ಬಸವೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Clnup
ಚು bold removed
೨೨ ನೇ ಸಾಲು:
ಬಸವಣ್ಣನವರು [[೧೧೩೪]] ರಲ್ಲಿ ಈಗಿನ [[ಬಿಜಾಪುರ]] ಜಿಲ್ಲೆಯಲ್ಲಿರುವ [[ಬಸವನ ಬಾಗೇವಾಡಿ]] ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ [[ಇಂಗಳೇಶ್ವರ]] ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ [[ಬ್ರಾಹ್ಮಣ]] ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.<ref name="janpeter4">Jan Peter Schouten (1995), Revolution of the Mystics: On the Social Aspects of Vīraśaivism, Motilal Banarsidass, {{ISBN|978-8120812383}}, page 4</ref><ref name="skdas163">SK Das (2005), A History of Indian Literature, 500–1399: From Courtly to the Popular, Sahitya Akademi, {{ISBN|978-8126021710}}, page 163</ref>
 
=='''ಧಾರ್ಮಿಕ ಬೆಳವಣಿಗೆಗಳು'''==
{{citation needed}}
* ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ '''[[ಕೂಡಲ ಸಂಗಮ]]'''ದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ.
* ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.
* ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು '''ಜಗಜ್ಯೋತಿ ಬಸವೇಶ್ವರ''', '''ಕ್ರಾಂತಿಯೋಗಿ ಬಸವಣ್ಣ''', '''ಭಕ್ತಿ ಭಂಡಾರಿ ಬಸವಣ್ಣ''', '''ಮಹಾ ಮಾನವತಾ ವಾದಿ''' ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
* ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.
* ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
೪೩ ನೇ ಸಾಲು:
ಕೂಡಲಸಂಗಮದೇವಯ್ಯಾ,
 
'''ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯಾ'''. - <ref>ಸವಸ-೧/೭೪೪ :- ಸಮಗ್ರ ವಚನ ಸಂಪುಟ -೧, ವಚನ ಸಂಖ್ಯೆ-೭೪೪ (೧೫ ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು)</ref>
 
 
೯೫ ನೇ ಸಾಲು:
*ಮತ್ತೊಂದೆಡೆ '''`ಉದಕದೊಳಗೆ ಬೈಚಿಟ್ಟ ಬಯಕೆಯ ಕಿಚ್ಚಿನಂತಿದ್ದಿತ್ತು?''' ಶಶಿಯೊಳಗಣ ರಸದ ರುಚಿಯಂತೆ ಇದ್ದಿತ್ತು ನೆನೆಯೊಳಗಣ ಪರಿಮಳದಂತೆ ಇದ್ದಿತ್ತು ಕೂಡಲಸಂಗಮ ದೇವರ ನಿಲವು ಕನ್ನೆಯ ಸ್ನೇಹದಂತಿದ್ದಿತ್ತು ಎಂದು ತಮ್ಮ ದರ್ಶನಾನುಭವವನ್ನು ವರ್ಣಿಸುತ್ತಾರೆ.<ref>[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ ಬಸವಣ್ಣ]</ref>
 
=='''ಸಾಮಾಜಿಕ ಸಮಾನತೆ'''==
{{citation needed}}
[[File:Basava cropped.jpg|thumb|ಅಣ್ಣ ಬಸವಣ್ಣ]]
"https://kn.wikipedia.org/wiki/ಬಸವೇಶ್ವರ" ಇಂದ ಪಡೆಯಲ್ಪಟ್ಟಿದೆ