನೆಂದರೆ, ಈ ಎಲ್ಲ ತಿಂಡಿಗಳು ಸಣ್ಣ ಸಣ್ಣ ಸ್ವರೂಪ ದಲ್ಲಿರುವುವು. [[ವಿಜಯದಶಮಿ]] ಯಂದು ಪಟ್ಟದ ಗೊಂಬೆಗಳನ್ನು ಮಲಗಿಸಿ ಇಟ್ಟು ಮಾರನೆಯ ದಿನ ಬೆಳಗ್ಗೆ ಕಲಶವನ್ನು ವಿಸರ್ಜಿಸುವರು. ಲಲಿತಾ ದೇವಿಗೆ ಸಹಸ್ರನಾಮಯುತ ಕುಂಕುಮಾರ್ಚನೆ - ವಿಜಯದಶಮಿಯಂದು ಶಮೀ ಅಥವಾ ಬನ್ನಿ ಪತ್ರವನ್ನು ಹಿರಿಯರಿಗೆ ಕೊಟ್ಟು ಕಾಲು ಮುಟ್ಟಿ ನಮಸ್ಕರಿಸುವುದು ಪದ್ಧತಿ.
 
==ಮೈಸೂರು ಪ್ರಜೆಗಳ ಕಣ್ಣಲ್ಲಿ ದಸರಾ==
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/874593" ಇಂದ ಪಡೆಯಲ್ಪಟ್ಟಿದೆ