ಲೋಕನಾಥ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೩ ನೇ ಸಾಲು:
ಲೋಕನಾಥರು ಜನಿಸಿದ್ದು ಆಗಸ್ಟ್ ೧೪, ೧೯೨೭ರಂದು. ಶಿಸ್ತುಬದ್ಧ ಜೀವನದ, ರಂಗಭೂಮಿ ಮತ್ತು ಚಲನಚಿತ್ರಲೋಕದ ಮೇರು ಕಲಾವಿದರಾದ ಲೋಕನಾಥ್‌ರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ ಹನುಮಂತಪ್ಪನವರು ಮತ್ತು ತಾಯಿ ಗೌರಮ್ಮನವರು. ಅವರದ್ದು ಜವಳಿ ವಾಣಿಜ್ಯ ವಹಿವಾಟಿನ ಕುಟುಂಬ. ಹೆಣ್ಣು ಮಕ್ಕಳು ಗಂಡು ಮಕ್ಕಳು ಎಂಬ ಭೇದವಿಲ್ಲದೆ ಸಂಜೆಯ ಒಳಗೆ ಮನೆ ಸೇರಬೇಕು ಎಂಬಂತಹ ಕಟ್ಟುಪಾಡಿನ ವಾತಾವರಣವಿದ್ದ ಸುಮಾರು ೪೦ ಜನರಿದ್ದ ಸಂಪ್ರದಾಯಸ್ತ ಅವಿಭಕ್ತ ಕುಟುಂಬ ಅವರದ್ದು. ಮೂಲತ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಲೋಕನಾಥರು ಕುಟುಂಬದ ವ್ಯಾಪಾರಕ್ಕೆ ಆಸರೆಯಾಗಿರಲು ಓದು ಬಿಟ್ಟರು. ಮನೆಯಲ್ಲಿದ್ದ ವೇಳೆಯಲ್ಲಿ ಸಂಗೀತದ ಮೇಲಿನ ಆಸೆಯಿಂದ ಸಂಗೀತವನ್ನು ಸುಮ್ಮನೆ ಗುನುಗುತ್ತಿದ್ದರು. ತಬಲಾ ಕಲಿಯಬೆಕೆಂಬ ಆಸೆಗೆ ತಬಲಾ ತಂದಿಟ್ಟುಕೊಂಡಾಗ ಮನೆಯ ವಾತಾವರಣ ಅದಕ್ಕೆ ಸರಿಹೋಗುವುದಿಲ್ಲ ಎಂದು ಅದನ್ನು ಕೈಬಿಟ್ಟರು.
 
==ರಂಗಭೂಮಿ==
==ರಂಗಭೂಮಿಯಲ್ಲಿ==
ವ್ಯಾಯಾಮ ಕಲಿಯಲು ಪ್ರಖ್ಯಾತ ಬರಹಗಾರ ಹಾಗೂ ಅಂಗಸೌಷ್ಟವದ ಮೇರು ಆಚಾರ್ಯರಾದ ಕೆ.ವಿ. ಅಯ್ಯರ್ ಸಂಪರ್ಕಕ್ಕೆ ಬಂದ ಸಂದರ್ಭದಲ್ಲಿ ಕೈಲಾಸಂ ಅವರಿಂದಾಗಿ ನಾಟಕರಂಗಕ್ಕೆ ಪ್ರವೇಶ ಮಾಡುವಂತಾಯಿತು. ಮುಂದೆ ೧೯೫೨ರಲ್ಲಿ 'ರವಿ ಕಲಾವಿದರು' ಸಂಸ್ಥೆ ಸೇರಿ ಅಭಿನಯಿಸಿದ ಮೊದಲ ನಾಟಕ ‘ಬಂಡವಾಳವಿಲ್ಲದ ಬಡಾಯಿ’. ಒಲ್ಲೆನೆಂದರೂ ಬಿಡದೆ ಮತ್ತೊಮ್ಮೆ ಬಣ್ಣ ಹಚ್ಚಿದ್ದು ದಾಶರಥಿ ದೀಕ್ಷಿತರ ‘ಅಳಿಯ ದೇವರು’ ನಾಟಕ.
ಹೀಗೆ ಸಂಪ್ರದಾಯಸ್ಥ ಕುಟುಂಬದ ವಿರೋಧದ ನಡುವೆ ರಂಗಭೂಮಿ ಪ್ರವೇಶ ಮಾಡಿದ ಲೋಕನಾಥರು ರಕ್ತಾಕ್ಷಿ, ವಿಗಡವಿಕ್ರಮರಾಯ, ಬಿರುದಂತೆಂಬರ ಗಂಡ, ಬಹದ್ದೂರ್ ಗಂಡು, ಬಿಡುಗಡೆ, ಚಂದ್ರಹಾಸ, ಮನವೆಂಬ ಮರ್ಕಟ ನಾಟಕಗಳಲ್ಲಿ ಪ್ರಮುಖ ಪಾತ್ರ ವಹಿಸಿ ಅಪಾರ ಖ್ಯಾತಿ ಗಳಿಸಿದರು. ಮರಾಠಿ ನಾಟಕಗಳ ಅನುವಾದವಾದ ‘ತನುವು ನಿನ್ನದೆ ಮನವು ನಿನ್ನದೆ (ನೂರಾರು ಪ್ರದರ್ಶನ ಕಂಡ ನಾಟಕ)’, ‘ನಾನೇನು ಹೇಳಬೇಕು’, ‘ಹಂಚುಬೆಳದಿಂಗಳು’ ಮುಂತಾದ ನಾಟಕಗಳನ್ನು ನಿರ್ದೇಶಿಸಿದರು. ಬಿ.ವಿ. ಕಾರಂತರ ನಿರ್ದೇಶನದ ಗೋಸ್ಟ್‌, ಈಡಿಪಸ್‌, ನಾಗೇಶರ ನಿರ್ದೇಶನದ ನಾಟಕಗಳು, ಸಮುದಾಯದ ಪ್ರಸನ್ನರ ತಾಯಿ, ಗೆಲಿಲಿಯೋ ಮುಂತಾದವು ಅವರಿಗೆ ಮತ್ತಷ್ಟು ಖ್ಯಾತಿ ತಂದುಕೊಟ್ಟವು.
"https://kn.wikipedia.org/wiki/ಲೋಕನಾಥ್" ಇಂದ ಪಡೆಯಲ್ಪಟ್ಟಿದೆ