ಅಷ್ಟಾದಶ ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಅಷ್ಟಾದಶ ಪುರಾಣಗಳು: +++ ಅಪ್‍ಡೇಟಿಂಗ್
೨೨೬ ನೇ ಸಾಲು:
===ವಾಮನ ಪುರಾಣ===
ವಿಷ್ಣುವಿನ ವಾಮನಾವತಾರ ಇದರ ಆರಂಭ ವಸ್ತು. ಪುರಾಣ ಪಂಚಲಕ್ಷಣಸಂಪನ್ನವಾಗಿಲ್ಲ. ಹಲವಾರು ಅಧ್ಯಾಯಗಳು ವಿಷ್ಣುವಿನ ಅವತಾರಗಳನ್ನು ವಿವರಿಸುತ್ತವೆ. ಒಂದೆಡೆ ಲಿಂಗಪೂಜೆಯೂ ಮತ್ತೊಂದೆಡೆ ಉಮಾಶಿವರ ವಿವಾಹ, ಗಣೇಶ, ಸ್ಕಂದರ ಉತ್ಪತ್ತಿ ಮುಂತಾದ ಸಂಗತಿಗಳೂ ಬಿತ್ತರಿಸಲ್ಪಟ್ಟಿವೆ. ಶ್ಲೋಕಸಂಖ್ಯೆ ಸುಮಾರು 7,000; ಇದರಲ್ಲಿ 10,000 ಶ್ಲೋಕಗಳಿದ್ದುವೆಂದು ಹಳೆಯ ಪ್ರಸಿದ್ಧಿ, ಕಾಲ ಸುಮಾರು 16ನೆಯ ಶತಮಾನ. ಪಂಚಲಕ್ಷಣಗಳಿಂದ ಕೂಡಿದ್ದಾಗಿರಬಹುದಾದ ಇದರ ಪ್ರಾಚೀನ ಮೂಲ ಎಲ್ಲಿಯೂ ಸಿಕ್ಕಿಲ್ಲ. ಉಪಲಬ್ಧ ಪ್ರತಿ ವಿಷ್ಣು ಶಿವರಿಗೆ ಸಮಾನಪ್ರಾಧಾನ್ಯವನ್ನೀಯುತ್ತದೆ.
===[[ಕೂರ್ಮ ಪುರಾಣ]===
*ಇದರಲ್ಲಿ ಬ್ರಾಹ್ಮೀ, ಭಾಗವತೀ, ಸೌರೀ ಮತ್ತು ವೈಷ್ಣವೀ ಎಂಬ ನಾಲ್ಕು ಸಂಹಿತೆಗಳಿವೆ ಎಂದು ಪುರಾಣವೇ ಹೇಳಿದರೂ ಲಭ್ಯವಾಗಿರುವುದು ಮೊದಲನೆಯ ಸಂಹಿತೆಯೊಂದೇ. ಸಮುದ್ರಮಥನ ಸಂದರ್ಭದಲ್ಲಿ ಮಂದರಗಿರಿಯನ್ನು ಹೊತ್ತ ವಿಷ್ಣುವಿನ ಕೂರ್ಮಾವತಾರದ ಸ್ತೋತ್ರದೊಂದಿಗೆ ಪ್ರಸ್ತುತ ಪುರಾಣ ಆರಂಭವಾಗುತ್ತದೆ. ಆಗ ಕಡಲಿಂದೆದ್ದು ಬಂದ ಲಕ್ಷ್ಮಿ ವಿಷ್ಣುಪತ್ನಿಯಾಗುತ್ತಾಳೆ.
*ಇಂದ್ರದ್ಯುಮ್ನನೆಂಬ ದೊರೆ ಬ್ರಾಹ್ಮಣನಾಗಿ ಜನಿಸಿ, ಲಕ್ಷ್ಮಿಯಿಂದ ಉಪದೇಶಪಡೆದು, ಸರ್ವಚರಾಚರಗಳ ಸರ್ಗ, ಸ್ಥಿತಿ, ಪ್ರಲಯ ಕಾರಣನೆಂದು ಆರಾಧಿಸಿ, ಕೂರ್ಮಾವತಾರದ ಮೂಲಕ ಕೂರ್ಮಪುರಾಣವನ್ನು ಅರಿತುಕೊಳ್ಳುತ್ತಾನೆ. ಹರಸರ್ವೋತ್ತಮತ್ವವನ್ನೂ ತ್ರಿಮೂರ್ತಿಗಳ ಐಕ್ಯವನ್ನೂ ಪ್ರಸ್ತುತಪುರಾಣ ಪ್ರತಿಪಾದಿಸುತ್ತದೆ. ಹರನ ಶಕ್ತಿಯ 8,000 ಹೆಸರುಗಳಿಲ್ಲಿ ಬಂದಿವೆ.
