ಶತಾವಧಾನಿ ಆರ್. ಗಣೇಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೧ ನೇ ಸಾಲು:
* ಶತಾವಧಾನ ಶ್ರೀವಿದ್ಯೆ,
ಇದುವರೆವಿಗೂ ಸುಮಾರು ಮುನ್ನೂರಕ್ಕೂ ಹೆಚ್ಚು ಕನ್ನಡ ಅಷ್ಟಾವಧಾನಗಳು, ಹಾಗೂ ಮೂರು ಕನ್ನಡ ಶತಾವಧಾನಗಳನ್ನು ಯಶಸ್ವಿಯಾಗಿ ನಡೆಸಿರುವ ಗಣೇಶ್, ಇದೀಗ ತಮ್ಮ ಸಹಸ್ರಾವಧಾನಕ್ಕೂ ಸಿದ್ಧರಾಗುತ್ತಿದ್ದಾರೆ. ಅಲ್ಲದೆ ಸೋದರ ಭಾಷೆಗಳಾದ ತೆಲುಗು, ತಮಿಳಿನಲ್ಲಿ ಹಾಗೂ ಸಂಸ್ಕೃತದಲ್ಲಿ ಅಷ್ಟಾವಧಾನ ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಈ ರೀತಿಯಾಗಿ ನಾಲ್ಕು ಭಾಷೆಗಳಲ್ಲಿಯೂ ಅವಧಾನವನ್ನು ನಡೆಸಿರುವ ಹೆಗ್ಗಳಿಕೆ ಇವರದ್ದು. ಸಂಸ್ಕೃತ ಹಾಗೂ ತೆಲುಗಿನಲ್ಲಿಯೂ ಸಹಾ ಶತಾವಧಾನಗಳನ್ನು ಪೂರೈಸಿರುವುದು ಇವರ ಪ್ರತಿಭೆಗೆ ಸಾಕ್ಷಿ; ಹಾಗೂ ಈ ರೀತಿಯ ಸಾಧನೆ ಮಾಡಿರುವ ಏಕೈಕ ಭಾರತೀಯ. '''ಡಾ. ಗಣೇಶ್ ಬಹು ಭಾಷಾ ಪಂಡಿತರು :'''
*# ಕಾವ್ಯಮೀಮಾಂಸೆ,
*# ಛಂದಶ್ಯಾಸ್ತ್ರ,
*# ವೇದಾಂತ
*# ಉಪನಿಷತ್,
*# ಧರ್ಮಶಾಸ್ತ್ರ,
*# ಇತಿಹಾಸ,
*# ಸಂಸ್ಕೃತಿ,
*# ಕಲೆ,
*# ಭಾರತೀಯ ತತ್ವಶಾಸ್ತ್ರ,
*# ವ್ಯಾಕರಣ,
*# [[ಅಲಂಕಾರ ಶಾಸ್ತ್ರ]]
ಹೀಗೆ ಹತ್ತು ಹಲವು ವಿವಿಧ ಕ್ಷೇತ್ರಗಳಲ್ಲಿ ಅಪಾರ ಪಾಂಡಿತ್ಯವನ್ನು ಹೊಂದಿದ್ದಾರೆ. ಅಲ್ಲದೆ ಲಲಿತ ಕಲೆಗಳಾದ ಸಂಗೀತ, ನೃತ್ಯ, ಚಿತ್ರಕಲೆ ಮುಂತಾದುವುಗಳಲ್ಲಿಯೂ ಸಹಾ ಪ್ರಾವೀಣ್ಯವನ್ನು ಪಡೆದಿದ್ದಾರೆ. ಭಾರತೀಯ ಭಾಷೆಗಳಾದ ಕನ್ನಡ, ಸಂಸ್ಕೃತ, ತೆಲುಗು, ತಮಿಳು, ಹಿಂದಿ, ಪಾಳಿ, ಶೌರಸೇನಿ, ಮರಾಠೀ, ಬಂಗಾಲೀ, ಮುಂತಾದುವುಗಳಲ್ಲದೇ ವಿದೇಶೀಯ ಭಾಷೆಗಳಾದ ಇಂಗ್ಲೀಷ್, ಗ್ರೀಕ್, ಲ್ಯಾಟಿನ್, ಇಟಾಲಿಯನ್ ಮುಂತಾದ ಒಟ್ಟು ೧೮ ಭಾಷೆಗಳಲ್ಲಿಯೂ ಸಹಾ ಅಪಾರ ಪರಿಣತಿಯನ್ನು ಹೊಂದಿದ್ದಾರೆ. ೨೨ ಭಾಷೆಗಳಲ್ಲಿ ಪ್ರಾವೀಣ್ಯತೆಯನ್ನು ಸಾಧಿಸಿರುವ ಡಾ. [[ಗೋವಿಂದ ಪೈ]] ರವರ ಮಹತ್ಸಾದನೆಯನ್ನು ಅವರು ತಮ್ಮ ಆದರ್ಶವನ್ನಾಗಿಟ್ಟು ಕೊಂಡಿದ್ದಾರೆ.
