ಲೋಕನಾಥ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
info and ref added
೨೧ ನೇ ಸಾಲು:
‘ಸಂಸ್ಕಾರ’ದ ಮೂಲಕ ಚಿತ್ರರಂಗ ಪ್ರವೇಶಿಸಿದರಾದರೂ, ‘ಗೆಜ್ಜೆಪೂಜೆ’ ಅವರ ಮೊದಲು ಬಿಡುಗಡೆಯಾದ ಚಿತ್ರ. ಮುಂದೆ ಬಂಗಾರದ ಮನುಷ್ಯ, ದೂರದ ಬೆಟ್ಟ, ಭೂತಯ್ಯನ ಮಗ ಅಯ್ಯ, ಶರಪಂಜರ, ನಾಗರಹಾವು, ಹೇಮಾವತಿ, ಬಂಗಾರದ ಪಂಜರ, ಹೃದಯ ಸಂಗಮ, ಕೃಷ್ಣ ರುಕ್ಮಿಣಿ ಸತ್ಯಭಾಮ, ಭಾಗ್ಯಜ್ಯೋತಿ, ಕೂಡಿ ಬಾಳೋಣ, ಮಿಂಚಿನ ಓಟ, ಹೊಸ ನೀರು, ಮನೆ ಮನೆ ಕಥೆ, ಒಲವಿನ ಆಸರೆ ಹೀಗೆ ಅವರು ನಟಿಸಿದ ಚಿತ್ರಗಳ ಸಂಖ್ಯೆ ಸುಮಾರು 650ರ ಸಮೀಪದ್ದು. [[ನಾಗರಹಾವು (ಚಲನಚಿತ್ರ ೧೯೭೨)|ನಾಗರಹಾವು]] ಚಿತ್ರದಲ್ಲಿ ರಾಮಾಚಾರಿ ಕಾಪಿ ಹೊಡೆದಾಗ ಆತನನ್ನು ಅವಮಾನಿಸಿದ್ದಕ್ಕಾಗಿ, ಆತನಿಂದ ಲೈಟು ಕಂಬಕ್ಕೆ ಕಟ್ಟಲ್ಪಟ್ಟ ಪ್ರಿನ್ಸಿಪಾಲ್ ಶ್ಯಾಮರಾಯರಾಗಿ, ಬೂತಯ್ಯನ ಮಗ ಅಯ್ಯು ಚಿತ್ರದಲ್ಲಿ ಚಪ್ಪಲಿ ಹೊಲೆಯುವ ಮಾಚನಾಗಿ; ಅದರಲ್ಲೂ ಬೂತಯ್ಯನ ಮನೆ ಉಪ್ಪಿನಕಾಯಿ ಜಾಡಿ ಕಾಲಿ ಮಾಡುವ ಅವರ ಅಭಿನಯ ಕನ್ನಡ ಚಲನಚಿತ್ರರಂಗ ಇರುವವರೆಗೂ ಅಜರಾಮರ. ಮಿಂಚಿನ ಓಟ, ಕಾಕನ ಕೋಟೆ, ಕಾಡು ಬೆಳದಿಂಗಳು ಮುಂತಾದ ಕಲಾತ್ಮಕ ಚಿತ್ರಗಳಲ್ಲಿನ ನಿರ್ವಹಣೆಗೆ, ಒಲವಿನ ಆಸರೆ, ಮನೆ ಮನೆ ಕಥೆ, ಹೌಸ್ ಫುಲ್ ಅಂತಹ ಅಸಂಖ್ಯಾತ ಪಾತ್ರಗಳಿಗಾಗಿ ಅವರ ಬಗೆಗಿನ ಪ್ರಶಂಸೆಗಳನ್ನು ಪತ್ರಿಕೆಗಳಿಂದಲೂ ಜನಸಾಮಾನ್ಯರಿಂದಲೂ ಕಾಣುತ್ತಲೇ ಇದ್ದೇವೆ.
 
==ಪ್ರಶಸ್ತಿಗಳು==
==ಪ್ರಶಸ್ತಿಗಳ ವಿಚಾರದಲ್ಲಿ==
"ಮಿಂಚಿನ ಓಟ ಚಿತ್ರದಲ್ಲಿ ಪೋಷಕ ಪಾತ್ರಕ್ಕೆ ಅವರಿಗೆ ಪ್ರಶಸ್ತಿ ಬಂದದ್ದು ಬಿಟ್ಟರೆ ಉಳಿದಂತೆ ನನಗೂ ಪ್ರಶಸ್ತಿಗಳಿಗೂ ಸಂಬಂಧವೇ ಇಲ್ಲ ಎನ್ನುವಂತಾಗಿದೆ” ಎನ್ನುತ್ತಾರೆ ಲೋಕನಾಥ್. ಆದರೆ ಅವರಿಗೆ ಜನರ ಪ್ರೀತಿ ಅಪಾರವಾಗಿ ದೊರೆತ ತೃಪ್ತಿಯಿದೆ. “ಪ್ರತಿಯೊಬ್ಬ ಕಲಾವಿದನನ್ನೂ ಅವನು ಮಾಡಿದ ಪಾತ್ರಗಳ ಮೂಲಕ ಅವನನ್ನು ಪ್ರಶಂಸಿಸಿದರೆ ಅವನಿಗೆ ಅದಕ್ಕಿಂತ ಬೇರೆ ಪ್ರಶಸ್ತಿ ಬೇಕಿಲ್ಲ. ನನಗೂ ಅಂತಹ ಅನುಭವ ಭೂತಯ್ಯನ ಮಗ ಅಯ್ಯು ಚಿತ್ರದಲ್ಲಾಯಿತು” ಎನ್ನುತ್ತಾರೆ ಲೋಕನಾಥ್. “ಆ ಚಿತ್ರ ಯಶಸ್ವಿಯಾದ ನಂತರ ಮಂಡ್ಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅಲ್ಲಿನ ಮಹಿಳೆಯೊಬ್ಬರು ಉಪ್ಪಿನಕಾಯಿ ಜಾಡಿಯನ್ನು ತಂದು ನನ್ನ ಮುಂದಿಟ್ಟು ಎಷ್ಟು ಬೇಕಾದರೂ ತಿನ್ನು. ಆದರೆ ಕದಿಯಬೇಡ ಎಂದು ಹೇಳಿದಳು.ಬೀದರಿನಲ್ಲಿ ಒಬ್ಬಳು ಮಹಿಳೆ ನನಗೆ ರೊಟ್ಟಿ ತಿನ್ನಿಸಿದರು. ಹೀಗೆ ನನ್ನ ಪಾತ್ರದ ಜನಪ್ರಿಯತೆ ನನಗೆ ತಿಳಿಯಿತು” ಎನ್ನುತ್ತಾರೆ ಲೋಕನಾಥ್.
 
"https://kn.wikipedia.org/wiki/ಲೋಕನಾಥ್" ಇಂದ ಪಡೆಯಲ್ಪಟ್ಟಿದೆ