೨೩೪ ನೇ ಸಾಲು:
*ಮಹಾಭಾರತದ ಸೃಷ್ಟಿ ವಿವರಣೆಯನ್ನು ಪ್ರಸ್ತುತ ಪುರಾಣ ಸ್ಪಷ್ಟವಾಗಿ ಅನುಸರಿಸಿರುವುದರಿಂದಲೂ ಮತ್ಸ್ಯಪುರಾಣಕ್ಕೆ ಗೊತ್ತಿಲ್ಲದಿದ್ದ ಮಹಾಪುರಾಣಗಳ ಹದಿನೆಂಟನ್ನಿದು ಉಲ್ಲೇಖಿಸುವುದರಿಂದಲೂ ಇದರ ಪ್ರಸ್ತುತರೂಪದ ಕಾಲ ಕ್ರಿ.ಶ. 650ಕ್ಕೂ ಈಚಿನದೆನ್ನಬಹುದು. ಕೂರ್ಮಪುರಾಣದ ಪ್ರಕಾರ ದೇವರು ಅವ್ಯಕ್ತ, ಅಜ್ಞೇಯ, ನಿತ್ಯ, ಜಗತ್ಕಾರಣ, ಸದಸದಾತ್ಮಕ, ಪ್ರಕೃತಿಯಿಂದ ಅಭಿನ್ನ, ಸರ್ವನಿರ್ದೇಶಕ, ಗುಣತ್ರಯದ ಸಾಮ್ಯಾವಸ್ಥೆಯಲ್ಲದವ ಪರಬ್ರಹ್ಮ, ಪುರುಷಗರ್ಭ.
*ಇದು ಅವನ ಪ್ರಾಕೃತಪ್ರಲಯ ಸ್ಥಿತಿ. ಇಲ್ಲಿಂದ ಮುಂದೆ ಅವನು ಪ್ರಕೃತಿ, ಪುರುಷರಲ್ಲಿ ದೇವತ್ವಪ್ರಕಟಣೆಗಾಗಿ ಪ್ರವೇಶಿಸಿದಾಗ ಜಗತ್ಸೃಷ್ಟಿಗಾರಂಭ. ದೇವರು ಪ್ರಕೃತಿಯಾಗಿ ನಡೆದುಕೊಳ್ಳುವುದೆಂದರೆ ಸಂಕೋಚ ವಿಕಾಸಶೀಲನಾಗುವುದೆಂದರ್ಥ. ಪ್ರಧಾನ ಪುರುಷಾತ್ಮಕವಾದ ಮಹತ್ ಕಾರಣವೆಂಬುದು ಅವನ ಆದ್ಯಸೃಷ್ಟಿ.
*ಅದರಿಂದ ಮಹತ್, ಆತ್ಮ, ಮತಿ, ಬ್ರಹ್ಮ, ಪ್ರಬುದ್ಧಿ, ಖ್ಯಾತಿ, ಈಶ್ವರ, ಪ್ರಜ್ಞೆ, ಧೃತಿ, ಸ್ಮೃತಿ, ಅಥವಾ ಸಂವಿತ್ ಎಂಬ ಪದಾರ್ಥ ಹುಟ್ಟುತ್ತದೆ. ಹೀಗೆ ವಿವಿಧ ನಾಮಗಳುಳ್ಳ ಈ ಮಹತ್ತಿನಿಂದ ವೈಕಾರಿಕ, ತೈಜಸ ಮತ್ತು ಭೂತಾದಿ ಎಂಬ ಅಹಂಕಾರತ್ರಯ ಉದಯಿಸುತ್ತದೆ. ಈ ತ್ರಿವಿಧಾಹಂಕಾರಕ್ಕೆ ಅಭಿಮಾನ, ಕರ್ತ, ಮಂತ, ಆತ್ಮ, ಎಂಬ ಹೆಸರುಗಳಿವೆ.
 
===[[ಮತ್ಸ್ಯ ಪುರಾಣ]]===
*ಸಲಕ್ಷಣವಾದ ಪ್ರಾಚೀನ ಮಹಾಪುರಾಣ. ಮತ್ಸ್ಯಾವತಾರ ತಾಳಿ ವಿಷ್ಣು ಮನುವನ್ನು ಪ್ರಲಯಪ್ರವಾಹದಿಂದ ಉದ್ಧರಿಸುವ ವೃತ್ತಾಂತದಿಂದ ಪುರಾಣಾರಂಭ. ಮನುವಿನ ಹಡಗನ್ನು ಮತ್ಸ್ಯ ಎಳೆದೊಯ್ಯುವಾಗ ಅವನಿಗೂ ಮನುವಿಗೂ ನಡೆದ ಸಂವಾದವೇ ಮತ್ಸ್ಯಪುರಾಣ. ಸೃಷ್ಟಿ, ವಂಶವೃಕ್ಷ, ಶ್ರಾದ್ಧ, ಭೂ, ಖಗೋಲಗಳ ವಿಷಯ, ಆಂಧ್ರಾದಿ ವಿವಿಧ ದೇಶಗಳ ಅರಸರ ಆಳಿಕೆ. ಯಯಾತಿ ವೃತ್ತಾಂತ, ಸಾವಿತ್ರಿಯ ಕಥೆ ಮತ್ತು ವಿಷ್ಣುವಿನ ಅವತಾರಗಳು ಪ್ರಸ್ತುತ ಪುರಾಣದ ವಸ್ತು ಪ್ರಪಂಚದಲ್ಲಿ ಗಣ್ಯ.
"https://kn.wikipedia.org/wiki/ಅಷ್ಟಾದಶ_ಪುರಾಣಗಳು" ಇಂದ ಪಡೆಯಲ್ಪಟ್ಟಿದೆ