ಕಾಸರಗೋಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪ ನೇ ಸಾಲು:
ಸಮುದ್ರದ ಅಲೆಗಳಿಗೆ ಸದಾ ಮೈಯೊಡ್ಡುವ ಬೇಕಲಕೋಟೆಯಲ್ಲಿ ಬೀಚ್, ಪಾರ್ಕ್, ಉತ್ಖನನದ ಮೂಲಕ ಕಂಡ ಗತವೈಭವದ ಅರಮನೆಯ ಅಡಿಪಾಯ, ಸುತ್ತಲಿನ ಉದ್ಯಾನ ಮತ್ತು ಐತಿಹಾಸಿಕ ಕೋಟೆಯ ಸೌಂದರ್ಯವನ್ನು ಜತೆಯಾಗಿ ಸವಿಯಬಹುದು. ಜಿಲ್ಲೆಯಲ್ಲಿರುವ ಮಾಯಿಪ್ಪಾಡಿ ಅರಮನೆ, ಚಂದ್ರಗಿರಿ ಕೋಟೆ, ಆರಿಕ್ಕಾಡಿ ಕೋಟೆಗಳಿಗೆ ಐತಿಹಾಸಿಕ ಪ್ರಾಧಾನ್ಯತೆ ಇದೆ.
 
ಕಾಸರಗೋಡಿಗೆ ಸಮೀಪದ ಸರೋವರ ಕ್ಷೇತ್ರ [[https://tcy.wikipedia.org/wiki/%E0%B2%85%E0%B2%A8%E0%B2%82%E0%B2%A4%E0%B2%AA%E0%B3%81%E0%B2%B0 ಅನಂತಪುರ]], ಅಲ್ಲಿನ ಮೊಸಳೆ ‘ಬಬಿಯಾ’, ಪಕ್ಕದ ಮುಜುಂಗಾವಿನಲ್ಲಿರುವ ವಿಶಾಲ ಸರೋವರ ಪ್ರವಾಸಿಗರ ಆಕರ್ಷಣೆಯ ಚುಂಬಕಗಳು. ವಿನಾಯಕನ ದೇವಾಲಯ ಮಧೂರು, ಬೇಳ ಶೋಕಮಾತಾ ಇಗರ್ಜಿಯಲ್ಲಿರುವ ಗುಹೆ, ಮಂಜೇಶ್ವರದ ಜೈನಬಸದಿ, ಕಾಞಂಗಾಡಿನಲ್ಲಿರುವ ಆನಂದಾಶ್ರಮ ಮತ್ತು ನಿತ್ಯಾನಂದಾಶ್ರಮಗಳು ಕಾಸರಗೋಡಿನ ಪರಿಸರದ ಆಧ್ಯಾತ್ಮಿಕ ತಾಣಗಳು. ಪೊಸಡಿಗುಂಪೆ ಮತ್ತು ರಾಣಿಪುರಂ ಚಾರಣಕ್ಕೆ ಅನುಕೂಲಕರವಾದ ಉನ್ನತ ಬೆಟ್ಟಗಳು. ನೀಲೇಶ್ವರದ ಸನಿಹದಲ್ಲಿರುವ ‘ಹಿನ್ನೀರ ಸರೋವರ’ ಮನಸ್ಸಿಗೆ ಮುದವನ್ನು ನೀಡುತ್ತದೆ.
 
ತೆಂಗು ಕೃಷಿ ಕುರಿತಾದ ಸಂಶೋಧನಾ ಚಟುವಟಿಕೆಗಳಲ್ಲಿ ನಿರತವಾದ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರದಲ್ಲಿ ತಳಿವೈವಿಧ್ಯ, ಒಳಸುರಿಗಳ ಬಗೆಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. ಹಾಲಿನ ಸಂಸ್ಕರಣೆಯ ವಿಧಾನಗಳನ್ನು ಮಾವುಂಗಾಲ್‌ನಲ್ಲಿರುವ ‘ಮಿಲ್ಮಾ ಡೈರಿ’ಯಲ್ಲಿ ವೀಕ್ಷಿಸಬಹುದು. ಓಣಂ ಹಬ್ಬದ ಸಂದರ್ಭದಲ್ಲಿ ರಚಿಸಲಾಗುವ ಹೂವಿನ ರಂಗವಲ್ಲಿಗಳು, ಮುಸ್ಲಿಂ ಕಲಾಪ್ರಕಾರಗಳಾದ ಒಪ್ಪನ ಮತ್ತು ದಫ್‌ಮುಟ್ಟು ಕಾಸರಗೋಡಿನ ಪಯಣದಲ್ಲಿರುವ ಜನರಿಗೆ ಮನರಂಜನೆಯನ್ನು ನೀಡುತ್ತವೆ.
"https://kn.wikipedia.org/wiki/ಕಾಸರಗೋಡು" ಇಂದ ಪಡೆಯಲ್ಪಟ್ಟಿದೆ