 
==ಕವಿ, ಚಿಂತಕ, ಉಪನ್ಯಾಸಕಾರ==
ಸ್ವತಃ ಉತ್ತಮ ಕವಿಯೂ, ಉಪನ್ಯಾಸಕರೂ, ಚಿಂತಕರೂ ಆಗಿರುವ ಡಾ. ಗಣೇಶ್ ಇದುವರೆವಿಗೂ ನೂರಕ್ಕೂ ಮಿಕ್ಕಿದಂತೆ ಲೇಖನಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಕನ್ನಡ, ಸಂಸ್ಕೃತ ಹಾಗೂ ತೆಲುಗು ಸಾಹಿತ್ಯ, ತತ್ವಶಾಸ್ತ್ರ, ನೀತಿಶಾಸ್ತ್ರ, [[ಅಲಂಕಾರ ಶಾಸ್ತ್ರ]], ವಿಮರ್ಶೆ,ಯಕ್ಶಗಾನ, ನೃತ್ಯ, ತಂತ್ರಜ್ಞಾನ, ವಿಜ್ಞಾನ ಮುಂತಾದ ವಿಷಯಗಳಿಗೆ ಸಂಬಂಧಪಟ್ಟ ಅಪೂರ್ವವಾದ ಹಾಗೂ ಆಸಕ್ತಿದಾಯಕವಾದ ವಿಚಾರಗಳನ್ನು ಚರ್ಚಿಸಿದ್ದಾರೆ. ಉತ್ತಮ ಸಂಶೋಧಕರೂ ಆಗಿರುವ ಇವರು ಪ್ರಾಚೀನ ಭಾರತದ ವಾಸ್ತುಶಾಸ್ತ್ರ ಹಾಗೂ ತಂತ್ರಜ್ಞಾನವೂ ಸೇರಿದಂತೆ ವೇದಗಳ ಇತಿಹಾಸ ಮುಂತಾದ ವಿರಳ ವಿಷಯಗಳ ಬಗ್ಗೆ ಅನೇಕ ಸಂಶೋಧನಾ ಲೇಖನಗಳನ್ನು ಮಂಡಿಸಿದ್ದಾರೆ. ಸಂಸ್ಕೃತದಲ್ಲಿ ಹನ್ನೆರಡಕ್ಕೂ ಹೆಚ್ಚಿನ ನಾಟಕಗಳನ್ನೂ, ಸುಮಾರು ಹದಿನಾರು ಕಾವ್ಯಗಳನ್ನೂ ರಚಿಸಿರುವ ಇವರು ಕನ್ನಡದಲ್ಲಿ ಎಂಟು ಕಾವ್ಯಗಳನ್ನು, ಮೂರು ಕಾದಂಬರಿಗಳನ್ನು ಹಾಗೂ ಆರು ಅನುವಾದಗಳನ್ನು ಪೂರೈಸಿದ್ದಾರೆ.